ವಿವಿಧ ಸಾಲ & ಬೋರ್ ವೇಲ್ ಯೋಜನೆಗಳಿಗೆ ಅರ್ಜಿ ಆಹ್ವಾನ.! ಈಗಲೇ ಅಪ್ಲೈ ಮಾಡಿ

IMG 20240707 WA0001

ಆರ್ಯ ವೈಶ್ಯ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ!

ಆರ್ಯ ವೈಶ್ಯ ನಿಗಮದ (Arya Vaishya Corporation) ಮೂಲಕ ಆರ್ಯ ಸಮುದಾಯದ ಜನರಿಗೆ ವಿವಿಧ ರೀತಿಯ ಯೋಜನೆಗಳ ಅಡಿಯಲ್ಲಿ ಹಲವು ಉದ್ಯಮಗಳಿಗೆ ಸಾಲ(loan) ಸಹಾಯ ಧನ  ನೀಡುತ್ತಾ ಬಂದಿದ್ದು, ಇದೀಗ ಮತ್ತೆ ಈ ಹಲವು ಯೋಜನೆಗಳ ಮೂಲಕ ಆರ್ಯ ಸಮುದಾಯದವರಿಗೆ ಆರ್ಥಿಕ ವ್ಯವಸ್ಥೆಯನ್ನು ಕಲ್ಪಿಸಿದೆ. ಅವರು ತಮ್ಮ ಬದುಕನ್ನು ಕಟ್ಟಿಕೊಳ್ಳಲು ಈ ಯೋಜನೆಯು ಬಹಳ ಸಹಾಯ ಮಾಡಿದೆ. ಹಾಗಾದರೆ, ಈ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

2023-24ರಲ್ಲಿ 800 ಫಲಾನುಭವಿಗಳಿಗೆ ವಿವಿಧ ಯೋಜನೆಗಳ ಮೂಲಕ ಉದ್ಯಮಿಗಳಿಗೆ ಸಾಲ-ಸಹಾಯಧನ (loan – subsidy) :

ಕಳೆದ ವರ್ಷ 2023-24ರಲ್ಲಿ 800 ಫಲಾನುಭವಿಗಳಿಗೆ ವಿವಿಧ ಯೋಜನೆಗಳ ಅಡಿಯಲ್ಲಿ ಸಣ್ಣ ಉದ್ಯಮಿಗಳಿಗೆ  (small business) ಸಾಲ-ಸಹಾಯಧನ ನೀಡಲಾಗಿತ್ತು. ಈ ವರ್ಷವೂ ಸಹ ಈ ಎಲ್ಲಾ ಯೋಜನೆಗಳೂ ಮುಂದುವರೆಯುತ್ತವೆ. ಹಾಗೆಯೇ 2024-25ನೇ ಸಾಲಿನ ವಾರ್ಷಿಕ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ.

ಈ ಮೂಲಕ ನಿಗಮದ ಸಹಾಯದ ಅಗತ್ಯವಿರುವ ಅರ್ಹ ಸಣ್ಣ ಉದ್ಯಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಸಲ್ಲಿಸಿ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ (Krishna Bhairegowda) ತಿಳಿಸಿದ್ದಾರೆ.

ಆರ್ಯ ವೈಶ್ಯ ನಿಗಮದ ವಿವಿಧ ಯೋಜನೆಗಳ ಮಾಹಿತಿ ಹೀಗಿದೆ :

ಆರ್ಯ ವೈಶ್ಯ ನಿಗಮದ ವಾರ್ಷಿಕ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದ್ದು,  ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 03 ಯೋಜನೆಗಳಾದ ಸ್ವಯಂ-ಉದ್ಯೋಗ ನೇರಸಾಲ ಯೋಜನೆ, ಬ್ಯಾಂಕ್‍ಗಳ ಸಹಯೋಗದೊಂದಿಗೆ ಆರ್ಯ ವೈಶ್ಯ ಆಹಾರ ವಾಹಿನಿ / ವಾಹಿನಿ ಯೋಜನೆ ಮತ್ತು ವಾಸವಿ ಜಲಶಕ್ತಿ ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಯೋಜನೆಗಳ ಮಾಹಿತಿ ಈ ಕೆಳಗಿನಂತಿದೆ.

ಸ್ವಯಂ-ಉದ್ಯೋಗ ನೇರಸಾಲ ಯೋಜನೆ:

ಈ ವರ್ಷ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ವ್ಯಾಪಾರ ಚಟುವಟಿಕೆಗಳನ್ನು ಕೈಗೊಳ್ಳಲು ಸ್ವಯಂ-ಉದ್ಯೋಗ ನೇರಸಾಲ ಯೋಜನೆಯಡಿ ರೂ. 1.00 ಲಕ್ಷಗಳ ಸಾಲ-ಸಹಾಯಧನ ನೀಡಲಾಗುತ್ತಿದ್ದು, ಇದರಲ್ಲಿ ರೂ.20,000/-ಗಳ ಸಹಾಯಧನವಿರುತ್ತದೆ. ಹಾಗೂ ಬಾಕಿ ಮೊತ್ತವನ್ನು ಶೇ.4%ರ ಬಡ್ಡಿದರದಲ್ಲಿ ನೀಡಲಾಗುವುದು.

ಈ ಯೋಜನೆಗೆ ಅರ್ಜಿ ಸಲ್ಲಿಕೆಯ ವಯೋಮಿತಿ (age limit) :

ಈ ಯೋಜನೆಯಲ್ಲಿ ವಯೋಮಿತಿಯನ್ನು 45 ವರ್ಷಗಳಿಂದ 55 ವರ್ಷಗಳಿಗೆ ಹೆಚ್ಚಿಸಲಾಗಿದೆ. ಈ ಬಾರಿ 2019-20 ಮತ್ತು 2020-21 ಸಾಲಿನ ಫಲಾನುಭವಿಗಳು ಪಡೆದ ಸಾಲವನ್ನು ನಿಗದಿತ ಕಾಲಮಿತಿಯೊಳಗೆ ಮರುಪಾವತಿಸಿದಲ್ಲಿ ಪುನಃ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಬ್ಯಾಂಕ್‍ಗಳ ಸಹಯೋಗದೊಂದಿಗೆ ಆರ್ಯ ವೈಶ್ಯ ವಾಹಿನಿ/ ವಾಹಿನಿ ಯೋಜನೆ:

ಈ ವರ್ಷ ಆರ್ಯ ವೈಶ್ಯ ವಾಹಿನಿ ಯೋಜನೆಯನ್ನು ಜಾರಿಗೆ ತಂದಿದ್ದು, ಇದರಲ್ಲಿ ಅಭ್ಯರ್ಥಿಯು ಹಳದಿ ಬಣ್ಣದ ಬೋರ್ಡ್ ಉಳ್ಳ ಆಟೋ, ಟ್ರಕ್, ಕಾರ್ ಇತ್ಯಾದಿಯನ್ನು ಖರೀದಿಸಬಹುದು. ಅರ್ಜಿದಾರರು ಯಾವುದಾದರೂ ಬ್ಯಾಂಕ್‍ನಲ್ಲಿ ಸಾಲ ಪಡೆಯಬಹುದು ಹಾಗೂ ನಿಗಮದಿಂದ ರೂ.1.00 ಲಕ್ಷಗಳವರೆಗೆ ಸಹಾಯಧನ ನೀಡಲಾಗುವುದು. ಅರ್ಜಿದಾರರು ವಾಹನವನ್ನು ಪ್ಯಾಬ್ರಿಕೇಶನ್ ಮಾಡಿಸಿ ಮೊಬೈಲ್ ಕ್ಯಾಂಟೀನ್ ಆಗಿ ಪರಿವರ್ತಿಸಿದ್ದಲ್ಲಿ ಹೆಚ್ಚುವರಿಯಾಗಿ ರೂ.1.00ಲಕ್ಷಗಳ ಸಹಾಯಧನವನ್ನು ನೀಡಲಾಗುತ್ತದೆ.

ವಾಸವಿ ಜಲಶಕ್ತಿ ಯೋಜನೆ(Vasavi Water Power Project):

ನಿಗಮದ ವತಿಯಿಂದ ಸಣ್ಣ ರೈತರಿಗೆ ಕೃಷಿ ಚಟುವಟಿಕೆಗಳಿಗಾಗಿ ನೀರಾವರಿ ಸೌಲಭ್ಯವನ್ನು ಕಲ್ಪಿಸುವ ನಿಟ್ಟಿನಲ್ಲಿ ವಾಸವಿ ಜಲಶಕ್ತಿ ಯೋಜನೆಯನ್ನು ಹಮ್ಮಿಕೊಳ್ಳಲಾಗಿರುತ್ತದೆ. ರೈತರು ಕನಿಷ್ಠ 2 ರಿಂದ ಗರಿಷ್ಠ 15 ಎಕರೆ ಜಮೀನು ಹೊಂದಿರಬೇಕು ಹಾಗೂ ಈ ಬಾರಿ ವಯೋಮಿಯನ್ನು 50 ರಿಂದ 55 ರವರೆಗೆ ಹೆಚ್ಚಿಸಲಾಗಿದೆ. ಈ ಯೋಜನೆಯಲ್ಲಿ ಶೇ.4ರಷ್ಟು ಬಡ್ಡಿದರದಲ್ಲಿ ರೂ.2.00ಲಕ್ಷಗಳ ಸಾಲ ಹಾಗೂ ವಿದ್ಯುದ್ಧೀಕರಣಕ್ಕಾಗಿ ರೂ.50,000/-ಗಳ ಸಹಾಯಧನವನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ (last date) :

ಅರ್ಜಿಗಳನ್ನು ಜುಲೈ 12 ರಿಂದ ಆನ್‍ಲೈನ್ (online) ಮೂಲಕವೇ ಸಲ್ಲಿಸಬೇಕಾಗಿರುತ್ತದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ. ಎಲ್ಲಾ ಯೋಜನೆಗಳ ಹೆಚ್ಚಿನ ಮಾಹಿತಿಗೆ ನಿಗಮದ ಸಹಾಯವಾಣಿ: 94484 51111 ಅನ್ನು ಸಂಪರ್ಕಿಸಬಹುದು.

ಈ ಮಾಹಿತಿಗಳನ್ನು ಓದಿ

 


ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!