Karnataka Rain: ರಾಜ್ಯದ ಈ ಜಿಲ್ಲೆಗಳಲ್ಲಿ  ಮೇ.31 ರವರೆಗೂ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ!

rain alertt

ರಾಜ್ಯದ ಹಲವು ಜಿಲ್ಲೆಗಳಲ್ಲಿ  ಮೇ 31ರವರೆಗೂ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಧಾರಕಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. . ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದಿನಿಂದ ಮಳೆ ಇನ್ನಷ್ಟು ಚುರುಕುಗೊಳ್ಳಲಿದೆ. ದೇಶದಲ್ಲಿ ಮುಂಗಾರು ಮಾರುತಗಳು ಮೊದಲು ಎಂಟ್ರಿ ಪಡೆಯುವುದು ಕೇರಳ ರಾಜ್ಯಕ್ಕೆ, ಅನಂತರ ಕರ್ನಾಟಕದ ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶ ಪಡೆಯುತ್ತದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕ ಹವಾಮಾನ ವರದಿ

ಕಳೆದ ಬಾರಿ ಬಿಸಿಲಿನಿಂದ ಜನ ತತ್ತರಿಸಿ ಹೋಗಿದ್ದರು. ಎಲ್ಲ ಕಡೆ ಮಳೆಯಾಗಿ ಅನ್ನದಾತರು ನಿಟ್ಟುಸಿರು ಬಿಟ್ಟಿದ್ದಾರೆ. ಕೆಲ ಜಲಾಶಗಳ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಈಗಾಗಲೇ ಕೇರಳದಲ್ಲಿ ಅಬ್ಬರದ ಮಳೆಯಾಗುತ್ತಿದ್ದು, ಪರಿಣಾಮ ಈ ಬಾರಿ ಕರ್ನಾಟಕಕ್ಕೆ ಮುಂಗಾರು ಬೇಗನೆ ಎಂಟ್ರಿ ಕೊಡುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಇನ್ನು ಮುಂದಿನ ದಿನಗಳಲ್ಲಿ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲೂ ತುಂತುರು ಮಳೆಯಾಗಲಿದೆ, ಕೆಲವು ಕಡೆ ಗುಡುಗು, ಮಿಂಚು ಸಹಿತ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಮಳೆಯಾಗಲಿದೆ

ಭಾರತೀಯ ಹವಾಮಾನ ಇಲಾಖೆ ಪ್ರಕಾರ ಮುಂದಿನ 6 ದಿನಗಳ ಕಾಲ ಕರ್ನಾಟಕದ 8ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಅದೆಲ್ಲವನ್ನು ಹೊರತುಪಡಿಸಿ ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರದ ಮಳೆ ಮುನ್ಸೂಚನೆ ವರದಿ ಪ್ರಕಾರ ಮೇ 25ರ ಬೆಳಗ್ಗೆ 8.30 ರ ತನಕದ ಅವಧಿಯಲ್ಲಿ, ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ. ಕರ್ನಾಟಕದ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಗಳ ಕೆಲವು ಕಡೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಕೆಲವು ಕಡೆ ಗಂಟೆಗೆ 40-50 ಕಿ.ಮೀ. ವೇಗದ ಗಾಳಿಯೊಂದಿಗೆ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿದೆ ಎಂದು ವರದಿ ಎಚ್ಚರಿಸಿದೆ.

2024 ರಲ್ಲಿ ಉತ್ತಮ ಮಳೆ

ಕರ್ನಾಟಕ ರಾಜ್ಯದಲ್ಲಿ ಕಳೆದ ವರ್ಷ ನಿರೀಕ್ಷೆಯಂತೆ ಮಳೆಯಾಗದೆ ಇರುವ ಕಾರಣ ತೀರ್ವ ಬರಗಾಲ ಉಂಟಾಯಿತು. ಆದರೆ 2024ರಲ್ಲಿ ಒಳ್ಳೆಯ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇದೇ ಮಾರ್ಚ್ ಎಲ್ ನಿನೋ ಪ್ರಭಾವ ತಗ್ಗಿ ಮುಂಗಾರು ಉತ್ತಮವಾಗಲಿದೆ. ಹೌದು 2023 ಜನವರಿ 1 ರಿಂದ ಡಿಸೆಂಬರ್ 31ರವರೆಗೆ ರಾಜ್ಯದಲ್ಲಿ ವಾಡಿಕೆಯ ಪ್ರಕಾರ, 1153 ಮಿ.ಮೀ. ಮಳೆ ಸುರಿಯಬೇಕು. ಆದರೆ, ಕೇವಲ 872 ಮಿ.ಮೀ. ಮಾತ್ರ ಮಳೆಯಾಗಿದೆ. 19 ಜಿಲ್ಲೆಗಳಲ್ಲಿ ಮಳೆ ಕೊರತೆ ಉಂಟಾದರೆ, 12 ಜಿಲ್ಲೆಗಧಿಳಲ್ಲಿಸಾಮಾನ್ಯ ಮಳೆ ಕೊರತೆ ಉಂಟಾಗಿದೆ. ಅತಿ ಹೆಚ್ಚು ಮಳೆಯಾಗುವ ಕರಾವಳಿಯಲ್ಲಿ ಶೇ. 19ರಷ್ಟು ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಶೇ.35ರಷ್ಟು ಮಳೆ ಕೊರತೆ ಉಂಟಾಗಿದೆ.

2023 ರಲ್ಲಿ ಬೆಂಗಳೂರಿನಲ್ಲಿ ಕೇವಲ 1020.2 ಮಿಮೀ ಮಳೆಯಾಗಿದೆ. ಇದು ಕಳೆದ ಮೂರು ವರ್ಷಗಳ ಅವಧಿಯಲ್ಲಿ ಕನಿಷ್ಠ ವಾರ್ಷಿಕ ಮಳೆ. ಜೂನ್ ಮತ್ತು ಸೆಪ್ಟೆಂಬರ್ ನಡುವೆ (ನೈಋತ್ಯ ಮಾನ್ಸೂನ್) 474.6 ಮಿಮೀ ಮಳೆ ದಾಖಲಾಗಿದ್ದರೆ, ಅಕ್ಟೋಬರ್ ಮತ್ತು ನವೆಂಬರ್ನಲ್ಲಿ (ಈಶಾನ್ಯ ಮಾನ್ಸೂನ್) 202.9 ಮಿಮೀ ಮಳೆ ದಾಖಲಾಗಿದೆ. ಇಡೀ ವರ್ಷ, ಬೆಂಗಳೂರು ನಗರದಲ್ಲಿ ಕೇವಲ 54 ದಿನ ಮಾತ್ರ ಮಳೆ ಬಿದ್ದಿತ್ತು ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ.

whatss

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಮಾಹಿತಿಗಳನ್ನು ಓದಿ

 

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!