ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ ರಾಜ್ಯ ಸರ್ಕಾರವು ಮಹಿಳೆಯರಿಗೆ ಸಾಲ ಸೌಲಭ್ಯವನ್ನು ಒದಗಿಸಿ ಕೊಟ್ಟಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಸ್ತ್ರೀಶಕ್ತಿ ಸಂಘಟನೆಗಳಿಗೆ 2 ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ (loan without interest) ಸೌಲಭ್ಯ ಒದಗಿಸಲಾಗುವುದು ಎಂದು ರಾಜ್ಯ ಸರ್ಕಾರ (state government) ಭರವಸೆ ನೀಡಿದೆ, ಮತ್ತು ಇದಕ್ಕಾಗಿ ರಾಜ್ಯ ಸರ್ಕಾರವು 70,427 ಕೋಟಿ ಹಣವನ್ನು ಮೀಸಲಿಟ್ಟಿದೆ. ಇದರ ಬಗ್ಗೆ ಪೂರ್ಣ ಮಾಹಿತಿ ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಸ್ತ್ರೀ ಶಕ್ತಿ ಸಂಘಟನೆಗಳಿಗೆ ಎರಡು ಲಕ್ಷದವರೆಗೆ ಸಾಲ (Loan) ಸೌಲಭ್ಯ :
ಈಗಾಗಲೇ ಸರ್ಕಾರವು ಮಹಿಳೆಯರ ಸಬಲೀಕರಣಕ್ಕಾಗಿ, ಮಹಿಳೆಯರ ವಿಕಾಸವನ್ನು ಕೇಂದ್ರೀಕರಿಸಿ ಹಲವಾರು ಯೋಜನೆಗಳನ್ನು ಪರಿಚಯಿಸಿದೆ. ಈ ಯೋಜನೆಗಳು ಸ್ತ್ರೀಯರಲ್ಲಿ ಸರಿಯಾದ ಸಾಮಾಜಿಕ ಘನತೆಯನ್ನು ಒದಗಿಸುವ, ಕೌಶಲ್ಯ ವೃದ್ಧಿ ಹಾಗೂ ಉದ್ಯಮಶೀಲತೆಯ ಗುಣಮಟ್ಟ ಹೆಚ್ಚಿಸುವ ಗುರಿಯೊಂದಿಗೆ ಸ್ವಲಂಬಿಯಾಗಿ ಬದುಕಲು ಮಾರ್ಗಗಳನ್ನು ಖಚಿತಪಡಿಸಿಕೊಳ್ಳುತ್ತದೆ. ಇದೀಗ ರಾಜ್ಯ ಸರ್ಕಾರ ಮಹಿಳೆಯರಿಗೆ ಮತ್ತೊಂದು ಸಂತಸದ ಸುದ್ದಿಯನ್ನು ನೀಡಿದೆ. ಸ್ತ್ರೀಶಕ್ತಿ(Stree Shakti) ಸಂಘಟನೆಗಳಿಗೆ 2 ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ (Without Interest Loan) ಸೌಲಭ್ಯ ಒದಗಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ಹೌದು, ರಾಜ್ಯ ಸರ್ಕಾರವು ನವರಾತ್ರಿಯ ಈ ಪವಿತ್ರ ಉತ್ಸವದಲ್ಲಿ ಸ್ತ್ರೀಶಕ್ತಿ ಸಂಘಟನೆಗಳಿಗೆ ಒಂದು ಹೊಸ ಯೋಜನೆಯನ್ನು ಹೊರಡಿಸಿದೆ.
ಅಂದಹಾಗೆ, ಈ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ರಾಜ್ಯ ಸರ್ಕಾರವು ಮಹಿಳಾ ಕಲ್ಯಾಣ ಕಾರ್ಯಕ್ರಮಗಳಿಗೆ 70,427 ಕೋಟಿ ಹಣವನ್ನು ಮೀಸಲಿರಿಸಿದೆ. ರಾಜ್ಯದ ಒಟ್ಟು 1 ಲಕ್ಷದ 65 ಸಾವಿರ ಸ್ತ್ರೀ ಶಕ್ತಿ ಗುಂಪುಗಳಿಗೆ ತಲಾ 25 ಸಾವಿರ ರೂ. ಆವರ್ತ ನಿಧಿ, ಸ್ತ್ರೀ ಶಕ್ತಿ ಸಂಘಟನೆಗಳಿಗೆ 2 ಲಕ್ಷ ರೂ.ವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ (Women and Child Development) ಸಚಿವೆ ಲಕ್ಷ್ಮೀ ಹೆಬ್ಬಾಳ್ಕಾರ್ ತಿಳಿಸಿದ್ದಾರೆ.
ರಾಜ್ಯದ ಮಹಿಳೆಯರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ ‘ಸ್ತ್ರೀಶಕ್ತಿ’ ಯೋಜನೆಯನ್ನು 2000-01 ನೇ ವರ್ಷದಿಂದ ಜಾರಿಗೊಳಿಸಲಾಯಿತು. ರಾಜ್ಯದಲ್ಲಿ 176 ತಾಲೂಕುಗಳ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸ್ತ್ರೀಶಕ್ತಿ ಮಹಿಳೆಯರ ಗುಂಪುಗಳನ್ನು ರಚಿಸಲಾಯಿತು.
“ ನವಶಕ್ತಿ ಸಂಭ್ರಮ ”
ಮಹಿಳೆಯರ ಸ್ವಾವಲಂಬಿ ಬದುಕಿಗೆ ನಮ್ಮ ಸರ್ಕಾರವು ಬೆಂಬಲವಾಗಿ ನಿಂತಿದ್ದು, ಸ್ತ್ರೀಶಕ್ತಿ ಸಂಘಗಳ ಮೂಲಕ ನೆರವು ಪಡೆದ ಮಹಿಳೆಯರು ಗುಡಿ ಕೈಗಾರಿಕೆ, ಕಸೂತಿ, ಚಿಕ್ಕಪುಟ್ಟ ವ್ಯಾಪಾರ ವಹಿವಾಟು ಸೇರದಂತೆ ಆದಾಯ ಬರುವ ವೃತ್ತಿಯಲ್ಲಿ ತೊಡಗಿಸಿಕೊಂಡು ಕೌಟುಂಬಿಕ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ.
ಸ್ತ್ರೀ ಶಕ್ತಿ… pic.twitter.com/fVKQ8BIboX
— Laxmi Hebbalkar (@laxmi_hebbalkar) October 18, 2023
ಮಹಿಳೆಯರಲ್ಲಿ ಆತ್ಮವಿಶ್ವಾಸ ಬರಬೇಕು ಹಾಗೂ ನಮ್ಮ ಸಂಪ್ರದಾಯದ ಗುಡಿ ಕೈಗಾರಿಕೆ ಹಾಗೂ ಕುಶಲ ಕೈಗಾರಿಕೆ ಗಳನ್ನು ಉಳಿಸಿ ಬೆಳೆಸುವುದು ಈ ಯೋಜನೆಯ ಗುರಿಯಾಗಿದೆ. ಕುಟುಂಬದ ಜವಾಬ್ದಾರಿಯನ್ನು ವಹಿಸುವ ಜೊತೆ ಜೊತೆಗೆ ಮಹಿಳೆಯರು ತಮ್ಮಲ್ಲಿ ಆತ್ಮವಿಶ್ವಾಸವನ್ನು ಮೂಡಿಸಿಕೊಳ್ಳಬೇಕು ಎಂಬ ಹಿನ್ನಲೆಯಲ್ಲಿ ಈ ಯೋಜನೆಯನ್ನು ಪರಿಚಯಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ತ್ರೀಯರ ಸಬಲೀಕರಣಕ್ಕಾಗಿ ಮತ್ತು ಸ್ವಾವಲಂಬನೆಗೆ ಹಗಲಿರುಳು ಶ್ರಮಿಸುತ್ತಿದ್ದಾರೆ. ಸ್ತ್ರೀಶಕ್ತಿ ಆರಾಧನೆಯ ಪ್ರತೀಕ ಈ ಒಂಬತ್ತು ದಿನಗಳ ನವರಾತ್ರಿ ಸಂದರ್ಭದಲ್ಲಿ ಮಹಿಳೆಯರಿಗೆ ಬೆನ್ನೆಲುಬಾಗಿ ಒತ್ತು ಕೊಡುವ ಕೆಲಸವನ್ನು ಮಾಡುತ್ತಿದ್ದಾರೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಮಹಿಳೆಯರು ಸ್ವಾವಲಂಬಿಯಾಗಿ ಬದುಕಬೇಕು. ಪುರುಷರಷ್ಟೇ ಧೈರ್ಯ ಹಾಗೂ ಆತ್ಮವಿಶ್ವಾಸ ಮಹಿಳೆಯರಲ್ಲೂ ಬೆಳೆಯಬೇಕು ಎನ್ನುವುದು ಈ ಯೋಜನೆಯ ಉದ್ದೇಶವಾಗಿದೆ. ಹಾಗೆಯೇ, ಇಂತಹ ಉತ್ತಮ ಮಾಹಿತಿಯನ್ನು ತಿಳಿಸಿಕೊಡುವ ಈ ಲೇಖನವನ್ನು ನಿಮ್ಮ ಎಲ್ಲಾ ಸ್ನೇಹಿತರಲ್ಲಿ ಮತ್ತು ಬಂಧು- ಭಾಂದವರಲ್ಲಿ ಶೇರ್ ಮಾಡಲು ಮರಿಯಬೇಡಿ, ಧನ್ಯವಾದಗಳು.
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ವರದಿ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
Ambika
19th cross peenya 2nd stage nelagarenahalli main road Bangalore 560058