ಮೈಸೂರು ಜಿಲ್ಲಾ ಪಂಚಾಯತಿ, ಗ್ರಾಮ ಪಂಚಾಯತಿಗಳಲ್ಲಿರುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳ (Library Supervisor Recruitment 2024) ಭರ್ತಿಗೆ ಸಂಬಂಧಿಸಿದಂತೆ ಹೊಸ ಅವಕಾಶವನ್ನು ಪ್ರಕಟಿಸಿದೆ. ಗ್ರಾಮಾಂತರ ಪ್ರದೇಶದ ಶಿಕ್ಷಣ ಮತ್ತು ಸಂಸ್ಕೃತಿಯ ಸಮೃದ್ಧಿಗೆ ಸಹಕಾರ ನೀಡಲು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಅಭ್ಯರ್ಥಿಗಳಿಂದ ಅರ್ಹತೆಯ ಆಧಾರದ ಮೇಲೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಹುದ್ದೆಗಳ ವಿವರ ಮತ್ತು ಅಗತ್ಯ ಅರ್ಹತೆಗಳು:
ಹುದ್ದೆಯ ಹೆಸರು: ಗ್ರಂಥಾಲಯ ಮೇಲ್ವಿಚಾರಕರು(Library Supervisor)
ಒಟ್ಟು ಹುದ್ದೆಗಳ ಸಂಖ್ಯೆ: 19
ಉದ್ಯೋಗದ ಸ್ಥಳ: ಮೈಸೂರು ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿಗಳು
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ದ್ವಿತೀಯ ಪಿಯುಸಿ (10+2) ಪಾಸ್ ಆಗಿರಬೇಕು.
ಲೈಬ್ರರಿ ಸೈನ್ಸ್‌ನಲ್ಲಿ ಕೋರ್ಸ್ (Library Science course) ಮಾಡಿರಬೇಕು.
3 ತಿಂಗಳ ಕಂಪ್ಯೂಟರ್ ಕೋರ್ಸ್(Computer course) ಮಾಡಿರಬೇಕು.
ವಯೋಮಿತಿ:
ಕನಿಷ್ಠ ವಯಸ್ಸು: 18 ವರ್ಷ
ಗರಿಷ್ಠ ವಯಸ್ಸು: 40 ವರ್ಷ
ಸಾಮಾನ್ಯ ವರ್ಗ: ಗರಿಷ್ಠ 35 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ: ಗರಿಷ್ಠ 38 ವರ್ಷ
ಎಸ್‌ಸಿ, ಎಸ್‌ಟಿ, ಪ್ರವರ್ಗ-1: ಗರಿಷ್ಠ 40 ವರ್ಷ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ:
ಅಭ್ಯರ್ಥಿಗಳು 2024 ಅಕ್ಟೋಬರ್ 30 ರೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿಯನ್ನು ಹೀಗೆ ಸಲ್ಲಿಸಿ :
ಹಂತ 1: ಮೊದಲು, ಅಧಿಕೃತ ವೆಬ್‌ಸೈಟ್ ಗೆ (Official Website) ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ :
mysore.nic.in
ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ, ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು
ಹಂತ 4: ಅರ್ಜಿ ಶುಲ್ಕವನ್ನು ಪಾವತಿಸಿ.(ಅನ್ವಯಿಸಿದಲ್ಲಿ)
ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
ಹಂತ 6: ಅಂತಿಮ ಸಲ್ಲಿಕೆ ಮೊದಲು, ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.
ಹೆಚ್ಚಿನ ಮಾಹಿತಿಗಾಗಿ:
ಈ ಹುದ್ದೆಗಳ ಬಗ್ಗೆ ಸಂಪೂರ್ಣ ವಿವರಗಳು ಮತ್ತು ಮೈಸೂರಿನ ಗ್ರಾಮ ಪಂಚಾಯತಿ ಇಲಾಖೆ ನೀಡಿರುವ ಅಧಿಸೂಚನೆಯನ್ನು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ. ಯಾವುದೇ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪಂಚಾಯತಿ ಕಚೇರಿಯನ್ನು ಸಂಪರ್ಕಿಸಬಹುದು.
ಈ ಅವಕಾಶವು ಗ್ರಾಮಾಂತರ ಪ್ರದೇಶದಲ್ಲಿ ಕೆಲಸ ಮಾಡಲು ಆಸಕ್ತರಿರುವ ಮತ್ತು ಉಚಿತ ಸೇವೆಗಳಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಉತ್ತಮವಾದ ಸುವರ್ಣಾವಕಾಶವಾಗಿದೆ.ಮತ್ತು ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ವರದಿಯನ್ನು ಎಲ್ಲರಿಗೂ ಶೇರ್ ಮಾಡಿ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.