Loan Interest : ರೈತರೇ ಗಮನಿಸಿ; ಕೃಷಿ ಸಾಲದ 440 ಕೋಟಿ ರೂ. ಬಡ್ಡಿ ಮನ್ನಾ..? ಅರ್ಹ ರೈತರ ಪಟ್ಟಿ ಇಲ್ಲಿದೆ.

farmers interest

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಬರಗಾಲ(drought) ಎದುರಾಗಿರುವುದರಿಂದ ರೈತರು ಸಹಕಾರಿ ಸಂಘಗಳಲ್ಲಿ(Co-operative Society) ಪಡೆದಿರುವ ದೀರ್ಘಾವಧಿ, ಮಧ್ಯಮಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸುಸ್ತಿ ಸಾಲಗಳ(Agriculture and agriculture related bad debt) ಮೇಲಿನ ಬಡ್ಡಿಯನ್ನು ಮನ್ನಾ ಮಾಡುವುದಾಗಿ ಸರ್ಕಾರ ಆದೇಶ ನೀಡಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಬೆಳಗಾವಿ ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ(CM siddaramaya) ಬಡ್ಡಿ ಮನ್ನಾ ಸಂಬಂಧ ಘೋಷಣೆ ಮಾಡಿದ್ದರು. ಇದೀಗ ರಾಜ್ಯ ಸರ್ಕಾರ(state government) ಈ ಬಗ್ಗೆ ಆದೇಶ ಹೊರಡಿಸಿದೆ. ರೈತರು ರಾಜ್ಯದ ಸಹಕಾರ ಸಂಘಗಳಾದ (Co-operative Society) ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಲ್ಯಾಂಪ್ಸ್ ಸಹಕಾರ ಸಂಘಗಳು, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ಗಳು ಮತ್ತು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳಿಂದ ಸಾಲ(loan) ಪಡೆದು 31.12.2023ಕ್ಕೆ ಸುಸ್ತಿಯಾಗಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಕಂತುಗಳ ಅಸಲನ್ನು ಫೆ.29, 2024 ರೊಳಗೆ ಸಂಬಂಧಪಟ್ಟ ಪತ್ತಿನ ಸಹಕಾರ ಸಂಘ/ಬ್ಯಾಂಕುಗಳಿಗೆ ಪೂರ್ತಿಯಾಗಿ ಮರುಪಾವತಿಸಿದಲ್ಲಿ ಈ ಮೊತ್ತಕ್ಕೆ ಬಾಕಿ ಇರುವ ಬಡ್ಡಿಯನ್ನು ಮನ್ನಾ ಮಾಡಲು ಮಂಜೂರಾತಿ ನೀಡಲಾಗಿದೆ.

ಬಡ್ಡಿ (Intrest)ಮನ್ನಾಗೆ ಷರತ್ತುಗಳು ಈ ಕೆಳಗಿನಂತೆ ಇರುತ್ತದೆ:

ಈ ಸೌಲಭ್ಯ ರೈತರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಲ್ಯಾಂಪ್ಸ್ ಸಹಕಾರ ಸಂಘಗಳು, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕುಗಳು ಮತ್ತು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳಿಂದ ಸಾಲ ಪಡೆದು ದಿನಾಂಕ:31.12.2023ಕ್ಕೆ ಸುಸ್ತಿಯಾಗಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳಿಗೆ ಮಾತ್ರ ಅನ್ವಯವಾಗುತ್ತದೆ.

ಈ ಯೋಜನೆ ಕೃಷಿಯೇತರ ಸಾಲಗಳಿಗೆ ಅನ್ವಯವಾಗುವುದಿಲ್ಲ ಮತ್ತು ಮೇಲೆ ತಿಳಿಸಿರುವ ಸಂಸ್ಥೆಗಳನ್ನು ಹೊರತುಪಡಿಸಿ ಇತರೆ ಸಹಕಾರ ಸಂಸ್ಥೆಗಳಲ್ಲಿ ಪಡೆದ ಸಾಲಗಳಿಗೆ ಅನ್ವಯಿಸುವುದಿಲ್ಲ. ನಬಾರ್ಡ್ ಗುರುತಿಸಿದ ಕೃಷಿ / ಕೃಷಿ ಸಂಬಂಧಿತ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಗಳಿಗೆ ಅಂದರೆ ಲಘು ನೀರಾವರಿ(irrigation), ಭೂ ಅಭಿವೃದ್ಧಿ, ಸಾವಯವ ಕೃಷಿ, ಪಶುಸಂಗೋಪನೆ ಹಾಗೂ ಹೈನುಗಾರಿಕೆ, ಮೀನು ಕೃಷಿ, ರೇಷ್ಮೆ ಕೃಷಿ, ಕೃಷಿ ಯಾಂತ್ರೀಕರಣ, ಪ್ಲಾಂಟೇಷನ್ ಹಾಗೂ ತೋಟಗಾರಿಕೆ ಅಭಿವೃದ್ಧಿ ಉದ್ದೇಶಗಳಿಗೆ ಮಾತ್ರ ಈ ಯೋಜನೆ ಅನ್ವಯವಾಗುತ್ತದೆ. ಮುಂದುವರೆದು, ರಾಜ್ಯ ಸರ್ಕಾರದ ಬಡ್ಡಿ ರಿಯಾಯತಿ ಬದ್ಧತೆಯಡಿ ವಿತರಿಸಿರುವ ಕೃಷಿ / ಕೃಷಿ ಸಂಬಂಧಿತ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಗಳಿಗೆ ಮಾತ್ರ ಅನ್ವಯವಾಗುತ್ತದೆ.

ಕೃಷಿ ಪತ್ತಿನ ಸಹಕಾರ ಸಂಘ/ಬ್ಯಾಂಕುಗಳಿಂದ ಪಡೆದು 31.12.2023 ಕ್ಕೆ ಸುಸ್ತಿಯಾಗಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಅಸಲನ್ನು 29.02.2024 ರೊಳಗೆ ಸಂಬಂಧಪಟ್ಟ ಸಂಸ್ಥೆಗಳಿಗೆ ಸಾಲ ಪಡೆದ ರೈತರು ಮರುಪಾವತಿ ಮಾಡಿದಲ್ಲಿ ಸದರಿ ಸಾಲಗಳ ಮೇಲಿನ ಮರುಪಾವತಿ ದಿನಾಂಕದವರೆಗಿನ ಬಡ್ಡಿಯನ್ನು ಮನ್ನಾ ಮಾಡಿ ಸಂಬಂಧಪಟ್ಟ ಸಹಕಾರಿ ಸಂಸ್ಥೆಗಳಿಗೆ ಸರ್ಕಾರ ಭರ್ತಿ ಮಾಡುವುದು. ಈ ಯೋಜನೆಯು ಮಾರಿಟೋರಿಯಂ ಅವಧಿಯಲ್ಲಿ ಸುಸ್ತಿಯಾಗಿರುವ ಬಡ್ಡಿಗೂ ಸಹ ಅನ್ವಯವಾಗುತ್ತದೆ.

tel share transformed

ಯೋಜನೆಯಡಿಯಲ್ಲಿ ಪ್ರಾಥಮಿಕ ಸಹಕಾರ ಸಂಘಗಳು, ಲ್ಯಾಂಪ್ಸ್ ಸಹಕಾರ ಸಂಘಗಳು, ಡಿಸಿಸಿ ಬ್ಯಾಂಕುಗಳು ಮತ್ತು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕು (ಪಿಕಾರ್ಡ್) ಗಳಿಗೆ ರೈತರು ಮರುಪಾವತಿಸುವ ಸುಸ್ತಿ ಸಾಲದ ಅಸಲು 01.04.2004 ಕ್ಕಿಂತ ಹಿಂದಿನ ಅವಧಿಯ ಸಾಲವಾಗಿದ್ದರೆ, ಬಡ್ಡಿ(interest) ಪಾವತಿಸಲು ಬಾಕಿ ಇದ್ದ ದಿನಾಂಕದಿಂದ ಸಾಲ ಮರುಪಾವತಿ ದಿನಾಂಕದವರೆಗೆ ಸಾಲಗಳಿಗೆ ನಿಗದಿಮಾಡಲಾಗಿರುವ ಬಡ್ಡಿ, ದರ ಅಥವಾ ಶೇ.12 ರ ಬಡ್ಡಿದರ ಇದರಲ್ಲಿ ಯಾವುದು ಕಡಿಮೆಯೋ ಅಂತಹ ಬಡ್ಡಿ ಆಧಾರದಲ್ಲಿ ಸಹಕಾರ ಸಂಘಗಳಿಗೆ ಸರ್ಕಾರದ ವತಿಯಿಂದ ಬಡ್ಡಿ ಸಹಾಯಧನವನ್ನು ಭರಿಸಲಾಗುವುದು.

1.04.2004ರ ನಂತರದಲ್ಲಿನ ಸಾಲಗಳಿಗೆ ಆಯಾ ವರ್ಷದಲ್ಲಿ ರೈತರು ಪಾವತಿಸಬೇಕಾದ ಬಡ್ಡಿ ಮತ್ತು ಸರ್ಕಾರ ಪಾವತಿಸಬೇಕಾದ ಬಡ್ಡಿ ಸಹಾಯಧನದ ಒಟ್ಟು ಬಡ್ಡಿ ಅಥವಾ ಗರಿಷ್ಠ ಶೇ.12 ಇದರಲ್ಲಿ ಯಾವುದು ಕಡಿಮೆಯೋ ಆ ಬಡ್ಡಿಯನ್ನು ಸಂಬಂಧಿಸಿದ ಸಹಕಾರ ಸಂಸ್ಥೆಗಳಿಗೆ ಸರ್ಕಾರದಿಂದ ಭರಿಸಲಾಗುವುದು. ರೂ.10 ಲಕ್ಷಕ್ಕಿಂತ ಹೆಚ್ಚಿನ ಸಾಲವನ್ನು ಸಾಮಾನ್ಯ ಬಡ್ಡಿ ದರದಲ್ಲಿ ವಿತರಿಸಿದರೂ ಸಹ ಆಯಾ ವರ್ಷದಲ್ಲಿ ರೂ.10 ಲಕ್ಷಗಳವರೆಗೆ ನಿಗದಿಪಡಿಸಿದ ಬಡ್ಡಿ ದರದನ್ವಯ ಬಡ್ಡಿ ಮನ್ನಾ ಮೊತ್ತ ಕ್ಲೇಮ್​ ಮಾಡಬೇಕು.

ಈ ಯೋಜನೆಯಲ್ಲಿ ಮರುಪಾವತಿಸುವ ಸಾಲಗಳಿಗೆ ಯಾವುದೇ ಸುಸ್ತಿ ಬಡ್ಡಿ, ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಬಡ್ಡಿ, ವಸೂಲಿ ವೆಚ್ಚ (Recovery Charges) ಹಾಗೂ ಇತರೆ ವೆಚ್ಚಗಳನ್ನು ಸಹಕಾರ ಸಂಸ್ಥೆಗಳು ಕ್ಲೇಮ್​ ಮಾಡುವಂತಿಲ್ಲ.

ಇದರಿಂದ 56,879 ಮಂದಿ ರೈತರ 44,020, 50 ಕೋಟಿ ರು. ಬಡ್ಡಿ (Intrest)ಮನ್ನಾ ಆಗಲಿದೆ. 2024ರ ಫೆ.20ರ ಒಳಗೆ ಸಂಬಂಧಪಟ್ಟ ಸಹಕಾರ ಸಂಘ ಹಾಗೂ ಬ್ಯಾಂಕ್‌ಗಳಿಗೆ ಸಂಪೂರ್ಣ ಸಾಲ ಬಾಕಿಯನ್ನು ಪಾವತಿಸಿದರೆ ಮಾತ್ರ ಮನ್ನಾ ಲಾಭ ಸಿಗಲಿದೆ ಎಂದು ಸಹಕಾರ ಇಲಾಖೆ ತಿಳಿಸಿದೆ. ರಾಜ್ಯ ಸರ್ಕಾರದ ಆದೇಶ ಆಧರಿಸಿ ಎಲ್ಲಾ ಸಹಕಾರ ಬ್ಯಾಂಕ್‌ಗಳಿಗೂ ಸಹಕಾರ ಇಲಾಖೆಯು ಸುತ್ತೋಲೆ ಹೊರಡಿಸಿದೆ.

whatss

ಸುಸ್ತಿ ಸಾಲಗಾರರಾಗಿರುವ ರೈತರಿಗೆ 5 ದಿನಗಳೊಳಗಾಗಿ ತಿಳಿವಳಿಕೆ ಪತ್ರ ಕಳುಹಿಸಬೇಕು. ಸಾಲ ವಸೂಲಾತಿಗೆ ನಿಗದಿಪಡಿಸಿರುವ ಫೆ.20 ದಿನಾಂಕದಿಂದ 45 ದಿನಗಳೊಳಗಾಗಿ (ಏ.15ರ ಒಳಗಾಗಿ) ಬಡ್ಡಿ ಮನ್ನಾ ಬಗೆಗಿನ ಬಿಲ್ಲುಗಳನ್ನು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಲ್ಯಾಂಪ್ಸ್, ಪಿಕಾರ್ಡ್, ಬ್ಯಾಂಕ್, ಡಿಸಿಸಿ ಬ್ಯಾಂಕ್ ಶಾಖೆಗಳು ಸಹಕಾರ ಇಲಾಖೆಗೆ ಸಲ್ಲಿಸಬೇಕು ಎಂದು ತಿಳಿಸಲಾಗಿದೆ.

ಈ ಬಡ್ಡಿ ಮನ್ನಾ ಯೋಜನೆಗೆ ತಗಲುವ ವೆಚ್ಚವನ್ನು ಸಹಕಾರ ಇಲಾಖೆಗೆ ಬಜೆಟ್‌ನಲ್ಲಿ ಒದಗಿಸಿರುವ ಸಾಮಾನ್ಯ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪ ಯೋಜನೆ (SP -TSP) ಹಣದ ಮೂಲಕ ಭರಿಸಬೇಕು ಎಂದು ರಾಜ್ಯ ಸರ್ಕಾರ(State government) ನಿರ್ದೇಶನ ನೀಡಿದೆ.

ಬೆಳೆ ಸಾಲಕ್ಕೆ(crop loan) ಅನ್ವಯವಿಲ್ಲ ಬಡ್ಡಿ ಮನ್ನಾವು ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಹಾಗೂ ಕೃಷಿ ಸಂಬಂಧಿತ ಸುಸ್ತಿ ಸಾಲಗಳಿಗೆ ಮಾತ್ರ ಅನ್ವಯವಾಗಲಿದೆ. ಬೆಳೆ ಸಾಲವು (crop loan) ಅಲ್ಪಾವಧಿ ಸಾಲವಾಗಿದ್ದು, ಶೂನ್ಯ ಬಡ್ಡಿದರದಲ್ಲಿ(0 intrest rate) ಬ್ಯಾಂಕ್‌ಗಳು ನೀಡುತ್ತವೆ. ಹೀಗಾಗಿ ಅದಕ್ಕೆ ಬಡ್ಡಿ ಮನ್ನಾ ಅನ್ವಯಿಸುವುದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಮಧ್ಯಮಾವಧಿ ಸಾಲವನ್ನು 12 ತಿಂಗಳಿಂದ 36 ತಿಂಗಳಿಗೆ ಹಾಗೂ ದೀರ್ಘಾವಧಿ ಸಾಲವನ್ನು 10 ವರ್ಷದ ಅವಧಿವರೆಗೆ ನೀಡಲಾಗುತ್ತದೆ.
ಮತ್ತು ಇಂತಹ ಉತ್ತಮವಾದ ಮಾಹಿತಿ ಹೊಂದಿದ ಈ ಲೇಖನವನ್ನು ಕೂಡಲೇ ನಿಮ್ಮೆಲ್ಲಾ ಸ್ನೇಹಿತರೊಂದಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

    ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!