ರಾಜ್ಯದ ಹಲವು ಭಾಗಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರ ಸ್ವಲ್ಪ ಕಡಿಮೆಯಾಗಿದ್ದು. ಮುಂದಿನ ಎರಡು ದಿನ ರಾಜ್ಯದ ಕೆಲವು ಭಾಗಗಳಲ್ಲಿ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕ ಹವಾಮಾನ ವರದಿ
ಜೂನ್ 1ರ ಅವಧಿಯಲ್ಲಿ ಕೇರಳಕ್ಕೆ ಮುಂಗಾರು ಎಂಟ್ರಿ ಕೊಡಲಿದೆ. ಹೀಗಾಗಿ ಜೂನ್ 1 ರ ಬಳಿಕ ಕರಾವಳಿ ಮತ್ತು ದಕ್ಷಿಣ ಒಳನಾಡು ಪ್ರದೇಶಗಳಿಗೆ ಭಾರೀ ಮಳೆ ಮುನ್ಸೂಚನೆ ನೀಡಿದೆ. ಮುಂದಿನ ಏಳು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಇನ್ನು ಕಲ್ಯಾಣ ಕರ್ನಾಟಕ ಭಾಗದ ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಗಾಳಿಯೊಂದಿಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರೆಮೆಲ್ ಚಂಡಮಾರುತ ರಾಜ್ಯಕ್ಕೆ ಹೆಚ್ಚಿನ ಪರಿಣಾಮ ಬೀರದು. ಹೀಗಾಗಿ ಮಳೆ ಕ್ಷೀಣಿಸಲಿದೆ. ಆದರೆ, ಮೇ 30ರ ನಂತರ ವಾರಾಂತ್ಯದಲ್ಲಿ ಮಳೆ ಸುರಿಯಲಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ತಾಪಮಾನದ ಪ್ರಮಾಣವು ಹೆಚ್ಚಳವಾಗುವ ಸಾಧ್ಯತೆ ಇದೆ. ಮುಂದಿನ ಎರಡು ದಿನ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇಲ್ಲ ಮತ್ತು ಪೂರ್ವ ಮುಂಗಾರು ಇಳಿಕೆಯಾಗಿದ್ದು ಮೇ 30ರವರೆಗೂ ಬೆಂಗಳೂರಿನಲ್ಲಿ ಮಳೆಯ ಆಗಮನ ಆಗುವುದಿಲ್ಲ ಎಂದು ಹವಾಮಾನ ಇಲಾಖೆ ಹೇಳಿದೆ & ಕರಾವಳಿ ಭಾಗದಲ್ಲೂ ಉಷ್ಣಾಂಶ ಅಧಿಕವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ರಾಜ್ಯಕ್ಕೆ ಮುಂಗಾರು ಪ್ರವೇಶ
ಮುಂದಿನ ಎರಡು ದಿನಗಳಲ್ಲಿ ದಕ್ಷಿಣ ಅರೇಬಿಯನ್ ಸಮುದ್ರದ ಕೆಲವು ಭಾಗಗಳು, ಮಾಲ್ಡಿವ್ಸ್ ಮತ್ತು ಕೊಮೊರಿಯನ್ ಪ್ರದೇಶದಲ್ಲಿ ನೈರುತ್ಯ ಮಾನ್ಸೂನ್ ಮತ್ತಷ್ಟು ಮುನ್ನಡೆಯಲ್ಲಿದೆ. ಕೇರಳಕ್ಕೆ ಮೇ 31 ಅಥವಾ ಜೂನ್ 1 ರಂದು ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಜೂನ್ 7 ರಂದು ರಾಜ್ಯದ ಕರಾವಳಿಗೆ ಮುಂಗಾರು ಮಾರುತಗಳು ಪ್ರವೇಶಿಸಲಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ.ರಾಜವೇಲ್ ಮಾಣಿಕ್ಕಂ ಹೇಳಿದ್ದಾರೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.