ಅಂಬಿಗರ ಚೌಡಯ್ಯ ನಿಗಮದಿಂದ ವಿವಿಧ ಯೋಜನೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ | Nijasharana Ambigara choudayya nigama Loan Scheme 2023 | Apply Online

Ambigara chowdayya loan schemes

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಕರ್ನಾಟಕ ರಾಜ್ಯ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮವು ನಿಜಶರಣ ಅಂಬಿಗರ ಚೌಡಯ್ಯ ಸಮುದಾಯಕ್ಕೆ ಸೇರಿದ ಜನರಿಗೆ 2023-24 ಸಾಲಿನಲ್ಲಿ ವಿವಿಧ ಲೋನ್ ಸ್ಕೀಮ್ ಗಳ(Loan schemes) ಮೂಲಕ ಧನಸಹಾಯ ನೀಡಲು ಅರ್ಜಿ ಆಹ್ವಾನಿಸಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಲಾಗುತ್ತದೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಅಂಬಿಗರ ಚೌಡಯ್ಯ ಸಮುದಾಯದ ಜನರಿಗೆ ಅನೇಕ ಸಾಲ ಸೌಲಭ್ಯಗಳು :

ಕರ್ನಾಟಕ ರಾಜ್ಯ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ(Karnataka State Nijasharan Ambigar Choudaiah Development Corporation)ವು ನಿಜಶರಣ ಅಂಬಿಗರ ಚೌಡಯ್ಯ ಸಮುದಾಯದ ಹಿಂದುಳಿದ ವರ್ಗಗಳ ಪ್ರವರ್ಗ-1ರ 6(ಎ) ಯಿಂದ 6 (ಎಕೆ)ವರೆಗೆ ಬರುವ ಬೆಸ್ತ, ಕೋಲಿ, ಕಬ್ಬಲಿಗ, ಮೊಗವೀರ ಮತ್ತು ಇದರ ಉಪಜಾತಿಗಳಿಗೆ ಸೇರಿದವರಿಗೆ ಅಭಿವೃದ್ಧಿಗಾಗಿ 2023 – 24ನೇ ಸಾಲಿನ ವಿವಿಧ ಯೋಜನೆಗಳ ಸಾಲ ಸೌಲಭ್ಯಗಳನ್ನು ಪಡೆಯಲು ಅರ್ಜಿ ಆಹ್ವಾನಿಸಿದ್ದಾರೆ.

ಆಸಕ್ತರು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದೊಳಗೆ ಸೇವಾ ಸಿಂಧು ಪೋರ್ಟಲ್( Seva Sindhu Portal ) ಮೂಲಕ ಗ್ರಮ್ ಒನ್(Gram one), ಕರ್ನಾಟಕ ಒನ್, ಬೆಂಗಳೂರು ಒನ್(Bengalore one) ನಂತಹ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.

chanel

ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮವು ಈ ಸಾಲ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದ್ದು; ನಿರುದ್ಯೋಗ ಯುವಕರು ಈ ಯೋಜನೆಯ  ಸದುಪಯೋಗ ಪಡೆದುಕೊಳ್ಳಬೇಕು. ಅರ್ಹ ನಿರುದ್ಯೋಗಿಗಳು ಸ್ವಯಂ ಉದ್ಯೋಗ ಆರ್ಥಿಕ ಚಟುವಟಿಕೆಗಳು ಕೈಗೊಳ್ಳಲು 2 ಲಕ್ಷದ ವರೆಗೂ ಸಹಾಯಧನವನ್ನು ಪಡೆದುಕೊಳ್ಳಬಹುದು. ಇದರಲ್ಲಿ ಫಲಾನುಭವಿಗಳು ಕನಿಷ್ಠ ರೂ.1 ಲಕ್ಷಗಳವರೆಗಿನ ಸಾಲದಲ್ಲಿ ಶೇಕಡ.20 ರಷ್ಟು ಅಂದರೆ 20,000 ರೂ. ಮತ್ತು ಗರಿಷ್ಠ ರೂ. 2 ಲಕ್ಷಗಳವರೆಗಿನ ಸಾಲದಲ್ಲಿ 15 ರಷ್ಟು ಅಂದರೆ 30,000 ರೂ. ಸಹಾಯಧನವನ್ನು ಪಡೆಯುತ್ತಾರೆ ಮತ್ತು ಉಳಿದ ಮೊತ್ತವನ್ನು ವಾರ್ಷಿಕ 4% ಬಡ್ಡಿದರದಲ್ಲಿ ಸಾಲದ ರೂಪದಲ್ಲಿ ಪಡೆಯುತ್ತಾರೆ.

ಈ ಯೋಜನೆಯ ಲಾಭವನ್ನು ಪಡೆಯಲು ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳೊಳಗಿರಬೇಕು. ಕುಟುಂಬದ ವಾರ್ಷಿಕ ಆದಾಯ, ಗ್ರಾಮಾಂತರ ಪ್ರದೇಶದವರಿಗೆ ರೂ. 98,000  ಮತ್ತು ನಗರ ಪ್ರದೇಶದವರಿಗೆ ರೂ. 1,20,000 ಮಿತಿಯಲ್ಲಿರಿಬೇಕು.

ಸ್ವಾವಲಂಬಿ ಸಾರಥಿ ಯೋಜನೆ(swavalambi Sarathi Yojana):

ಕರ್ನಾಟಕದ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಸ್ವಾವಲಂಬಿ ಸಾರಥಿ ಯೋಜನೆ ಎಂಬ ಯೋಜನೆಯನ್ನು ಪ್ರಾರಂಭಿಸಿದ್ದಾರೆ. ಈ ಯೋಜನೆಯ ಅಡಿಯಲ್ಲಿ ಅಂಬಿಗರ ಚೌಡಯ್ಯ ಸಮುದಾಯಕ್ಕೆ ಸೇರಿದ ನಿರುದ್ಯೋಗಿ ಯುವಕರು ಸ್ವಯಂ ಉದ್ಯೋಗವನ್ನು ಪ್ರಾರಂಭಿಸಲು ಮತ್ತು ನಾಲ್ಕು ಚಕ್ರ ವಾಹನಗಳನ್ನು ಖರೀದಿಸಲು ಸಹಾಯಧನವನ್ನು ಪಡೆಯುತ್ತಾರೆ. ರಾಜ್ಯದಲ್ಲಿನ ನಿರುದ್ಯೋಗಿ ಯುವಕರು ಈ ಯೋಜನೆಯ ಅಡಿಯಲ್ಲಿ ನಾಲ್ಕು ಚಕ್ರಗಳ ಖರೀದಿಯಿಂದ ಹೊಸ ವ್ಯವಹಾರವನ್ನು ಪ್ರಾರಂಭಿಸುವವರೆಗೆ 50% ರಿಂದ 75% ವರೆಗೆ ಸಹಾಯಧನವನ್ನು ನೀಡಲಾಗುವುದು.

ಅಂಬಿಗರ ಚೌಡಯ್ಯ ಸಮುದಾಯಕ್ಕೆ ಸೇರಿದ ಯುವಕರಿಗೆ ನಾಲ್ಕು ಚಕ್ರ ವಾಹನಗಳನ್ನು ಖರೀದಿಸಲು 3 ಲಕ್ಷ ರೂಪಾಯಿಗಳ ವರೆಗಿನ ಸಾಲಕ್ಕೆ 50% ಸಬ್ಸಿಡಿ(subsidy)ಯನ್ನು ಒದಗಿಸಲಾಗುತ್ತದೆ.

ಈ ಯೋಜನೆಯ ಲಾಭ ಪಡೆಯಲು ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು ಮತ್ತು ಅಭ್ಯರ್ಥಿಗಳು 21 ಮೇಲ್ಪಟ್ಟು 45 ವರ್ಷ ಒಳಗಿನವರಾಗಿರಬೇಕು. ಮತ್ತು ಈ ಸಾಲದ ಲಭ್ಯವನ್ನು ಪಡೆಯಲು ಅವರು ಲಘು ವಾಹನ ಚಾಲನಾ ಪರವಾನಗಿಯನ್ನು(Light vehicle driving license ) ಹೊಂದಿರಬೇಕು.

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

ಗಂಗಾ ಕಲ್ಯಾಣ ನೀರಾವರಿ ಯೋಜನೆ

ಅಂಬಿಗರ ಚೌಡಯ್ಯ ಅಭಿವೃದ್ದಿ ನಿಗಮದಿಂದ ಗಂಗಾ ಕಲ್ಯಾಣ ಯೋಜನೆಯಡಿ ವೈಯಕ್ತಿಕ ನೀರಾವರಿ ಕೊಳವೆ ಬಾವಿ ನಿರ್ಮಾಣ ಕಾರ್ಯಕ್ಕೆ ಸಹಾಯ ಧನವನ್ನು ನೀಡಲಾಗುತ್ತದೆ. ಕೆಲವು ಗ್ರಾಮೀಣ ಪ್ರದೇಶದಲ್ಲಿ ನೀರಾವರಿ ವ್ಯವಸ್ಥೆ ಇರುವುದಿಲ್ಲ ಅಂತಹ ಸ್ಥಳದಲ್ಲಿ ಕೊಳವೆ ಬಾವಿ ನೀರಾವರಿ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ  ಸರಕಾರ ಗಂಗಾ ಕಲ್ಯಾಣ ಯೋಜನೆ ಜಾರಿಗೆ ತಂದಿದೆ.

ಉಡುಪಿ, ದಕ್ಷಿಣ ಕನ್ನಡ, ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರುವ ರೈತರಿಗೆ  ವೈಯಕ್ತಿಕ ಕೊಳವೆ ಬಾವಿ ನಿರ್ಮಾಣ ಮಾಡಲು ರೂ. 2.50 ಲಕ್ಷಗಳು, ಇದರಲ್ಲಿ 2 ಲಕ್ಷ ರೂ. ಸಹಾಯಧನ ವಾಗಿರುತ್ತದೆ ಹಾಗೂ ಹೆಚ್ಚುವಾರಿಯಾಗಿ 50,000 ರೂ. ನಿಗಮದಿಂದ ಶೇ.4ರ ಬಡ್ಡಿದರದಲ್ಲಿ ನೀಡುವ  ಸಾಲದ ಮೊತ್ತವಾಗಿರುತ್ತದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಿಗೆ ವೈಯಕ್ತಿಕ ಕೊಳವೆ ಬಾವಿ  ಕೊರೆಯಲು ಘಟಕದ ವೆಚ್ಚ ರೂ. 4.75 ಲಕ್ಷಗಳು ನೀಡಲಾಗುತ್ತದೆ. ಹಾಗೂ ಅವಶ್ಯಕತೆ ಇದ್ದಲ್ಲಿ ಹೆಚ್ಚುವರಿ 50,000 ರೂ. ನಿಗಮದಿಂದ ಶೇ.4ರ ಬಡ್ಡಿದರದಲ್ಲಿ ನೀಡುವ ಸಾಲದ ಮೊತ್ತವಾಗಿರುತ್ತದೆ.

ಈ ಯೋಜನೆಯ ಪ್ರಯೋಜನೆಯನ್ನು ಪಡೆಯಲು ಅರ್ಜಿದಾರರು ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು. ಅಭ್ಯರ್ಥಿಯು  ಕನಿಷ್ಠ 2 ಎಕರೆ ಗರಿಷ್ಠ 5 ಎಕರೆ ಜಮೀನು ಹೊಂದಿರಬೇಕು. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ ಜಿಲ್ಲೆಯ ರೈತರಿಗೆ ಕನಿಷ್ಠ 1 ಎಕರೆ ಜಮೀನು ಇದ್ದರೆ ಸಾಕು.

ಅರಿವು –  ಶೈಕ್ಷಣಿಕ ಸಾಲ ಯೋಜನೆ.

ಅರಿವು ಶಿಕ್ಷಣ ಸಾಲ ಯೋಜನೆಯು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ (KMDC) ಯೋಜನೆಯಡಿಯಲ್ಲಿ, ಕರ್ನಾಟಕದ ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣ ಕೋರ್ಸ್‌ಗಳಿಗಾಗಿ ವಾರ್ಷಿಕ 2%  ಬಡ್ಡಿದರದೊಂದಿಗೆ  3 ಲಕ್ಷದವರೆಗಿನ ಶಿಕ್ಷಣ ಸಾಲವನ್ನು ಪಡೆಯಬಹುದು.

CET /NEET ಪರೀಕ್ಷೆಯಲ್ಲಿ ಉತ್ತಿರ್ಣರಾಗಿ  ಉತ್ತಮ ಮೆರಿಟ್ ನಿಂದ ಆಯ್ಕೆಯಾದ ವಿವಿಧ ವೃತ್ತಿಪರ ಕೋರ್ಸ್‍ಗಳಾದ ವೈದ್ಯಕೀಯ (ಎಮ್.ಬಿ.ಬಿ.ಎಸ್.) ಹಾಗೂ ಬಿ.ಡಿ.ಎಸ್., ಬಿ.ಇ., ಬಿ-ಟೆಕ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್ ಹಾಗೂ ಆಯುಶ್‍ದಂತಹ ಪದವಿ ಕೋರ್ಸ್‍ಗಳಿಗೆ ಆಯ್ಕೆಯಾದ ಅಂಬಿಗರ ಚೌಡಯ್ಯ ಸಮುದಾಯದ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ “ಅರಿವು ಶೈಕ್ಷಣಿಕ ಸಾಲ ಯೋಜನೆ ”ಯಡಿ ವಿದ್ಯಾಭ್ಯಾಸ ಸಾಲ(education loan) ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ.

ಈ ಯೋಜನೆಯಡಿ ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು 8 ಲಕ್ಷವನ್ನು ಮೀರಬಾರದು. ವಿದ್ಯಾರ್ಥಿಯು ಯಾವದೇ ಇತರೆ ಬ್ಯಾಂಕ್ ನಿಂದ ಅಥವಾ ಯಾವದೇ ಆರ್ಥಿಕ ಸಂಸ್ಥೆಗಳಿಂದ ಶೈಕ್ಷಣಿಕ ಲೋನ್ ಪಡೆದಿರಬಾರದು.

Picsart 23 07 16 14 24 41 584 transformed 1

ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ

ಈ ಯೋಜನೆಯು ವಿದೇಶಿ  ವಿಶ್ವವಿದ್ಯಾಲಯಗಳಲ್ಲಿ  ಪಿ .ಹೆಚ್‌ಡಿ, ಪೋಸ್ಟ್‌ ಡಾಕ್ಟ್ರಲ್ ಮತ್ತು ಮಾಸ್ಟರ್ ಡಿಗ್ರಿ ಯನ್ನು ಪಡೆಯಲು ವಿದೇಶಕ್ಕೆ ಹೋಗುವ ವಿದ್ಯಾರ್ಥಿಗಳಿಗೆ ಸರ್ಕಾರವು ಸಾಲ ವನ್ನು ನೀಡುತ್ತದೆ . ಇಂಜಿನಿಯರಿಂಗ್, ಟೆಕ್ನಾಲಜಿ, ಮ್ಯಾನೇಜ್ಮೆಂಟ್, ಕಾಮರ್ಸ್‌, ಸೈನ್ಸ್‌ ಮತ್ತು ಟೆಕ್ನಾಲಜಿ, ಅಗ್ರಿಕಲ್ಚರ್ ಅಲೈಡ್ ಸೈನ್ಸಸ್ / ಟೆಕ್ನಾಲಜಿ, ಮೆಡಿಸಿನ್, ಹ್ಯೂಮ್ಯಾನಿಟೀಸ್ ಮತ್ತು ಸೋಷಿಯಲ್ ಸೈನ್ಸ್‌ ಗಳಿಗೆ ಸೇರಿದಂತ ಉನ್ನತ ವ್ಯಾಸಂಗ ಅಧ್ಯಯನಗಳಿಗೆ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ ವಾರ್ಷಿಕ ಗರಿಷ್ಠ 10.00 ಲಕ್ಷ ಹಾಗೂ ಪೂರ್ಣ ಕೋರ್ಸ್‌ನ ಅವಧಿಗೆ ರೂ.20.00 ಲಕ್ಷಗಳ ಸಾಲವನ್ನು ಬಡ್ಡಿರಹಿತವಾಗಿ ಒದಗಿಸಲಾಗುವುದು.

ವಿದ್ಯಾರ್ಥಿಯ ವಾರ್ಷಿಕ ಕುಟುಂಬದ ಆದಾಯ 8 ಲಕ್ಷ ಮೀರಿರಬಾರದು. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು  ಅಂಬಿಗರ ಚೌಡಯ್ಯ ಸಮುದಾಯದ ಹಿಂದುಳಿದ ವರ್ಗಕ್ಕೆ ಸೇರಿದವಾರಗಿರ್ಬೇಕು.
ವಿದ್ಯಾರ್ಥಿಗಳು ಮಾನ್ಯ ಅರ್ಹತಾ ಪರೀಕ್ಷೆಯಲ್ಲಿ ಶೇಕಡ.60 ಕ್ಕಿಂತಲೂ ಹೆಚ್ಚಿನ ಅಂಕ ಪಡೆದಿರಬೇಕು. ಮತ್ತು
QS World Ranking 500 ರೊಳಗೆ ಬರುವ ವಿಶ್ವ ವಿದ್ಯಾನಿಲಯಗಳಲ್ಲಿ ಪ್ರವೇಶ ಪಡೆದವರಾಗಿರಬೇಕು.
ಅಭ್ಯರ್ಥಿಯು ರಾಜ್ಯದ ಖಾಯಂ ನಿವಾಸಿಯಾಗಿರ್ಬೇಕು. ಕೇಂದ್ರ ಆಧಾರ್  ಅಧಿನಿಯಮ, 2016 ಸೆಕ್ಷನ್ (7)ಅಡಿಯಲ್ಲಿ ಆಧಾರ್ ಕಾರ್ಡ್ ಕಡ್ಡಾಯವಾಗಿರುತ್ತದೆ. ಅಭ್ಯರ್ಥಿಯು ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣಪತ್ರ ಕಡ್ಡಾಯವಾಗಿರುತ್ತದೆ.

ನೀವು ಕೂಡ ಅಂಬಿಗರ ಚೌಡಯ್ಯ ಸಮುದಾಯಕ್ಕೆ ಸೇರಿದವರಾಗಿದ್ದರೆ ಈ ಮೇಲಿನ ಯೋಜನೆಗಳ ಲಾಭವನ್ನು ಪಡೆದು ನಿಮ್ಮ ಶಿಕ್ಷಣ ಪೂರ್ಣಗೊಳಿಸಿ ಅಥವಾ ನಿರುದ್ಯೋಗ ವನ್ನು ಹೋಗಲಾಡಿಸಿ.  ಹಾಗೆಯೇ ಇಂತಹ ಉತ್ತಮ ಮತ್ತು ಅತ್ಯಂತ ಉಪಯುಕ್ತ ಮಾಹಿತಿಯನ್ನು ತಿಳಿಸಿಕೊಡುವ ಈ ಲೇಖನವನ್ನು ನಿಮ್ಮ ಸ್ನೇಹಿತರಲ್ಲಿ ಮತ್ತು ಬಂಧು- ಭಾಂದವರಲ್ಲಿ ಶೇರ್ ಮಾಡಿಲು ಮರಿಯಬೇಡಿ , ಧನ್ಯವಾದಗಳು.

tel share transformed

ಇದನ್ನೂ ಓದಿ – ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆಗೆ ಅರ್ಜಿ ಆಹ್ವಾನ, ಇಂದೇ ಕೊನೆಯ ದಿನ ತಪ್ಪದೇ ಅರ್ಜಿ ಸಲ್ಲಿಸಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

app download

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!