Karnataka Weather : ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ತಾಪಮಾನ ಮುನ್ಸೂಚನೆ, ಸೆಕೆಗೆ  ಹೈರಾಣಾದ ಜನ.!

Picsart 25 03 03 11 46 21 060

WhatsApp Group Telegram Group
ಕರ್ನಾಟಕದಲ್ಲಿ ಬೇಸಿಗೆ ಬಿಸಿ ಜೋರಾಗಿದೆ: ಕರಾವಳಿ ಜಿಲ್ಲೆಗಳಿಗೆ ಉಷ್ಣ ಅಲೆ, ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಕರ್ನಾಟಕದಲ್ಲಿ (Karnataka) ಈ ವರ್ಷ ಬೇಸಿಗೆ ಸಾಮಾನ್ಯಕ್ಕಿಂತ ಬೇಗನೆ ಪ್ರಾರಂಭವಾಗಿದ್ದು, ಜನರು ಈಗಾಗಲೇ ತೀವ್ರ ತಾಪಮಾನವನ್ನು ಅನುಭವಿಸುತ್ತಿದ್ದಾರೆ. ರಾಜ್ಯದ ಬಹುತೇಕ ಭಾಗಗಳಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿದ್ದು, ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡಕ್ಕೆ (Udupi and Uttara Kannada) ಉಷ್ಣ ಅಲೆಯ ಎಚ್ಚರಿಕೆ ನೀಡಿದೆ. ಬಿಸಿಯ ವಾತಾವರಣದ ಪರಿಣಾಮ ಜನಜೀವನದ ಮೇಲೆ ಪರಿಣಾಮ ಬೀರುತ್ತಿದ್ದು, ಅದರಲ್ಲೂ ಮಕ್ಕಳು, ವೃದ್ಧರು ಹಾಗೂ ಆರೋಗ್ಯ ಸಮಸ್ಯೆಗಳಿರುವ (Health issues) ಜನರಿಗೆ ಇದು ಹೆಚ್ಚು ತೊಂದರೆ ಉಂಟುಮಾಡುವ ಸಾಧ್ಯತೆ ಇದೆ. ಇನ್ನು, ಕರಾವಳಿಯ ಉಷ್ಣ ಮತ್ತು ತೇವಾಂಶದ ಮಟ್ಟವು ಹೆಚ್ಚಾಗುವ ನಿರೀಕ್ಷೆಯಿದ್ದು, ಸಾರ್ವಜನಿಕರು ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವಂತೆ ಸಲಹೆ ನೀಡಲಾಗಿದೆ. ಹಾಗಿದ್ದರೆ ಯಾವೆಲ್ಲ ಮುಂಜಾಗೃತ ಕ್ರಮಗಳನ್ನು (Precautionary measures) ಅನುಸರಿಸಬೇಕು ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ ಜಿಲ್ಲೆಗಳ ಮೇಲೆ ಉಷ್ಣ ಅಲೆಯ ಪ್ರಭಾವ:

ಮಾರ್ಚ್ ತಿಂಗಳ ಆರಂಭದಲ್ಲೇ ಕರಾವಳಿಯ ಜಿಲ್ಲೆಗಳಲ್ಲಿ ಉಷ್ಣ ಅಲೆಯ ಪ್ರಭಾವ ಗಟ್ಟಿಯಾಗಿ ಕಾಣಿಸಿಕೊಂಡಿದ್ದು, ತಾಪಮಾನ ತೀವ್ರ ಏರಿಕೆಯಾಗುತ್ತಿದೆ (The temperature is rising sharply). ನಿನ್ನೆ ಮತ್ತು ಇಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚು ದಾಖಲಾಗಿದೆ. ಅದೇ ರೀತಿ ನಾಳೆಯೂ ಕೂಡ ತೀವ್ರ ತಾಪಮಾನದ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆಯಿದೆ. ಬಿಸಿಯ ಜೊತೆಗೆ ತೇವಾಂಶದ ಪ್ರಮಾಣವೂ ಹೆಚ್ಚಾಗಿರುವುದರಿಂದ ಈ ಪ್ರದೇಶಗಳಲ್ಲಿ ತಾಪಮಾನವನ್ನು ಸಹಿಸುವ ಮಟ್ಟ ಕಡಿಮೆಯಾಗಲಿದೆ. .

ಹವಾಮಾನ ಇಲಾಖೆ (Weather department) ನೀಡಿದ ವರದಿಯ ಪ್ರಕಾರ, ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಅತಿ ಹೆಚ್ಚು ಉಷ್ಣಾಂಶ 38.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದನ್ನು ಗಮನಿಸಬಹುದು. ಇನ್ನು, ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಅತ್ಯಂತ ಕಡಿಮೆ 15.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ(A temperature of 15.2 degrees Celsius was recorded). ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಬೆಳಿಗ್ಗೆ ಕೆಲವು ಕಡೆ ಮಂಜು ಬೀಳುವ ಸಾಧ್ಯತೆಯಿದೆ. ಇಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ಇರುವುದು ಎಂದು ನಿರೀಕ್ಷಿಸಲಾಗಿದೆ.

ಬಿಸಿಲಿನಿಂದ ರಕ್ಷಣೆ ಪಡೆಯಲು ಯಾವೆಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳ ಬೇಕು?:

ಉಷ್ಣ ಅಲೆಯಿಂದ ತಪ್ಪಿಸಿಕೊಳ್ಳಲು ಹವಾಮಾನ ಇಲಾಖೆ ಜನರಿಗೆ ಕೆಳಕಂಡ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಲು ಸಲಹೆ ನೀಡಿದೆ:

ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ಹೊರಗೆ ಹೋಗುವುದನ್ನು ತಪ್ಪಿಸಿ.
ಹಗುರವಾದ, ಹತ್ತಿಯ ಬಟ್ಟೆ ಧರಿಸಿ, ತಿಳಿ ಬಣ್ಣದ ಬಟ್ಟೆಗಳನ್ನು ಆಯ್ಕೆಮಾಡಿ.
ಹೊರಗಡೆ ಹೋದಾಗ ಕೊಡೆ ಅಥವಾ ಸನ್‌ಗ್ಲಾಸ್ (Sunglass) ಬಳಸಿ, ತಂಪಾದ ನೀರು ಮತ್ತು ಜ್ಯೂಸ್ ಸೇವಿಸಿ.
ತೀವ್ರ ತಾಪಮಾನವು ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡಬಹುದು, ಆದ್ದರಿಂದ ಹೃದ್ರೋಗಿಗಳು, ವಯಸ್ಕರು, ಮಕ್ಕಳು ವಿಶೇಷ ಕಾಳಜಿ ವಹಿಸಬೇಕು.

ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ (Indian Weather Telecast Department forecast) :

ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಮಾರ್ಚ್ ರಿಂದ ಮೇ ತಿಂಗಳವರೆಗೆ ಕರ್ನಾಟಕದ ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚು ಇರುವ ಸಾಧ್ಯತೆ ಇದೆ. ಆದರೆ, ದಕ್ಷಿಣ ಒಳನಾಡು ಹಾಗೂ ಮಲೆನಾಡು ಪ್ರದೇಶಗಳಲ್ಲಿ ಸಾಧಾರಣದಿಂದ ಗರಿಷ್ಠ ಮಟ್ಟದ ತಾಪಮಾನ ದಾಖಲಾಗಬಹುದು. ಕರ್ನಾಟಕ ನೈಸರ್ಗಿಕ ವಿಪತ್ತು ನಿರ್ವಹಣಾ ಘಟಕವು(Karnataka Natural Disaster Management Unit) ಈ ಮಾಹಿತಿಯನ್ನು ಹಂಚಿಕೊಂಡಿದ್ದು, ಮುಂದಿನ ದಿನಗಳಲ್ಲಿ ತಾಪಮಾನದಲ್ಲಿ ಹೆಚ್ಚಿನ ಏರಿಕೆ ಆಗಬಹುದು ಎಂದು ಎಚ್ಚರಿಸಿದೆ.

ಕರ್ನಾಟಕದಲ್ಲಿ ಈ ಬಾರಿಯ ಬೇಸಿಗೆ ಸಾಮಾನ್ಯಕ್ಕಿಂತ ಕಠಿಣವಾಗಬಹುದಾಗಿದೆ. ಈಗಾಗಲೇ ರಾಜ್ಯದ ಹಲವು ಭಾಗಗಳಲ್ಲಿ ಬಿಸಿಯ ತೀವ್ರತೆ ಹೆಚ್ಚಿದ್ದು, ಮುಂದಿನ ದಿನಗಳಲ್ಲಿ ತಾಪಮಾನ ವೃದ್ಧಿಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಲ್ಲಿ (Coastal Districts) ಉಷ್ಣ ಅಲೆಯ ಎಚ್ಚರಿಕೆ ಹೊರಡಿಸಲಾಗಿದ್ದು, ಜನರು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ. ಸರ್ಕಾರ ಹಾಗೂ ನಾಗರಿಕರು ಸಹಕಾರ ನೀಡಿ, ಈ ಬಿಸಿಗಾಳಿ ಮತ್ತು ತೀವ್ರ ತಾಪಮಾನ(Hot winds and extreme temperatures) ದಿಂದ ಆಗಬಹುದಾದ ಸಮಸ್ಯೆಗಳನ್ನು ಕಡಿಮೆ ಮಾಡುವ ಕ್ರಮ ಕೈಗೊಳ್ಳುವುದು ಅಗತ್ಯ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಮಾಹಿತಿಗಳನ್ನು ಓದಿ

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!