ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಈಗಾಗಲೇ ಭಾರಿ ಚಳಿ ಹೆಚ್ಚಾಗಿದ್ದು, ಅದರಲ್ಲೂ ಕೆಲ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ದಾಖಲಾಗಿದೆ. ಇಂದು ಸಹ ರಾಜ್ಯದ ವಿವಿಧ ಭಾಗಗಳಲ್ಲಿ ಮುಂಜಾನೆ ಮತ್ತು ಸಂಜೆಯ ವೇಳೆಗೆ ಚಳಿ ಇರಲಿದ್ದು ಮಧ್ಯಾಹ್ನದ ವೇಳೆಗೆ ಬಿಸಿಲಿನ ತಾಪಮಾನ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
Karnataka weather Updates : ಕರ್ನಾಟಕ ಹವಾಮಾನ ವರದಿ:
ಈಗಾಗಲೇ ಚಳಿಗಾಲ ಶುರುವಾಗಿ 9 ದಿನ ಕಳೆದಿದ್ದು, ಜನವರಿ 2ನೇ ವಾರದವರೆಗೂ ಚಳಿ ಜಾಸ್ತಿ ಇರಲಿದೆ. ಆನಂತರ ಕಡಿಮೆಯಾಗಲಿದೆ. ಸದ್ಯಕ್ಕೆ ಉತ್ತರ ಒಳನಾಡಿನಲ್ಲಿ ಮಳೆ ಬರುವ ಮುನ್ಸೂಚನೆ ಇಲ್ಲ. ಇಲ್ಲಿ ಚಳಿ ಇನ್ನೂ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.
ರಾಜ್ಯದ ಎಲ್ಲೆಲ್ಲಿ ಚಳಿ ?
ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು, ಶಿವಮೊಗ್ಗ, ಕರಾವಳಿ ಜಿಲ್ಲೆಗಳಲ್ಲಿ ಚಳಿಯ ವಾತಾವರಣ ಹೆಚ್ಚಳವಾಗಿದೆ. ಮಲೆನಾಡು ಭಾಗದಲ್ಲೂ ಚಳಿ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಧಾರವಾಡದಲ್ಲಿ 12.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ, ಬಾಗಲಕೋಟೆಯಲ್ಲಿ 12.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ,ವಿಜಯಪುರದಲ್ಲಿ ಕನಿಷ್ಠ ತಾಪಮಾನ 10 ಡಿಗ್ರಿ ಸೆಲ್ಸಿಯಸ್‍ಗೆ ಇಳಿಕೆ ಆಗಿದೆ. ಜಿಲ್ಲೆಯಲ್ಲಿ 4 ದಿನಗಳಿಂದ ಇದೇ ರೀತಿ ಹೆಚ್ಚು ಚಳಿ ಇದೆ.
ಬೆಂಗಳೂರಿನಲ್ಲಿ ಭಾರಿ ಚಳಿ:
ಬೆಂಗಳೂರಿನಲ್ಲಿ ಇನ್ನು ಎರಡು ದಿನಗಳ ಕಾಲ ಇರಲಿದ್ದು, ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶುಕ್ರವಾರ ಬೆಳಗಿನವರೆಗೂ ಭಾಗಶಃ ಮೋಡ ಕವಿದ ವಾತಾವರಣ ಕಂಡು ಬರಲಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಹೊತ್ತಿಗೆ ಮಂಜು ಇಲ್ಲವೇ ದಟ್ಟವಾದ ಮಂಜು ಮುಸುಕಿದ ಸನ್ನಿವೇಶ ಕಾಣಲಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನವು 15 ಡಿಗ್ರಿ ಸೆಲ್ಸಿಯಸ್ ನಷ್ಟು ಇರಲಿದೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.