ರಾಜ್ಯದ ಹಲವು ಕಡೆ ಇಂದು ಭಾರಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ 11 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಿದೆ, ಹೌದು, ಕಳೆದ ನಾಲ್ಕು ದಿನಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದ್ದು. ಮುಂದಿನ ಒಂದು ವಾರ ಮಳೆಯಾಗುವ ಸೂಚನೆ ಹವಾಮಾನ ಇಲಾಖೆ ನೀಡಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ.
ಕರ್ನಾಟಕ ಹವಾಮಾನ ವರದಿ
ಕರ್ನಾಟಕದ 12 ಜಿಲ್ಲೆಗಳಲ್ಲಿ ಇಂದಿನಿಂದ ಒಂದು ವಾರಗಳ ಕಾಲ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದಲ್ಲಿ ಮುಂಗಾರು ಆಗಮನಕ್ಕೂ ಮುನ್ನವೇ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ರೈತರು ಸಂತಸದಲ್ಲಿದ್ದಾರೆ.
ಗಾಳಿ ಸಹಿತ ಭಾರಿ ಮಳೆ
ಕಲಬುರಗಿ, ಯಾದಗಿರಿ, ಗದಗ, ಕೊಪ್ಪಳ, ಬಳ್ಳಾರಿ, ದಾವಣಗೆರೆ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳ ಜತೆಗೆ ಬೆಳಗಾವಿ, ವಿಜಯಪುರ, ಧಾರವಾಡ, ಹಾವೇರಿ, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಯ ಕೆಲ ಸ್ಥಳಗಳಲ್ಲಿ 50ರಿಂದ 60 ಕಿ.ಮೀ. ವೇಗದಲ್ಲಿ ಗಾಳಿ ಸಹಿತ ಭಾರಿ ಮಳೆಯಾಗುವ ಸಂಭವವಿದೆ. ಇನ್ನುಳಿದ ಜಿಲ್ಲೆಗಳ ಕೆಲ ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ಇದೇ 19ರವರೆಗೂ ಕರಾವಳಿಯ ಎಲ್ಲ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ.
ಎಲ್ಲೆಲ್ಲಿ ಮಳೆ ಆಗಿದೆ?
ಶ್ರೀರಂಗಪಟ್ಟಣದಲ್ಲಿ ಅತಿ ಹೆಚ್ಚು ಮಳೆಯಾಗಿದೆ, ಮಂಡ್ಯ, ನಿಪ್ಪಾಣಿ, ನಂಜನಗೂಡು, ಚನ್ನಪಟ್ಟಣ, ರಾಮನಗರ, ಹೆಸರಘಟ್ಟ, ಮಾಗಡಿ, ಕೃಷ್ಣರಾಜಪೇಟೆ, ಮದ್ದೂರು, ತಿಪಟೂರು, ಯುಗಟಿ, ತೊಂಡೇಭಾವಿ, ಹುಣಸೂರು, ಅಜ್ಜಂಪುರ, ಸಕಲೇಶಪುರ, ಬೇಗೂರು, ಹಾರಂಗಿ, ಕುಣಿಗಲ್, ಮುಳವಳ್ಳಿ, ಶ್ರವಣಬೆಳಗೊಳದಲ್ಲಿ ಮಳೆಯಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಾಮರಾಜನಗರ, ಹಾಸನ, ಕೊಡಗು,ಮಂಡ್ಯ, ಮೈಸೂರು, ಶಿವಮೊಗ್ಗದಲ್ಲಿ ಹೆಚ್ಚು ಮಳೆಯಾಗಲಿದೆ. ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ತುಮಕೂರಿನಲ್ಲಿ ಕೂಡ ಎರಡು ದಿನಗಳ ಬಳಿಕ ಮಳೆ ಜೋರಾಗಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ,ವಿಜಯನಗರದಲ್ಲೂ ಸಾಧಾರಣ ಮಳೆಯಾಗಲಿದೆ ಜೊತೆಗೆ ಗುಡುಗು ಮಿಂಚು ಮತ್ತು ಗಂಟೆಗೆ 40 ರಿಂದ 50 ಕಿ.ಮೀ. ವೇಗದ ಗಾಳಿಯೂ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮಳೆ ಮುನ್ಸೂಚನೆ ನೀಡಿದೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.