ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಡಿಸೆಂಬರ್ ತಿಂಗಳಿನಿಂದ ಕೆಲವು ಹೊಸ ಬದಲಾವಣೆಗಳು ಆಗಲಿವೆ. ಆ ಬದಲಾವಣೆಗಳು ಅಥವಾ ನಿಯಮಗಳು ಯಾವುವು?, ಈ ನಿಯಮಗಳು ನಮ್ಮ ದಿನದ ಬದುಕಿನ ಮೇಲೆ ಹೇಗೆ ಪರಿಣಾಮವನ್ನು ಬೀರುತ್ತದೆ? ಇವುಗಳನ್ನು ನಾವು ಎಷ್ಟರ ಮಟ್ಟಿಗೆ ಪಾಲಿಸಬೇಕು ಎಂಬುದರ ಸಂಪೂರ್ಣ ವಿವರವನ್ನು ಈ ಲೇಖನದ ಮೂಲಕ ನಿಮಗೆ ತಿಳಿಸಲಾಗುವುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಸಾಮಾನ್ಯವಾಗಿ ಎಲ್ಲಾ ತಿಂಗಳುಗಳ ಆರಂಭದಲ್ಲಿ ನಮಗೆ ಕೆಲವು ಹೊಸ ವಿಷಯಗಳು ಅಥವಾ ನಿಯಮಗಳು ಜಾರಿಯಲ್ಲಿ ಬಂದಿರುತ್ತದೆ. ಇಂತಹ ಬದಲಾವಣೆಗಳನ್ನು ನಾವು ಪಾಲಿಸಲೇಬೇಕಾಗುತ್ತದೆ. ಅಲ್ಲದೆ ಇಂತಹ ನಿಯಮಗಳು ಮನುಷ್ಯನ ಜೀವನದ ಮೇಲೆ ನೇರ ಪರಿಣಾಮವನ್ನು ಬೀರುತ್ತವೆ. ಡಿಸೆಂಬರ್ ವರ್ಷದ ಕೊನೆಯ ತಿಂಗಳಾಗಿದ್ದರು ಕೆಲವು ಹೊಸ ಮತ್ತು ನವೀಕರಿಸಿದ ನಿಯಮಗಳು ಜಾರಿಗೆ ಬಂದಿರುವುದು ಇದೇ ತಿಂಗಳಿನಲ್ಲಿ ಆಗಿದೆ. ಆದ್ದರಿಂದ ಈ ನಿಯಮಗಳು ಯಾವುವು ಎಂಬುದನ್ನು ತಿಳಿಯುವುದು ಅತ್ಯವಶ್ಯಕವಾಗಿದೆ. ಎಲ್ ಪಿ ಜಿ, ಚಿನ್ನ ಬೆಳ್ಳಿ ದರಗಳ ವ್ಯತ್ಯಾಸ, ಬ್ಯಾಂಕಿಗೆ ಸಂಬಂಧಿಸಿದ ವಿಷಯ, ರೈತರ ಬೆಳಗ್ಗೆ ಸಂಬಂಧಪಟ್ಟಂತ ವಿಶೇಷ, ಪಿಂಚಣಿಯ ಬಗ್ಗೆ ಸಮಾಚಾರ. ಹೀಗೆ ಹಲವು ನಿಯಮಗಳನ್ನು ಈ ಮೇಲ್ ಪಟ್ಟ ವಿಷಯಗಳಲ್ಲಿ ತರಲಾಗಿದೆ, ಅವುಗಳು ಯಾವುವು ಎಂದು ಈ ಲೇಖನದಲ್ಲಿ ನೋಡೋಣ.
ಇದನ್ನೂ ಓದಿ : ರೈತರ ಮಕ್ಕಳಿಗೆ ನೀಡುತ್ತಿದ್ದ ಮುಖ್ಯಮಂತ್ರಿ ರೈತವಿಧ್ಯಾನಿಧಿ ಈ ವರ್ಗಗಳಿಗೂ ವಿಸ್ತರಣೆ
1) ಬ್ಯಾಂಕ್ ರಜಾ ದಿನಗಳ ಬಗ್ಗೆ ವಿವರ :
ಭಾರತೀಯ ರಿಸರ್ವ್ ಬ್ಯಾಂಕಿನ ಡಿಸೆಂಬರ್ 2022ರ ರಜಾ ದಿನಗಳ ಕ್ಯಾಲೆಂಡರ್ ಗೆ ಅನುಗುಣವಾಗಿ ನಿರ್ದಿಷ್ಟ ದಿನಗಳಲ್ಲಿ ಬ್ಯಾಂಕಿಂಗ್ ಕಾರ್ಯಾಚರಣೆಗಳನ್ನು ಮುಚ್ಚಲಾಗುತ್ತದೆ. ಆದರೆ ಇಂಟರ್ನೆಟ್ ಬ್ಯಾಂಕಿಂಗ್ ಸೇವೆಗಳು ಲಭ್ಯವಿರುತ್ತದೆ. ಡಿಸೆಂಬರ್ ನಲ್ಲಿ ಒಟ್ಟು 14 ದಿನಗಳು ಮಾತ್ರ ಕೆಲಸವನ್ನು ಮಾಡಲಾಗುತ್ತದೆ. ಇನ್ನುಳಿದ ದಿನಗಳಲ್ಲಿ ಹಬ್ಬಗಳು, ಎರಡನೇ ಹಾಗೂ ನಾಲ್ಕನೇ ಶನಿವಾರಗಳು, ಭಾನುವಾರಗಳು ಹೇಳಿರುವುದರಿಂದ, ಉಳಿದವುಗಳು ರಜಾ ದಿನಗಳಾಗಿರುತ್ತದೆ. ಎರಡನೇ ಶನಿವಾರ ಮತ್ತು ಭಾನುವಾರವನ್ನು ಹೊರತುಪಡಿಸಿ ಒಂಬತ್ತು ಬ್ಯಾಂಕ್ ರಜಾ ದಿನಗಳನ್ನು ಆಚರಿಸಲಾಗುತ್ತದೆ ಎಂಬ ವಾಸ್ತವದ ಹೊರತಾಗಿಯೂ ಆನ್ಲೈನ್ ಮತ್ತು ನೆಟ್ ಬ್ಯಾಂಕಿಂಗ್ ಸೇವೆಗಳು ಡಿಸೆಂಬರ್ 2022ರಲ್ಲಿ ಎಂದಿನಂತೆ ಲಭ್ಯವಿರುತ್ತದೆ.
2) ಪಂಜಾಬ್ ನ್ಯಾಷನಲ್ ಬ್ಯಾಂಕ್ ಎಟಿಎಂ ಕಾರ್ಡ್ ಬಳಕೆಯಲ್ಲಿ ನವೀಕರಣ:
ಎಟಿಎಂ ನಲ್ಲಿ ವ್ಯವಹರಿಸುವಾಗ ಹೆಚ್ಚಿನ ಸುರಕ್ಷತೆಯನ್ನು ಒದಗಿಸುವುದಕ್ಕಾಗಿ ಪಂಜಾಬ್ ನ್ಯಾಷನಲ್ ಬ್ಯಾಂಕ್ ಒಂದು ಹೊಸ ನವೀಕರಣವನ್ನು ತಂದಿದೆ. ಅದೇನೆಂದರೆ, ಎಟಿಎಂನಿಂದ ಹಣವನ್ನು ಹಿಂಪಡೆಯುವಾಗ ನಾವು ಓಟಿಪಿ ಸಂಖ್ಯೆಯನ್ನು ನಮೂದಿಸಬೇಕಾಗುತ್ತದೆ.
ಓಟಿಪಿ ಸಂಖ್ಯೆಯನ್ನು ಬಳಸುವ ವಿಧಾನ :
ನಾವು ಹಣವನ್ನು ಹಿಂಪಡೆಯುವಾಗ ಎಟಿಎಂ ಕಾರ್ಡನ್ನು ಹಾಕಿದ ನಂತರ, ಹಸಿರು ಪಿನ್ ಆಯ್ಕೆಯನ್ನು ಮಾಡಬೇಕು ನಂತರ ಎಟಿಎಂ ಪರದೆಯು ನೋಂದಾಯಿತ ಮೊಬೈಲ್ ಸಂಖ್ಯೆಯಲ್ಲಿ ವಿತರಿಸಲಾದ ಆರು ಅಂಕಿಗಳ ಓಟಿಪಿಯನ್ನು ನಮೂದಿಸಲು ಪ್ರೇರೇಪಿಸುತ್ತದೆ. ಆರು ಅಂಕಿಯ ಓದಿಪಿಯನ್ನು ನಮೂದಿಸಿದ ನಂತರ ಸರಿ ಎಂಬ ಆಯ್ಕೆಯನ್ನು ಒತ್ತಬೇಕು. ನಂತರ ಎಟಿಎಂ ಡೆಬಿಟ್ ಕಾರ್ಡಿನ ನಾಲ್ಕು ಅಂಕೆಯ ಪಿನ್ ನಂಬರನ್ನು ನೊಂದಾಯಿತದ ನಂತರ ನಿಮಗೆ ಹಣ ದೊರೆಯುತ್ತದೆ. ಹೀಗೆ ಪಂಜಾಬ್ ಬ್ಯಾಂಕಿನಲ್ಲಿ ಮೊಬೈಲ್ ನಂಬರಿಗೆ ಓಟಿಪಿಯನ್ನು ಕಳುಹಿಸುವಂತಹ ಹೊಸ ವಿಧಾನವನ್ನು ಡಿಸೆಂಬರ್ ನಿಂದ ಚಾಲನೆ ಮಾಡಲಾಗಿದೆ.
ಇದನ್ನೂ ಓದಿ : 25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
3) ಜೀವನ ಪ್ರಮಾಣ ಪತ್ರವನ್ನು ಸಲ್ಲಿಸಲು ಕೊನೆಯ ದಿನಾಂಕ :
ಪಿಂಚಣಿ ದಾರರಿಗೆ ತಮ್ಮ ಜೀವನ ಪ್ರಮಾಣ ಪತ್ರವನ್ನು ಸಲ್ಲಿಸಲು ಕೊನೆಯ ದಿನಾಂಕ ನವಂಬರ್ 30 ಆಗಿತ್ತು. ಜೀವನ್ ಪ್ರಮಾಣವು ಪಿಂಚಣಿದಾರರಿಗೆ ಡಿಜಿಟಲ್ ಲೈಫ್ ಸರ್ಟಿಫಿಕೇಟ್ ಆಗಿದ್ದು, ಇದು ಬಯೋಮೆಟ್ರಿಕ್ ಆಗಿ ಸಕ್ರಿಯಗೊಳಿಸಲಾಗಿದೆ ಮತ್ತು ಆಧಾರ್ ಆಧಾರಿತವಾಗಿದೆ. ಡಿಜಿಟಲ್ ಲೈಫ್ ಪ್ರಮಾಣ ಪತ್ರವೂ ಮಾನ್ಯವಾದ ಪ್ರಮಾಣ ಪತ್ರವಾಗಿದೆ. ಕೇಂದ್ರ ಸರ್ಕಾರದಿಂದ ಪಿಂಚಣಿ ಪಡೆಯುತ್ತಿರುವ ಎಲ್ಲರೂ ಜೀವಿತ ಪ್ರಮಾಣ ಪತ್ರವನ್ನು ಸಲ್ಲಿಕೆ ಮಾಡದಿದ್ದರೆ, ಡಿಸೆಂಬರ್ ತಿಂಗಳಿಂದ ಪಿಂಚಣಿ ನೀಡುವುದನ್ನು ಕಡಿತ ಮಾಡುವ ಸಾಧ್ಯತೆ ಹೆಚ್ಚಿದೆ. ಆದ್ದರಿಂದ ಜೀವಿತ ಪ್ರಮಾಣ ಪತ್ರವನ್ನು ಈ ಕೂಡಲೇ ಸಲ್ಲಿಕೆ ಮಾಡಬೇಕು.
4) ಎಲ್ಪಿಜಿ (LPG) ಬೆಲೆಗಳಲ್ಲಿ ಏರಿಳಿತ :
ಭಾರತದಲ್ಲಿ ಎಲ್‌ಪಿಜಿ ಬೆಲೆಯನ್ನು ರಾಜ್ಯದ ರನ್-ಆಯಿಲ್ ಕಂಪನಿಗಳು ನಿರ್ಧರಿಸುತ್ತವೆ ಮತ್ತು ಮಾಸಿಕ ಆಧಾರದ ಮೇಲೆ ಪರಿಷ್ಕರಿಸಲಾಗುತ್ತದೆ. ಭಾರತದಲ್ಲಿ ಬಹುತೇಕ ಎಲ್ಲಾ ಮನೆಗಳು ಎಲ್ ಪಿ ಜಿ ಸಂಪರ್ಕವನ್ನು ಹೊಂದಿವೆ ಮತ್ತು ಇದನ್ನು ಮುಖ್ಯವಾಗಿ ಅಡುಗೆಗೆ ಬಳಸಲಾಗುತ್ತದೆ. ಪ್ರಸ್ತುತ ಮಾರುಕಟ್ಟೆಯ ಸನ್ನಿವೇಶದಲ್ಲಿ ಹೆಚ್ಚುತ್ತಿರುವ ಇಂಧನ ಬೆಲೆಗಳ ಭಾರವನ್ನು ಅವರು ಬರಿಸಬೇಕಾಗಿರುವುದರಿಂದ ಎಲ್ಪಿಜಿ ಬೆಲೆಗಳ ಹೆಚ್ಚಳವು ಸಾಮಾನ್ಯ ಜನರ ಮೇಲೆ ಪರಿಣಾಮ ಬೀರುತ್ತದೆ. ಪ್ರತಿ ತಿಂಗಳಿನಂತೆ ಈ ತಿಂಗಳು ಕೂಡ ವಾಣಿಜ್ಯ ಮತ್ತು ಗೃಹ ಬಳಕೆ ಸಿಲಿಂಡರ್ ಬೆಲೆಗಳಲ್ಲಿ ವ್ಯತ್ಯಾಸ ಉಂಟಾಗಬಹುದಾಗಿದೆ. ಕಳೆದ ತಿಂಗಳು ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆಯಾಗಿತ್ತು. ಈ ಬಾರಿಯೂ ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆಯಾಗುವ ಎಲ್ಲಾ ಸಾಧ್ಯತೆಗಳಿವೆ. ಹಾಗೂ ದೇಶಿಯ ಎಲ್ಪಿಜಿ ಸಿಲಿಂಡರ್ ನ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಈ ಬಾರಿ, ತೈಲ ತಯಾರಿಕಾ ಕಂಪನಿಗಳು ಭಾರತದ ಸಿಲಿಂಡರ್ಗಳ ಬೆಲೆಯನ್ನು ಕಡಿಮೆಗೊಳಿಸಬಹುದಾಗಿದೆ.
5) ಮಂಜಿನಿಂದ ರೈಲುಗಳ ವೇಳಾಪಟ್ಟಿಯಲ್ಲಿ ಬದಲಾವಣೆ:
ರೈಲ್ವೆ ಸಚಿವಾಲಯವು ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ರೈಲುಗಳ ಹೊಸ ಸಮಯವನ್ನು ಆಗಾಗ ಪ್ರಕಟಿಸುತ್ತದೆ. ಪ್ರಾಣಿಕರ ಬೇಡಿಕೆಗಳನ್ನು ಸ್ವೀಕರಿಸುವ ಮೂಲಕ ರೈಲ್ವೆ ಸದಾ ಸಮಾಜಕ್ಕೆ ಸೇವೆ ಸಲ್ಲಿಸುತ್ತಿದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಡಿಸೆಂಬರ್ ತಿಂಗಳಿನಿಂದ ಚಳಿಗಾಲದ ಮಂಜಿನ ಕಾರಣದಿಂದಾಗಿ, ರೈಲುಗಳ ವೇಳಾಪಟ್ಟಿಯಲ್ಲಿ ಬದಲಾವಣೆಗಳನ್ನು ಮಾಡಲಾಗುತ್ತದೆ. ಹೊಸ ಸಮಯದ ಪ್ರಕಾರ ಅವುಗಳನ್ನು ನಿರ್ವಹಿಸುತ್ತದೆ. ಈ ತಿಂಗಳಿನ ಮೊದಲನೆಯ ದಿನದಿಂದ ಈ ವೇಳಾಪಟ್ಟೆಯು ಪ್ರಕಟವಾಗುತ್ತದೆ.
6) ದ್ವಿಚಕ್ರ ವಾಹನಗಳು ಹಾಗೂ ಚಿನ್ನ ಬೆಳ್ಳಿಗಳ ಬೆಲೆಗಳಲ್ಲಿ ವ್ಯತ್ಯಾಸ :
ದ್ವಿಚಕ್ರ ವಾಹನ ಉದ್ಯಮದ ಪ್ರಮುಖರು ಹಣದುಬ್ಬರದ ಪರಿಸ್ಥಿತಿಗಳು ಮತ್ತು ಹೆಚ್ಚಿನ ಸರಕು ವೆಚ್ಚಗಳು ಬೆಲೆ ಏರಿಕೆಗೆ ಕಾರಣವೆಂದು ಹೇಳಿದ್ದಾರೆ. ಇಲ್ಲಿಯವರೆಗೆ ಅಂದರೆ ಡಿಸೆಂಬರ್ ಒಂದರವರೆಗೆ ವರ್ಷದಲ್ಲಿ ಐದು ಬಾರಿ ಬೆಲೆ ಏರಿಕೆಯಾಗಿದೆ. 2022 ರಲ್ಲಿ 11 ತಿಂಗಳುಗಳಲ್ಲಿ ಸಂಚಿತ ಬೆಲೆ ರೂ 9,500 ರಷ್ಟು ಏರಿಕೆಯಾಗಿದೆ ಇದು ಮಾದರಿಗಳು ಮತ್ತು ಮಾರುಕಟ್ಟೆಗಳಾದ್ಯಂತ ಬದಲಾಗುತ್ತದೆ. ಹೀರೋ ಮೋಟೋ ಕಾರ್ಪ್ ತನ್ನ ಮೋಟರ್ ಸೈಕಲ್ ಗಳ ಮತ್ತು ಸ್ಕೂಟರ್ ಗಳ ಎಕ್ಸ್ ಶೋರೂಮ್ ಬೆಲೆಗಳಲ್ಲಿ ಮೇಲ್ಮುಖವಾಗಿ ಪರಿಷ್ಕರಣೆ ಮಾಡಲಿದ್ದು, ಡಿಸೆಂಬರ್ 1,2022 ರಿಂದ ಜಾರಿಗೆ ಬರಲಿದೆ. ಬೆಲೆ ಹೆಚ್ಚಳವು 1,500 ವರೆಗೆ ಇರುತ್ತದೆ ಮತ್ತು ನಿರ್ದಿಷ್ಟ ಮಾದರಿಗಳು ಮತ್ತು ಮಾರುಕಟ್ಟೆಗಳಿಗೆ ಅನುಗುಣವಾಗಿ ಹೆಚ್ಚಳದ ನಿಖರವಾದ ಪ್ರಮಾಣವು ಬದಲಾಗುತ್ತದೆ.
ಹಾಗೆಯೇ ಚಿನ್ನ ಮತ್ತು ಬೆಳ್ಳಿ ದರದ ಬಗ್ಗೆ ಎಲ್ಲರಿಗೂ ಕುತೂಹಲ ಇದ್ದೇ ಇರುತ್ತದೆ. ಇಂದು ಚಿನ್ನದ ದರದಲ್ಲಿ ಯಾವುದೇ ರೀತಿಯ ಬದಲಾವಣೆಗಳು ಇರುವುದಿಲ್ಲ. ಚಿನ್ನದ ದರ ಸ್ಥಿರವಾಗಿರುತ್ತದೆ ಆದರೆ ಬೆಳ್ಳಿಯಾಧರ ಒಂದು ಕಿಲೋ ಮೇಲೆ 900 ಏರಿಕೆಯಾಗಿದೆ.
ಇದೇ ಡಿಸೆಂಬರ್ 1ರಿಂದ ಈ ಎಲ್ಲಾ ನಿಯಮಗಳು ಜಾರಿಗೆ ಬಂದಿದ್ದು, ಎಲ್ಲ ಸಾರ್ವಜನಿಕರು ಕಡ್ಡಾಯವಾಗಿ ಈ ಮೇಲಿನ ಎಲ್ಲಾ ಕೆಲಸಗಳನ್ನು ಮುಗಿಸಿಕೊಳ್ಳಿ ಹಾಗೂ ನಮ್ಮೆಲ್ಲರ ದಿನನಿತ್ಯದ ಜೀವನದಲ್ಲಿ ಅಗತ್ಯವಿರುವ ಅವಶ್ಯಕತೆಗಳು ಬದಲಾಗುತ್ತಿದ್ದು ಇವೆಲ್ಲವೂ ಕೂಡ ಪ್ರತಿಯೊಬ್ಬರೂ ತಿಳಿದುಕೊಳ್ಳಲೇ ಬೇಕಾದಂತಹ ವಿಷಯಗಳಾಗಿವೆ. ಅದರಿಂದ ಇಂತಹ ನವೀಕರಣದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ, ಬಂಧುಗಳಿಗೆ ಹಾಗೂ ನಿಮಗೆ ಗೊತ್ತಿರುವಂತಹ ವೃದ್ಧರಿಗೆ ಈ ಕೂಡಲೇ ಶೇರ್ ಮಾಡಿ, ಧನ್ಯವಾದಗಳು.
ಇದೇ ರೀತಿಯ ಎಲ್ಲಾ ವಿದ್ಯಾರ್ಥಿ ವೇತನ ಮತ್ತು ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
*********** ಲೇಖನ ಮುಕ್ತಾಯ ***********
ಲಭ್ಯವಿರುವ ಇತರೆ ಸ್ಕಾಲರ್ಶಿಪ್ ಗಳು:
- SSP ಸ್ಕಾಲರ್ಶಿಪ್ : Click Here
- ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
- ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
- ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
- ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
- ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
- ವಿದ್ಯಾಸಿರಿ ಸ್ಕಾಲರ್ಶಿಪ್: Click Here
- ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
- ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
- ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
- ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
- ಜಿಂದಾಲ್ ಸ್ಕಾಲರ್ಶಿಪ್ 2022: Click Here
- SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ
ವಿವಿಧ ಯೋಜನೆಗಳಡಿಯಲ್ಲಿ ದ್ವಿಚಕ್ರ ವಾಹನ, ಸರಕು ಸಾಗಾಣಿಕೆ ವಾಹನ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಯಡಿಯಲ್ಲಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಡಾ ಅಂಬೇಡ್ಕರ್ ನಿಗಮ ದಲ್ಲಿ ಹೊಸ ಬೈಕ್ ಪಡೆಯಲು ಸಹಾಯಧನ ಅರ್ಜಿ ಆಹ್ವಾನಿಸಲಾಗಿದೆ. ಅಮೇಜಾನ್, ಝೋಮೊಟೋ, ಸ್ವಿಗ್ಗಿ, ಊಬರ್ ಸೇರಿದಂತೆ ಇತರ ಸಂಸ್ಥೆಗಳಲ್ಲಿ ಕೆಲಸ ಪಡೆದು ಪಾರ್ಸೆಲ್ ಗಳನ್ನು ಮನೆಬಾಗಿಲಿಗೆ ತಲುಪಿಸಲು ನಿಮ್ಮ ಹತ್ತಿರ ಬೈಕ್ ಇಲ್ಲವೆ. ಚಿಂತೆ ಮಾಡಬೇಡಿ, ಇನ್ನೇಕೆ ತಡ ಕೂಡಲೇ ಅರ್ಜಿ ಸಲ್ಲಿಸಿ ಬೈಕ್ ಖರೀದಿಸಿ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/two-wheeler-scheme-karnataka/
ನವೆಂಬರ್ 2022 – ವಿವಿಧ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಅವಕಾಶ: 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳು
ಉದ್ಯೋಗದ ಆಕಾಂಕ್ಷೆಗಳಿಗೆ ನವೆಂಬರ್ ತಿಂಗಳಿನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಈಗಾಗಲೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಹೊರಡಿಸಿಲಾದ ಅಧಿ ಸೂಚನೆಯ ಪ್ರಕಾರ 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳಿವೆ ಎಂದು ತಿಳಿದು ಬಂದಿದೆ. ಯಾವ ಯಾವ ಅಭ್ಯರ್ಥಿಗಳಿಗೆ ಈ ಸರ್ಕಾರಿ ಹುದ್ದೆಯಲ್ಲಿ ಆಸಕ್ತಿ ಹೊಂದಿದೆಯೋ ಅವರು ಸಂಬಂಧಪಟ್ಟ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ನೀಡಲಾದ ಆನ್ಲೈನ್ ಫಾರ್ಮ್ ಇಂದ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ.
ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/kannada-job-news-november-2022/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/
ಇದನ್ನೂ ಓದಿ:
IAF Agniveervayu Recruitment 2022: ಭಾರತೀಯ ವಾಯುಪಡೆಯಿಂದ ಅಗ್ನೀ ವೀರ್ ವಾಯು ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ
25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022
Amazon Recruitment 2022 : ಮನೆಯಲ್ಲೇ ಕೆಲಸ ₹45 ಸಾವಿರ ಸಂಬಳ. ಅರ್ಜಿ ಸಲ್ಲಿಸುವ ವಿಧಾನ, ಸಂಪೂರ್ಣ ಮಾಹಿತಿ ಇಲ್ಲಿದೆ