ಕಾರ್ಮಿಕರ ಕಲ್ಯಾಣ ಮಂಡಳಿಗೆ, ಕಾರ್ಮಿಕರ ಮಕ್ಕಳ ವಿದ್ಯಾರ್ಥಿವೇತನಕ್ಕೆ ಸಲ್ಲಿಸಿದ ಅರ್ಜಿಗಳಲ್ಲಿ 7 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ( Workers’ Children Scholarship from Workers’ Welfare Board ) ನೀಡಿಕೆಗೆ ಚಾಲನೆ ಸಿಕ್ಕಿದೆ. ಇದರ ಬಗ್ಗೆ ಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿವೇತನ ನೀಡಲು ಚಾಲನೆ :
ನವೆಂಬರ್ 9ರಂದು ವಿಧಾನಸೌಧದಲ್ಲಿ ಏರ್ಪಡಿಸುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ( CM. Siddaramayya) ಅವರು ಕಾರ್ಮಿಕರ ಮಕ್ಕಳ ವಿದ್ಯಾರ್ಥಿವೇತನ ನೀಡಲು ಚಾಲನೆ ನೀಡಲಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ( Santhosh S. Lad ) ಮಾಹಿತಿ ನೀಡಿದ್ದಾರೆ.
ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ 6500 ಕೋಟಿ ಸೆಸ್ ಸಂಗ್ರಹ ಇರುತ್ತದೆ. ಮಂಡಳಿಯಲ್ಲಿ 1.82 ಕೋಟಿ ಕಾರ್ಮಿಕರು ನೊಂದಣಿಯಾಗಿರುತ್ತಾರೆ. ಆದರೆ ಪ್ರತಿ ವರ್ಷ ಅಂದಾಜು 1000 ಕೋಟಿಯಷ್ಟು ಸೆಸ್ ಸಂಗ್ರಹವಾಗುತ್ತಿದ್ದು ಇದರಲ್ಲಿ 800 ಕೋಟಿಯಷ್ಟು ಸರ್ಕಾರದ ವಲಯದಿಂದ ಸಂಗ್ರಹವಾದರೆ ಖಾಸಗಿ ವಲಯದಿಂದ 200 ಕೋಟಿ ಮಾತ್ರ ಸೆಸ್ ಸಂಗ್ರಹವಾಗುತ್ತಿದೆ.
ಹಾಗೆಯೇ ವಿದ್ಯಾರ್ಥಿವೇತನ, ಮದುವೆ, ಮನೆ ನಿರ್ಮಾಣಕ್ಕೆ ಸಹಾಯಧನ(subsidy) ನೀಡಲು ಕನಿಷ್ಠ 3000 ಕೋಟಿ ಬೇಕಾಗುತ್ತದೆ ಎಂದು ಕಾರ್ಮಿಕ ಸಚಿವರಾದ ಸಂತೋಷ್ ಎಸ್.ಲಾಡ್ ತಿಳಿಸಿದ್ದಾರೆ.
ಕಾರ್ಮಿಕ ಕಲ್ಯಾಣ ಮಂಡಳಿ ಉಳಿಸಲು ಹೊಸ ಕಾನೂನು ಜಾರಿ :
ಕಾರ್ಮಿಕ ಕಲ್ಯಾಣ ಮಂಡಳಿಯನ್ನು ಉಳಿಸಿ ಬೆಳೆಸುವ ಮೂಲಕ ಇದರ ಸಾಮರ್ಥ್ಯವನ್ನು ಇನ್ನೂ ಹೆಚ್ಚಿಸಲು ಹೊಸ ಕಾನೂನು ಜಾರಿಗೊಳಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಹೊಸ ಟೆಕ್ನಾಲಜಿ ಆಪ್ ( Technology App ) ಬಿಡುಗಡೆ ಮಾಡಲಾಗುತ್ತದೆ. ಹೊಸ ಟೆಕ್ನಾಲಜಿಯಿಂದ ಎಲ್ಲ ಮಾಹಿತಿಯು ಸಂಗ್ರಹವಾಗಲಿರುವುದರಿಂದ ಸೆಸ್ ಸಂಗ್ರಹ ಮತ್ತು ನಿರ್ವಹಣೆ ಸುಲಭವಾಗಲಿದೆ ಎಂದು ತಿಳಿದು ಬಂದಿದೆ.
ಆದಷ್ಟು ಬೇಗ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಮಿಕರ ಮಕ್ಕಳ ವಿದ್ಯಾರ್ಥಿವೇತನ ದೊರೆಯಲಿದ್ದು ಅದಕ್ಕೆ ಬೇಕಾದ ಎಲ್ಲ ಮುಖ್ಯ ದಾಖಲೆಗಳನ್ನು ಅರ್ಜಿ ಗೆ ನೀಡುವುದು ಉತ್ತಮ. ಹಾಗೆಯೇ ಇದರಿಂದ ವಿದ್ಯಾರ್ಥಿಗಳಿಗೆ ಉತ್ತಮ ರೀತಿಯ ಉಪಯೋಗ ದೊರೆಯಲಿದೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ವರದಿ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ