ಪಿಎಂ ವಿಶ್ವಕರ್ಮ ಯೋಜನೆಯಿಂದ ಗುಡ್ ನ್ಯೂಸ್, 5% ಬಡ್ಡಿಗೆ ಸಿಗಲಿದೆ 3 ಲಕ್ಷ ರೂ. ಸಾಲ(loan), ಇಲ್ಲಿದೆ ಸಂಪೂರ್ಣ ಮಾಹಿತಿ…!
ಪಿಎಂ ವಿಶ್ವಕರ್ಮ ಯೋಜನೆಯು ಕೇಂದ್ರ ವಲಯದ (Central government) ಯೋಜನೆಯಾಗಿದ್ದು, ಕಷ್ಟ ಪಟ್ಟು ದುಡಿಯುವ ಕುಶಲಕರ್ಮಿಗಳ ಜೀವನಕ್ಕೆ ಸಹಾಯ ಮಾಡುವ ಒಂದು ಉತ್ತಮ ಯೋಜನೆ ಇದಾಗಿದೆ. ಈ ಯೋಜನೆಯು ಕುಶಲಕರ್ಮಿಗಳ(artisans) ಗುಣಮಟ್ಟವನ್ನು ಸುಧಾರಿಸುವ ಗುರಿಯನ್ನು ಹೊಂದಿದ್ದು, ಜೊತೆಗೆ ಕುಶಲಕರ್ಮಿಗಳು ಮತ್ತು ಕುಶಲಕರ್ಮಿಗಳ ಉತ್ಪನ್ನಗಳು ಮತ್ತು ಸೇವೆಗಳ ವ್ಯಾಪ್ತಿಯನ್ನು ದೇಶೀಯ ಮತ್ತು ಜಾಗತಿಕವಾಗಿ ವಿಸ್ತರಣೆ ಮಾಡುವ ಉದ್ದೇಶವನ್ನು ಕೂಡಾ ಇದು ಹೊಂದಿದೆ.
ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ವರ್ಗದ ಕುಶಲಕರ್ಮಿಗಳಿಗೆ ಆರ್ಥಿಕ ನೆರವು (Financial assistance) ನೀಡುವ ಹಾಗೂ ಅವರನ್ನು ಸಬಲೀಕರಣಗೊಳಿಸುವ ಉದ್ದೇಶ ಹೊಂದಿರುವ ಈ ಯೋಜನೆಯು ಇದೀಗ ಕುಶಲಕರ್ಮಿಗಳಿಗೆ 5% ಬಡ್ಡಿಗೆ(interest) ಸುಮಾರು 3 ಲಕ್ಷದಷ್ಟು ಸಾಲ ಸೌಲಭ್ಯ ನೀಡಲಿದೆ. ಎಂದು ಕೇಂದ್ರ ಸರ್ಕಾರವು ತಿಳಿಸಿದೆ. ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಕಡಿಮೆ ಬಡ್ಡಿದರ ನೀಡುವ ಮೂಲಕ ಹಲವಾರು ಜನರ ಬಾಳಿನಲ್ಲಿ ಬೆಳಕು ಮೂಡಿಸಿದ ಪಿಎಂ ವಿಶ್ವಕರ್ಮ ಯೋಜನೆ :
ಈಗಾಗಲೇ ಕೇಂದ್ರ ಸರ್ಕಾರವು ಹಲವಾರು ಯೋಜನೆಗಳನ್ನು ಜಾರಿಗೆ ತರುವ ಮೂಲಕ ಜನರಿಗೆ ಬಹಳಷ್ಟು ಸಹಾಯ ಮಾಡಿದೆ. ಕೇಂದ್ರ ಸರ್ಕಾರದ ಯೋಜನೆಗಳಲ್ಲಿ ಪಿಎಂ ವಿಶ್ವಕರ್ಮ ಯೋಜನೆ (PM Vishwakarma Yojana) ಯೂ ಕೂಡ ಒಂದು. ಈ ಯೋಜನೆಯ ಮುಖ್ಯ ಉದ್ದೇಶ ದೇಶದ ಸಾಂಪ್ರದಾಯಿಕ ಕಲೆಗಳಿಗೆ ಉತ್ತೇಜನ ನೀಡುವ ಜೊತೆ ಜೊತೆಗೆ ಕುಶಲಕರ್ಮಿಗಳ ಅಭ್ಯುದಯಕ್ಕೆ ನೆರವು ಕಲ್ಪಿಸುವುದಾಗಿದೆ. ಈ ಯೋಜನೆಯ ಮೂಲಕ ಸಾಲ ಸೌಲಭ್ಯದಿಂದ ಹಿಡಿದು ಆಧುನಿಕ ತರಬೇತಿ, ಮಾರುಕಟ್ಟೆ ವ್ಯವಸ್ಥೆ ಸೇರಿದಂತೆ ಹಲವು ಸೌಲಭ್ಯಗಳನ್ನು ಈ ಸ್ಕೀಮ್‌ನ ಫಲಾನುಭವಿಗಳಿಗೆ ನೀಡಲಾಗುತ್ತಿದೆ. ಲಕ್ಷಾಂತರ ಕುಶಲಕರ್ಮಿಗಳು ಈ ಯೋಜನೆಯ ಪ್ರಯೋಜನವನ್ನು ಈಗಾಗಲೇ ಪಡೆಯುತ್ತಿದ್ದಾರೆ.
ಪಿಎಂ ವಿಶ್ವಕರ್ಮ ಯೋಜನೆಯಡಿ ದೊರೆಯಲಿದೆ 3 ಲಕ್ಷ ರೂ. ಗಳವರೆಗೆ ಸಾಲ ಸೌಲಭ್ಯ :
ಇದೀಗ ಪಿಎಂ ವಿಶ್ವಕರ್ಮ ಯೋಜನೆಯಡಿ 1,751 ಕೋಟಿ ರೂ. ಸಾಲವನ್ನು ಬಿಡುಗಡೆ ಮಾಡಲಾಗಿದ್ದು, ಈ ಯೋಜನೆಯಡಿ ಕುಶಲಕರ್ಮಿಗಳು 5% ಬಡ್ಡಿಗೆ ಸುಮಾರು 3 ಲಕ್ಷ ರೂ. ಗಳವರೆಗೆ ಸಾಲ ಸೌಲಭ್ಯವನ್ನು ಪಡೆಯಬಹುದಾಗಿದೆ.
ಫಲಾನುಭವಿಗಳಿಗೆ 5% ಬಡ್ಡಿಗೆ 3 ಲಕ್ಷ ರೂ. ಸಾಲ ಸೌಲಭ್ಯ :
ಬಡಿಗ, ದೋಣಿ ತಯಾರಕರು, ಕುಂಬಾರರು, ಕಮ್ಮಾರರು, ಅಕ್ಕಸಾಲಿಗರು, ಶಿಲ್ಪಿಗಳು, ಕ್ಷೌರಿಕರು, ರಾಜಮೇಸ್ತ್ರಿಗಳು, ಮೀನಿನ ಬಲೆ ತಯಾರಕರು ಸೇರಿದಂತೆ 18 ಬಗೆಯ ಕುಶಲಕರ್ಮಿಗಳಿಗಾಗಿ ಪಿಎಂ ವಿಶ್ವಕರ್ಮ ಯೋಜನೆಯನ್ನು ಕಳೆದ ವರ್ಷ ಜಾರಿಗೊಳಿಸಲಾಗಿದೆ. ಈ ಯೋಜನೆ ಅಡಿಯಲ್ಲಿ ಈ ಎಲ್ಲಾ 18 ವರ್ಗದ ಕುಶಲಕರ್ಮಿಗಳು ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನು ಪಡೆಯಬಹುದಾಗಿದೆ.
ಸ್ವಂತ ಉದ್ಯೋಗ ಅಥವಾ ಉದ್ಯಮವನ್ನು ಸ್ಥಾಪಿಸಲು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಅಡಿಯಲ್ಲಿ 5% ಬಡ್ಡಿಯಲ್ಲಿ 3 ಲಕ್ಷ ರೂ. ಸಾಲ ಸೌಲಭ್ಯವನ್ನು ಒದಗಿಸಲಾಗಿದೆ. ಈ ಯೋಜನೆಯಡಿ 3 ಲಕ್ಷ ರೂಪಾಯಿ ಸಾಲವನ್ನು ಫಲಾನುಭವಿಗಳಿಗೆ ನೀಡಲಾಗುತ್ತದೆ. ಸಾಲದ ಮೊತ್ತವನ್ನು ಫಲಾನುಭವಿಗೆ 2 ಕಂತುಗಳಲ್ಲಿ ನೀಡಲಾಗುತ್ತದೆ. ಮೊದಲ ಹಂತದಲ್ಲಿ 1 ಲಕ್ಷ ಹಾಗೂ ಎರಡನೇ ಹಂತದಲ್ಲಿ 2 ಲಕ್ಷ ಸಾಲ ನೀಡಲಾಗುತ್ತದೆ.
ಈ ಯೋಜನೆಗೆ ಇರಬೇಕಾದ ಅರ್ಹತೆಗಳು (Qualifications) :
ಭಾರತ ಪ್ರಜೆಯಾಗಿರಬೇಕು.
ವಯಸ್ಸು 18 ವರ್ಷದಿಂದ 50 ವರ್ಷಗಳ ನಡುವೆ ಇರಬೇಕು.
ಯೋಜನೆಯಲ್ಲಿ ಒಳಗೊಂಡಿರುವ 18 ವರ್ಗದ ಯಾವುದಾದರೂ ಒಂದು ಉದ್ಯಮದಲ್ಲಿ ತೊಡಗಿಸಿಕೊಂಡಿರಬೇಕು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು (Documents) :
ಆಧಾರ್ ಕಾರ್ಡ್
ಪ್ಯಾನ್ ಕಾರ್ಡ್
ಆದಾಯ ಪ್ರಮಾಣಪತ್ರ
ಗುರುತಿನ ಚೀಟಿ
ಬ್ಯಾಂಕ್ ಪಾಸ್ಬುಕ್ ವಿವರ
ವಾಸಸ್ಥಳ ದೃಢೀಕರಣ ಪತ್ರವನ್ನು ಹೊಂದಿರಬೇಕು.
ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ (How to apply application) ?
PM ವಿಶ್ವಕರ್ಮ ಯೋಜನೆಗೆ ಅಧಿಕೃತ ವೆಬ್‌ಸೈಟ್ pmvishwakarma.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಹಂತ 1: ಮೊದಲು ಪಿಎಂ ವಿಶ್ವಕರ್ಮ ಯೋಜನೆಯ ಅಧಿಕೃತ ವೆಬ್‌ಸೈಟ್ pmvishwakarma.gov.in ಗೆ ಭೇಟಿ ನೀಡಿ.
ಹಂತ 2: ನಂತರ ಅನ್ವಯಿಸು ಆನ್‌ಲೈನ್ ಆಯ್ಕೆಯನ್ನು ಕ್ಲಿಕ್ ಮಾಡಬೇಕು.
ಹಂತ 3: ನಂತರ ಅಲ್ಲಿ ಕೇಳಿರುವ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ.
ಹಂತ 4: ತದನಂತರ ನೀವು ನೋಂದಣಿಯನ್ನು ಪೂರ್ಣಗೊಳಿಸಿ ಸಲ್ಲಿಸು ಮೇಲೆ ಕ್ಲಿಕ್ ಮಾಡಿ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.