ಪ್ರಸಿದ್ಧ ಎಲೆಕ್ಟ್ರಾನಿಕ್ ಕಂಪನಿ ಲೈಫ್ ಗುಡ್ (LG) ವಿದ್ಯಾರ್ಥಿಗಳಿಗೆ ಬಂಪರ್ ಗುಡ್ ನ್ಯೂಸ್ ನೀಡಿದೆ. ಹೌದು ಆರ್ಥಿಕವಾಗಿ ದುರ್ಬಲ ಹಿನ್ನೆಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲು ಬರೋಬ್ಬರಿ ಒಂದು ಲಕ್ಷ ರೂಪಾಯಿವರೆಗೆ ವಿದ್ಯಾರ್ಥಿ ವೇತನ ನೀಡುತ್ತಿದೆ. ಹೌದು, ಕಾಲೇಜುಗಳಲ್ಲಿ ತಮ್ಮ ಪದವಿ ಅಥವಾ ಸ್ನಾತಕೋತ್ತರ ಕೋರ್ಸ್ ಗಳನ್ನು ಓದುತ್ತಿರುವ ವಿದ್ಯಾರ್ಥಿಗಳು ಶೈಕ್ಷಣಿಕ ಶಿಕ್ಷಣ ಸಹಾಯಧನ ಪಡೆಯಲು ಅರ್ಜಿ ಸಲ್ಲಿಸಬಹುದು. ಈ ಕುರಿತು ವಿವರವಾದ ಮಾಹಿತಿ ಕೆಳಗೆ ಓದಿ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಲೈಫ್ಸ್ ಗುಡ್’ ವಿದ್ಯಾರ್ಥಿವೇತನ
Life’s Good Scholarship ಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ, ಈ ಸ್ಕಾಲರ್ಶಿಪ್ ಅನ್ನು ಪಡೆದುಕೊಳ್ಳಬಹುದು. ವಿದ್ಯಾರ್ಥಿಗಳು ಭಾರತ ಅತ್ಯಂತ ಆಯ್ದ ಕಾಲೇಜುಗಳು ಸಂಸ್ಥೆಗಳಲ್ಲಿ ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಯಾವುದೇ ಪದವಿ ಅಥವಾ ಸ್ನಾತಕೋತ್ತರ ಪದವಿ ಕೊರ್ಸನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಹತೆಗಳು
- ವಿದ್ಯಾರ್ಥಿಗಳು ಭಾರತದಾದ್ಯಂತ ಆಯ್ದ ಕಾಲೇಜುಗಳು/ಸಂಸ್ಥೆಗಳಿಂದ ಪದವಿ ಅಥವಾ ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು (ಯಾವುದೇ ಶೈಕ್ಷಣಿಕ ವರ್ಷ) ವ್ಯಾಸಂಗ ಮಾಡುತ್ತಿರಬೇಕು.
- ದ್ವಿತೀಯ ಪಿಯುಸಿ ಯನ್ನು 60%ಗಳೊಂದಿಗೆ ಉತ್ತೀರ್ಣರಾಗಿರಬೇಕು.
- ಎರಡನೇ ಅಥವಾ ಮೂರನೇ ವರ್ಷದ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಮಾಡುತ್ತಿದ್ದಲ್ಲಿ ಹಿಂದಿನ ವರ್ಷದಲ್ಲಿ 60%ಗಳೊಂದಿಗೆ ಉತ್ತೀರ್ಣರಾಗಿರಬೇಕು.
- ಪ್ರತಿಭಾವಂತ ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರು ಮತ್ತು ವಾರ್ಷಿಕ ಕುಟುಂಬ ಆದಾಯ INR 8 ಲಕ್ಷಕ್ಕಿಂತ ಹೆಚ್ಚಿಲ್ಲದ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ವಿದ್ಯಾರ್ಥಿ ವೇತನದ ಮೊತ್ತ :
ಒಂದು ವರ್ಷಕ್ಕೆ INR 1,00,000 ವರೆಗಿನ ವಿದ್ಯಾರ್ಥಿವೇತನ ದೊರೆಯುತ್ತದೆ.
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ :
Life’ GOOD Scholarship Program 2024 (Phase 1) : 29-07-2024
Life’ GOOD Scholarship Program 2024 (Phase 2) : 27-08-2024
ದಾಖಲೆಗಳು:
12ನೇ ತರಗತಿಯ ಅಂಕಪಟ್ಟಿ ಮತ್ತು ಹಿಂದಿನ ವರ್ಷ/ಸೆಮಿಸ್ಟರ್ ಅಂಕಪಟ್ಟಿ (2ನೇ/3ನೇ/4ನೇ ವರ್ಷದ ವಿದ್ಯಾರ್ಥಿಗಳಿಗೆ)
ಸರ್ಕಾರ ನೀಡಿದ ವಿಳಾಸ ಪುರಾವೆ (ಉದಾ, ಆಧಾರ್ ಕಾರ್ಡ್)
ಕುಟುಂಬದ ಆದಾಯದ ಪುರಾವೆ
ಬಿಪಿಎಲ್/ರೇಷನ್ ಕಾರ್ಡ್
ಪ್ರವೇಶದ ಪುರಾವೆ (ಕಾಲೇಜು/ಶಾಲಾ ಗುರುತಿನ ಚೀಟಿ, ಶೈಕ್ಷಣಿಕ ಶುಲ್ಕದ ರಸೀದಿ)
ಫಲಾನುಭವಿಗಳ ಬ್ಯಾಂಕ್ ಖಾತೆ ವಿವರಗಳು
ಛಾಯಾಚಿತ್ರ(photo)
ಅರ್ಜಿಯನ್ನು ಸಲ್ಲಿಸುವ ವಿಧಾನ :
ಹಂತ 1: ಕೆಳಗಿನ ‘Apply Now’ ಬಟನ್ ಮೇಲೆ ಕ್ಲಿಕ್ ಮಾಡಿ.
https://www.buddy4study.com/page/life-s-good-scholarship-program
ಹಂತ 2: ‘ಆನ್‌ಲೈನ್ ಅರ್ಜಿ ನಮೂನೆ ಪುಟ’ಕ್ಕೆ ತೆರಳಲು ನೋಂದಾಯಿತ ಐಡಿಯನ್ನು ಬಳಸಿಕೊಂಡು Buddy4Study ಗೆ ಲಾಗಿನ್ ಮಾಡಿ.
ನೋಂದಾಯಿಸದಿದ್ದರೆ – ನಿಮ್ಮ ಇಮೇಲ್/ಮೊಬೈಲ್/ಜಿಮೇಲ್ ಖಾತೆಯೊಂದಿಗೆ Buddy4Study ನಲ್ಲಿ ನೋಂದಾಯಿಸಿ.
ಹಂತ 3: ಈಗ ನಿಮ್ಮನ್ನು ‘ಲೈಫ್ಸ್ ಗುಡ್ ವಿದ್ಯಾರ್ಥಿವೇತನ’ ಅರ್ಜಿ ನಮೂನೆಯ ಪುಟಕ್ಕೆ ಮರುನಿರ್ದೇಶಿಸಲಾಗುತ್ತದೆ.
ಹಂತ 4: ಅಪ್ಲಿಕೇಶನ್ ಪ್ರಕ್ರಿಯೆಯನ್ನು ಪ್ರಾರಂಭಿಸಲು ‘ಅಪ್ಲಿಕೇಶನ್ ಪ್ರಾರಂಭಿಸಿ’ ಬಟನ್ ಮೇಲೆ ಕ್ಲಿಕ್ ಮಾಡಿ.
ಹಂತ 5: ಆನ್‌ಲೈನ್ ವಿದ್ಯಾರ್ಥಿವೇತನ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ವಿವರಗಳನ್ನು ಭರ್ತಿ ಮಾಡಿ.
ಹಂತ 6: ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ. ‘ನಿಯಮಗಳು ಮತ್ತು ಷರತ್ತುಗಳನ್ನು’ ಸ್ವೀಕರಿಸಿ ಮತ್ತು ‘ಪೂರ್ವವೀಕ್ಷಣೆ’ ಕ್ಲಿಕ್ ಮಾಡಿ.
ಹಂತ 7: ಅರ್ಜಿದಾರರು ಭರ್ತಿ ಮಾಡಿದ ಎಲ್ಲಾ ವಿವರಗಳು ಪೂರ್ವವೀಕ್ಷಣೆ ಪರದೆಯಲ್ಲಿ ಸರಿಯಾಗಿ ತೋರಿಸುತ್ತಿದ್ದರೆ, ಅಪ್ಲಿಕೇಶನ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ‘ಸಲ್ಲಿಸು’ ಬಟನ್ ಕ್ಲಿಕ್ ಮಾಡಿ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Thank you.