ಹೊಸ ಬಿಪಿಎಲ್ ಕಾರ್ಡ್ (BPL card) ನಿರೀಕ್ಷೆಯಲ್ಲಿರುವವರಿಗೆ ಸರ್ಕಾರದಿಂದ ಗುಡ್ ನ್ಯೂಸ್!
ಬಿಪಿಎಲ್ ಕಾರ್ಡ್ ಪಡೆಯುವವರಿಗೆ ಇದೀಗ ಗುಡ್ ನ್ಯೂಸ್ ತಿಳಿದು ಬಂದಿದೆ. ಹೌದು, ಹೊಸ ಬಿಪಿಎಲ್ ಕಾರ್ಡ್ (new BPL card) ದೊರೆಯಲಿದ್ದು, ಅದರ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಅನರ್ಹ ಬಿ.ಪಿ.ಎಲ್. ಕಾರ್ಡುಗಳನ್ನು ರದ್ದು ಪಡಿಸಿ, ಅರ್ಹರಿಗೆ ಬಿಪಿಎಲ್ ಕಾರ್ಡ್ ಒದಗಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ರಾಜ್ಯದಲ್ಲಿ 4,37,23,911 ಜನ ಬಿಪಿಎಲ್ ಕಾರ್ಡ್ ಸೌಲಭ್ಯ ಪಡೆದುಕೊಂಡಿದ್ದಾರೆ. 1.27 ಕೋಟಿ ಬಿಪಿಎಲ್ ಕುಟುಂಬಗಳಿವೆ. ಹೊಸ ಬಿಪಿಎಲ್ ಕಾರ್ಡ್‌ಗಳಿಗೆ 2.95 ಲಕ್ಷ ಅರ್ಜಿಗಳು ಬಂದಿವೆ. ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಬಡವರ ಸಂಖ್ಯೆ ಕಡಿಮೆಯಾಗಿದ್ದರೂ, ಬಿಪಿಎಲ್ ಕಾರ್ಡ್ ಪ್ರಮಾಣ ಕಡಿಮೆಯಾಗದಿರಲು ಕಾರಣವೇನು? ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು. ಮುಂದುವರಿದು ತಮಿಳುನಾಡಿನಲ್ಲಿ ಬಿಪಿಎಲ್ ಪ್ರಮಾಣ ಶೇ.40 ರಷ್ಟಿದೆ. ಈ ಕುರಿತು ಪರಿಶೀಲನೆ ನಡೆಸಿ, ಅನರ್ಹರನ್ನು ಕೈಬಿಡುವ ಕೆಲಸ ಮಾಡಬೇಕು. ಜೊತೆಗೆ ಮೃತ ಸದಸ್ಯರ ಹೆಸರುಗಳನ್ನು ರೇಷನ್ ಕಾರ್ಡ್‌ನಿಂದ ತೆಗೆದು ಹಾಕುವ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಿಎಂ ಸಿದ್ದರಾಮಯ್ಯನವರಿಂದ ಮಹತ್ವದ ಸೂಚನೆ :
ಯಾರೆಲ್ಲಾ ಅನರ್ಹ ಬಿ.ಪಿ.ಎಲ್. ಕಾರ್ಡ್ ಹೊಂದಿದ್ದಾರೆ, ಅವುಗಳನ್ನು ಪತ್ತೆ ಹಚ್ಚಿ ರದ್ದು ಮಾಡಲು ಸಿಎಂ ಸಿದ್ದರಾಮಯ್ಯ ತಿಳಿಸಿದ್ದು, ರಾಜ್ಯದಲ್ಲಿ 1.27 ಕೋಟಿ ಕುಟುಂಬಗಳು ಬಿಪಿಎಲ್ ಕಾರ್ಡ್ ಹೊಂದಿದ್ದಾರೆ. ಆದರೆ, ಕೆಲವರು ಕಾರ್ಡ್ ಹೊಂದಲು ಅನರ್ಹರಾದರೂ ಅದನ್ನು ಇಟ್ಟುಕೊಂಡಿದ್ದಾರೆ. ಈ ಕಾರಣದಿಂದ ಅವುಗಳನ್ನು ರದ್ದು ಮಾಡಲು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬಹಳ ದಿನಗಳಿಂದ ಅರ್ಹ ಫಲಾನುಭವಿಗಳು ಹೊಸ ರೇಷನ್ ಕಾರ್ಡ್ (New Ration Card) ಪಡೆಯಲು ಕಾಯುತ್ತಿದ್ದಾರೆ. ಆದರೆ ಅನರ್ಹರು ಸರ್ಕಾರದಿಂದ ಲಾಭ ಪಡೆಯುತ್ತಿದ್ದಾರೆ. ಅಂತವರ ಪಡಿತರ ಚೀಟಿಗಳನ್ನು ರದ್ದು ಮಾಡಿ. ಅರ್ಹ ಫಲಾನುಭವಿಗಳಿಗೆ ಹೊಸ ರೇಷನ್ ಕಾರ್ಡ್ ನೀಡಲು ಸರ್ಕಾರ ಚಿಂತನೆ ನಡೆಸಿದ್ದು, ಕೂಡಲೇ ಸಮಗ್ರ ಪರಿಶೀಲನೆ ನಡೆಸಿ ಅನರ್ಹ ಬಿಪಿಎಲ್ ಕಾರ್ಡ್ ಕೈಬಿಡಲು ಕ್ರಮ ಕೈಗೊಳ್ಳಬೇಕು. ಹಾಗೆಯೇ ಬಿಪಿಎಲ್ ಕುಟುಂಬಗಳಲ್ಲಿನ ಮೃತ ಸದಸ್ಯರ ಹೆಸರು ತೆಗೆದು ಹಾಕುವ ಪ್ರಕ್ರಿಯೆಯನ್ನು ತ್ವರಿತವಾಗಿ ಕೈಗೊಳ್ಳಬೇಕು. ಜನರನ್ನು ಅನಗತ್ಯವಾಗಿ ಅಲೆದಾಡಿಸಬಾರದು. ಅವರ ಸಮಸ್ಯೆ ದೂರುಗಳನ್ನು ಆಲಿಸಿ ಅಗತ್ಯ ಪರಿಹಾರ ಒದಗಿಸಬೇಕು ಎಂದು ಸೂಚಿಸಿದ್ದಾರೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.