ಕಳೆದ ವಾರದಿಂದ ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಹಲವು ಜನಗಳಲ್ಲಿ ಉತ್ತಮ ಮಳೆಯಾಗಿದೆ, ಬರುವ 25ನೇ ತಾರೀಖಿನವರೆಗೆ ಕರಾವಳಿ ಹಾಗೂ ಉತ್ತರ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದ್ದು ಹಲವು ಜಿಲ್ಲೆಗಳಿಗೆ ಯೆಲ್ಲೋ ಮತ್ತು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.
ಕರ್ನಾಟಕ ಹವಾಮಾನ ವರದಿ
ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಉತ್ತಮ ಮಳೆಯಾಗಲಿದ್ದು, ಕೆಲವು ಜಿಲ್ಲೆಗಳಲ್ಲಿ ತೀವ್ರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಇನ್ನೂಇಂದಿನಿಂದ ಜೂ. 25 ರವರೆಗೆ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆ ಇದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನಲೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹಲವು ಜಿಲ್ಲೆಗಳಿಗೆ ರೆಡ್ ಆಲರ್ಟ್ ಘೋಷಣೆ ಮಾಡಲಾಗಿದ್ದು, ಕೊಡಗಿನಲ್ಲಿಯೂ ಹೆಚ್ಚು ಮಳೆಯಾಗಲಿದೆ ಎಂದು ವರದಿ ತಿಳಿಸಿದೆ.
ಇಂದು ಎಲ್ಲೆಲ್ಲಿ ಮಳೆ?
ಇಂದು ಉಡುಪಿ, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಿಗೆ ರೆಡ್, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತದ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರ ತಿಳಿಸಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಾಳಿಯ ವೇಗವು ಜೋರಾಗಿರಲಿದೆ.
ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಾಳಿಯ ವೇಗವು ಜೋರಾಗಿರಲಿದೆ. ಬೀದರ್ ಹಾಗೂ ಕಲಬುರಗಿಯಲ್ಲಿ ಉತ್ತಮ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಇತರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಬೆಂಗಳೂರು ಹವಾಮಾನ
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಕೆಲವೊಮ್ಮೆ ಮೇಲ್ಮೈ ಗಾಳಿಯು ಪ್ರಬಲವಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ. ಸಂಜೆ ವೇಳೆಗೆ ಕೆಲವು ಏರಿಯಾಗಳಲ್ಲಿ ಮಳೆ ಬೀಳುವ ಸಾಧ್ಯತೆ ಇದ್ದು ಇಂದು ಸಂಜೆ ಶಾಪಿಂಗ್, ಪಾರ್ಟಿ ಎಂದು ಹೋಗುವವರು ಎಚ್ಚರಿಕೆ ವಹಿಸುವುದು ಉತ್ತಮ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.