ರಾಜ್ಯ ಸರ್ಕಾರದಿಂದ ವಿವಿಧ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ.! ಈಗಲೇ ಅಪ್ಲೈ ಮಾಡಿ

IMG 20241025 WA0001

ವಾಲ್ಮೀಕಿ ಸಮುದಾಯದವರಿಗೆ (Valmiki community) ಹಲವು ಯೋಜನೆಗಳಡಿಯಲ್ಲಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ!. ಅರ್ಜಿ ಸಲ್ಲಿಸಲು ನವೆಂಬರ್ 23 ಕೊನೆಯ ದಿನ.

ಇಂದು ಹಲವು ಸಮುದಾಯಗಳಿಗೆ (communities) ಸರ್ಕಾರದಿಂದ ಹಲವು ಯೋಜನೆಗಳು ರೂಪುಗೊಂಡಿವೆ. ಈ ಯೋಜನೆಗಳ ಮೂಲಕ ಸಮುದಾಯಗಳ ಕಲ್ಯಾಣ (Development) ನಡೆಯುತ್ತದೆ. ಇದೀಗ ಪರಿಶಿಷ್ಟ ಪಂಗಡಗಳ ಸಮುದಾಯದವರಿಗೆ ಗುಡ್ ನ್ಯೂಸ್ ಒಂದು ತಿಳಿದು ಬಂದಿದೆ. ಹೌದು, ರಾಜ್ಯ ಸರ್ಕಾರವು (state government) ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಕಲ್ಯಾಣ ಯೋಜನೆಗಳನ್ನು ಹಾಕಿಕೊಂಡಿದ್ದು, 2024 – 25ನೇ  ಸಾಲಿನಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಪರಿಶಿಷ್ಟ ಪಂಗಡ ಜನಾಂಗದವರಿಗೆ ಉದ್ಯೋಗ ನೇರಸಾಲ ಯೋಜನೆ(loan scheme), ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ (ಬ್ಯಾಂಕುಗಳ ಸಹಯೋಗದೊಂದಿಗೆ), ಮೈಕ್ರೋ ಕ್ರೆಡಿಟ್ ಯೋಜನೆ (ನೋಂದಾಯಿತ ಸ್ವ-ಸಹಾಯ ಮಹಿಳಾ ಸಂಘಗಳು), ಗಂಗಾ ಕಲ್ಯಾಣ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಯಾವುದು? ಹೇಗೆ ಅರ್ಜಿ ಸಲ್ಲಿಸಬೇಕು ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಉದ್ಯೋಗ ನೇರಸಾಲ ಯೋಜನೆ (Employment Direct Scheme) :

ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯ ವೈಶಿಷ್ಟ್ಯಗಳು, ನಿರುದ್ಯೋಗಿ(unemployed) ಪುರುಷರು ಮತ್ತು ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಆರ್ಥಿಕ ನೆರವನ್ನು ಒದಗಿಸುವ ನಿಟ್ಟಿನಲ್ಲಿ ಈ ಯೋಜನೆಯನ್ನು ಯೋಜಿಸಲಾಗಿದೆ.
ಯೋಜನೆಯ ಘಟಕ ವೆಚ್ಚ ರೂ.1 ಲಕ್ಷ, ರೂ. 50 ಸಾವಿರ ಸಹಾಯಧನ ನೀಡುತ್ತಾರೆ ಹಾಗೂ ರೂ. 50 ಸಾವಿರ (ಶೇ.4 ರಷ್ಟು ಬಡ್ಡಿದರ) ಸಾಲ ಸೌಲಭ್ಯ ನೀಡಲಾಗುತ್ತದೆ.

ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ(ಬ್ಯಾಂಕುಗಳ ಸಹಯೋಗದೊಂದಿಗೆ):

ಪರಿಶಷ್ಟ ಪಂಗಡದ (Scheduled tribe) ನಿರುದ್ಯೋಗ ಯುವಕ/ ಯುವತಿಯರಿಗೆ ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆಯಡಿ ಸಣ್ಣ ಕೈಗಾರಿಕೆ, ಸೇವಾ ಕ್ಷೇತ್ರ ಮತ್ತು ವ್ಯಾಪಾರಿ ಕ್ಷೇತ್ರಗಳಲ್ಲಿ ಸ್ವಯಂ ಉದ್ಯೋಗ ಘಟಕಗಳನ್ನು ಆರಂಭಿಸಲು ನಿಗಮದಿಂದ ಸಹಾಯಧನ ಹಾಗೂ ಬ್ಯಾಂಕ್ ಗಳ ಸಾಲದೊಂದಿಗೆ ಯೋಜನೆಯನ್ನು ರೂಪುಗೊಳಿಸಲಾಗಿದೆ.
ವಾಹನ ಬಿಟ್ಟು ಇತರೆ ಉದ್ದೇಶಗಳಿಗೆ ಸಾಲ ಪಡೆಯುವುದಾದರೆ ಘಟಕ ವೆಚ್ಚ ಶೇ.50 ರಷ್ಟು ಅಥವಾ ಗರಿಷ್ಟ ರೂ.2.00ಲಕ್ಷ ಸಹಾಯಧನ, ಇನ್ನು ಉಳಿದ ಭಾಗವನ್ನು ಬ್ಯಾಂಕ್ ನಿಂದ ಸಾಲವಾಗಿ ನೀಡಲಾಗುತ್ತದೆ. ಸರಕು ಸಾಗಣೆ ವಾಹನವನ್ನು ಖರೀದಿಸುವ ಉದ್ದೇಶಕ್ಕಾಗಿ ಘಟಕ ವೆಚ್ಚದ ಶೇ.50 ರಷ್ಟು ಅಥವಾ ಗರಿಷ್ಟ ರೂ.3.50 ಲಕ್ಷಗಳ ಸಹಾಯಧನ ಇನ್ನು ಉಳಿದ ಭಾಗವನ್ನು ಬ್ಯಾಂಕ್ ನಿಂದ ಸಾಲವಾಗಿ ನೀಡಲಾಗುತ್ತದೆ.

ಪ್ರೇರಣಾ ಅಥವಾ ಮೈಕ್ರೋ ಕ್ರೆಡಿಟ್ ಯೋಜನೆ (ನೋಂದಾಯಿತ ಸ್ವ-ಸಹಾಯ ಮಹಿಳಾ ಸಂಘಗಳು):

ಈ ಯೋಜಜನೆಯಡಿ ಪರಿಶಿಷ್ಟ ಪಂಗಡದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ (women’s self-help groups) ಸಮೂಹಿಕ ಉತ್ಪಾದನಾ/ಸೇವಾ ಘಟಕಗಳಿಗೆ ಆರ್ಥಿಕ ನೆರವು ನೀಡಲಾಗುವುದು. 10 ಸದಸ್ಯರಿರುವ ಒಂದು ಗುಂಪಿಗೆ ರೂ. 2,50,000/- ಮಂಜೂರು ಮಾಡಲು ಅವಕಾಶವಿರುತ್ತದೆ. ಪ್ರತಿಯೊಬ್ಬ ಸದಸ್ಯರಿಗೆ ರೂ. 15,000/- ಸಹಾಯಧನ, ಹಾಗೂ ರೂ.10,000/- ಬೀಜಧನ ಸಾಲ, ಒಟ್ಟು ರೂ.25,000/- ಹಣವನ್ನು ಸಂಘದ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುತ್ತದೆಗುತ್ತದೆ.

ಗಂಗಾ ಕಲ್ಯಾಣ ಯೋಜನೆ (Ganga Kalyan Scheme) :

ರೈತರಿಗೆ ನೀರಾವರಿ ಸೌಲಭ್ಯವನ್ನು ಒದಗಿಸುವ ಉದ್ದೇಶದಿಂದ ಗಂಗಾ ಕಲ್ಯಾಣ ಯೋಜನೆಯಡಿ ಬೋರ್ವೆಲ್ ಕೊರೆಸಲು ಆರ್ಥಿಕ ನೆರವು ನೀಡಲಾಗುತ್ತಿದೆ. ಇದರಿಂದ ಬೆಳೆಗಳನ್ನು ಬೆಳೆದುಕೊಂಡು ಆದಾಯವನ್ನು ಹೆಚ್ಚಿಸಿಕೊಳ್ಳಬಹುದು. ಗಂಗಾ ಕಲ್ಯಾಣ ಯೋಜನೆಯಡಿ ಅಂತರ್ಜಲ ಮಟ್ಟ ಕುಸಿದಿರುವ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಘಟಕ ವೆಚ್ಚರೂ. 4.75 ಲಕ್ಷವಿದ್ದು, ಇದರಲ್ಲಿ ರೂ. 4.25 ಲಕ್ಷ ಸಹಾಯಧನ, ರೂ.50,000/- ಅವಧಿಸಾಲವಾಗಿದ್ದು ರೂ.75,000/- ಗಳು ವಿದ್ಯುದ್ದೀಕರಣ ವೆಚ್ಚವಾಗಿ ಎಸ್ಕಾಂಗಳಿಗೆ ಬಿಡುಗಡೆ ಮಾಡಲಾಗುತ್ತದೆ. ಉಳಿದ ಇತರೆ 24 ಜಿಲ್ಲೆಗಳಲ್ಲಿ ಘಟಕ ವೆಚ್ಚ ರೂ.3.75 ಲಕ್ಷ ವಿದ್ದು, ಇದರಲ್ಲಿ ರೂ.3.25 ಲಕ್ಷ ಸಹಾಯಧನ ರೂ.50,000/ ಅವಧಿಸಾಲವಾಗಿರುತ್ತದೆ. ಸಹಾಯಧನದಲ್ಲಿ ರೂ.75,000/- ವಿದ್ಯುದ್ದೀಕರಣ ವೆಚ್ಚವಾಗಿ ಎಸ್ಕಾಂಗಳಿಗೆ ಬಿಡುಗಡೆ ಮಾಡಲಾಗುವುದು ಹಾಗೂ ಸಾಲದ ಮೊತ್ತವನ್ನು 6 ಅರ್ಧ ವಾರ್ಷಿಕ ಸಮ ಕಂತುಗಳಲ್ಲಿ ಶೇ4 ರಷ್ಟು ಬಡ್ಡಿ ದರದಲ್ಲಿ ಮರು ಪಾವತಿ ಮಾಡಬೇಕಾಗಿರುತ್ತದೆ.

ಎಲ್ಲಾ ನಿಗಮಗಳಿಂದ ಯೋಜನೆಗಳ ಸೌಲಭ್ಯ ಪಡೆಯಲು ಇರಬೇಕಾದ ಸಾಮಾನ್ಯ ಅರ್ಹತೆಗಳು (Qualifications) :

ಮೊದಲಿಗೆ ಅರ್ಜಿದಾರ ಕರ್ನಾಟಕದ ನಿವಾಸಿಯಾಗಿರಬೇಕು.ಹಾಗೂ ಅರ್ಜಿದಾರರು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು.
ಅರ್ಜಿದಾರನ ವಯಸ್ಸು 18 ವರ್ಷ (18 years) ಮೇಲ್ಪಟ್ಟಿರಬೇಕು.
ಈಗಾಗಲೇ ಆಯಾ ಜಾತಿ ಸಮುದಾಯದ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು (Applying application) ಅವಕಾಶವಿಲ್ಲ.
ಅರ್ಜಿದಾರನು ಕೇಂದ್ರ ಅಥವಾ ರಾಜ್ಯ ಸರ್ಕಾರದ ಹುದ್ದೆಯಲ್ಲಿ ಇರಬಾರದು.
ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನವು ರೂ.1,500,000/- ಗ್ರಾಮೀಣ ಹಾಗೂ ರೂ 2,00,000 ನಗರ ಪ್ರದೇಶದವರಿಗೆ ಮಿತಿಯೊಳಗಿರಬೇಕು.
ವಿಕಲಚೇತನರು ಸೌಲಭ್ಯ ಪಡೆಯಲು ಸಂಬಂಧಪಟ್ಟವರಿಂದ ವಿಕಲಚೇತನರ ದೃಡೀಕರಣ ಪತ್ರ (Handicapped Confirmation Letter) ವನ್ನು ನೀಡಬೇಕು.
ಗಂಗಾ ಕಲ್ಯಾಣ ಯೋಜನೆಯಡಿ ಸೌಲಭ್ಯ ಪಡೆಯಲು ಫಲಾಪೇಕ್ಷಿಯು ಸಣ್ಣ ಮತ್ತು ಅತಿಸಣ್ಣ ರೈತರಾಗಿರಬೇಕು.
1.20 ಎಕರೆಯಿಂದ 5 ಎಕರೆ ಜಮೀನು ಹೊಂದಿರಬೇಕು.
ವಾಹನಗಳಿಗೆ ಸೌಲಭ್ಯ ಪಡೆಯಲು ಡ್ರೈವಿಂಗ್ ಲೈಸೆನ್ಸ್‌ (Driving Lisense) ಹೊಂದಿರಬೇಕು.
ಒಂದು ಕುಟುಂಬದಿಂದ ಒಬ್ಬರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ.
ಅರ್ಜಿದಾರನು ಆಧಾರ್ ನಂಬರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆ ಹೊಂದಿರಬೇಕು.

ಎಲ್ಲಾ ನಿಗಮಗಳಿಂದ ಯೋಜನೆಗಳ ಸೌಲಭ್ಯ ಪಡೆಯಲು ಅಗತ್ಯವಿರುವ ದಾಖಲೆಗಳು (Documents) :

ಅರ್ಜಿದಾರನ ಭಾವಚಿತ್ರ.
ಆಧಾರ ಕಾರ್ಡ್.
ಕುಟುಂಬದ ವಾರ್ಷಿಕ ಆದಾಯ ಪತ್ರ.
ಪರಿಶಿಷ್ಟ ಜಾತಿ/ಪಂಗಡದ ಪ್ರಮಾಣ ಪತ್ರ.
ಕುಟುಂಬದ ಪಡಿತರ ಚೀಟಿ.
ಮತದಾರರ ಗುರುತಿನ ಚೀಟಿ.
ವಾಹನ ಚಾಲನಾ ಪರವಾನಗಿ.
ಪಹಣಿ/ ಆರ್ಟಿಸಿ (ಗಂಗಾಕಲ್ಯಾಣ ಯೋಜನೆ).
ಸಣ್ಣ ಅತಿಸಣ್ಣ ರೈತರ ಪ್ರಮಾಣ ಪತ್ರ (ಗಂಗಾಕಲ್ಯಾಣ ಯೋಜನೆ).
ವಂಶವೃಕ್ಷ (ಗಂಗಾಕಲ್ಯಾಣ ಯೋಜನೆ).

ಎಲ್ಲಿ ಅರ್ಜಿ ಸಲ್ಲಿಸಬೇಕು (Where to apply application) ?

ಅರ್ಹ ಫಲಾಪೇಕ್ಷಿಗಳು ಗ್ರಾಮ ಒನ್/ಬೆಂಗಳೂರು ಒನ್/ಕರ್ನಾಟಕ ಒನ್ ಕಂಪ್ಯೂಟರ್ ಸೆಂಟರ್ ಗಳನ್ನು ಭೇಟಿ ಮಾಡಿ ಅರ್ಜಿ ಸಲ್ಲಿಸಬಹುದು. ಅಥವಾ https://sevasindhu.karnataka.gov.in/Sevasindhu/Kannada ಸೇವಾ ಸಿಂದು ಪೋರ್ಟಲ್ ಭೇಟಿ ಮಾಡಿ ಅರ್ಜಿ ಸಲ್ಲಿಸಬಹುದು. ಎಲ್ಲಾ ಅರ್ಹ ಫಲಾನುಭವಿಗಳು ಅಗತ್ಯ ದಾಖಲಾತಿಗಳ ಸಮೇತ ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಅರ್ಜಿ ಸಲ್ಲಿಸಬೇಕು.

ಗಮನಿಸಿ (Notice) :

ಎಲ್ಲಾ ಯೋಜನೆಗಳಿಗೂ ಅರ್ಜಿ ಸಲ್ಲಿಸಲು ನವೆಂಬರ್ 23 (November 23) ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 23 ರಿಂದ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಕೊಡಗು 2-571201 .. 08272-228857 ಸಂಪರ್ಕಿಸಬಹುದು ಎಂದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಈ ಮಾಹಿತಿಗಳನ್ನು ಓದಿ

 


ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!