ರಾಜ್ಯದಲ್ಲಿ ಗಣೇಶ ಹಬ್ಬದಂದು ಹಲವು ಕಡೆ ಮಳೆಯಾಗಿದ್ದು, ಇಂದು ಸಹಿತ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಕರ್ನಾಟಕ ನೈಸರ್ಗಿಕ ವಿಪತ್ತು ನಿರ್ಹವಣಾ ಕೇಂದ್ರ (ಕೆಎಸ್ ಎನ್ ಡಿಎಂಸಿ) ಮುಂದಿನ ಸೆ. 12ರವರೆಗೆ ರಾಜ್ಯದ ಐದು ಜಿಲ್ಲೆಗಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗಲಿದೆ ಎಂದು ಹೇಳಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕ ಹವಾಮಾನ ವರದಿ
ಇಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡಕ್ಕೆ ಭಾರೀ ಮಳೆಯಾಗಲಿದೆ. ಹೀಗಾಗಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇನ್ನು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ ಹಾಸನ ಹಾಗೂ ಚಿಕ್ಕಮಗಳೂರಿಗೆ ಭಾರೀ ಮಳೆಯಾಗಲಿದ್ದು, ಇಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.
ಮುಂದಿನ 5 ದಿನ, ಅಂದರೆ, ಸೆ. 12ರವರೆಗೆ ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.
ಎಲ್ಲೆಲ್ಲಿ ಮಳೆ
ಕರಾವಳಿ ಭಾಗದ ದಕ್ಷಿಣ ಕನ್ನಡ ಜಿಲ್ಲೆ ಉಡುಪಿ ಜಿಲ್ಲೆ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಮಳೆಯಾಗುತ್ತಲೆ ಇದೆ. ಇಂದು ಸಹಿತ ಮೂರು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಮುನ್ಸೂಚನೆ ನೀಡಲಾಗಿದ್ದು. ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ ಚಿಕ್ಕಮಂಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಮಳೆ ಬೀಳುವ ಮುನ್ಸೂಚನೆ ನೀಡಲಾಗಿದೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ