ಮಾರ್ಚ್ ತಿಂಗಳು (ಮಾರ್ಚ್ 2024) ಪ್ರಾರಂಭವಾಗಿದೆ ಮತ್ತು ತಿಂಗಳ ಮೊದಲ ವಾರದಿಂದಲೇ LPG ಗ್ಯಾಸ್ ಸಿಲಿಂಡರ್ ಬೆಲೆಯನ್ನು ಮತ್ತೊಮ್ಮೆ ಹೆಚ್ಚಿಸಲಾಗಿದೆ (LPG cylinder price hike). ಅಂದರೆ ಮಾರ್ಚ್ 1, 2024 ರಿಂದ ಸಿಲಿಂಡರ್ ದುಬಾರಿಯಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಅನಿಲ ಸಿಲಿಂಡರ್(commercial cylinder)ಗಳ ಬೆಲೆಯನ್ನು ಮತ್ತೊಮ್ಮೆ ಹೆಚ್ಚಿಸಿವೆ . ದೆಹಲಿಯಲ್ಲಿ 25 ರೂ., ಮುಂಬೈನಲ್ಲಿ 26 ರೂ. ಗಳಷ್ಟು ಬೆಲೆ ಏರಿಕೆಯಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಬೆಲೆ ಎಷ್ಟಿದೆ ಗೊತ್ತ :
ಹೊಸ ದರದ ಪ್ರಕಾರ, 19 ಕೆಜಿಯ ವಾಣಿಜ್ಯ ಸಿಲಿಂಡರ್ ಬೆಲೆ ಬೆಂಗಳೂರಿನಲ್ಲಿ 23.50ರೂ. ಹೆಚ್ಚಳದೊಂದಿಗೆ ದರ 1,875 ರೂ. ಗಳಾಗಿದೆ. ರಾಜಧಾನಿ ದೆಹಲಿಯಲ್ಲಿ 1795 ರೂಗಳಿಗೆ ಲಭ್ಯವಿರುತ್ತದೆ, ಆದರೆ ಕೋಲ್ಕತ್ತಾದಲ್ಲಿ ಈ ಸಿಲಿಂಡರ್ ಈಗ ರೂ 1911 ಆಗಿದೆ. ಮುಂಬೈನಲ್ಲಿ ವಾಣಿಜ್ಯ ಸಿಲಿಂಡರ್ ದರ 1749 ರೂ.ಗೆ ಏರಿಕೆಯಾಗಿದ್ದು, ಚೆನ್ನೈನಲ್ಲಿ 1960.50 ರೂ.ಗೆ ಏರಿಕೆಯಾಗಿದೆ. ಗೃಹ ಬಳಕೆ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಯಥಾಸ್ಥಿತಿ ಮುಂದುವರಿದಿದೆ.
ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ ಸ್ಥಿರ :
ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ವಾಣಿಜ್ಯ ಅನಿಲ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸಲಾಗಿದ್ದು, ಗೃಹಬಳಕೆಯ ಗ್ಯಾಸ್ ಸಿಲಿಂಡರ್‌ಗಳ ಬೆಲೆ ಏರಿಕೆಯನ್ನು ಕಂಡಿಲ್ಲ. ದೆಹಲಿಯಲ್ಲಿ 14.2 ಕೆಜಿ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ₹ 903, ಕೋಲ್ಕತ್ತಾದಲ್ಲಿ ₹ 929, ಮುಂಬೈನಲ್ಲಿ ₹ 902.50 ಮತ್ತು ಚೆನ್ನೈನಲ್ಲಿ ₹ 918.50 ಇದೆ.
ಸರ್ಕಾರಿ ಸ್ವಾಮ್ಯದ ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOC), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ಹಿಂದಿನ ತಿಂಗಳ ಸರಾಸರಿ ಅಂತರರಾಷ್ಟ್ರೀಯ ಬೆಲೆಯನ್ನು ಆಧರಿಸಿ ಪ್ರತಿ ತಿಂಗಳ 1 ರಂದು ಅಡುಗೆ ಅನಿಲ ಬೆಲೆಗಳನ್ನು ಪರಿಷ್ಕರಿಸುತ್ತದೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
- ಈ ದಿನ ಜಮಾ ಆಗಲಿದೆ 7ನೇ ಕಂತಿನ ಗೃಹಲಕ್ಷ್ಮಿ ಹಣ, ಹಣ ಬಂದೇ ಇಲ್ಲ ಅನ್ನೋರಿಗೆ ಇಲ್ಲಿದೆ ಗುಡ್ ನ್ಯೂಸ್
- ಮಾರ್ಚ್ ತಿಂಗಳ ಅಕ್ರಮ BPL ಕಾರ್ಡ್ ಪತ್ತೆ, ರದ್ದಾದ ಪಟ್ಟಿ ಬಿಡುಗಡೆ, ನಿಮ್ಮ ರೇಷನ್ ಕಾರ್ಡ್ ಚೆಕ್ ಮಾಡಿಕೊಳ್ಳಿ
- ಗಗನಕ್ಕೇರಿದ ಚಿನ್ನದ ಬೆಲೆ ! ಒಂದೇ ದಿನದಲ್ಲಿ 700 ರೂಪಾಯಿ ಏರಿಕೆ, ಇಂದಿನ ಚಿನ್ನದ ಬೆಲೆ ಇಲ್ಲಿದೆ
- ಕ್ರೆಡಿಟ್ ಕಾರ್ಡ್ ಪಡೆಯಲು ಆರ್ಬಿಐ ನಿಂದ ಹೊಸ ರೂಲ್ಸ್! ಬ್ಯಾಂಕ್ ಅಕೌಂಟ್ ಇದ್ದವರು ತಪ್ಪದೇ ತಿಳಿದುಕೊಳ್ಳಿ
- LPG ಗ್ಯಾಸ್ ಸಿಲಿಂಡರ್ ಇದ್ದವರಿಗೆ ಭರ್ಜರಿ ಆಫರ್, ತಪ್ಪದೇ ತಿಳಿದುಕೊಳ್ಳಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.