‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಗೆ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ, ಇಲ್ಲಿದೆ ಸಂಪೂರ್ಣ ಮಾಹಿತಿ..!
ಒಂದು ರಾಷ್ಟ್ರ, ಒಂದು ಚುನಾವಣೆ ಬಿಲ್ ಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತು ರಾಮನಾಥ್ ಕೋವಿಂದ್ ಸಮಿತಿ ಸಲ್ಲಿಸಿರುವ ವರದಿಗೆ ಸಂಪುಟದ ಒಪ್ಪಿಗೆ ದೊರೆತಿದೆ. ಎನ್ ಡಿ ಎ ಸರ್ಕಾರವು (NDA Government) ಈಗ ಮಸೂದೆಯ ಬಗ್ಗೆ ಒಮ್ಮತವನ್ನು ಸಾಧಿಸಲು ಮತ್ತು ವಿಸ್ತೃತ ಚರ್ಚೆಗಾಗಿ ಸಂಸತ್ತಿನ ಜಂಟಿ ಸಮಿತಿಗೆ ಕಳುಹಿಸಲು ಯೋಜಿಸಿದೆ.
ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿರುವ ‘ಒಂದು ರಾಷ್ಟ್ರ, ಒಂದು ಚುನಾವಣೆ’ ನೀತಿಯು ಲೋಕಸಭೆ (Loksabha) ಚುನಾವಣೆಯನ್ನು ರಾಜ್ಯ ವಿಧಾನಸಭೆ ಚುನಾವಣೆಗಳು ಮತ್ತು ದೇಶದ ಸ್ಥಳೀಯ ಸಂಸ್ಥೆಗಳ ಚುನಾವಣೆಗಳೊಂದಿಗೆ ನಡೆಸುವ ಗುರಿ ಹೊಂದಿದೆ. ಇದರ ಬಗ್ಗೆ ಇನ್ನಷ್ಟು ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ದೇಶಾದ್ಯಾಂತ ಒಂದೇ ಸಮಯದಲ್ಲಿ ಲೋಕಸಭೆ, ರಾಜ್ಯ ಸಭೆ, ಮತ್ತು ವಿವಿಧ ರಾಜ್ಯಗಳ ವಿಧಾನಸಭೆಗಳ ಚುನಾವಣೆಗಳನ್ನು ಆಯೋಜಿಸುವ ಗುರಿ :
ಈಗಾಗಲೇ ಒಂದು ರಾಷ್ಟ್ರ, ಒಂದು ಚುನಾವಣೆ (One Nation, One Election) ಎಂಬ ಮಸೂದೆಗೆ ಕೇಂದ್ರ ಸಚಿವ ಸಂಪುಟವು ಅನುಮೋದನೆ ನೀಡಿದೆ. ಈ ಕ್ರಮವು ದೇಶಾದ್ಯಾಂತ ಒಂದೇ ಸಮಯದಲ್ಲಿ ಲೋಕಸಭೆ ಮತ್ತು ರಾಜ್ಯ ಸಭೆ, ಅಥವಾ ರಾಜ್ಯಗಳ ವಿಧಾನಸಭೆಗಳ ಚುನಾವಣೆಗಳನ್ನು ಆಯೋಜಿಸುವ ಗುರಿ ಹೊಂದಿದೆ. ಇದರಿಂದ ಚುನಾವಣೆಗಳನ್ನು (Elections) ಸರಳಗೊಳಿಸುವುದು ಮತ್ತು ಅವಶ್ಯಕತೆ ಇಲ್ಲದ ವೆಚ್ಚವನ್ನು ಕಡಿಮೆ ಮಾಡಬಹುದಾಗಿದೆ. ಈ ಮಸೂದೆಗೆ ಅನುಮೋದನೆ ನೀಡಿದ ನಂತರ, ಅದು ಮುಂದಿನ ಹಂತಗಳಲ್ಲಿ ಸಂಸದೀಯ ಚರ್ಚೆಗೆ ಮತ್ತು ಪಾರ್ಲಿಮೆಂಟ್‌ನಲ್ಲಿ ಮಂಡನೆಗೆ ಸಾಗಲಿದೆ.
ಏಕಕಾಲಿಕ ಚುನಾವಣೆಗಳು ನೀತಿ ಸ್ಥಿರತೆಯನ್ನು ಹೆಚ್ಚಿಸುತ್ತದೆ :
ಕೋವಿಂದ್ ನೇತೃತ್ವದ ಸಮಿತಿಯ ವರದಿಯು ಆಗಾಗ್ಗೆ ಚುನಾವಣೆಗಳ ನ್ಯೂನತೆಗಳನ್ನು ಎತ್ತಿ ತೋರಿಸಿದೆ, ಅವುಗಳು ಆಗಾಗ್ಗೆ ಅನಿಶ್ಚಿತತೆಯ ವಾತಾವರಣವನ್ನು ಸೃಷ್ಟಿಸುತ್ತವೆ ಮತ್ತು ನೀತಿ ನಿರ್ಧಾರಗಳ ಮೇಲೆ ಪರಿಣಾಮ ಬೀರುತ್ತವೆ ಎಂದು ಹೇಳಿದೆ. ಏಕಕಾಲಿಕ ಚುನಾವಣೆಗಳು ನೀತಿ ಸ್ಥಿರತೆಯನ್ನು ಹೆಚ್ಚಿಸುತ್ತದೆ, ಮತದಾರರ ಆಯಾಸವನ್ನು ಕಡಿಮೆ ಮಾಡುತ್ತದೆ ಮತ್ತು ಮತದಾನದ ಪ್ರಮಾಣವನ್ನು ಸುಧಾರಿಸುತ್ತದೆ ಎಂದು ಸಮಿತಿಯ ಸಂಶೋಧನೆಗಳು ಸೂಚಿಸುತ್ತವೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.