ಸರ್ಕಾರಿ ನೌಕರರ ಪ್ರಮುಖ ಬೇಡಿಕೆಗಳಿಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಏನು.!? ಇಲ್ಲಿದೆ ವಿವರ

1000342995

ಹಳೆ ಪಿಂಚಣಿ ಯೋಜನೆ ಮರು ಸ್ಥಾಪನೆಗೆ ಕ್ರಮ ಕೈಗೊಂಡ ಸರ್ಕಾರ.!

ಕರ್ನಾಟಕದ ಸರ್ಕಾರಿ ನೌಕರರ ಹಳೆ ಪಿಂಚಣಿ ಯೋಜನೆ (Old Pension Scheme – OPS) ಮರುಸ್ಥಾಪನೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕ್ರಮ ಕೈಗೊಂಡಿದೆ. 2024 ಡಿಸೆಂಬರ್‌ನಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiya), ಸರ್ಕಾರಿ ನೌಕರರ ಪ್ರಮುಖ ಬೇಡಿಕೆಗಳನ್ನು ಗಮನಿಸುತ್ತಾ ಹಳೆ ಪಿಂಚಣಿ ಯೋಜನೆ ಜಾರಿಗೆ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಚರ್ಚೆ ನಡೆಸಿದ್ದು, ಈ ಕುರಿತು ಸ್ಪಷ್ಟ ಭರವಸೆ ನೀಡಿದ್ದಾರೆ. ವಿಧಾನಸಭೆ ಕಲಾಪದಲ್ಲಿ ತರೀಕೆರೆ ಕ್ಷೇತ್ರದ ಶಾಸಕರಾದ ಶ್ರೀನಿವಾಸ ಜಿ. ಹೆಚ್. ಸರ್ಕಾರಿ ನೌಕರರ (Government employees) ಬೇಡಿಕೆಯ ಕುರಿತು ಸರ್ಕಾರದ ಗಮನ ಸೆಳೆದಿದ್ದರು. ಅವರ ಮಾತಿಗೆ ಮುಖ್ಯಮಂತ್ರಿಗಳು ಲಿಖಿತವಾಗಿ ಉತ್ತರವನ್ನು ನೀಡಿದ್ದಾರೆ.

ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಹಳೆ ಪಿಂಚಣಿ ಯೋಜನೆ 2006ರ ಪೂರ್ವದಲ್ಲಿ ನೇಮಕಗೊಂಡ ಸರ್ಕಾರಿ ನೌಕರರಿಗೆ ಅನ್ವಯವಾಗುತ್ತದೆ. 2006ರ ನಂತರ ನೇಮಕಗೊಂಡ ನೌಕರರಿಗೆ ರಾಷ್ಟ್ರೀಯ ಪಿಂಚಣಿ ಯೋಜನೆ (NPS) ಜಾರಿಯಲ್ಲಿದೆ. NPS ರದ್ದುಗೊಳಿಸಲು ಸರ್ಕಾರದ ಮುಂದಿನ ಕ್ರಮಗಳಿಗೆ ಸಂಬಂಧಿಸಿದಂತೆ ಸಮಿತಿಯನ್ನು ರಚಿಸಲಾಗಿದ್ದು, ವರದಿ ಸಿದ್ದವಾದ ನಂತರ ಸೂಕ್ತ ನಿರ್ಧಾರಗಳನ್ನು ಕೈಗೊಳ್ಳುವುದಾಗಿ ಸಿಎಂ ಸ್ಪಷ್ಟಪಡಿಸಿದ್ದಾರೆ. ಈ ಕ್ರಮ 13,000ಕ್ಕೂ ಹೆಚ್ಚು ಸರ್ಕಾರಿ ನೌಕರರಿಗೆ ಪಿಂಚಣಿ ಯೋಜನೆಯ ಲಾಭಗಳನ್ನು ನೀಡುವ ನಿರೀಕ್ಷೆಯಿದೆ.

oldpensionschemedp 1715583456
ಶಾಸಕ ಶ್ರೀನಿವಾಸ ಜಿ. ಹೆಚ್. ಏನೆಂದು ಪ್ರಶ್ನಿಸಿದರು?

1.04.2006 ರಿಂದ ಸರ್ಕಾರಿ ಸೇವೆಗೆ ಸೇರಿರುವ ನೌಕರರಿಗೆ ಹಾಗೂ ಅನುದಾನಿತ ಮತ್ತು ನಿಗಮ ಮಂಡಳಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸಲು ಸರ್ಕಾರವು ರಚನೆ ಮಾಡಿರುವ ಸಮಿತಿಯು ಈವರೆಗೆ ಎಷ್ಟು ಸಭೆಗಳನ್ನು ನಡೆಸಿದೆ. ಸದರಿ ಸಮಿತಿಯು ಯಾವಾಗ ಸರ್ಕಾರಕ್ಕೆ ಮಧ್ಯಂತರ ವರದಿ(Interim report) ಯನ್ನು ಸಲ್ಲಿಸಲಿದೆ? ಸದರಿ ಸಮಿತಿಗೆ ವರದಿಯನ್ನು ನೀಡಲು ಯಾವ ಕಾಲಮಿತಿಯನ್ನು ನಿಗದಿಪಡಿಸಲಾಗಿದೆ? ಎಂದು ಪ್ರಶ್ನಿಸಿದ್ದರು.

ಶಾಸಕ ಶ್ರೀನಿವಾಸ ಜಿ. ಹೆಚ್. ಪ್ರಶ್ನೆಗೆ ಸಿದ್ದರಾಮಯ್ಯ ಏನೆಂದು ಉತ್ತರಿಸಿದ್ದಾರೆ.

ಶಾಸಕ ಶ್ರೀನಿವಾಸ ಜಿ. ಹೆಚ್. ಮಾತಿಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ಉತ್ತರ ರಾಜ್ಯದಲ್ಲಿ ಜಾರಿಯಲ್ಲಿರುವ ರಾಷ್ಟ್ರೀಯ ಪಿಂಚಣಿ ಯೋಜನೆ (National Pension Scheme) ಯ ಬದಲಾಗಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿ ಮಾಡುವ ಸಾಧ್ಯತೆಗಳ ಕುರಿತು ಪರಿಶೀಲಿಸಲನೆ ಈಗಾಗಲೇ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ದಿನಾಂಕ 11/12/2018ರ ಮತ್ತು ದಿನಾಂಕ 1/3/2023ರ ಸರ್ಕಾರಿ ಆದೇಶಗಳನ್ವಯ ರಚಿಸಲಾಗಿರುವ ಸಮಿತಿಯನ್ನು ದಿನಾಂಕ 16/8/2024ರಲ್ಲಿ ಪುನರ್ ರಚಿಸಿಸಲು (Recreate) ಆದೇಶಿಸಲಾಗಿದೆ ಎಂದು ಹೇಳಿದ್ದಾರೆ. ಸದರಿ ಸಮಿತಿಯು ಈಗಾಗಲೇ ಎರಡು ಸಭೆಗಳನ್ನು ನಡೆಸಿದ್ದು, ಸಮಿತಿಗೆ ಯಾವುದೇ ಕಾಲಮಿತಿಯನ್ನು ನಿಗದಿಪಡಿಸಿರುವುದಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಸರ್ಕಾರಿ ನೌಕರ ಸಂಘಟನೆಗಳ ಒತ್ತಾಯಗಳು ಮತ್ತು ಮುಷ್ಕರಗಳ ನಂತರ, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಸಿದ್ದರಾಮಯ್ಯ, OPS ಜಾರಿಗೆ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ. NPS ಬದಲಾವಣೆ ಪ್ರಕ್ರಿಯೆಯಲ್ಲಿ ಯಾವುದೇ ಸಮಸ್ಯೆಗಳನ್ನು ಪರಿಹರಿಸಲು ಅರ್ಹತೆ (Qualifications) ಹೊಂದಿದ ನೌಕರರು ಅಗತ್ಯ ದಾಖಲೆಗಳನ್ನು ಸಲ್ಲಿಸುವಂತೆ ತಿಳಿಸಲಾಗಿದೆ.

ಈ ನಿರ್ಧಾರವು ನೌಕರರಲ್ಲಿ ಹರ್ಷವನ್ನು ಉಂಟುಮಾಡಿದ್ದರೂ, ರಾಜ್ಯದ ಹಣಕಾಸು ಮೇಲಿನ ಪರಿಣಾಮಗಳನ್ನು ಸಮರ್ಥವಾಗಿ ನಿರ್ವಹಿಸುವುದು ಸರ್ಕಾರದ ಮುಂದೆ ಸವಾಲಾಗಿಯೇ ಉಳಿದಿದೆ. ರಾಜ್ಯದ ಬಜೆಟ್‌ (State budget) ನಲ್ಲಿ ಹಳೆ ಪಿಂಚಣಿ ಯೋಜನೆಯ ನಿವಾರಣೆಗಾಗಿ ತಕ್ಕ ತೀರ್ಮಾನ ಕೈಗೊಳ್ಳಲಾಗುವುದು. ಹಳೆಯ ಪಿಂಚಣಿ ಯೋಜನೆಗೆ ಸಂಬಂಧಿಸಿದ ಈ ಬೆಳವಣಿಗೆ ಕರ್ನಾಟಕದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಸರ್ಕಾರದ ಈ ಕ್ರಮವು ವಿವಿಧ ರಾಜ್ಯಗಳಿಗೆ ಮಾದರಿಯಾಗುವ ನಿರೀಕ್ಷೆಯೂ ಇದೆ.

ಈ ಮಾಹಿತಿಗಳನ್ನು ಓದಿ

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!