ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಇಂದು ಬೆಳಗ್ಗೆ 7ರಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಮತದಾನ ಕೇಂದ್ರಗಳಲ್ಲಿ ಪೋಟೋ ತೆಗೆದುಕೊಳ್ಳುವ ಸಾಧ್ಯತೆ ಹೆಚ್ಚಿರುವುದರಿಂದ ಚುನಾವಣಾ ಆಯೋಗ ಮೊಬೈಲ್ ನಿಷೇಧಿಸಿದೆ.
ಮೊಬೈಲ್, ಸ್ಮಾರ್ಟ್ ವಾಚ್ ನಿಷೇಧ!
ಮತಗಟ್ಟೆಯೊಳಗೆ ಮೊಬೈಲ್ ಫೋನ್ ಹಾಗೂ ಇನ್ನಿತರ ಎಲೆಕ್ಟ್ರಾನಿಕ್ ವಸ್ತುಗಳನ್ನು ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ. ಚುನಾವಣಾ ಆಯೋಗದ ಆದೇಶದಲ್ಲಿ ಮೊಬೈಲ್ ಮಾತ್ರವಲ್ಲದೆ, ಸ್ಮಾರ್ಟ್ ವಾಚ್ ಗಳನ್ನೂ ಕೊಂಡೊಯ್ಯುವಂತಿಲ್ಲ. ಜೊತೆಗೆ, ಯಾವುದೇ ವೈರ್ ಲೆಸ್ ಸಂವಹನ ಉಪಕರಣವನ್ನು ಕೊಂಡೊಯ್ಯುವಂತಿಲ್ಲ ಎಂದು ಹೇಳಲಾಗಿದೆ. ಮತಗಟ್ಟೆಗಳಲ್ಲಿ ಕೆಲವರು ಫೋಟೋ, ಸೆಲ್ಫಿ ತೆಗೆದುಕೊಳ್ಳುತ್ತಾರೆ. ಇದರಿಂದ ಮತದಾನ ಪ್ರಕ್ರಿಯೆ ವಿಳಂಬವಾಗುತ್ತದೆ. ಬೇರೆಯವರಿಗೆ ತೊಂದರೆಯಾಗುತ್ತದೆ. ಅಲ್ಲದೇ ಮತದಾನ ಗೌಪ್ಯವಾಗಿರಬೇಕು ಆದರೆ, ಮತಗಟ್ಟಗಳಲ್ಲಿ ಕರ್ತವ್ಯದಲ್ಲಿರುವ ಸಿಬ್ಬಂದಿಗೆ ಮೊಬೈಲ್ ಫೋನ್ ಅಥವಾ ಸ್ಮಾರ್ಟ್ ಫೋನ್ ಗಳನ್ನು ಕೊಂಡೊಯ್ಯಲು ಅವಕಾಶ ಕಲ್ಪಿಸಲಾಗಿದೆ.
ಮೊದಲ ಹಂತದ ಮತದಾನ
2.88 ಕೋಟಿ ಜನರು ಮತದಾನ ಮಾಡಲಿದ್ದಾರೆ. ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆಗೆ ಆಯೋಗ ಸಜ್ಜಾಗಿದೆ. ರಾಜ್ಯದ ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ತುಮಕೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ಚಾಮರಾಜನಗರ, ಉಡುಪಿ- ಚಿಕ್ಕಮಗಳೂರು, ಮೈಸೂರು -ಕೊಡಗು ಕ್ಷೇತ್ರಗಳಲ್ಲಿ ಇಂದು ಬೆಳಗ್ಗೆ 7ರಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ.
ಮತದಾರರ ಗುರುತಿನ ಚೀಟಿ ಕಡ್ಡಾಯ
ಮತದಾನಕ್ಕೆ ಮತದಾರರ ಗುರುತಿನ ಚೀಟಿ ಕಡ್ಡಾಯವಾಗಿ ಇರಲೇಬೇಕು. ಮತದಾರರ ಗುರುತಿನ ಚೀಟಿ ಇಲ್ಲದಿದ್ದರೂ ಮತ ಚಲಾಯಿಸಲು ಅವಕಾಶವಿದೆ. ಆದರೆ, ಮತದಾರರ ಪಟ್ಟಿಯಲ್ಲಿ ಮತದಾರರ ಹೆಸರು ಇರಬೇಕು. ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಡ್ರೈವಿಂಗ್ ಲೈಸನ್ಸ್, ಪಾಸ್ ಪೋರ್ಟ್, ನರೇಗಾ ಜಾಬ್ ಕಾರ್ಡ್, ಆರ್ ಜಿಐ ವತಿಯಿಂದ ನೀಡಲಾಗುವ ಸ್ಮಾರ್ಟ್ ಕಾರ್ಡ್, ಪೋಸ್ಟ್ ಆಫೀಸ್ ಉಳಿತಾಯ ಖಾತೆಯ ಅಥವಾ ಬ್ಯಾಂಕ್ ನಲ್ಲಿರುವ ಖಾತೆಗಳಿಗೆ ಸಂಬಂಧಿಸಿದ ಪಾಸ್ ಬುಕ್, ಕೇಂದ್ರ ಅಥವಾ ಸರ್ಕಾರಿ ಸಂಸ್ಥೆಗಳ ಉದ್ಯೋಗಿಗಳಿಗೆ ನೀಡಲಾಗುವ ಫೋಟೋ ಸಹಿತ ಗುರುತಿನ ಚೀಟಿಯನ್ನು ಮತಗಟ್ಟೆಯ ಅಧಿಕಾರಿಗಳಿಗೆ ತೋರಿಸಿ ಮತ ಚಲಾಯಿಸಬಹುದು.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ..