ಸರ್ಕಾರದಿಂದ ಗ್ರಾಹಕರಿಗೆ ಗುಡ್ ನ್ಯೂಸ್, ರಿಯಾಯಿತಿ ದರದಲ್ಲಿ ಸರ್ಕಾರದಿಂದ ಈರುಳ್ಳಿ ಮಾರಾಟ ಆರಂಭ, ಇಲ್ಲಿದೆ ಹೆಚ್ಚಿನ ಮಾಹಿತಿ!
ಮಾರ್ಕೆಟ್‌ನಲ್ಲಿ ಈರುಳ್ಳಿ ಬೆಲೆ ಕೇಳಿದರೆ ಕಣ್ಣಲ್ಲಿ ನೀರು ಬರುತ್ತದೆ. ಹೌದು ಈರುಳ್ಳಿ ಸೇರಿದಂತೆ ಈಗಾಗಲೇ ಅನೇಕ ವಸ್ತುಗಳ ಬೆಲೆ ಏರಿಕೆಯಿಂದ ಜನ ತತ್ತರಿಸಿದ್ದಾರೆ. ಕೂಡಲೇ ಸರಕಾರ ಮಧ್ಯಮ ವರ್ಗದ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ಗ್ರಾಹಕರು ಆಗ್ರಹಿಸಿದ್ದಾರೆ. ಈರುಳ್ಳಿ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಪ್ರತಿ ಕೆಜಿ ಈರುಳ್ಳಿ ಬೆಲೆ 65 ರಿಂದ 100 ರೂಪಾಯಿಗಳ ವರೆಗೆ ತಲುಪಿದೆ. ಇಂದು ಗ್ರಾಹಕರು ಕಣ್ಣೀರಿಡುವ ಪರಿಸ್ಥಿತಿ ನಿರ್ಮಾಣವಾಗಿದೆ. ದೀಪಾವಳಿ ಹಬ್ಬದ ವೇಳೆಗೆ ವಸ್ತುಗಳ ಬೆಲೆ ಮತ್ತಷ್ಟು ಹೆಚ್ಚಾಗಿ ಗ್ರಾಹಕರ ಜೇಬಿಗೆ ಕತ್ತರಿ ಬೀಳುವುದು ಮಾತ್ರ ಗ್ಯಾರಂಟಿಯಾಗಿದೆ.
ಅತಿವೃಷ್ಟಿ ಮೊದಲಾದ ಕಾರಣದಿಂದ ಹಲವೆಡೆ ಈರುಳ್ಳಿ ಬೆಳೆ(onion price) ಹಾಳಾಗಿದೆ. ಮಾರುಕಟ್ಟೆಗೆ ಈರುಳ್ಳಿ ಪೂರೈಕೆ ಕಡಿಮೆಯಾಗಿದೆ. ಹೀಗಾಗಿ ದರ ಏರಿಕೆಯಾಗಿದೆ. ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ತಟ್ಟಿದ್ದು, ಆದರೆ ಇದೀಗ ಸ್ವಲ್ಪ ಮಟ್ಟಿಗೆ ಚಿಂತಿಸುವ ಅಗತ್ಯವಿಲ್ಲ. ಯಾಕೆಂದರೆ, ಇದೀಗ ಗ್ರಾಹಕರಿಗೆ ಸರ್ಕಾರದಿಂದ (Governmerate) ಗುಡ್ ನ್ಯೂಸ್ ತಿಳಿದು ಬಂದಿದೆ. ರಿಯಾಯಿತಿ ದರದಲ್ಲಿ ಸರ್ಕಾರದಿಂದ ಈರುಳ್ಳಿ ಮಾರಾಟ ಆರಂಭವಾಗಿದೆ. ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ರಿಯಾಯಿತಿ ದರದಲ್ಲಿ ಸರ್ಕಾರದಿಂದ ಈರುಳ್ಳಿ ಮಾರಾಟ ಆರಂಭ :
ದೇಶಾದ್ಯಂತ ಈರುಳ್ಳಿ ಬೆಲೆ (onion rate) ಏರಿಕೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೆಜಿಗೆ 35 ರೂ. ದರದಲ್ಲಿ ಈರುಳ್ಳಿ ಮಾರಾಟ ಮಾಡಲು ಆರಂಭಿಸಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಈರುಳ್ಳಿ ದರ ಗಗನಕ್ಕೇರಿದ್ದು, ಗುಣಮಟ್ಟ ಆಧರಿಸಿ ಕೆಜಿಗೆ 60 ರಿಂದ 70 ರೂ.ವರೆಗೆ ತಲುಪಿದೆ. ಸರ್ಕಾರದ ಗೋದಾಮಗಳಲ್ಲಿ ಹೆಚ್ಚಿನ ಪ್ರಮಾಣದ ಈರುಳ್ಳಿ (Onion) ಲಭ್ಯವಿರುವ ಹಿನ್ನೆಲೆಯಲ್ಲಿ ಜನಸಾಮಾನ್ಯರ ದರ ಹೆಚ್ಚಳದ ಹೊರೆ ಇಳಿಸಲು ಸರ್ಕಾರ ಕ್ರಮ ಕೈಗೊಂಡಿದ್ದು. ರಿಯಾಯಿತಿ ದರದಲ್ಲಿ ಈರುಳ್ಳಿ ಮಾರಾಟ ಆರಂಭಿಸಿದೆ.
ಒಟ್ಟು 24 ಪ್ರದೇಶಗಳಲ್ಲಿ ವ್ಯಾನ್ ಗಳ ಮೂಲಕ ಈರುಳ್ಳಿ ಮಾರಾಟ :
ಹೈದರಾಬಾದ್, ಬೆಂಗಳೂರು, ಚೆನ್ನೈ, ಕೊಲ್ಕತ್ತಾ, ಭುವನೇಶ್ವರ, ಅಹ್ಮದಾಬಾದ್ ನಲ್ಲಿ ಮುಂದಿನ ವಾರದಿಂದ ಆನ್ಲೈನ್ ಮೂಲಕ ಈರುಳ್ಳಿ ಮಾರಾಟ ಆರಂಭವಾಗಲಿದೆ. ಭಾರತ ರಾಷ್ಟ್ರೀಯ ಸಹಕಾರ ಗ್ರಾಹಕ ಒಕ್ಕೂಟ ಪ್ರಸ್ತುತ ದೆಹಲಿ, ಮುಂಬೈ, ನೋಯ್ಡಾ, ಗಾಜಿಯಾಬಾದ್ ಭಾಗದ ಒಟ್ಟು 24 ಪ್ರದೇಶಗಳಲ್ಲಿ (24 Places) ಮೊಬೈಲ್ ವ್ಯಾನ್ ಗಳ ಮೂಲಕ ಈರುಳ್ಳಿ ಮಾರಾಟ ಮಾಡಲಾಗುತ್ತಿದೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ