ರಾಜ್ಯದಲ್ಲಿ ಮುಂಗಾರು ಮಳೆ ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ, ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗಿಂತ ಉತ್ತರದ ಜಿಲ್ಲೆಗಳಲ್ಲಿ ಭರಪೂರ ಮಳೆಯಾಗಿದೆ. ಹೌದು ಉತ್ತರ ಕರ್ನಾಟಕದ ಬರೋಬ್ಬರಿ 109 ತಾಲೂಕುಗಳಲ್ಲಿ ವಾಡಿಕೆ ಗಿಂತ ಶೇಕಡ 60ರಷ್ಟು ಹೆಚ್ಚು ಮಳೆಯಾಗಿದೆ. ಕಳೆದ ವರ್ಷದಲ್ಲಿ ಬರದಿಂದ ಕಂಗೆಟ್ಟಿದ್ದ ರೈತರು ಬಿತ್ತನೆ ಭರಾಟೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಒಂದು ವಾರದಿಂದ ಸೈಲೆಂಟ್ ಆಗಿದ್ದ ಮಳೆರಾಯ ಮತ್ತೆ ರುದ್ರಾವತಾರ ತೋರಿಸುತ್ತಿದ್ದು ಮುಂದಿನ 6 ದಿನಗಳವರೆಗೆ ಮತ್ತೆ ಮಳೆಯ ಮುನ್ನೆಚ್ಚರಿಕೆ ಕೊಡಲಾಗಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ತಿಳಿದುಕೊಳ್ಳೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.
ಕರ್ನಾಟಕ ಹವಾಮಾನ ವರದಿ
ರಾಜ್ಯದ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ, ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಂಗಳೂರು ಹಾಸನ ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಮತ್ತು ಉತ್ತರ ಕರ್ನಾಟಕ ಭಾಗದ ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಮತ್ತು ದಕ್ಷಿಣದ ಮೈಸೂರು ಜಿಲ್ಲೆಯ ಹಲವು ಕಡೆ ಭಾರಿ ಗಾಳಿಯೊಂದಿಗೆ ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆ ಇದೆ.
ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಚಂಡಮಾರುತದ ಹವಾಮಾನವು ಗಂಟೆಗೆ 35 ರಿಂದ 45 ಕಿಮೀ ವೆೇಗದಲ್ಲಿ ಬೀಸುವ ಗಾಳಿಯು ಕರ್ನಾಟಕ ಕರಾವಳಿಯ ಉದ್ದಕ್ಕೂ ಮತ್ತು ಹೊರಗೆ ಮೇಲುಗೈ ಸಾಧಿಸುವ ಸಾಧ್ಯತೆ ಇದ್ದು ಹವಾಮಾನ ಇಲಾಖೆ ಮೀನುಗಾರರಿಗೆ ಎಚ್ಚರಿಕೆ ನೀಡಿದೆ.
ಭರ್ಜರಿ ಬಿತ್ತನೆ
ಉತ್ತರ ಕರ್ನಾಟಕದಲ್ಲಿ ಭಾರೀ ಪ್ರಮಾಣದ ಮಳೆಯಾಗಿದ್ದು, ರೈತರು ಬಿತ್ತನೆಯಲ್ಲಿ ಬ್ಯುಸಿ ಆಗಿದ್ದಾರೆ. ಮುಂಗಾರಿನ ಪ್ರಮುಖ ಬೆಳೆಗಳಾದ ಹೆಸರು ಉದ್ದು ಸೋಯಾ ಮೆಕ್ಕೆಜೋಳ ಶೇಂಗಾ ಅತ್ತಿ ಮೆಣಸಿನಕಾಯಿ ತೊಗರಿ ಹೀಗೆ ಇತರೆ ಬೆಳೆಗಳ ಬಿತ್ತನೆಯಲ್ಲಿ ತೊಡಗಿಸಿಕೊಂಡಿದ್ದಾರೆ.
ಕರ್ನಾಟಕದ ಈ ಭಾಗದಲ್ಲಿ ಮಳೆ!
ಜೂನ್ 22 ರಿಂದ ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿಯು ಮಳೆ ಆರಂಭ ಆಗಲಿದ್ದು, ಜುಲೈ ಮೊದಲ ವಾರದವರೆಗೂ ಭಾರಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ತಿಳಿಸಿದ್ದು, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಕೊಡಗು, ಉಡುಪಿ, ಚಾಮರಾಜನಗರ ಜಿಲ್ಲೆ, ಮಂಡ್ಯ, ಮಂಗಳೂರು & ಉತ್ತರ ಕನ್ನಡ, ತುಮಕೂರು, ಹಾಸನ, ಚಿತ್ರದುರ್ಗ, ಬೆಳಗಾವಿ, ದಾವಣಗೆರೆಯ ಹಲವು ಪ್ರದೇಶದಲ್ಲಿ ಮಳೆ ಅಬ್ಬರಿಸಲಿದೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.