ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಭಾರಿ ಮಳೆ ಆಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಜನರ ಜೀವನ ಅಸ್ತವ್ಯಸ್ತವಾಗಿದೆ. ಈ ವರ್ಷ ಉತ್ತರ ಕರ್ನಾಟಕದಲ್ಲೂ ವರುಣನ ಆರ್ಭಟ ಹೆಚ್ಚಾಗಿದ್ದು ಕೆರೆಕಟ್ಟೆಗಳು ತುಂಬಿ ಹರಿಯುತ್ತಿವೆ. ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕೆಲವು ಕಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತು ಸಂಪೂರ್ಣ ವಾದ ವರದಿ ಕೆಳಗೆ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕ ಹವಾಮಾನ ವರದಿ
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಪುನರ್ವಸು ಮಳೆ ಭಾರೀ ಆವಾಂತರವನ್ನು ಸೃಷ್ಟಿಸುತ್ತಿದೆ. ಕುಂಭದ್ರೋಣ ಮಳೆಯಿಂದಾಗಿ ಕೆರೆಕಟ್ಟೆಗಳು ತುಂಬಿ ತುಳುಕುತ್ತಿದೆ. ಈಗಾಗಲೇ ಭಾರೀ ಮಳೆಯಿಂದ ಉತ್ತರ ಕನ್ನಡ ಭಾಗದಲ್ಲಿ ಬೆಟ್ಟ-ಗೊಡ್ಡ ಕುಸಿದು ಹೆದ್ದಾರಿ ಬಂದ್ ಆಗಿರುವ ಘಟನೆ ನಡೆದಿದೆ. ಅಲ್ಲದೆ, ಈಗಲೂ ಈ ಭಾಗದಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಭಾರಿ ಮಳೆ ಹಿನ್ನೆಲೆಯಲ್ಲಿ ಮುಂಬೈ ವಿಮಾನ ನಿಲ್ದಾಣದಲ್ಲಿ ಭಾನುವಾರ 36 ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಯಿತು.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದ್ದು, ಮುಂದಿನ ದಿನಗಳಲ್ಲಿ ಈ ಭಾಗಗಳಲ್ಲಿ ಮಳೆ ಮತ್ತಷ್ಟು ಚುರುಕು ಪಡೆಯುವ ಸಾಧ್ಯತೆ ಹೆಚ್ಚಿದೆ. ಅಲ್ಲದೆ ಮತ್ತೊಂದೆಡೆ, ಚಾಮರಾಜನಗರ, ದಾವಣಗೆರೆ, ಮೈಸೂರು, ಚಿತ್ರದುರ್ಗ, ಬೀದರ್, ಕೋಲಾರ, ಧಾರವಾಡ, ಕಲಬುರಗಿ ಸೇರಿದಂತೆ ಹಲವೆಡೆ ಸಾಧಾರಣ ಮಳೆ ಸುರಿಯಲಿದೆ ಎಂದು ಮುನ್ಸೂಚನೆ ನೀಡಿದೆ.
ಧಾರವಾಡ, ಬೆಳಗಾವಿ, ಹಾವೇರಿ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಬೀದರ್, ಕೊಪ್ಪಳ, ಗದಗ, ಬಳ್ಳಾರಿ, ವಿಜಯನಗರ, ಶಿವಮೊಗ್ಗದಲ್ಲಿ ನಾಳೆ ಸಾಧರಣ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಇನ್ನು ಬೀದರ್, ಯಾದಗಿರಿ, ಕಲಬುರಗಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳು ಸೇರಿದಂತೆ ಸುತ್ತಮುತ್ತಲಿನ ರಾಮನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲೂ ಉತ್ತಮ ಮಳೆ ಸುರಿಯಲಿದೆ ಎಂದು ತಿಳಿಸಿದೆ.
ಈ ಜಿಲ್ಲೆಗಳ ಶಾಲಾ ಕಾಲೇಜು ರಜೆ
ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಜುಲೈ 22 ರಂದು ಜಿಲ್ಲೆಯ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ.
ರಾಜ್ಯದ ಹಲವೆಡೆ ಮುಂದಿನ 48 ಗಂಟೆಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಘೋಷಣೆ ಮಾಡಿರುವುದರಿಂದ ಬೆಳಗಾವಿ ಜಿಲ್ಲೆಯಲ್ಲಿ ಬೆಳಗಾವಿ ಹಾಗೂ ಖಾನಾಪುರ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.