Karnataka Rains: ಮಳೆ..ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ! ರೆಡ್ ಅಲರ್ಟ್ ಘೋಷಣೆ

rain alert june 9

ಕರ್ನಾಟಕದ ಅತ್ಯಂತ ದಿನದಿಂದ ದಿನಕ್ಕೆ ಮುಂಗಾರು ಮಳೆ ಬಾರಿ ಪ್ರಮಾಣದಲ್ಲಿ ಚುರುಕು ಪಡೆಯುತ್ತಿದ್ದು ರಾಜ್ಯದ ಒಟ್ಟು 12 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿ ಎಚ್ಚರಿಕೆ ನೀಡಿದೆ. ರಾಜಧಾನಿ ಬೆಂಗಳೂರಿನ ಹಲವೆಡೆ ನಿನ್ನೆ ಸಂಜೆಯಿಂದ ಭಾರೀ ಮಳೆಯಾಗಿದ್ದು, ನಗರದ ಹಲವೆಡೆ ಸಾಧಾರಾಣ ಮಳೆಯಾಗಿದೆ. ಇಂದು ಸಂಜೆ ಕೂಡ ನಗರದ ವಿವಿಧ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ, ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.

ಕರ್ನಾಟಕ ಹವಾಮಾನ ವರದಿ

ರಾಜ್ಯದ ಹಲವೆಡೆ ಇಂದು ಭಾನುವಾರ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು 7 ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಹಾಗೂ ಹನ್ನೆರಡು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ. ಜೂನ್ 12ರ ವರೆಗೆ ಮಳೆ ಮುಂದುವರೆಯುವ ಮುನ್ಸೂಚನೆ ಸಿಕ್ಕಿದ್ದು, ಈ ಹಿನ್ನೆಲೆ ಇಂದು ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ವಿಜಯಪುರ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ. ದಕ್ಷಿಣ ಕನ್ನಡ, ಗದಗ, ಕಲಬುರಗಿ, ರಾಯಚೂರು, ಯಾದಗಿರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಚಂಡಮಾರುತದ ವಾತಾವರಣವು ಕರಾವಳಿ ಉದ್ದಕ್ಕೂ ಮೇಲುಗೈ ಸಾಧಿಸಿದ್ದು, ಗಾಳಿಯು 45ರಿಂದ 65 ಕಿ.ಮೀ. ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಆದ್ದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಇಲಾಖೆ ಮುನ್ಸೂಚನೆ ನೀಡಿದೆ. 

ಜೂನ್ 8 ರಿಂದ ಜೂನ್ 11 ರವರೆಗೆ ಹವಮಾನ ಇಲಾಖೆಯಿಂದ ಕಲಬುರಗಿ ಜಿಲ್ಲೆ ರೆಡ್​ ಅಲರ್ಟ್ ಘೋಷಣೆಯಾಗಿರುವುದರಿಂದ ನದಿತೀರದ ಜನ ತೀರ ಎಚ್ಚರಿಕೆಯಿಂದ ಇರಲು ಜಿಲ್ಲಾಡಳಿತ ಸೂಚನೆ ನೀಡಿದೆ. ಜನಜಾನುವಾರುಗಳನ್ನ ನದಿ ತೀರದಲ್ಲಿ ಬಿಡದಂತೆ ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಮಳೆ ಸಾಧ್ಯತೆ ಇದೆ. ಕಳೆದೊಂದು ವಾರದಿಂದ ಸಂಜೆ ಬಳಿಕ ಬೆಂಗಳೂರಲ್ಲಿ ಉತ್ತಮ ಮಳೆ. ಇದೇ ರೀತಿ ಮುಂದಿನ ನಾಲ್ಕು ದಿನ ನಗರದಲ್ಲಿ ಮಳೆ ಮುಂದುವರೆವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಮಾಹಿತಿಗಳನ್ನು ಓದಿ

 

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!