ಕರ್ನಾಟಕದಲ್ಲಿ ಮುಂದಿನ ಐದು ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಕಳೆದ ಕೆಲವು ವಾರಗಳಿಂದ ಕರ್ನಾಟಕದಲ್ಲಿ ತಾಪಮಾನ (Temperature) ನಿರಂತರವಾಗಿ ಏರಿಕೆಯಾಗುತ್ತಿದ್ದು, ಜನಜೀವನಕ್ಕೆ ತೊಂದರೆ ಉಂಟಾಗುತ್ತಿದೆ. ಪ್ರಖರ ಬಿಸಿಲಿನ ಹೊಡೆತದಿಂದ ರಾಜ್ಯದ ಹಲವೆಡೆ ಜನರು ಹೈರಾಣಾಗಿದ್ದಾರೆ. ಇಂತಹ ಸಂದರ್ಭದಲ್ಲಿಯೇ ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ(According to the weather department’s forecast), ಮುಂದಿನ ಐದು ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯಾಗುವ ನಿರೀಕ್ಷೆಯಿದೆ. ಯಾವ ಯಾವ ಪ್ರದೇಶಗಳಲ್ಲಿ ಮಳೆಯಾಗಲಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಹವಾಮಾನ ಇಲಾಖೆಯ (IMD) ವರದಿ ಪ್ರಕಾರ, ಈ ವರ್ಷದ ಯುಗಾದಿ ಹಬ್ಬದೊಂದಿಗೆ ಮಳೆಯ ಆಗಮನವಾಗುವ ಸಾಧ್ಯತೆ ಇದೆ. ಮಾರ್ಚ್ ಅಂತ್ಯ ಹಾಗೂ ಏಪ್ರಿಲ್ ಆರಂಭದಲ್ಲಿ ಕರ್ನಾಟಕದ ವಿವಿಧ ಭಾಗಗಳಲ್ಲಿ ಮೋಡ ಕವಿದ ವಾತಾವರಣ(With cloudy weather) ದೊಂದಿಗೆ ಗಾಳಿ ಸಹಿತ ಮಳೆ ಬೀಳುವ ಸಾಧ್ಯತೆಯಿದೆ. ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ, ಇನ್ನು, ಉತ್ತರ ಕರ್ನಾಟಕದ ಕೆಲವು ಪ್ರತ್ಯೇಕ ಭಾಗಗಳಲ್ಲಿ (Some region’s in Karnataka) ಗಾಳಿಯ ತೀವ್ರತೆ ಹೆಚ್ಚಾಗಬಹುದು.
ಯಾವ ಜಿಲ್ಲೆಗಳಲ್ಲಿ ಮಳೆಯಾಗಬಹುದು? :
ಹವಾಮಾನ ಇಲಾಖೆಯ ಪ್ರಕಾರ, ಪ್ರಮುಖವಾಗಿ ರಾಜ್ಯದ ದಕ್ಷಿಣಕನ್ನಡ, ಕೊಡಗು, ಮೈಸೂರು, ಬೆಳಗಾವಿ, ಧಾರವಾಡ, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗಲಿದೆ. ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ (In coastal and mountainous areas) ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದರೆ, ದಕ್ಷಿಣ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಧ್ಯಮ ಪ್ರಮಾಣದ ಮಳೆಯಾಗಬಹುದು. ಹವಾಮಾನ ತಜ್ಞರ ಪ್ರಕಾರ, ಮೈಸೂರು, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿಯೂ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ಹವಾಮಾನ ಸ್ಥಿತಿ(Bangalore weather condition) :
ರಾಜಧಾನಿ ಬೆಂಗಳೂರು ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಮಧ್ಯಮ ಪ್ರಮಾಣದ ಮಳೆಯಾಗಬಹುದು. ದಿನದ ಗರಿಷ್ಠ ತಾಪಮಾನವು ಸುಮಾರು 34 ಡಿಗ್ರಿ ಸೆಲ್ಸಿಯಸ್ ಆಗಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ (Degree Celsius) ದಾಖಲಾಗಬಹುದು. ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಮೋಡ ಮುಸುಕಿದ ವಾತಾವರಣ ಕಂಡುಬಂದಿದ್ದು, ಮಳೆಯ ಸಾಧ್ಯತೆಯೂ ಇದೆ.
ಉತ್ತರ ಕರ್ನಾಟಕ (North Karnataka) ಹವಾಮಾನ ಸ್ಥಿತಿ ಯಾವ ರೀತಿಯಿರಲಿದೆ?:
ಉತ್ತರ ಕರ್ನಾಟಕದಲ್ಲಿ ತಾಪಮಾನ ಎಷ್ಟು ಕುಸಿಯಬಹುದು ಎಂದು ತಿಳಿದುಬಂದಿಲ್ಲ. ಆದರೆ ಬಿಸಿಲಿನ ಪ್ರಭಾವ (heavy sunny) ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ. ಕೆಲವೆಡೆ ಗಾಳಿಯ ತೀವ್ರತೆ ಗಂಟೆಗೆ 40-50 ಕಿಮೀ ವೇಗದಲ್ಲಿ ಬೀಸುವ ನಿರೀಕ್ಷೆಯಿದೆ. ಈ ಪ್ರದೇಶದಲ್ಲಿ ಮಳೆಯ ಪ್ರಮಾಣ ಕಡಿಮೆ ಇರಬಹುದು.
ಹವಾಮಾನ ಬದಲಾವಣೆಯಿಂದ ಆಗಬಹುದಾದ ಪರಿಣಾಮಗಳು (impact) :
ಈ ಬದಲಾವಣೆಯಿಂದಾಗಿ ದಕ್ಷಿಣ ಕರ್ನಾಟಕದ ಕೆಲವೆಡೆ ತಾಪಮಾನ ಕುಸಿಯುವ ನಿರೀಕ್ಷೆಯಿದೆ, ಉಳಿದ ಭಾಗಗಳಲ್ಲಿ ಹವಾಮಾನ ಸ್ಥಿರವಾಗಿರಬಹುದು. ಯುಗಾದಿ ಹಬ್ಬದ (Ugadi festival) ಸಮಯದಲ್ಲಿ ಮಳೆಯ ಆಗಮನ ರಾಜ್ಯದ ಜನತೆಗೆ ತಂಪು ತರಲಿದ್ದು, ಕೆಲವೊಂದು ರೈತರಿಗೂ ಅನುಕೂಲವಾಗಬಹುದು.
ಒಟ್ಟಾರೆ, ಯುಗಾದಿಯ ಸಂಭ್ರಮಕ್ಕೆ ಮಳೆರಾಯ ಆಗಮನವಾಗುವ ಸಿಗುವ ಸಾಧ್ಯತೆ ಉಂಟಾಗಿದ್ದು, ರಾಜ್ಯದ ಜನರು ಸಂತಸದ ಕ್ಷಣಗಳನ್ನು ಕಳೆಯಬಹುದು. ಬಿಸಿಲಿನ ತಾಪದಿಂದ ತೊಂದರೆ ಅನುಭವಿಸುತ್ತಿರುವ ಜನತೆಗಾಗಿ ಈ ಮುನ್ಸೂಚನೆಯು (Forecast) ಆಶಾದಾಯಕ ಸುದ್ದಿಯಾಗಿದ್ದು, ಮುಂದಿನ ದಿನಗಳಲ್ಲಿ ಹವಾಮಾನ ಇನ್ನಷ್ಟು ತಗ್ಗುವ ನಿರೀಕ್ಷೆಯಿದೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.