ಪಡಿತರ ಚೀಟಿಯು ಭಾರತೀಯರಿಗೆ ಪ್ರಮುಖ ದಾಖಲೆಯಾಗಿದೆ. ಪಡಿತರ ಚೀಟಿಯ ಸಹಾಯದಿಂದ ಸರ್ಕಾರದ ಗ್ಯಾರಂಟಿ (Guarantee scheme) ಯೋಜನೆಗಳ ಸೌಲಭ್ಯ ಪಡೆಯಬಹುದು. ಗುರುತಿನ ಚೀಟಿಯಾಗಿಯೂ ಬಳಸಬಹುದು. ಇದರಲ್ಲಿ ನಿಮ್ಮ ಹಾಗೂ ನಿಮ್ಮ ಕುಟುಂಬದವರ ಮಾಹಿತಿ ದಾಖಲಾಗಿರುತ್ತದೆ. ಎಪಿಎಲ್ ಕಾರ್ಡ್ ಇರುವವರಿಗೂ ಕೆಲ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಘೋಷಿಸಿದೆ. ಇತ್ತೀಚಿಗೆ ಹೊಸ ಷರತ್ತುಗಳು, ಗೊಂದಲಗಳು ಸೃಷ್ಟಿಯಾಗಿದ್ದರೂ, ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಜನ ಕಾತರರಾಗಿದ್ದಾರೆ. ನಿಮ್ಮ ಬಳಿ ಪಡಿತರ ಚೀಟಿ (BPL Ration card) ಇಲ್ಲದಿದ್ದರೆ, ಕರ್ನಾಟಕದಲ್ಲಿ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಕೆ ಮತ್ತೆ ಶೀಘ್ರವೇ ಆರಂಭ ಆಗಲಿದೆ. ಹೊಸ ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್‌ಗೆ ಆನ್‌ಲೈನ್‌ನಲ್ಲಿ ಅಪ್ಲೈ ಮಾಡುವುದು ಹೇಗೆ? ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲೆಗಳನ್ನು ಹೊಂದಿರಬೇಕು? ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ನಾವು ಇಂದು ಹೇಳಲಿದ್ದೇವೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಡಿಸೆಂಬರ್ 3ಕ್ಕೆ ಪಡಿತರ ಚೀಟಿಗೆ ಅರ್ಜಿ
ಹೊಸ ಆದ್ಯತಾ (BPL Ration card) ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ನಾಗರಿಕರು ಡಿಸೆಂಬರ್ 3ರಂದು ಅರ್ಜಿ ಸಲ್ಲಿಸಬಹುದಾಗಿದೆ. ಹೊಸ ರೇಷನ್ ಕಾರ್ಡ್‌ಗೆ ಅರ್ಜಿಸಲು (Online Application) ಕೇವಲ ಒಂದು ದಿನ ಅವಕಾಶ ಕಲ್ಪಿಸಲಾಗಿದೆ.ಡಿಸೆಂಬರ್ 3 ರಂದು ಬೆಳಗ್ಗೆ 11ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಜಿಲ್ಲೆಯ ನಗರ ಪ್ರದೇಶಗಳಲ್ಲಿರುವ ಕರ್ನಾಟಕ ಒನ್ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿನ ಗ್ರಾಮ ಒನ್ ಕೇಂದ್ರಗಳಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಇವುಗಳನ್ನು ಹೊರತುಪಡಿಸಿ ಬೇರೆ ಇನ್ಯಾವುದೇ ಆನ್‌ಲೈನ್ ಸೆಂಟರ್‌ಗಳಲ್ಲಿಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲಎಂದು ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ. ಹೆಚ್ಚಿನ ಅರ್ಜಿ ಸಲ್ಲಿಕೆಯಾಗುವ ಹಿನ್ನೆಲೆ ಕಡಿಮೆ ಸಮಯಾವಕಾಶ ಕೊಟ್ಟಿರುವ ಆಹಾರ ಇಲಾಖೆ. ಎಲ್ಲರಿಗೂ ಭಾನುವಾರ ಅರ್ಜಿ ಹಿನ್ನೆಲೆ ಅಂದೇ ಹೊಸ ರೇಷನ್ ಮಾಡಿಸಲು ಅವಕಾಶ ನೀಡಲಾಗಿದೆ.
ಹೊಸ ರೇಷನ್ ಕಾರ್ಡ್ ಪಡೆಯಲು ಅಗತ್ಯ ದಾಖಲೆಗಳು
ಆಧಾರ್ ಕಾರ್ಡ್,
ಮನೆಯ ಸದಸ್ಯರ ಆಧಾರ್ ಕಾರ್ಡ್‌ಗಳು,
ಆದಾಯ, ಜಾತಿ, ನಿವಾಸ ಪ್ರಮಾಣ ಪತ್ರ
ಮೊಬೈಲ್ ಸಂಖ್ಯೆ (ಕಡ್ಡಾಯ)
ಬಾಡಿಗೆದಾರರಿಗೆ ಒಪ್ಪಂದ ಪತ್ರ (ಕಡ್ಡಾಯ)
ಪಡಿತರ ಚೀಟಿಗಾಗಿ ಸಲ್ಲಿಸಿದ ಎಲ್ಲಾ ದಾಖಲೆಗಳ ಪರಿಶೀಲನೆ ಬಳಿಕ 15 ದಿನದೊಳಗೆ ಹೊಸ ಪಡಿತರ ಚೀಟಿಗಳನ್ನು ನೀಡಲಾಗುತ್ತದೆ. ಆ ಸಂದರ್ಭದಲ್ಲಿ 100 ರೂ ಅಥವಾ ನಿಗದಿಪಡಿಸಿರುವ ಹಣವನ್ನು ನೀಡಬೇಕಾಗುತ್ತದೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ವರದಿ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
15 ದಿನ ಅಲ್ಲ 2 ವರ್ಷ ಆದರು ಸಿಗಲ್ಲ ಸುಳ್ಳು ಯಾಕೆ ಹೇಳುತ್ತೀರಾ
New restion card
Ration card not started ft
HOW TO MAKE NEW RATION CARD IN BANGALORE, WHERE TO LOGIN, WESITE ADDREES, PROCEDURES, ETC