ಅನರ್ಹ ಬಿಪಿಎಲ್ ಕಾರ್ಡ್ (BPL card) ರದ್ದು, ಪಡಿತರ ಚೀಟಿ ಹೊಂದಿದವರಿಗೆ ಶಾಕ್ ಕೊಟ್ಟ ಸರ್ಕಾರ!
ರಾಜ್ಯದಲ್ಲಿ ಶೇ. 80ರಷ್ಟು ಬಿಪಿಎಲ್ ಕಾರ್ಡುಗಳನ್ನು ಹೊಂದಿದ್ದಾರೆ. ತಮಿಳುನಾಡಿನಲ್ಲಿ ಶೇ.40 ರಷ್ಟಿದೆ. ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಪ್ರಸ್ತುತ ಬಡತನ ರೇಖೆಗಿಂತ(below poverty line) ಕೆಳಗಿರುವವರ ಪ್ರಮಾಣ ಶೇ.5.67 ಇರಬೇಕು. ಆದರೆ ರಾಜ್ಯದಲ್ಲಿ 1.27 ಕೋಟಿ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ನೀಡಿದ್ದೇವೆ. ಅನರ್ಹ ಬಿಪಿಎಲ್ ಕಾರ್ಡುಗಳನ್ನು(Ineligible BPL cards ban) ರದ್ದು ಪಡಿಸಿ, ಅರ್ಹರಿಗೆ ಬಿಪಿಎಲ್ ಕಾರ್ಡ್ ಒದಗಿಸಬೇಕು ಎಂದು ಸಿಎಂ ಸೂಚಿಸಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ರಾಜ್ಯದಲ್ಲಿ 4,37,23,911 ಜನ ಬಿಪಿಎಲ್ ಕಾರ್ಡ್ ಸೌಲಭ್ಯ ಪಡೆದುಕೊಂಡಿದ್ದಾರೆ. 1.27 ಕೋಟಿ ಬಿಪಿಎಲ್ ಕುಟುಂಬಗಳಿವೆ. ಹೊಸ ಬಿಪಿಎಲ್ ಕಾರ್ಡ್‌ಗಳಿಗೆ 2.95 ಲಕ್ಷ ಅರ್ಜಿಗಳು ಬಂದಿವೆ. ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಬಡವರ ಸಂಖ್ಯೆ ಕಡಿಮೆಯಾಗಿದ್ದರೂ, ಬಿಪಿಎಲ್ ಕಾರ್ಡ್ ಪ್ರಮಾಣ ಕಡಿಮೆಯಾಗದಿರಲು ಕಾರಣವೇನು? ತಮಿಳುನಾಡಿನಲ್ಲಿ ಬಿಪಿಎಲ್ ಪ್ರಮಾಣ ಶೇ.40 ರಷ್ಟಿದೆ. ಈ ಕುರಿತು ಪರಿಶೀಲನೆ ನಡೆಸಿ, ಅನರ್ಹರನ್ನು ಕೈಬಿಡುವ ಕೆಲಸ ಮಾಡಬೇಕು. ಜೊತೆಗೆ ಮೃತ ಸದಸ್ಯರ ಹೆಸರುಗಳನ್ನು ರೇಷನ್ ಕಾರ್ಡ್‌ನಿಂದ (ration card) ತೆಗೆದು ಹಾಕುವ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಅನರ್ಹ ಬಿಪಿಎಲ್ ಕಾರ್ಡ್ ರದ್ದುಗೊಳಿಸಲು ಸಿಎಂ ಸಿದ್ದರಾಮಯ್ಯನವರಿಂದ (CM Siddaramaih) ಮಹತ್ವದ ಸೂಚನೆ :
ಯಾರೆಲ್ಲಾ ಅನರ್ಹ ಬಿಪಿಎಲ್ ಕಾರ್ಡ್ ಹೊಂದಿದ್ದಾರೆ, ಅವುಗಳನ್ನು ಪತ್ತೆ ಹಚ್ಚಿ ರದ್ದು ಮಾಡಲು ಸಿಎಂ ಸಿದ್ದರಾಮಯ್ಯ ತಿಳಿಸಿದ್ದು, ರಾಜ್ಯದಲ್ಲಿ 1.27 ಕೋಟಿ ಕುಟುಂಬಗಳು ಬಿಪಿಎಲ್ ಕಾರ್ಡ್ ಹೊಂದಿದ್ದಾರೆ. ಆದರೆ, ಕೆಲವರು ಕಾರ್ಡ್ ಹೊಂದಲು ಅನರ್ಹರಾದರೂ ಅದನ್ನು ಇಟ್ಟುಕೊಂಡಿದ್ದಾರೆ. ಈ ಕಾರಣದಿಂದ ಅವುಗಳನ್ನು ರದ್ದು ಮಾಡಲು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬಿಪಿಎಲ್ ಕಾರ್ಡ್‌ಗಾಗಿ 3 ಲಕ್ಷ ಜನರಿಂದ ಅರ್ಜಿ ಸಲ್ಲಿಕೆಯಾಗಿದೆ :
ರಾಜ್ಯದಲ್ಲಿ ಒಟ್ಟು ಹಾಲಿ 1,27,35,786 ಬಿಪಿಎಲ್ ಕಾರ್ಡ್‌ಗಳಿದ್ದು, 4,36,84,635 ಜನರು ಸೌಲಭ್ಯ ಪಡೆಯುತ್ತಿದ್ದಾರೆ. ಹೊಸದಾಗಿ ಬಿಪಿಎಲ್ ಕಾರ್ಡ್‌ಗಾಗಿ 3 ಲಕ್ಷ ಜನರಿಂದ ಅರ್ಜಿ ಸಲ್ಲಿಕೆಯಾಗಿದೆ. ಇದೀಗ ಅನರ್ಹ ಕಾರ್ಡ್ ರದ್ದು ಮಾಡಲು ಆಹಾರ ಇಲಾಖೆಗೆ ನಾಲ್ಕು ಇಲಾಖೆಗಳು ಸಜ್ಜಾಗಿವೆ. ಅನರ್ಹ ಬಿಪಿಎಲ್ ಕಾರ್ಡ್ (Ineligible BPL card) ರದ್ದು ಮಾಡಲು ಸಿಎಂ ಸಿದ್ದರಾಮಯ್ಯ ಸೂಚನೆ ಬೆನ್ನಲ್ಲೇ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಅನರ್ಹ ಕಾರ್ಡ್ ರದ್ದತಿಗೆ ತಯಾರಿ ನಡೆಯುತ್ತಿದೆ. ಬಡತನ ರೇಖೆಗಿಂತ ಮೇಲಿರುವ ಹಲವರು ಸೌಲಭ್ಯ ಪಡೆಯುತ್ತಿರುವುದರಿಂದ ಅರ್ಹರಿಗೆ ಸೌಲಭ್ಯ ತಲುಪುತ್ತಿಲ್ಲ. ಹೀಗಾಗಿ ಅನರ್ಹ ಬಿಪಿಎಲ್ ಕಾರ್ಡ್ ರದ್ದು ಮಾಡಲು ಇಲಾಖೆ ಮುಂದಾಗಿದ್ದು, ಇದರಿಂದ 20 ಲಕ್ಷಕ್ಕೂ ಅಧಿಕ ಬಿಪಿಎಲ್ ಕಾರ್ಡ್‌ದಾರರಿಗೆ ಶಾಕ್ ಫಿಕ್ಸ್ ಎನ್ನಲಾಗಿದೆ.
ಹಲವಾರು ಇಲಾಖೆಯಿಂದ ಬಿಪಿಎಲ್ ಕಾರ್ಡುದಾರರ ಹೆಸರಿನ ಮಾಹಿತಿ ಕಲೆಹಾಕಲಾಗುತ್ತಿದೆ :
ಬಿಪಿಎಲ್ ಕಾರ್ಡುದಾರರ ಹೆಸರಿನಲ್ಲಿ ವಾಹನಗಳು ಇದೆಯಾ ಎಂದು ಸಾರಿಗೆ ಇಲಾಖೆ ಮಾಹಿತಿ ನೀಡುತ್ತಿದ್ದು, ಫಲಾನುಭವಿಗಳ ಹೆಸರಲ್ಲಿ ಭೂಮಿ ಎಷ್ಟಿದೆ ಎಂಬ ಮಾಹಿತಿಯನ್ನು ಕಂದಾಯ ಇಲಾಖೆ ನೀಡುತ್ತಿದೆ. ಇನ್ನು ಐಟಿ ಪಾವತಿ ಬಗ್ಗೆ ಐಟಿ ಇಲಾಖೆಯಿಂದ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ. ಸರ್ಕಾರಿ ನೌಕರಿ, ಸರ್ಕಾರಿ ಪ್ರಾಯೋಜಿತ ಇಲಾಖೆ, ನಿಗಮ ಮಂಡಳಿಯಲ್ಲಿ ಕೆಲಸ ಮಾಡುತ್ತಿರುವವರ ಬಗ್ಗೆಯೂ ಮಾಹಿತಿ ಕಲೆ ಹಾಕಲಾಗುತ್ತಿದೆ.
ರಾಜ್ಯದಲ್ಲಿ ಎಷ್ಟು ಕಾರ್ಡ್ ರದ್ದಾಗುತ್ತೆ?
ಬಿಪಿಎಲ್ ಕಾರ್ಡ್ ಹೊಂದಿರುವವರಲ್ಲಿ ಹಲವರು ಜೀವನೋಪಾಯಕ್ಕಾಗಿ ಒಂದು ವಾಣಿಜ್ಯ ವಾಹನ ಹೊರತುಪಡಿಸಿ ಅದಕ್ಕಿಂತ ಹೆಚ್ಚು ವಾಹನ ಹೊಂದಿರುವುದು ಕಂಡುಬಂದಿದೆ. ಸರ್ಕಾರ ನಿಗದಿಪಡಿಸಿದ ಮಿತಿಗಿಂತ ಹೆಚ್ಚಿನ ಆದಾಯ, ಭೂಮಿ ಹೊಂದಿರುವವರು ಕೂಡ ಪಡಿತರ ಸೌಲಭ್ಯ ಪಡೆಯುತ್ತಿದ್ದಾರೆ. ಅಂತಹ 20 ಲಕ್ಷಕ್ಕೂ ಅಧಿಕ ಬಿಪಿಎಲ್ ಕಾರ್ಡ್ ರದ್ದಾಗುವ ಸಾಧ್ಯತೆ ಇದೆ.
ಯಾರೆಲ್ಲ ಬಿಪಿಎಲ್ ಕಾರ್ಡ್ ರದ್ದಾಗಳಿವೆ ?
ವೈಟ್ ಬೋರ್ಡ್‌ನ ನಾಲ್ಕು ಚಕ್ರದ ವಾಹನ ಇದ್ದರೆ ಕಾರ್ಡ್ ರದ್ದು
ಐಟಿ ರಿಟರ್ನ್ಸ್ ಮಾಡುತ್ತಿದ್ದರೆ ಬಿಪಿಎಲ್ ಕಾರ್ಡ್ ರದ್ದು
ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಇದ್ದವರ ಕಾರ್ಡ್ ರದ್ದು
ನಗರ ಪ್ರದೇಶಗಳಲ್ಲಿ 1000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆ ಹೊಂದಿರುವವರ ಕಾರ್ಡ್ ರದ್ದು
ಪ್ರತಿ ಮಾಹೆ 150 ಯುನಿಟ್‌ಗಳಿಂಗಿತಲೂ ಹೆಚ್ಚಿನ ವಿದ್ಯುಚ್ಛಕ್ತಿಯನ್ನು ಬಳಕೆ ಮಾಡುವ ಕುಟುಂಬದ ಕಾರ್ಡು ರದ್ದು.
ಕುಟುಂಬದ ವಾರ್ಷಿಕ ಆದಾಯವು 1.20 ಲಕ್ಷಕ್ಕಿಂತಲೂ ಹೆಚ್ಚಿದ್ದರೆ ಕಾರ್ಡು ರದ್ದು.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.