ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಪ್ರತಿದಿನ ಮಳೆಯ ಆರ್ಭಟ ಹೆಚ್ಚಾಗಿದ್ದು, ಕೆರೆಕಟ್ಟೆ ನದಿಗಳು ತುಂಬಿ ಹರಿಯುತ್ತಿವೆ. ಮತ್ತು ಪ್ರಮುಖ ಜಲಾಶಯಗಳ ಒಳಹರಿವಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು. ನಾಲೆಗಳ ಮೂಲಕ ಹೆಚ್ಚಿನ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ, ಈ ವರ್ಷ ಧಾರೆ ರೈತರ ಮುಖದಲ್ಲಿ ಮಂದಹಾಸ ಮೂಡಿಸಿದ್ದು. ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಇದೇ ವಾತಾವರಣ ಜುಲೈ 9 ಇಂದು ಸಹ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ.
ಕರ್ನಾಟಕ ಹವಾಮಾನ ವರದಿ
ರಾಜ್ಯಾದ್ಯಂತ ಜು.1ರಿಂದ ಜು.6ರವರೆಗೆ ವಾಡಿಕೆಗಿಂತ ಅಧಿಕ ಮಳೆಯಾಗಿದೆ. ಆರು ದಿನದಲ್ಲಿ ವಾಡಿಕೆಯಂತೆ 55 ಮಿಮೀ ಮಳೆಯಾಗಬೇಕಿತ್ತು. ಆದರೆ, 63 ಮಿಮೀ ಸುರಿದಿದ್ದು, ಶೇ.27 ವಾಡಿಕೆಗಿಂತ ಹೆಚ್ಚು ಬಿದ್ದಿರುವುದು ಗಮನಾರ್ಹ. ಭಾರತೀಯ ಹವಾಮಾನ ಇಲಾಖೆ ಮತ್ತು ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸೂಚನೆಯಂತೆ ಕರಾವಳಿ ಭಾಗದಲ್ಲಿ ಮಳೆ ಜೋರಾಗಿದ್ದು, ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಹೊರಡಿಸಲಾಗಿದೆ.
ತಗ್ಗುಪ್ರದೇಶ, ನೆರೆ ನೀರು ತುಂಬುವ ತಗ್ಗು ಪ್ರದೇಶ ನದಿ, ಸಮುದ್ರ ತೀರ ಪ್ರದೇಶಕ್ಕೆ ಸಾರ್ವಜನಿಕರು, ಪ್ರವಾಸಿಗರು ತೆರಳುವಂತಿಲ್ಲ, ಮೀನುಗಾರಿಕೆಗೆ ಸಮುದ್ರಕ್ಕೆ ತೆರಳುವಂತಿಲ್ಲ, ವಿದ್ಯುತ್ ಕಂಬಗಳ ಬಳಿ ತೆರಳುವಂತಿಲ್ಲ, ಪ್ರಾಕೃತಿಕ ವಿಕೋಪದ ಸೂಚನೆ ಕಂಡು ಬಂದಲ್ಲಿ ಕೂಡಲೇ ಸ್ಥಳೀಯ ಆಡಳಿತಕ್ಕೆಸೂಚನೆ ನೀಡಬೇಕು. ಈ ಅವಧಿಯಲ್ಲಿ ಈಜಲು ಅಥವಾ ಮನರಂಜನೆಗಾಗಿ ನೀರು, ನದಿಗಳಿಗೆ ಇಳಿಯುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ತುರ್ತು ಸೇವೆಗೆ ನಿಯಂತ್ರಣ ಕೊಠಡಿ ಸಂಪರ್ಕಿಸಬೇಕೆಂದು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅದೇ ರೀತಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಡಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಹೊರಾಂಗಣ ಚಟುವಟಿಕೆಗಳಿಗೆ ಹಲವು ನಿರ್ಬಂಧಗಳನ್ನು ಹೇರಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ರೆಸಾರ್ಟ್‌ಗಳು, ಅರಣ್ಯ ಇಲಾಖೆ ಮತ್ತು ಖಾಸಗಿ ಮನೆಗಳು ಆಯೋಜಿಸುವ ಟ್ರೆಕ್ಕಿಂಗ್ ಮತ್ತು ಸಾಹಸ ಕ್ರೀಡೆಗಳಿಗೆ ತಾತ್ಕಾಲಿಕ ನಿಷೇಧವನ್ನು ಘೋಷಿಸಿದ್ದಾರೆ. ಹೆಚ್ಚುವರಿಯಾಗಿ, ಸಂಭಾವ್ಯ ಭೂಕುಸಿತ ಮತ್ತು ಪ್ರವಾಹದ ವಿರುದ್ಧ ರಕ್ಷಣೆಯ ಕ್ರಮವಾಗಿ ಜಲಪಾತಗಳಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ದಾವಣಗೆರೆ, ಚಿತ್ರದುರ್ಗ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕಲಬುರಗಿ, ಕೋಲಾರ, ಮಂಡ್ಯ, ರಾಮನಗರ ಸೇರಿದಂತೆ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆ ಸುರಿಯುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮುಂದಿನ 4 ದಿನ ಹಾಗೂ ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಮುಂದಿನ 48 ಗಂಟೆ ಭಾರಿ ಮಳೆ ಬೀಳುವ ಸಂಭವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ. ದಕ್ಷಿಣ ಹಾಗೂ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಸಾಧಾರಣ ವರ್ಷಧಾರೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.