Karnataka Rains: ರಾಜ್ಯದಲ್ಲಿ ಮಳೆಯ ಅಬ್ಬರ, ಇಂದು ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ!

rain alert 3

ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಮಳೆ ಭಾರಿ ಆರ್ಭಟ ಮಾಡುತ್ತಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ. ಕೆಲವು ಭಾಗಗಳಲ್ಲಿ ಮಳೆಯ ಅವಾಂತರದಿಂದ ಬಹಳ ಅನಾಹುತಗಳು ಸೃಷ್ಟಿಯಾದ ಘಟನೆಗಳು ಬೆಳಕಿಗೆ ಬಂದಿದ್ದು. ಬರುವ ಜೂನ್ 19ರ ಬಳಿಕ ಮಳೆರಾಯನ ಆರ್ಭಟ ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೂ ಬೆಂಗಳೂರಿನಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು. ಉಳಿದೆಡೆ ಮುಂದಿನ ಐದು ದಿನ ಗುಡುಗು ಮಿಂಚು ಸಹಿತ ಸಾಧಾರಣ ಪ್ರಮಾಣದಲ್ಲಿ ವರ್ಷಧಾರೆಯಾಗಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.

ಕರ್ನಾಟಕ ಹವಾಮಾನ ವರದಿ

ರಾಜ್ಯದಲ್ಲಿ ನಿರಂತರವಾಗಿ ಮಳೆ ಬೀಳುತ್ತಿದೆ. ಐದು ವರ್ಷ ಬಳಿಕ 2024ರ ಜೂ 1ರಿಂದ ಜೂ 10ರವರೆಗೆ ವಾಡಿಕೆಗಿಂತ ಅಧಿಕ ಪ್ರಮಾಣದಲ್ಲಿ ಸುರಿದಿದೆ.ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರವು (KSNDMC) ಮುಂದಿನ ಐದು ದಿನಗಳಲ್ಲಿ ಕರ್ನಾಟಕ ರಾಜ್ಯದಾದ್ಯಂತ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ (30-40 kmph) ಸಹಿತ ವ್ಯಾಪಕವಾದ ಲಘುವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಜೂನ್ 19ರ ನಂತರ ಮುಂಗಾರು ಮತ್ತಷ್ಟು ಚುರುಕು ಪಡೆಯುವ ಸಾಧ್ಯತೆಯಿದೆ.

ಜೂನ್ ಮೊದಲ ಎರಡು ವಾರದಲ್ಲೇ ರಾಜ್ಯದಲ್ಲಿ ದಾಖಲೆಯ 113 mm ನಷ್ಟು ಮಳೆಯಾಗಿದ್ದು, ಕಳೆದ ವರ್ಷ ಈ ಅವಧಿಯಲ್ಲಿ 70 mm ನಷ್ಟು ಮಳೆಯಾಗಿತ್ತು. ಕಳೆದ ಬಾರಿಗಿಂತ 62% ನಷ್ಟು ಮುಂಗಾರು ಮಳೆ ಏರಿಕೆ ಕಂಡಿದೆ. ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 17ರವರೆಗೆ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಸಂಸ್ಥೆ ಮುನ್ಸೂಚನೆ ನೀಡಿದೆ.

ಜೂನ್‌ 16 ರಂದು ಎಲ್ಲೆಲ್ಲಿ ಮಳೆ ಆಗಲಿದೆ?

ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾನುವಾರ ಮೋಡ ಕವಿದ ವಾತಾವರಣವಿದ್ದು ಸಾಧಾರಣ/ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಬಾಗಲಕೋಟೆ, ವಿಜಯಪುರ ಮತ್ತು ಕಲಬುರ್ಗಿಯ ಉತ್ತರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಈ ಮಾಹಿತಿಗಳನ್ನು ಓದಿ

 

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!