ರಾಜ್ಯದಲ್ಲಿ ಈಗಾಗಲೇ ಮಳೆಗಾಲ ಮುಗಿದಿದ್ದು, ಚಳಿಗಾಲ ಪ್ರಾರಂಭವಾಗಿದೆ. ರಾಜ್ಯದ ಮಲೆನಾಡು ಭಾಗಗಳಲ್ಲಿ ಕಳೆದ ಎರಡು ಮೂರು ದಿನಗಳಿಂದ ಚಳಿ ಪ್ರಮಾಣ ಹೆಚ್ಚಾಗಿದ್ದು, ಚಾಮರಾಜನಗರ, ಬೆಂಗಳೂರು, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ ಜಿಲ್ಲೆಗಳಲ್ಲಿ ಚಳಿಯ ಅನುಭವ ಕೊಂಚ ಹೆಚ್ಚೇ ಆಗುತ್ತಿದೆ. ಬಹುತೇಕ ಜಿಲ್ಲೆಗಳಲ್ಲಿ ಒಣ ಹವೇ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
Karnataka weather Updates : ಕರ್ನಾಟಕ ಹವಾಮಾನ ವರದಿ:
ರಾಜ್ಯದಲ್ಲಿ ಹೊಸ ವರ್ಷದ ನಂತರ ಮಳೆಯಾಗಲಿದೆ ಎಂದು ಸೂಚನೆ ನೀಡಿದೆ ಹವಾಮಾನ ಇಲಾಖೆ ತಿಳಿಸಿದೆ. ಅಲ್ಲಿಯವರೆಗೂ ಚಳಿ ಇರಲಿದೆ. ಈಗಾಗಲೇ ಚಳಿಗಾಲ ಶುರುವಾಗಿ 8 ದಿನ ಕಳೆದಿದ್ದು, ಜನವರಿ 2ನೇ ವಾರದವರೆಗೂ ಚಳಿ ಜಾಸ್ತಿ ಇರಲಿದೆ. ಆನಂತರ ಕಡಿಮೆಯಾಗಲಿದೆ. ಡಿಸೆಂಬರ್ 3ನೇ ವಾರದಲ್ಲಿ ಧಾರವಾಡ 9.4, ಬಾಗಲಕೋಟೆ 10.2, ಬಳ್ಳಾರಿ 10.7, ಬೀದರ್ 10.5 ಮತ್ತು ವಿಜಯಪುರದಲ್ಲಿ ಕನಿಷ್ಠ ತಾಪಮಾನದಲ್ಲಿ 10.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಡಿ.25ರಂದು ಈ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಸರಾಸರಿ 12-13 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ರಾಜ್ಯದ ಎಲ್ಲೆಲ್ಲಿ ಚಳಿ ?
ಬೆಂಗಳೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಚಳಿ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ, ಹಾಗೂ ದಕ್ಷಿಣ ಕನ್ನಡ ಉತ್ತರ ಕನ್ನಡ ಚಾಮರಾಜನಗರ ಹಾಸನ ಮಂಡ್ಯ ಮೈಸೂರು ಶಿವಮೊಗ್ಗದಲ್ಲಿ ತುಂಬಾ ಚಳಿ ಇರಲಿದೆ. ಹಾವೇರಿ ಬೆಳಗಾವಿ ತುಮಕೂರು ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಚಳಿ ಮತ್ತು ಒಣಹವೇ ಮುಂದುವರೆಯಲಿದೆ. ಹಾಗೂ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಚಳಿ ಇರಲಿದೆ. ಇನ್ನು ಕರಾವಳಿ ಜಿಲ್ಲೆಗಳಲ್ಲಿ ಸವಿತಾ ಚಳಿಗೆ ವಾತಾವರಣ ಹೆಚ್ಚಳವಾಗಿದ್ದು, ಮಲೆನಾಡು ಭಾಗದಲ್ಲಿ ಚಳಿ ವಿಪರಿತವಾಗಿ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಹಲವು ಭಾಗದ ಕನಿಷ್ಠ ತಾಪಮಾನದಲ್ಲಿ ಬುಧವಾರದಂದು ಕುಸಿತ ಕಂಡು ಬಂದಿರುವುದರಿಂದ ಚಳಿಯ ಪ್ರಮಾಣದಲ್ಲಿ ಹೆಚ್ಚಳವಾಗಿದೆ.
ಉತ್ತರ ಒಳನಾಡಿನ ವಿಜಯಪುರದಲ್ಲಿ ಕನಿಷ್ಠ ತಾಪಮಾನದ ದಾಖಲೆ ಮುಂದುವರಿದಿದೆ. ಧಾರವಾಡ, ಬಾಗಲಕೋಟೆ, ಬೀದರ್, ಕೊಪ್ಪಳ, ಗದಗದಲ್ಲೂ ಚಳಿಯ ಅನುಭವ ದಟ್ಟವಾಗಿಯೇ ಇದೆ. ಸತತ ಒಂದು ವಾರದಿಂದ ಉತ್ತರದ ನಾಲ್ಕೈದು ಜಿಲ್ಲೆಗಳಲ್ಲಿ ಚಳಿಯ ವಾತಾವರಣ ಮುಂದುವರಿದಿದೆ.
ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರ ಬಿಡುಗಡೆ ಮಾಡಿರುವ ವರದಿ ಪ್ರಕಾರ, ಮುಂದಿನ ಎರಡು ದಿನದಲ್ಲಿ ಕರ್ನಾಟಕದಲ್ಲಿ ಮಳೆಯ ವಾತಾವರಣ ಎಲ್ಲಿಯೂ ಇಲ್ಲ. ಉಷ್ಣಾಂಶದಲ್ಲಿ ಏರಳಿತ ಇರಲಿದೆ. ಕನಿಷ್ಠ ತಾಪಮಾನದಲ್ಲಿ 2 ರಿಂದ 3 ಡಿಗ್ರಿ ಸೆಲ್ಸಿಯಸ್‌ನಷ್ಟು ಕಡಿಮೆಯಾಗಲಿದೆ.
ಬೆಂಗಳೂರಿನಲ್ಲಿ ಭಾರಿ ಚಳಿ:
ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಚಳಿ ಹೆಚ್ಚಾಗಿದೆ. ಚಳಿಯ ವಾತಾವರಣ ಇನ್ನು ಮೂರು ದಿನಗಳ ಕಾಲ ಇರಲಿದ್ದು, ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಅಂದರೆ ಶುಕ್ರವಾರ ಬೆಳಗಿನವರೆಗೂ ಭಾಗಶಃ ಮೋಡ ಕವಿದ ವಾತಾವರಣ ಕಂಡು ಬರಲಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಹೊತ್ತಿಗೆ ಮಂಜು ಇಲ್ಲವೇ ದಟ್ಟವಾದ ಮಂಜು ಮುಸುಕಿದ ಸನ್ನಿವೇಶ ಕಾಣಲಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನವು 15 ಡಿಗ್ರಿ ಸೆಲ್ಸಿಯಸ್ ನಷ್ಟು ಇರಲಿದೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.