KPTCL Recruitment: ಸ್ಟೇಷನ್ ಪರಿಚಾರಕ &  ಪವರ್ ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ.!

IMG 20241017 WA0009

ಈ ವರದಿಯಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ನೇಮಕಾತಿ 2024 (KPTCL Recruitment 2024) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳು ಒಟ್ಟು 2975 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಲ್ಲಿ 433 ಕಿರಿಯ ಸ್ಟೇಷನ್ ಪರಿಚಾರಕ ಹಾಗೂ 2542 ಕಿರಿಯ ಪವರ್ ಮ್ಯಾನ್ ಹುದ್ದೆಗಳಿವೆ. ಅರ್ಜಿ ಸಲ್ಲಿಸಲು ಅರ್ಹ ಅಭ್ಯರ್ಥಿಗಳು ನಿಗದಿತ ಸಮಯಾವಧಿಯಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ನೇಮಕಾತಿ ವಿವರ

ಕಿರಿಯ ಸ್ಟೇಷನ್‌ ಪರಿಚಾರಕ: 433 ಹುದ್ದೆ
ಕಿರಿಯ ಪವರ್‌ ಮ್ಯಾನ್‌: 2542 ಹುದ್ದೆ

ಅರ್ಜಿ ಸಲ್ಲಿಕೆ ಪ್ರಕ್ರಿಯೆ ಅಕ್ಟೋಬರ್ 21, 2024 ರಿಂದ ಪ್ರಾರಂಭವಾಗಿ ನವೆಂಬರ್. 20, 2024 ವರೆಗೆ ನಡೆಯಲಿದೆ. ಅಭ್ಯರ್ಥಿಗಳು ಕೆಪಿಟಿಸಿಎಲ್ ಅಥವಾ ವಿದ್ಯುತ್ ಸರಬರಾಜು ಸಂಸ್ಥೆಗಳ ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಈ ವೆಬ್‌ಸೈಟ್‌ಗಳಲ್ಲಿ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ಪಡೆಯಬಹುದಾಗಿದೆ.

ಅಧಿಕೃತ ವೆಬ್‌ಸೈಟ್‌ಗಳು:

https://kptcl.karnataka.gov.in
https://bescom.karnataka.gov.in
https://cescmysore.karnataka.gov.in
https://mescom.karnataka.gov.in
https://hescom.karnataka.gov.in
https://gescom.karnataka.gov.in

ಹುದ್ದೆಗಳ ವರ್ಗೀಕರಣ, ಮೀಸಲಾತಿ ವಿವರ, ಕಲ್ಯಾಣ ಕರ್ನಾಟಕ ಪ್ರದೇಶ ಮೀಸಲಾತಿ, ವಯೋಮಿತಿ, ಅರ್ಹತೆ, ನೇಮಕಾತಿ ವಿಧಾನ, ಪರೀಕ್ಷಾ ವಿಧಾನ, ಅರ್ಜಿಯ ನಮೂನೆ ಮತ್ತು ಇತರೆ ವಿವರಗಳನ್ನು ಒಳಗೊಂಡ ವಿಸ್ತ್ರತ ಉದ್ಯೋಗ ಪ್ರಕಟಣೆಯನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಎಂದು ಕೆಪಿಟಿಸಿಎಲ್‌ ನಿಗಮ ಕಾರ್ಯಾಲಯದ ನಿರ್ದೇಶಕರು ತಿಳಿಸಿದ್ದಾರೆ.

ಅರ್ಜಿ ಸಲ್ಲಿಸಲು ಅರ್ಹತೆ ಮತ್ತು ಅಗತ್ಯ ವಿದ್ಯಾರ್ಹತೆ

ಎಸ್.ಎಸ್.ಎಲ್.ಸಿ. ಅಥವಾ 10ನೇ ತರಗತಿಯ (ಸಿ.ಬಿ.ಎಸ್.ಇ/ಐ.ಸಿ.ಎಸ್.ಇ) ಪರೀಕ್ಷೆಯನ್ನು ಕರ್ನಾಟಕ ರಾಜ್ಯದ ವಿದ್ಯಾಸಂಸ್ಥೆಗಳಿಂದ ತೇರ್ಗಡೆ ಹೊಂದಿರುವಂತಹ ಅಭ್ಯರ್ಥಿಗಳು ಮಾತ್ರ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿರುತ್ತಾರೆ.

ಸೂಚನೆ:

ಮೇಲೆ ತಿಳಿಸಲಾದ ವಿದ್ಯಾರ್ಹತೆಯನ್ನು ಹೊರತುಪಡಿಸಿ ಇತರೆ ಯಾವುದೇ ಸಮನಾಂತರ ವಿದ್ಯಾರ್ಹತೆಯನ್ನು (Equivalent Qualification) ನೇಮಕಾತಿಗೆ ಪರಿಗಣಿಸಲಾಗುವುದಿಲ್ಲ.

ಬಾಹ್ಯ ಅಥವಾ ಮುಕ್ತ ವಿಶ್ವವಿದ್ಯಾಲಯ ಅಥವಾ ಮುಕ್ತ ಶಾಲೆಯಿಂದ ಪಡೆದ ಎಸ್.ಎಸ್.ಎಲ್.ಸಿ./10ನೇ ತರಗತಿ (ಬ್ರಿಡ್ಜ್ ಕೋರ್ಸ್) ಉತ್ತೀರ್ಣತೆಯನ್ನು ನೇಮಕಾತಿಗೆ ಪರಿಗಣಿಸಲಾಗುವುದಿಲ್ಲ.

ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು, ಅಭ್ಯರ್ಥಿಗಳು ಈ ಮೇಲೆ ನಿಗದಿಪಡಿಸಿರುವ ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಉತ್ತೀರ್ಣಗೊಂಡಿರತಕ್ಕದ್ದು ಹಾಗೂ ಅಂಕಪಟ್ಟಿಯನ್ನು ಹೊಂದಿರತಕ್ಕದ್ದು.

ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಈ ಮೇಲಿನ ನಿಗದಿತ ಶೈಕ್ಷಣಿಕ ವಿದ್ಯಾರ್ಹತೆ ಪರೀಕ್ಷೆ ಬರೆದು, ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು, ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ.

ಈ ಅಧಿಸೂಚನೆಯನ್ವಯ ನೇಮಕಾತಿಗೆ ಪರಿಗಣಿಸಬೇಕಾಗುವ ವಿದ್ಯಾರ್ಹತೆ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವ ಹಕ್ಕನ್ನು ಕವಿಪ್ರನಿನಿ/ಎಸ್ಕಾಂಗಳು ಮಾತ್ರ ಹೊಂದಿರುತ್ತದೆ ಹಾಗೂ ಅಭ್ಯರ್ಥಿಗಳು ಅದಕ್ಕೆ ಬದ್ಧರಾಗಿರತಕ್ಕದ್ದು.

ಇತರೆ ಅರ್ಹತೆಗಳು:

ಕನ್ನಡದಲ್ಲಿ ಓದುವ ಮತ್ತು ಬರೆಯುವ ಜ್ಞಾನ ಹೊಂದಿರತಕ್ಕದ್ದು.

ತೃಪ್ತಿಕರವಾದ ನೇತ್ರದೃಷ್ಟಿಯನ್ನು ಹೊಂದಿರತಕ್ಕದ್ದು.

ತೃಪ್ತಿಕರ ದೇಹದಾರ್ಡ್ಯವನ್ನು ಹೊಂದಿರತಕ್ಕದ್ದು.
ಕಠಿಣ ಕೆಲಸಗಳಾದ ಗುಂಡಿ ತೆಗೆಯುವುದು, ಗೋಪುರ ಅಥವಾ ಕಂಬ ಹತ್ತುವುದು, ಭಾರವಾದ ವಸ್ತುಗಳನ್ನು ಸಾಗಿಸುವುದು, ತಂತಿಗಳನ್ನು ಅಳವಡಿಸುವುದು, ಕಂಬಗಳನ್ನು ಬದಲಾಯಿಸುವುದು, ಇತ್ಯಾದಿ ಕೆಲಸಕಾರ್ಯಗಳನ್ನು ನಿರ್ವಹಿಸಲು ಶಕ್ತರಿರಬೇಕು ಮತ್ತು ಸಹನ ಶಕ್ತಿ ಪರೀಕ್ಷೆಯಲ್ಲಿ ಅರ್ಹತೆ ಗಳಿಸಬೇಕು. ಈ ಮೇಲೆ ತಿಳಿಸಿರುವ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಎಲ್ಲಾ ರೀತಿಯಲ್ಲಿಯೂ ದೈಹಿಕವಾಗಿ ಸಾಮರ್ಥ್ಯ ಹೊಂದಿರತಕ್ಕದ್ದು.

ಹುದ್ದೆಗಳ ಭರ್ತಿ:

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕವಿಪ್ರನಿನಿ ಅಥವಾ ವಿದ್ಯುತ್ ಸರಬರಾಜು ಕಂಪನಿಗಳು, ಇವುಗಳಲ್ಲಿ ಯಾವುದಾದರೂ ಒಂದು ಕಂಪನಿಗೆ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಅಭ್ಯರ್ಥಿಗಳು ಒಂದು ಹುದ್ದೆಗೆ ಒಂದಕ್ಕಿಂತ ಹೆಚ್ಚಿನ ಅರ್ಜಿ ಸಲ್ಲಿಸಿದ್ದಲ್ಲಿ, ಕೊನೆಯದಾಗಿ ಸಲ್ಲಿಸಿರುವ ಅರ್ಹ ಅರ್ಜಿಯನ್ನು ಮಾತ್ರ ಪರಿಗಣಿಸಲಾಗುವುದು. ಇನ್ನುಳಿದ ಅರ್ಜಿಗಳೊಂದಿಗೆ ಸಲ್ಲಿಸಿರುವ ಅರ್ಜಿ ಶುಲ್ಕವನ್ನು ಯಾವುದೇ ಕಾರಣಕ್ಕೂ ಹಿಂಪಾವತಿಸಲಾಗುವುದಿಲ್ಲ.

ಕಿರಿಯ ಸ್ಟೇಷನ್ ಪರಿಚಾರಕ ಅಥವಾ ಕಿರಿಯ ಪವರ್‌ಮ್ಯಾನ್ ಹುದ್ದೆಗೆ ಅರ್ಜಿ ಸಲ್ಲಿಸುವಾಗ, ‘ಬ್ಯಾಕ್‌ಲಾಗ್ ಹುದ್ದೆಗಳಿಗೆ’ ಪ್ರತ್ಯೇಕವಾಗಿ ಅರ್ಜಿಯನ್ನು ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

ಆಯ್ಕೆಯ ವಿಧಾನ:

ಅಭ್ಯರ್ಥಿಗಳು ನೇಮಕಾತಿ ಹುದ್ದೆಗಳಿಗಾಗಿ ಬೋಧಕ ಶಕ್ತಿಯ ಪರೀಕ್ಷೆಯಲ್ಲಿ ತೇರ್ಗಡೆಯಾಗಬೇಕು. ಎಸ್.ಎಸ್.ಎಲ್.ಸಿ ಅಂಕಗಳ ಆಧಾರದ ಮೇಲೆ ಕರ್ನಾಟಕ ಸರ್ಕಾರದ ಮೀಸಲಾತಿ ನಿಯಮಾವಳಿಗಳನ್ನು ಅನುಸರಿಸಿ, ಜೈಷ್ಠತೆ ಆಧಾರದಲ್ಲಿ ಆಯ್ಕೆಯ ಪ್ರಕ್ರಿಯೆ ನಡೆಯಲಿದೆ.

ಈ ಉದ್ಯೋಗಾವಕಾಶ ನಿಮ್ಮ ಭವಿಷ್ಯವನ್ನು ಉತ್ತಮಗೊಳಿಸುವಲ್ಲಿ ಸಹಾಯಕವಾಗಬಹುದು. ಸಮರ್ಪಕ ಅರ್ಹತೆ ಇದ್ದರೆ, ನಿಮ್ಮ ಆಕಾಂಕ್ಷೆಯನ್ನು ಸಾಧಿಸಲು ಈಗಲೇ ಮೊದಲಿಗೆ ಹೆಜ್ಜೆ ಹಾಕಿ.
ಮತ್ತು ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ವರದಿಯನ್ನು ಎಲ್ಲರಿಗೂ ಶೇರ್ ಮಾಡಿ.

ಈ ಮಾಹಿತಿಗಳನ್ನು ಓದಿ

 


ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!