ರಾಜ್ಯದಲ್ಲಿ ಮುಂಗಾರುಪೂರ್ವ ಮಳೆ ಭಾರಿ ಪ್ರಮಾಣದಲ್ಲಿ ಅಬ್ಬರಿಸುತ್ತಿದ್ದು, ಬರುವ ಮೇ 22ನೇ ತಾರೀಖಿನವರೆಗೂ ರಾಜ್ಯದಲ್ಲಿ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ. ಇಂದಿನಿಂದ ಮೇ 20ರವರೆಗೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು. ರಾಜ್ಯದ ಹವಾಮಾನ ಮುನ್ಸೂಚನೆ ಕೆಳಗೆ ವಿವರವಾಗಿ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕ ಹವಾಮಾನ ವರದಿ
ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿ ಸಿ.ಎಸ್ ಪಾಟೀಲ್ ಹೇಳಿದ್ದಾರೆ. ದಕ್ಷಿಣ ಒಳನಾಡು ಭಾಗದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಜೊತೆಗೆ ಮೈಸೂರು, ಮಂಡ್ಯ, ಕೋಲಾರದಲ್ಲೂ ಭಾರೀ ಮಳೆ ಎಚ್ಚರಿಕೆ ನೀಡಲಾಗಿದೆ.
ಇಂದು (ಮೇ 18) ಕೊಡಗು, ಹಾಸನ, ಮೈಸೂರು, ಮಂಡ್ಯ ಮತ್ತು ತುಮಕೂರು ಜಿಲ್ಲೆಗಳ ಹಲವೆಡೆ ಗುಡುಗು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ಶಿವಮೊಗ್ಗ, ವಿಜಯನಗರ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಯ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಮೇ 19 ರಂದು ಕೊಡಗು, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ದಕ್ಷಿಣ ಕನ್ನಡ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಅಬ್ಬರದ ಮಳೆಯಾಗುವ ಸಾಧ್ಯತೆಯಿದೆ
ಮೇ 20 ರಂದು ಕೊಡಗು, ಹಾಸನ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಶಿವಮೊಗ್ಗ, ದಾವಣಗೆರೆ, ಬಳ್ಳಾರಿ, ಚಿತ್ರದುರ್ಗ, ಮೈಸೂರು, ವಿಜಯನಗರ, ಜಿಲ್ಲೆಯ ಹಲವೆಡೆ ಗುಡುಗು ಸಹಿತ ಬಿರುಗಾಳಿ ಮಳೆ ಸುರಿಯುವ ಸಾಧ್ಯತೆಯಿದೆ. ಇನ್ನು ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಮೇ 21 ಮತ್ತು 22ರಂದು ರಾಜ್ಯದಾದ್ಯಂತ ಸಾಧಾರಣ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಐಎಂಡಿ ಹೇಳಿದೆ.
ದಕ್ಷಿಣ ಒಳನಾಡಿನಲ್ಲಿ ಬರುವ ಜಿಲ್ಲೆಗಳು ಯಾವುವು?
ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳು ದಕ್ಷಿಣ ಒಳನಾಡಿನಲ್ಲಿ ಬರುತ್ತಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳು ಕರಾವಳಿ ಪ್ರದೇಶದಲ್ಲಿ ಬರುತ್ತವೆ, ಉಳಿದ ಜಿಲ್ಲೆಗಳು ಉತ್ತರ ಒಳನಾಡಿನ ವ್ಯಾಪ್ತಿಗೆ ಬರಲಿವೆ.
ತಮಿಳುನಾಡು-ಪುದುಚೇರಿ-ಕಾರೈಕಲ್, ಕೇರಳ-ಮಾಹೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ, 16-20ರ ಅವಧಿಯಲ್ಲಿ ದಕ್ಷಿಣ ಒಳ ಕರ್ನಾಟಕದಲ್ಲಿ ಮಳೆಯಾಗಲಿದ್ದರೆ, ಕರಾವಳಿ ಕರ್ನಾಟಕದಲ್ಲಿ ಮೇಲ 17 ರಿಂದ 19ರವರೆಗೆ ಮಳೆಯಾಗುವ ಸಾಧ್ಯತೆ ಇದೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.