Ration Card : ರಾಜ್ಯದ ಈ ಜಿಲ್ಲೆಗಳಲ್ಲಿ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ.! ಈ ದಾಖಲೆಗಳು ಕಡ್ಡಾಯ

IMG 20241108 WA0003

ಹೊಸ ರೇಷನ್ ಕಾರ್ಡ್, ಫಲಾನುಭವಿಗಳಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ. ಹೊಸ ರೇಷನ್ ಕಾರ್ಡ್​ ಗೆ (New Ration Card) ಅರ್ಜಿ ಅಹ್ವಾನ.

ಪಡಿತರ ಚೀಟಿಗಳು ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆ (NFSA) ಅಡಿಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಿಂದ ಸಬ್ಸಿಡಿ (subsidy) ಆಹಾರ ಧಾನ್ಯವನ್ನು ಖರೀದಿಸಲು ಅರ್ಹರಾಗಿರುವ ಕುಟುಂಬಗಳಿಗೆ ಭಾರತದಲ್ಲಿ ರಾಜ್ಯ ಸರ್ಕಾರಗಳು ನೀಡುವ ಅಧಿಕೃತ ದಾಖಲೆಯಾಗಿದೆ. ಇದರ ಮೂಲಕ ಅನೇಕ ಸೌಲಭ್ಯಗಳು ಪಡೆದುಕೊಳ್ಳಬಹುದು. ಅಷ್ಟೇ ಅಲ್ಲದೆ ರೇಷನ್ ಕಾರ್ಡ್ ನಿಂದ ಭಾರತೀಯರಿಗೆ ಗುರುತಿಸುವಿಕೆಯ ಸಾಮಾನ್ಯ ರೂಪವಾಗಿಯೂ ಇದು ಕಾರ್ಯ ನಿರ್ವಹಿಸಿತ್ತದೆ. ಇನ್ನು ಕಾಂಗ್ರೆಸ್ ಪಕ್ಷವು (Congress government) ಚುನಾವಣೆಯಲ್ಲಿ ನೀಡಿರುವ ಐದು ಗ್ಯಾರಂಟಿ ಭರವಸೆಗಳ ಅನುಷ್ಠಾನದಲ್ಲಿ ಫಲಾನುಭವಿಗಳನ್ನು ಗುರುತಿಸಲು ಬಿಪಿಎಲ್ ಪಡಿತರ ಚೀಟಿ(BPL Ration card)ಯನ್ನೇ ಮಾನದಂಡವಾಗಿ ನಿಗದಿಪಡಿಪಡಿಸಿದಕ್ಕಾಗಿ ಹೊಸ ರೇಷನ್ ಕಾರ್ಡ್ ಪಡೆದುಕೊಳ್ಳಲು ಜನರು ಕಾತುರದಿಂದ ಕಾಯುತ್ತಿದ್ದಾರೆ. ಇಷ್ಟು ದಿನ ಸರ್ವಸ್ ಸಮಸ್ಯೆ ಕಾರಣ ಪಡಿತರ ಚೀಟಿಗೆ ಹೊಸ ಅರ್ಜಿಗಳಿಗೆ (for new application) ಆಹ್ವಾನವನ್ನು ತಡೆಹಿಡಿಯಲಾಗಿತ್ತು. ಇತ್ತೀಚಿಗೆ ರಾಜ್ಯ ಸರ್ಕಾರ ಎಪಿಎಲ್ ಪಡಿತರ ಚೀಟಿ (APL ration card) ಪಡೆಯಲು ಅರ್ಜಿ ಆಹ್ವಾನಗಳ ಬಗ್ಗೆ  ಹೇಳುತ್ತಲೇ ಇತ್ತು. ಆದರೆ ಇದೀಗ ಹೊಸದಾಗಿ ಅರ್ಜಿ ಸಲ್ಲಿಸುವ ಕಾರ್ಯ ಆರಂಭವಾಗಲಿದೆ. ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದು ಹೇಗೆ? ಯಾವೆಲ್ಲ ದಾಖಲೆಗಳು ಬೇಕು ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಕೆಲವು ತುರ್ತು ಅಗತ್ಯಗಳನ್ನು ಪೂರೈಸಲು, ಸರ್ಕಾರವು ಹೊಸ ರೇಷನ್‌ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು, ಈ ಯೋಜನೆಯಡಿ ಈ ಕೆಳಗಿನವರು ಅರ್ಜಿ ಸಲ್ಲಿಸಬಹುದು :

ಹೊಸದಾಗಿ ಮದುವೆಯಾಗಿ ಸಂಸಾರ ಆರಂಭಿಸುವ ದಂಪತಿಗಳು
ಮದುವೆಯ ನಂತರ ಪ್ರತ್ಯೇಕವಾಗಿ ವಾಸಿಸುವ ದಂಪತಿಗಳು ಹೊಸ ರೇಷನ್ ಕಾರ್ಡ್‌ಗೆ ಅರ್ಹರಾಗುತ್ತಾರೆ.
ಕುಟುಂಬದಿಂದ ಬೇರೆಯಾಗಿ ಜೀವನ ನಡೆಸುವ ದಂಪತಿಗಳು
ಈಗಾಗಲೇ ರೇಷನ್ ಕಾರ್ಡ್ ಹೊಂದಿರುವ ಕುಟುಂಬದಿಂದ ಪ್ರತ್ಯೇಕವಾಗಿ ವಾಸಿಸಲು ಪ್ರಾರಂಭಿಸುವ ದಂಪತಿಗಳು ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಬಹುದು.

ಹೊಸ ರೇಷನ್ ಕಾರ್ಡ್ ಪಡೆಯಲು ಅಗತ್ಯ ದಾಖಲೆಗಳು (Documents) :

ಆಧಾರ್ ಕಾರ್ಡ್
ಮನೆಯ ಸದಸ್ಯರ ಆಧಾ‌ರ್ ಕಾರ್ಡ್‌ಗಳು
ಆದಾಯ ಪ್ರಮಾಣ ಪತ್ರ
ಜಾತಿ ಪ್ರಮಾಣ ಪತ್ರ
ನಿವಾಸ ಪ್ರಮಾಣ ಪತ್ರ ಮೊಬೈಲ್ ಸಂಖ್ಯೆ (ಕಡ್ಡಾಯ) ಬಾಡಿಗೆದಾರರಿಗೆ ಒಪ್ಪಂದ ಪತ್ರ (ಕಡ್ಡಾಯ)

ಅರ್ಜಿ ಸಲ್ಲಿಸುವುದು ಹೇಗೆ (How to apply application) :

ಗ್ರಾಮ ಒನ್(Gram one), ಬೆಂಗಳೂರು ಒನ್(Bengaluru one), ಮತ್ತು ಇತರ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ಇದರ ಹೊರತಾಗಿ ಆನ್‌ಲೈನ್‌ ಮೂಲಕವೂ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಮೊದಲಿಗೆ https://ahara.kar.nic.in/home ಲಾಗಿನ್ ಆಗಬೇಕು.
ನಂತರ ಅಲ್ಲಿ ಇರುವ ಸೆಲೆಕ್ಟ್ ಬಟನ್ ಮೇಲೆ ಕ್ಲಿಕ್ ಮಾಡಬೇಕು.
ಹೊಸ ಪೇಜ್ ನಲ್ಲಿ ಕಾಣುವ ಫಾರ್ಮ್‌ನಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ.
ನಂತರ ಅಲ್ಲಿ ತಿಳಿಸಲಾಗಿರುವ ಎಲ್ಲಾ ದಾಖಲೆಗಳ ಸ್ಕ್ಯಾನ್ ಪ್ರತಿಯನ್ನು ಅಪ್‌ಲೋಡ್ ಮಾಡಬೇಕು.
ಅಪ್‌ಲೋಡ್ ಮಾಡಿದ ನಂತರ ಫಾರ್ಮ್ ಅನ್ನು ಸಬ್‌ಮಿಟ್ ಮಾಡಬೇಕು.
ಇನ್ನು ನೀವು ನೀಡಿರುವ ಎಲ್ಲಾ ದಾಖಲೆಗಳು ಸರಿಯಾಗಿಯಿದ್ದರೆ, ಅರ್ಜಿದಾರನ ಹೊಸ ಪಡಿತರಚೀಟಿಯನ್ನು ಅವರ ಮನೆಗೆ ಕಳುಹಿಸಿಕೊಡಲಾಗುತ್ತದೆ.
ಆನ್ಸೆನ್ ಪೋರ್ಟಲ್ ನಿರ್ದಿಷ್ಟ ಸಮಯದಲ್ಲಿ ಮಾತ್ರ ತೆರೆದಿರುತ್ತದೆ. ಸೇವಾ ಕೇಂದ್ರದ ಸಿಬ್ಬಂದಿಯಿಂದ ಮಾಹಿತಿ ಪಡೆದುಕೊಂಡು ಅರ್ಜಿ ಸಲ್ಲಿಸಿ.
ಅಗತ್ಯ ದಾಖಲೆಗಳೊಂದಿಗೆ ಆನ್‌ಲೈನ್ ಮೂಲಕ ಅರ್ಜಿ 15 ದಿನಗಳ ಬಳಿಕ ನಿಮ್ಮ ಪಡಿತರ ಚೀಟಿಯನ್ನು ನೀಡಲಾಗುತ್ತದೆ. 100 ರೂ. ಶುಲ್ಕ ಪಾವತಿಸಿ ಪಡಿತರ ಚೀಟಿಯನ್ನು ಪಡೆಯಬಹುದು.

ಗಮನಿಸಿ:

ಅರ್ಜಿದಾರನಿಗೆ ಈ ಕುರಿತಂತೆ ಯಾವುದೇ  ರೀತಯ ಗೊಂದಲಗಳು ಇದ್ದರೆ ಕರ್ನಾಟಕ ಪಡಿತರ ಚೀಟಿ ಇಲಾಖೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಕರ್ನಾಟಕ ಪಡಿತರ ಚೀಟಿ ಸಹಾಯವಾಣಿ ಸಂಖ್ಯೆ ಟೋಲ್ ಫ್ರೀ  : 18004259339 ಮತ್ತು ಸಹಾಯವಾಣಿ ಸಂಖ್ಯೆ: 1967 ಗೆ ಕರೆ ಮಾಡಬಹುದು.
ರೇಷನ್‌ ಕಾರ್ಡ್‌ನ ಸ್ಥತಿ ತಿಳಿಯಲು ಈ ವೆಬ್‌ಸೈಟ್‌ಗೆ ಭೇಟಿ ನೀಡಿ  https://ahara.kar.nic.in/WebForms/Show_RationCard.aspx
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಂಬಂಧಿಸಿದ ಮಾಹಿತಿಗಳಿಗೆ https://ahara.kar.nic.in/Home/EServices ಭೇಟಿ ನೀಡಿ.

ಈ ಮಾಹಿತಿಗಳನ್ನು ಓದಿ

 

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!