ಇದೀಗ ಸಿನಿ ಲೋಕದಲ್ಲಿ ಹೊಸ ಸುದ್ದಿಯೊಂದು ಸುಳಿದಾಡುತ್ತಿದೆ. ಮತ್ತೆ ಕನ್ನಡ ಸಿನಿಮಾ(ಕನ್ನಡ movie) ದಲ್ಲಿ ದೂಳೆಬ್ಬಿಸುವ ಸಿನೆಮಾ ಒಂದು ಸದ್ದು ಮಾಡುತ್ತಿದೆ. ಪ್ರೇಕ್ಷಕರು ಸಿನೆಮಾ ನೋಡಲು ಬಹಳ ಆಸಕ್ತಿಯಿಂದ ಕಾಯುತ್ತಿದ್ದಾರೆ. ಯಾವ ಸಿನಿಮಾ ಅಂತ ತಿಳಿದುಕೊಳ್ಳಬೇಕೇ ಹಾಗಿದಲ್ಲಿ ಲೇಖನವನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಅಧಿಕೃತವಾಗಿ ಕೆಜಿಎಫ್ 3 ಘೋಷಣೆ :
ಸಲಾರ್ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯ ಜೊತೆಗೆ ಮತ್ತೊಂದು ಮಹತ್ವದ ಸುದ್ದಿಯನ್ನೂ ಪ್ರತಿಷ್ಠಿತ ಹೊಂಬಾಳೆ ಫಿಲ್ಮ್ಸ್(Hombale Films) ನೀಡಿದೆ. ಮುಂದಿನ ದಿನಗಳಲ್ಲಿ ಕೆಜಿಎಫ್ 3 (KGF 3) ಸಿನಿಮಾವನ್ನೂ ನಿರ್ಮಾಣ ಮಾಡುವುದಾಗಿ ಅದು ತಿಳಿಸಿದೆ. ಸಲಾರ್ ಸಿನಿಮಾದ ಪತ್ರಿಕಾ ಹೇಳಿಕೆಯಲ್ಲಿ ಈ ವಿಷಯವನ್ನು ಹೊಂಬಾಳೆ ಫಿಲ್ಮ್ಸ್ ತಿಳಿಸಿದೆ.
ಕೆಜಿಎಫ್ 3 ಸಿನಿಮಾ ಮುಂಬರುವ ದಿನಗಳಲ್ಲಿ ಬರಲಿದೆ ಎನ್ನುವ ಸುದ್ದಿ ಹರಿದಾಡುತ್ತಿತ್ತು. ಆದರೆ, ಅಧಿಕೃತವಾಗಿ ಯಾರೂ ಅದನ್ನು ಹೇಳುವ ಪ್ರಯತ್ನ ಮಾಡಿರಲಿಲ್ಲ. ಸಲಾರ್ ನಂತರವೇ ಈ ಚಿತ್ರವನ್ನು ಪ್ರಶಾಂತ್ ನೀಲ್ ಕೈಗೆತ್ತಿಕೊಳ್ಳಲಿದ್ದಾರೆ ಎಂದು ಹೇಳಲಾಗಿತ್ತು. ಅದಕ್ಕೆ ಸುಳಿವು ಎನ್ನುವಂತೆ ಕೆಜಿಎಫ್ 3 ಚಿತ್ರದ ಬಗ್ಗೆ ನಿರ್ಮಾಣವನ್ನು ಸಂಸ್ಥೆಯು ಪ್ರಸ್ತಾಪಿಸಿದೆ.
ಹೊಂಬಾಳೆ ಫಿಲ್ಮ್ಸ್ ಆಪ್ತ ಮೂಲಗಳಿಂದ ಮಾಹಿತಿ ತಿಳಿದಿದೆ:
ಕಳೆದ ವರ್ಷ ತೆರೆ ಕಂಡ ಕೆಜಿಎಫ್ ಚಾಪ್ಟರ್ 2 ಕೊನೆಯಲ್ಲಿ ಚಿತ್ರತಂಡ ಮೂರನೇ ಭಾಗದ ಬಗ್ಗೆ ಸುಳಿವು ನೀಡಿತ್ತು. ಹಾಗಿದ್ರೆ ಯಶ್ ಮುಂದಿನ ಸಿನಿಮಾ ಕೆಜಿಎಫ್ 3 ಗೆ ನಾಯಕ (hero )ಆಗಿರಬಹುದು ಎಂದು ಎಲ್ಲರೂ ಅಂದುಕೊಂಡಿದ್ದರು. ಆದರೆ ಕೆಆರ್‌ಜಿ ಕನೆಕ್ಟ್ಸ್‌ನ ಕಾರ್ತಿಕ್ ಗೌಡ ಟ್ವೀಟ್ ಮಾಡಿ, ಕೆಜಿಎಫ್ 3 ಸಿನಿಮಾ ಬರಲಿದೆ, ಆದರೆ ಈಗಲೇ ಅದರ ಬಗ್ಗೆ ಪ್ಲಾನ್ ಇಲ್ಲ. ಒಂದು ವೇಳೆ ನಾವು ನಿರ್ಧರಿಸಿದ ಕೂಡಲೇ ಅನೌನ್ಸ್ ಮಾಡುವುದಾಗಿ ಹೇಳಿದ್ದರು. ಆದರೆ ಇದೀಗ ಹೊಂಬಾಳೆ ಫಿಲ್ಮ್ಸ್‌ನ ಆಪ್ತ ಮೂಲಗಳು ಕೆಜಿಎಫ್ ಬಗ್ಗೆ ಮಾಹಿತಿ ನೀಡಿವೆ.
ಪ್ರಶಾಂತ್ ನೀಲ್ (Prashant Neel) ಮತ್ತು ಯಶ್ (Yash) ಕಾಂಬಿನೇಷನ್ ನ ಕೆಜಿಎಫ್ ಸಿನಿಮಾ ವಿಶ್ವಮಟ್ಟದಲ್ಲಿ ಸದ್ದು ಮಾಡಿತ್ತು. ಕನ್ನಡ ಸಿನಿಮಾವೊಂದು ಆ ಪ್ರಮಾಣದಲ್ಲಿ ದುಡ್ಡು ಮಾಡಲು ಸಾಧ್ಯವಾ ಎನ್ನುವ ಅಚ್ಚರಿಯೂ ಮೂಡಿತ್ತು. ಕೆಜಿಎಫ್ 1 ಮತ್ತು 2 ಎರಡೂ ಚಿತ್ರಗಳು ಬಾಕ್ಸ್ ಆಫೀಸಿನಲ್ಲಿ ಬಿರುಗಾಳಿ ಎಬ್ಬಿಸಿದ್ದವು. ಹಾಗಾಗಿ ಮುಂದಿನ ದಿನಗಳಲ್ಲಿ ಈ ಸರಣಿ ಮುಂದುವರೆಯಲಿದೆ ಎನ್ನುವ ಸುಳಿವೂ ಕೂಡ ಇತ್ತು.
ಇದೀಗ ಪ್ರಶಾಂತ್ ನೀಲ್ ಸಲಾರ್ ಮುಗಿಸಿಕೊಂಡು, ಜ್ಯೂನಿಯರ್ ಎನ್.ಟಿ.ಆರ್(Jr. NTR) ಸಿನಿಮಾವನ್ನು ಘೋಷಣೆ ಮಾಡಿದ್ದಾರೆ. ಯಶ್ ಹೊಸ ಸಿನಿಮಾದ ಕೆಲಸದಲ್ಲಿ ಬ್ಯೂಸಿಯಾಗಿದ್ದಾರೆ. ಹಾಗಾಗಿ ಕೆಜಿಎಫ್ 3 ಸಿನಿಮಾ ಯಾವಾಗ ಸೆಟ್ಟೇರಲಿದೆ ಎನ್ನುವ ಕುತೂಹಲ ಎಲ್ಲರಿಗೂ ಮೂಡಿದೆ. ಆದಷ್ಟು ಬೇಗ ಈ ಸಿನೆಮಾ ನಿಮ್ಮ ಕಣ್ಣ ಮುಂದೆ ಬರಲಿದೆ ಎಂದು ತಿಳಿಸಿದ್ದಾರೆ.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಇದನ್ನೂ ಓದಿ – ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆಗೆ ಅರ್ಜಿ ಆಹ್ವಾನ, ಇಂದೇ ಕೊನೆಯ ದಿನ ತಪ್ಪದೇ ಅರ್ಜಿ ಸಲ್ಲಿಸಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ