Govt Scheme: ಮರು ಜಾರಿಯಾಗಲಿದೆ ಹಳೇ ಪಿಂಚಣಿ ಯೋಜನೆ.? 2025 ಕ್ಕೆ ಗುಡ್ ನ್ಯೂಸ್.!

1000348558

ಸರ್ಕಾರಿ ನೌಕಕರಿಗೆ ಗುಡ್ ನ್ಯೂಸ್, 2025ರಲ್ಲಿಯೇ ಮರು ಜಾರಿಯಾಗಲಿದೆ ಹಳೇ ಪಿಂಚಣಿ ಯೋಜನೆ.. ಇಲ್ಲಿದೆ ಸಂಪೂರ್ಣ ಮಾಹಿತಿ..!

ಇತ್ತೀಚೆಗೆ ನೌಕರರು (government employees) ಹಳೆ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸುವಂತೆ ಒತ್ತಾಯಿಸಿ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹಳೆಯ ಪಿಂಚಣಿ ಯೋಜನೆ (Old pension scheme) ಗೆ ಸಂಬಂಧಿಸಿದಂತೆ ದೇಶಾದ್ಯಂತ ಹಲವು ಚರ್ಚೆಗಳು ನಡೆಯುತ್ತಿವೆ. ಕೇಂದ್ರ ಸರ್ಕಾರಿ ನೌಕರರು ಹಾಗೂ ಹಲವು ರಾಜ್ಯ ಸರ್ಕಾರಿ ನೌಕರರು ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸುವಂತೆ ಒತ್ತಾಯಿಸುತ್ತಿದ್ದಾರೆ. ಇದಕ್ಕಾಗಿ ಹಲವು ಪ್ರತಿಭಟನೆಗಳು ನಡೆಯುತ್ತಿವೆ. ಹಲವು ರಾಜ್ಯ ಸರ್ಕಾರಗಳು (state governments) ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿವೆ.

7ನೇ ವೇತನ ಆಯೋಗದ(7th pay commission) ವರದಿ ಜಾರಿ ಬಳಿಕ ಕರ್ನಾಟಕದ ಸರ್ಕಾರಿ ನೌಕರರ ಮತ್ತೊಂದು ಪ್ರಮುಖ ಬೇಡಿಕೆ ಹಳೇ ಪಿಂಚಣಿ ಯೋಜನೆ (OPS) ಮರು ಜಾರಿ. ಸದ್ಯ ಇರುವ ಹೊಸ ಪಿಂಚಣಿ ಯೋಜನೆ (NPS) ರದ್ದುಗೊಳಿಸಿ ಎಂದು ಸರ್ಕಾರಿ ನೌಕರರು ಬೇಡಿಕೆ ಇಡುತ್ತಲೇ ಇದ್ದಾರೆ. ಸರ್ಕಾರ ಇದರ ಕುರಿತು ವರದಿ ನೀಡಲು ಸಮಿತಿಯೊಂದನ್ನು ರಚನೆ ಮಾಡಿದ್ದು, 2025ರಲ್ಲಿ ನೌಕರರ ಈ ಬೇಡಿಕೆ ಈಡೇರುವ ವಿಶ್ವಾಸವಿದೆ ಎಂದು ತಿಳಿದು ಬಂದಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಚುನಾವಣಾ ಪ್ರಣಾಳಿಕೆಯಲ್ಲಿಯೇ 2025ರಲ್ಲಿ ಸರ್ಕಾರಿ ನೌಕರರ ಬಗ್ಗೆ ಮಾಹಿತಿ :

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-29 ಅವಧಿಯ ಚುನಾವಣೆ ಮುಕ್ತಾಯವಾಗಿದ್ದು,ಅಧ್ಯಕ್ಷರಾಗಿ ಸಿ. ಎಸ್. ಷಡಾಕ್ಷರಿ (C S Shadakshari) ಮರು ಆಯ್ಕೆಯಾಗಿದ್ದಾರೆ. ಸಿ. ಎಸ್. ಷಡಾಕ್ಷರಿ ಅವರು ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿಯೇ 2025ರಲ್ಲಿ ಸರ್ಕಾರಿ ನೌಕರರು ಯಾವ ನಿರೀಕ್ಷೆ ಇಟ್ಟುಕೊಳ್ಳಬಹುದು? ಎಂಬ ಮಾಹಿತಿ ನೀಡಿದ್ದಾರೆ.

2025ಕ್ಕೆ ಹಳೇ ಪಿಂಚಣಿ ಯೋಜನೆ ಮರು ಜಾರಿಗೆ ಸಿದ್ದವಾಗಿದೆ :

ಕರ್ನಾಟಕ ರಾಜ್ಯ (State government) ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಸಿ. ಎಸ್. ಷಡಾಕ್ಷರಿ ಮೊದಲು ಹಳೇ ಪಿಂಚಣಿ ಯೋಜನೆ (OPS) ಮರು ಜಾರಿಯ ಕುರಿತು ಮಾತನಾಡಿದ್ದಾರೆ. 2025ಕ್ಕೆ ಹಳೇ ಪಿಂಚಣಿ ಯೋಜನೆ ಮರು ಜಾರಿಗೆ ಸಿದ್ದವಾಗಿದೆ. ಹೊಸ ಪಿಂಚಣಿ ಯೋಜನೆ ಬದಲಾಗಿ ಹಳೇ ಪಿಂಚಣಿ ಯೋಜನೆ ಮರು ಜಾರಿಗೆ ಸರ್ಕಾರಕ್ಕೆ ಒತ್ತಡ ಹೇರಿ ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

ಹಳೇ ಪಿಂಚಣಿ ಯೋಜನೆಯನ್ನು ಮರುಜಾರಿಗೊಳಿಸಿ ಗುರಿ ತಲುಪುವವರೆಗೆ ನಿರ್ಣಾಯಕ ಹೋರಾಟ : ಸಿ. ಎಸ್. ಷಡಾಕ್ಷರಿ

ಸಿ. ಎಸ್. ಷಡಾಕ್ಷರಿ ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಎನ್‌ಪಿಎಸ್ ರದ್ಧತಿ ಬಗ್ಗೆ ಭರವಸೆ ನೀಡಿದ್ದು, ಸಂಘದ ಹೋರಾಟದ ಮೇರೆಗೆ ಈಗಾಗಲೇ ಒಪಿಎಸ್ ಅನುಷ್ಠಾನಗೊಂಡಿರುವ ರಾಜ್ಯಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿ, ಸರ್ಕಾರಕ್ಕೆ ವರದಿ ಸಲ್ಲಿಸಲು ಅಪರ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿದ್ದು, ಡಿಸೆಂಬರ್ 2024ರ ಅಂತ್ಯದಲ್ಲಿ ಸರ್ಕಾರಕ್ಕೆ ವರದಿಯನ್ನು ಸಲ್ಲಿಸುವ ನಿರೀಕ್ಷೆ ಇದ್ದು, ಸರ್ಕಾರದ ಮೇಲೆ ಒತ್ತಡವನ್ನು ಹೇರಿ ಹಳೇ ಪಿಂಚಣಿ ಯೋಜನೆಯನ್ನು ಮರುಜಾರಿಗೊಳಿಸಿ ಗುರಿ ತಲುಪುವವರೆಗೆ ನಿರ್ಣಾಯಕ ಹೋರಾಟ ನಡೆಸಲಾಗುತ್ತದೆ ಎಂದು ಹೇಳಿದ್ದರು.

ಸಮಿತಿ ವರದಿ ನೀಡಲು ಕಾಲಮಿತಿ ನಿಗದಿ ಇನ್ನು ಮಾಡಿಲ್ಲ :

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಳೇ ಪಿಂಚಣಿ ಯೋಜನೆ ಮರು ಜಾರಿ ಮಾಡುವ ಸಾಧ್ಯತೆಗಳ ಕುರಿತು ಪರಿಶೀಲಿಸಲ ಈಗಾಗಲೇ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ದಿನಾಂಕ 11/12/2018ರ ಮತ್ತು ದಿನಾಂಕ 1/3/2023ರ ಸರ್ಕಾರಿ ಆದೇಶಗಳನ್ವಯ ರಚಿಸಲಾಗಿರುವ ಸಮಿತಿಯನ್ನು ದಿನಾಂಕ 16/8/2024ರಲ್ಲಿ ಪುನರ್ ರಚಿಸಿ (Re organize) ಆದೇಶಿಸಲಾಗಿದೆ ಎಂದು ಹೇಳಿದ್ದರು. ಸಮಿತಿ ಈಗಾಗಲೇ ಎರಡು ಬಾರಿ ಸಭೆಗಳನ್ನು ನಡೆಸಿದೆ. ಆದರೆ ಸಮಿತಿ ವರದಿ ನೀಡಲು ಕಾಲಮಿತಿ ನಿಗದಿ ಮಾಡಿಲ್ಲ ಎಂದು ಹೇಳಿದ್ದರು.

ಈ ಮಾಹಿತಿಗಳನ್ನು ಓದಿ

 


ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!