ಕರ್ನಾಟಕ ಸರ್ಕಾರವು 2024ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರತಿ ತಿಂಗಳು ಬರುವ ಭಾನುವಾರ, ಎರಡನೇ ಮತ್ತು ನಾಲ್ಕನೇ ಶನಿವಾರ ಹೊರತುಪಡಿಸಿ ಒಟ್ಟು 21 ದಿನಗಳ ಪಬ್ಲಿಕ್ ಹಾಲಿಡೇ ಘೋಷಿಸಿ ಸರಕಾರ ಗುರುವಾರ ಅಧಿಸೂಚನೆ ಪ್ರಕಟಿಸಿದೆ. ಈ ರಜಾಪಟ್ಟಿಗೆ ಸಚಿವ ಸಂಪುಟದ ಅನುಮೋದನೆ ದೊರೆತ ನಂತರ ಆದೇಶ ಹೊರಡಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
2024ನೇ ಸಾಲಿನಲ್ಲಿ 2ನೇ ಶನಿವಾರ, 4ನೇ ಶನಿವಾರ ಹಾಗೂ ಭಾನುವಾರದ ರಜಾ ದಿನಗಳನ್ನು ಹೊರತುಪಡಿಸಿ ಒಟ್ಟು 21 ಸಾರ್ವತ್ರಿಕ ರಜಾ ದಿನಗಳು ಇರಲಿವೆ ಎಂದು ಹೇಳಿದೆ. . ಈ ಪಟ್ಟಿಯಲ್ಲಿ ಭಾನುವಾರಗಳಂದು ಬರುವ ಅಂಬೇಡ್ಕರ್ ಜಯಂತಿ (ಏ. 14), ಮಹಾವೀರ ಜಯಂತಿ (ಏಪ್ರಿಲ್ 21), ಎರಡನೇ ಶನಿವಾರ ಬರುವ ವಿಜಯದಶಮಿ (ಅ. 12) ನಮೂದಿಸಿಲ್ಲ.
2024 ಸಾರ್ವತ್ರಿಕ ರಜೆಗಳ ಪಟ್ಟಿ ಹೀಗಿದೆ.
ಜನವರಿ 15: ಸಂಕ್ರಾಂತಿ ಹಬ್ಬ
ಜನವರಿ 26: ಗಣರಾಜ್ಯೋತ್ಸವ
ಮಾರ್ಚ್ 8: ಮಹಾಶಿವರಾತ್ರಿ
ಮಾರ್ಚ್ 29: ಗುಡ್‌ಫ್ರೈಡೆ
ಏಪ್ರಿಲ್ 9: ಯುಗಾದಿ ಹಬ್ಬ
ಏಪ್ರಿಲ್ 11: ರಂಜಾನ್
ಮೇ 1: ಕಾರ್ಮಿರ ದಿನಾಚರಣೆ
ಮೇ 10: ಬಸವಜಯಂತಿ/ ಅಕ್ಷಯ ತೃತೀಯ
ಜೂನ್ 17: ಬಕ್ರೀದ್
ಜುಲೈ 17: ಮೊಹರಂ ಕಡೇ ದಿನ
ಆಗಸ್ಟ್ 15: ಸ್ವಾತಂತ್ರ್ಯ ದಿನಾಚರಣೆ
ಸೆಪ್ಟೆಂಬರ್ 7: ಗಣೇಶ ಚತುರ್ಥಿ
ಸೆಪ್ಟೆಂಬರ್ 16: ಈದ್ ಮಿಲಾದ್
ಅಕ್ಟೋಬರ್ 2: ಗಾಂಧಿ ಜಯಂತಿ
ಅಕ್ಟೋಬರ್ 11: ಮಹಾನವಮಿ/ ಆಯುಧ ಪೂಜೆ
ಅಕ್ಟೋಬರ್ 17: ಮಹರ್ಷಿ ವಾಲ್ಮೀಕಿ ಜಯಂತಿ
ಅಕ್ಟೋಬರ್ 31: ನರಕ ಚತುರ್ದಶಿ
ನವೆಂಬರ್ 1: ಕನ್ನಡ ರಾಜ್ಯೋತ್ಸವ
ನವೆಂಬರ್ 2: ಬಲಿಪಾಡ್ಯಮಿ
ನವೆಂಬರ್ 18: ಕನಕದಾಸ ಜಯಂತಿ
ಡಿಸೆಂಬರ್ 25: ಕ್ರಿಸ್‌ಮಸ್
ಸಾರ್ವತ್ರಿಕ ರಜಾ ದಿನಗಳಲ್ಲಿ ರಾಜ್ಯಾದ್ಯಂತ ಸರ್ಕಾರಿ ಕಚೇರಿಗಳು ಮುಚ್ಚಲ್ಪಡುತ್ತವೆ. ಕಚೇರಿಯ ಜರೂರು ಕೆಲಸವನ್ನು ವಿಲೇವಾರಿ ಮಾಡುವ ಬಗ್ಗೆ ಇಲಾಖಾ ಮುಖ್ಯಸ್ಥರುಗಳು ಸೂಕ್ತ ವ್ಯವಸ್ಥೆ ಮಾಡತಕ್ಕದ್ದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ. ಈ ಪಟ್ಟಿಯಲ್ಲಿ ಸೇರಿಸಲಾಗಿರುವ ಮುಸಲ್ಮಾನ ಬಾಂಧವರ ಹಬ್ಬಗಳು ನಿಗದಿತ ದಿನಾಂಕದಂದು ಬೀಳದಿದ್ದರೆ ಸರ್ಕಾರಿ ಸೇವೆಯಲ್ಲಿರುವ ಮುಸಲ್ಮಾನ ಬಾಂಧವರಿಗೆ ನಿಗದಿತ ರಜೆಗೆ ಬದಲಾಗಿ ಹಬ್ಬದ ದಿವಸ ರಜಾ ಮಂಜೂರು ಮಾಡಬಹುದು ಎಂದು ಸರ್ಕಾರ ಅಧಿಸೂಚನೆಯಲ್ಲಿ ತಿಳಿಸಿದೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ವರದಿ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ