ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ನಾವು ‘ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನದ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಸಿ ಕೊಡುತ್ತೇವೆ. ಪ್ರತಿವರ್ಷದಂತೆ ಈ ವರ್ಷವೂ ನೊಂದಾಯಿತ ಕಟ್ಟಡ ಕಾರ್ಮಿಕರ ಎರಡು ಮಕ್ಕಳಿಗೆ ಕಲಿಕಾ ಭಾಗ್ಯ ಯೋಜನೆಯಡಿ ವಿಧ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ಅನ್ವಯವಾಗುವಂತೆ ನಿಯಮದಲ್ಲಿ ದೊಡ್ಡ ಬದಲಾವಣೆ ಮಾಡಿದ್ದಾರೆ. ಈ ಹೊಸ ನಿಯಮ ಯಾವುದು ? ಈ ವಿದ್ಯಾ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು? ವಿದ್ಯಾರ್ಥಿ ವೇತನದ ಮೊತ್ತ ಎಷ್ಟು? ಹಾಗೂ ಅರ್ಜಿ ಸಲ್ಲಿಸುವ ವಿಧಾನ ಹೇಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಸಿಕೊಡಲಾಗುವುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಕಟ್ಟಡ ಕಾರ್ಮಿಕರ ಮಕ್ಕಳು ವಿದ್ಯಾಭ್ಯಾಸದಿಂದ ವಂಚಿತರಾಗದಂತೆ ತಡೆಯಲು ಮತ್ತು ಶೈಕ್ಷಣಿಕವಾಗಿ ನೋಂದಾಯಿತ ಕಾರ್ಮಿಕರ ಇಬ್ಬರು ಮಕ್ಕಳಿಗೆ ನರ್ಸರಿಯಿಂದ ಸ್ನಾತಕೋತ್ತರ ಪದವಿಯವರೆಗಿನ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ. ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕಲಿಕೆ ಭಾಗ್ಯ ಯೋಜನೆ ಅಡಿಯಲ್ಲಿ ವಿದ್ಯಾರ್ಥಿವೇತನ & ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ ಪ್ರೋತ್ಸಾಹ ಧನ ಸಹಾಯವನ್ನು ಸರ್ಕಾರ ನೀಡುತ್ತಿದೆ.
ಕಲಿಕಾ ಭಾಗ್ಯ ವಿದ್ಯಾರ್ಥಿವೇತನದ ವಿವರಗಳು:
ಶಿಶು ವಿಹಾರ/ ಪೂರ್ವ ಶಾಲೆ/ ನರ್ಸರಿ ಮಕ್ಕಳಿಗೆ 5 ಸಾವಿರ ರೂಪಾಯಿ 1 ರಿಂದ 4ನೇ ತರಗತಿ ಮಕ್ಕಳಿಗೆ 5 ಸಾವಿರ, ಹೆಣ್ಣು ಮಕ್ಕಳಿಗೆ 5 ಸಾವಿರ ವಾರ್ಷಿಕ ಸಹಾಯಧನ ಇದೆ. ಹಾಗೆಯೇ 5-8ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಬೇರೆ ಪ್ರಮಾಣ, 9-10ನೇ ತರಗತಿ ವಿದ್ಯಾರ್ಥಿಗಳಿಗೆ ಬೇರೆ ಪ್ರಮಾಣ, ಪ್ರಥಮ-ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಬೇರೆ ಪ್ರಮಾಣದಲ್ಲಿ ವಿದ್ಯಾರ್ಥಿವೇತನ ನೀಡಲಾಗುತ್ತದೆ. ಹೀಗೆ ಪದವಿ, ಐಟಿಐ, ಡಿಪ್ಲೊಮ, ಸ್ನಾತಕೋತ್ತರ ಪದವಿ, ಮೆಡಿಕಲ್ ಕೋರ್ಸ್, ಎಂಟೆಕ್/ ಎಂಇ, ಎಂಡಿ/ ಎಂಇ, ಎಂಡಿ (ವೈದ್ಯಕೀಯ), ಪಿ.ಹೆಚ್.ಡಿ ವಿದ್ಯಾರ್ಥಿಗಳಿಗೂ ಈ ಸಹಾಯಧನ ನೀಡಲಾಗುತ್ತದೆ.
ಏನಿದು ನಿಯಮದಲ್ಲಿ ಹೊಸ ಬದಲಾವಣೆ?
ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನಕ್ಕೆ ನೀವು ಸೇವಾ ಸಿಂಧುವಿನಲ್ಲಿ ಅರ್ಜಿ ಸಲ್ಲಿಸುವಾಗ. ಈ ಕೆಳಗೆ ತೋರಿಸಲಾದ ನೋಟಿಫಿಕೇಶನ್ ಕಾಣಿಸಿಕೊಳ್ಳುತ್ತದೆ. ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುತ್ತಿರುವ ತಂದೆ ಅಥವಾ ತಾಯಿಯರ ಲೇಬರ್ ಕಾರ್ಡ ಅನ್ನು 01/06/2022 ನಂತರ ನೋಂದಾಯಿಸಿದ್ದರೆ. ಅಂತಹ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
ಕಟ್ಟಡ ಕಾರ್ಮಿಕರ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುತ್ತಿದ್ದರೆ. ನಿಮ್ಮ ತಂದೆ ಅಥವಾ ತಾಯಿಯ ಲೇಬರ್ ಕಾರ್ಡ್ 01/06/2022 ಮೊದಲು ನೋಂದಾಯಿಸಿರಬೇಕು.
ವಿದ್ಯಾ ವೇತನದ ಮೊತ್ತ :
- ನರ್ಸರಿ ರೂ.5000
- 1 ರಿಂದ 4ನೇ ತರಗತಿ ರೂ.5000
- 5 ರಿಂದ 8ನೇ ತರಗತಿ ರೂ. 8000
- 9 ಹಾಗೂ 10ನೇ ತರಗತಿ ರೂ. 12000
- ಪ್ರಥಮ ಪಿಯುಸಿ ಮತ್ತು ದ್ವಿತೀಯ ಪಿ.ಯು.ಸಿ . ರೂ. 15000
- ಐಟಿಐ/ಪಾಅಟೆಕ್‌ನಿಕ್/ಡಿಪ್ಲೋಮೊ ರೂ. 20000
- ಬಿ.ಎಸ್.ಸಿ ನರ್ಸಿಂಗ್ (ಪ್ಯಾರಾಮೆಡಿಕಲ್)/ಜಿ.ಎನ್.ಎಮ್/ಎ.ಎನ್.ಎಮ್ ರೂ. 40,000
- D.Ed ರೂ. 25,000
- B.e d. 35,000
- ಪದವಿ ರೂ.25,000
- ಎಲ್ ಎಲ್ ಬಿ/ಎಲ್‌ಎಲ್‌ಎಂ ರೂ.30,000
- ಯಾವುದೇ ಸ್ನಾತಕೋತ್ತರ ಪದವಿಗೆ (ಗರಿಷ್ಠ 2 ವರ್ಷಗಳಗೆ) ರೂ. 35,000
- ಬಿಇ/ಬಿ.ಟೆಕ್ ಅಥವಾ ಸಮಾನಾಂತರ ಪದವಿ ಕೋರ್ಸ್‌ಗೆ ರೂ.50,000
- ವೈದ್ಯಕೀಯ(ಎಂ.ಬಿ.ಬಿ.ಎಸ್/ಬಿ.ಎ.ಎಂ.ಎಸ್/ಬಿ.ಡಿ.ಎಸ್/ಬಿ.ಹೆಚ್.ಎಂ.ಎಸ್ ಅಥವಾ ಸಮಾನಾಂತರ ವೈದ್ಯಕೀಯ ಕೋರ್ಸ್ ಗಳಿಗೆ ರೂ 60,000
- M.D ರೂ 75,000
- ಪಿಹೆಚ್‌ಡಿ/ ಎಮ್.ಫಿಲ್ ಯಾವುದೇ ವಿಷಯಕ್ಕೆ (ಪಿಹೆಚ್‌ಡಿಗೆ ಗರಿಷ್ಟ 3 ವರ್ಷ ಗಳಿಗೆ ಮತ್ತು ಎಂ.ಫಿಲ್ ಸಂಸ್ಕೃತಿ ವರ್ಷಕ ರೂ .25,000
- ಐ.ಐ.ಟಿ/ಐ.ಐ.ಐ.ಟಿ.ಐ.ಐ.ಎಂ/ಎನ್.ಐ.ಟಿ/ಐ.ಐ.ಎಸ್.ಇ.ಆರ್/ಎ.ಐ.ಐ.ಎಂ.ಎಸ್.ಎನ್.ಎಲ್.ಯು ಮತ್ತು ಭಾರತ ಸರ್ಕಾರದಿಂದ ಮಾನ ಪಡೆದ ಇತರ ಕೋರ್ಸ್ ಗಳು : ಸಂಪೂರ್ಣ ವೆಚ್ಚ
ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಬೇಕಾದ ಅರ್ಹತೆಗಳು :
- ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸುವ ಮಗುವಿನ ತಂದೆ ಅಥವಾ ತಾಯಿ ಕಟ್ಟಡ ಕಾರ್ಮಿಕರಾಗಿದ್ದು, ಮಂಡಳಿಯಲ್ಲಿ ನೋಂದಣಿಯಾಗಿರಬೇಕು.
- ನೋಂದಣಿ ಚಾಲ್ತಿಯಲ್ಲಿರಬೇಕು
- ಇಬ್ಬರೂ ಪೋಷಕರು ನೋಂದಾಯಿತ ಕಟ್ಟಡ ಕೆಲಸಗಾರರಾಗಿದ್ದರೆ ವಿದ್ಯಾರ್ಥಿಯು ಎರಡು ಬಾರಿ ಸೌಲಭ್ಯವನ್ನು ಪಡೆಯಲು ಸಾಧ್ಯವಿಲ್ಲ
- ವಿದ್ಯಾರ್ಥಿಯು ಹಿಂದಿನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಮುಂದಿನ ತರಗತಿಗೆ ದಾಖಲಾಗಿರಬೇಕು.
- ಒಂದು ಕುಟುಂಬದಿಂದ ಒಬ್ಬ ವಿದ್ಯಾರ್ಥಿಗೆ ಮಾತ್ರ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯಕ್ಕಾಗಿ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಒಂದಕ್ಕಿಂತ ಹೆಚ್ಚು ಅರ್ಜಿಗಳನ್ನು ತಿರಸ್ಕರಿಸಲಾಗುವುದು
- ಶೈಕ್ಷಣಿಕ ವರ್ಷದಲ್ಲಿ ವಾರ್ಷಿಕ ಅಥವಾ ಪ್ರತಿ ಸೆಮಿಸ್ಟರ್ನಲ್ಲಿ ಪ್ರಥಮವಾಗಿ ಉತ್ತೀರ್ಣರಾದವರಿಗೆ ಮಾತ್ರ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯ ನೀಡಲಾಗುವುದು.
- ಯಾವುದೇ ಒಂದು ಸೆಮಿಸ್ಟರ್ನಲ್ಲಿ ಅನುತ್ತೀರ್ಣರಾಗಿ ಪೂರಕ ಸೆಮಿಸ್ಟರ್ನಲ್ಲಿ ಉತ್ತೀರ್ಣರಾಗಿರುವವರ ಅರ್ಜಿಯನ್ನು ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯಕ್ಕಾಗಿ ಪರಿಗಣಿಸದೆ ಅಂತಹ ಅರ್ಜಿಯನ್ನು ತಿರಸ್ಕರಿಸಲಾಗುವುದು
- ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಥಿಯ SATS ಐಡಿ ಅಥವಾ ಸ್ಟುಡೆಂಟ್ ಐಡಿಯನ್ನು ssp ಪೋರ್ಟಲ್ ನಲ್ಲಿ ನೋಂದಾಯಿಸಿರಬೇಕು
- ಈ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯ ಮತ್ತು ಕಲಿಕಾ ಭಾಗ್ಯ ಯೋಜನೆ ವಿದ್ಯಾರ್ಥಿ ವೇತನ ಬಯಸುವ ವಿದ್ಯಾರ್ಥಿಗಳು ಆನ್‌ಲೈನ್ ಮುಖಾಂತರಸೇವಾಸಿಂಧು ತಂತ್ರಾಂಶದ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು :
- ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ.
- ವಿದ್ಯಾರ್ಥಿ ಆಧಾರ್ ಕಾರ್ಡ್.
- ವಿದ್ಯಾರ್ಥಿ ಬ್ಯಾಂಕ್ ಪಾಸ್ ಬುಕ್ ಪ್ರತಿ.
- ತಂದೆ-ತಾಯಿ ಕಾರ್ಮಿಕ ಕಾರ್ಡ
- ತಂದೆ-ತಾಯಿ ಆಧಾರ ಕಾರ್ಡ
- ಪಾಸ್ ಪೋರ್ಟ್ ಅಳತೆಯ ಭಾವಚಿತ್ರ.
- ಶಾಲಾ ಶುಲ್ಕದ ರಶೀದಿ.
ಸೂಚನೆ : ನೋಂದಣಿ ದಾರರ ಬ್ಯಾಂಕ್ ಖಾತೆಯನ್ನು ಆಧಾರ್ ನೊಂದಿಗೆ ಲಿಂಕ್ ಮಾಡಿರಬೇಕು ಮತ್ತು ಬ್ಯಾಂಕ್ ಮೂಲಕ NPCI ಗೆ ಮ್ಯಾಪ್ ಮಾಡಿರಬೇಕು
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ನೀಡುವ ಶೈಕ್ಷಣಿಕ ಸಹಾಯಧನವನ್ನು ಸೇವಾಸಿಂಧು ತಂತ್ರಾಂಶದ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಿ ನೇರ ವರ್ಗಾವಣೆ ಮೂಲಕ ಬಿಡುಗಡೆ ಮಾಡಲು ಕ್ರಮ ವಹಿಸಲಾಗಿದೆ. ಈ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯ ಮತ್ತು ಕಲಿಕಾ ಭಾಗ್ಯ ಯೋಜನೆ ವಿದ್ಯಾರ್ಥಿ ವೇತನ ಬಯಸುವ ವಿದ್ಯಾರ್ಥಿಗಳು ಆನ್‌ಲೈನ್ ಮುಖಾಂತರ ರಾಜ್ಯ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 15, 2023
ಅರ್ಜಿ ಸಲ್ಲಿಸುವುದು ಹೇಗೆ?
ಹಂತ 1: ಅಭ್ಯರ್ಥಿಗಳು ಮೊದಲು ಸೇವಾಸಿಂಧು ತಂತ್ರಾಂಶದ ಅಧಿಕೃತ ವೆಬ್‌ಸೈಟ್‌ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ
ಹಂತ 2: ನಿಮ್ಮ ಸ್ಕ್ರೀನ್ ಮೇಲೆ ಈಗ ಮುಖಪುಟ ಕಾಣಿತ್ತದೆ.
ಹಂತ 3: ಹೊಸ ನೋಂದಣಿ ಆಯ್ಕೆಯನ್ನು ಆಯ್ಕೆ ಮಾಡಬೇಕು. ನಿಮ್ಮ ಆಧಾರ್ ಸಂಖ್ಯೆ ಮತ್ತು ಕ್ಯಾಪ್ಚಾ ಎಂಟರ್ ಮಾಡಿ ನೆಕ್ಸ್ಟ್ ಮೇಲೆ ಕ್ಲಿಕ್ ಮಾಡಿ. ಈಗ ಎಲ್ಲಾ ಮಾಹಿತಿಯನ್ನು ನಮೂದಿಸಿ.
ಹಂತ 4: ನಿಮ್ಮ ಹೆಸರು, ಜನ್ಮ ದಿನಾಂಕ, ಸೆಲ್ ಫೋನ್ ಸಂಖ್ಯೆ, ಲಿಂಗ, ಇಮೇಲ್ ವಿಳಾಸ, ಬ್ಯಾಂಕ್ ಮಾಹಿತಿ ಇತ್ಯಾದಿಗಳನ್ನು ಟೈಪ್ ಮಾಡಿ.
ಹಂತ 5: ವಿದ್ಯಾರ್ಥಿಯ ವಾಸಸ್ಥಳ, ಹೆಸರು, ಹುಟ್ಟಿದ ದಿನಾಂಕ, ಸಮುದಾಯ ಅಥವಾ ವರ್ಗ, ತಂದೆಯ ಹೆಸರು, ಆಧಾರ್ ಕಾರ್ಡ್ ಸಂಖ್ಯೆ, ಮೊಬೈಲ್ ಸಂಖ್ಯೆ, ವಿದ್ಯಾರ್ಥಿವೇತನ ವರ್ಗ, ಲಿಂಗ, ಧರ್ಮ, ತಾಯಿಯ ಹೆಸರು, ವಾರ್ಷಿಕ ಕುಟುಂಬದ ಆದಾಯ, ಇಮೇಲ್ ವಿಳಾಸ ಮುಂತಾದ ಮಾಹಿತಿಯನ್ನು ಟೈಪ್ ಮಾಡಿ. ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಿ. ಅರ್ಜಿ ನಮೂನೆಯನ್ನು ಯಶಸ್ವಿಯಾಗಿ ಸೇವ್ ಮಾಡಿ.
ಹಂತ 6: ಕೊನೆಯಲ್ಲಿ ಅರ್ಜಿ ನಮೂನೆಯನ್ನು ಮತ್ತು ಸ್ವಿಕೃತಿ ಪತ್ರವನ್ನು ಡೌನ್ಲೋಡ್ ಮಾಡಿ ಇಟ್ಟುಕೊಳ್ಳಿ. ಹಾರ್ಡ್ ಕಾಪಿ ತೆಗೆದಿಟ್ಟುಕೊಳ್ಳಿ
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಾರ್ಮಿಕ ಸಹಾಯವಾಣಿ ಸಂಖ್ಯೆ 155214, ಕಾರ್ಮಿಕ ಅಧಿಕಾರಿಗಳು ಹಾಗೂ ಹಿರಿಯ ಕಾರ್ಮಿಕ ನಿರೀಕ್ಷಕರು/ ಕಾರ್ಮಿಕ ನಿರೀಕ್ಷಕರು ಕಾರ್ಮಿಕ ಇಲಾಖೆ ಸಂಪರ್ಕಿಸಬಹುದಾಗಿದೆ.
ಎಲ್ಲಾ ಓದಿನಲ್ಲಿ ಆಸಕ್ತಿಯುಳ್ಳ ವಿದ್ಯಾರ್ಥಿಗಳಿಗೆ ತಮ್ಮ ಕನಸನ್ನು ಸಹಕಾರ ಮಾಡಿಕೊಳ್ಳಲು ಇಂತಹ ವಿದ್ಯಾರ್ಥಿ ವೇತನಗಳಿಗೆ ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ. ಲೇಖನವನ್ನು ತಪ್ಪದೆ ಎಲ್ಲಾ ವಿದ್ಯಾರ್ಥಿ ಸ್ನೇಹಿತ ಮಿತ್ರರಿಗೆ ಹಾಗೂ ಸಂಬಂಧಿಕರಿಗೆ ಈ ಕೂಡಲೇ ಶೇರ್ ಮಾಡಿ, ಧನ್ಯವಾದಗಳು.
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ವೆಬ್ಸೈಟ್ | Click Here |
ಆನ್ಲೈನ್ ಅರ್ಜಿ | Click Here |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಇದನ್ನೂ ಓದಿ: ಇದನ್ನೂ ಓದಿ: ಕೇವಲ 15 ನಿಮಿಷ ಚಾರ್ಜ್ ಮಾಡಿ 50 ಕಿ.ಮೀ ಓಡಿಸಿ : 180 ಕಿ.ಮೀ ಮೈಲೇಜ್ ಕೊಡುವ ಬೆಂಕಿ EV ಸ್ಕೂಟರ್
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ
- SSP ಸ್ಕಾಲರ್ಶಿಪ್ : Click Here
- ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
- ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
- ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
- ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
- ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
- ವಿದ್ಯಾಸಿರಿ ಸ್ಕಾಲರ್ಶಿಪ್: Click Here
- ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
- ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
- ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
- ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
- ಜಿಂದಾಲ್ ಸ್ಕಾಲರ್ಶಿಪ್ 2022: Click Here
- SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ. ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/
ಇದನ್ನೂ ಓದಿ:
25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022
ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ