Gruhalakshmi – ಹಣ ವರ್ಗಾವಣೆಯಲ್ಲಿ ದೊಡ್ಡ ಬದಲಾವಣೆ – ಪಿಂಕ್ ಸ್ಮಾರ್ಟ್ ಕಾರ್ಡ್ ಇದ್ದವರ ಖಾತೆಗೆ ಬೀಳಲಿದೆ 2000 ರೂಪಾಯಿ👇👇

WhatsApp Image 2023 08 11 at 5.57.11 AM

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೃಹಲಕ್ಷ್ಮಿ ಯೋಜನೆಯ(Gruha Lakshmi Scheme) ಹಣ ಯಾವ ದಿನಾಂಕದಂದು ಖಾತೆಗೆ ಬರಲಿದೆ ಎಂಬುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ಸರ್ಕಾರವು ಗೃಹಲಕ್ಷ್ಮಿ ಯೋಜನೆಯ ಹಣ ವರ್ಗಾವಣೆಗೆ ಹೊಸ ದಿನಾಂಕವನ್ನು ಗೊತ್ತು ಮಾಡಿದೆ. ಏಕೆ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಮಹಿಳೆಯರ ಖಾತೆಗೆ ಜಮಾ ಮಾಡಲು ದಿನಾಂಕವನ್ನು ಮುಂದೂಡಲಾಗುತ್ತಿದೆ?, ಗ್ಯಾರೆಂಟಿಯಾಗಿ ಯಾವ ದಿನದಂದು ಹಣ ಜಮಾ ಆಗುತ್ತದೆ?, ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ಲೇಖನವನ್ನು ಪೂರ್ಣವಾಗಿ ಓದಿ. ಇದೇ ರೀತಿಯ  ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಗೃಹಲಕ್ಷ್ಮಿ ಯೋಜನೆಯ ಹಣ ವರ್ಗಾವಣೆಯ ದಿನಾಂಕ ಮುಂದುಡಿಕೆ :

WhatsApp Image 2023 08 11 at 5.55.18 AM

ಗೃಹ ಲಕ್ಷ್ಮಿ ಯೋಜನೆಯು (Gruha Lakshmi Scheme) ಕರ್ನಾಟಕದ ಸಾವಿರಾರು ಬಡ ಕುಟುಂಬಗಳಿಗೆ ಆರ್ಥಿಕವಾಗಿ ಸಹಕಾರಿಯಾಗಲಿದೆ. ಮಹಿಳೆಯರನ್ನು ಪ್ರೋತ್ಸಾಹಿಸುವ ಮೂಲಕ ಮಹಿಳೆಯರಿಗೆ ಹೆಚ್ಚಿನ ಆರ್ಥಿಕ ಶಕ್ತಿಯನ್ನು ನೀಡಲಿದೆ. ಈ ಯೋಜನೆಯು ಕುಟುಂಬಗಳಿಗೆ ಭದ್ರತೆ ಮತ್ತು ಸ್ಥಿರತೆಯ ಭಾವನೆಯನ್ನು ನೀಡಲಿದೆ. ಇಂತಹ ಉತ್ತಮವಾದ ಯೋಜನೆಗೆ ಈಗಾಗಲೇ ಹಲವಾರು ಮಹಿಳೆಯರು ಅರ್ಜಿಯನ್ನು ಸಲ್ಲಿಸಿದ್ದಾರೆ. ಕಾಂಗ್ರೆಸ್‌ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಯಲ್ಲಿ (Congress Guarantee Scheme) ಒಂದಾಗಿರುವ “ಗೃಹಲಕ್ಷ್ಮಿ” ಯೋಜನೆಗೆ (Gruha Lakshmi Scheme) ಆಗಸ್ಟ್ 27ರಂದು ಬೆಳಗಾವಿಯಲ್ಲಿ ಚಾಲನೆ ನೀಡಲಾಗುವುದು. ಅಂದಿನಿಂದ ಮನೆಯ ಯಜಮಾನಿಯರ ಖಾತೆಗೆ 2000 ರೂಪಾಯಿ ಹಣ ವರ್ಗಾವಣೆಯಾಗಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (DMC DK Shivakumar) ಹೇಳಿದರು.

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿapp download

ಕರ್ನಾಟಕ ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯು ಮಹಿಳಾ ಸಬಲೀಕರಣಕ್ಕಾಗಿ ಮತ್ತು ಅವರ ಜೀವನ ಮಟ್ಟವನ್ನು ಸುಧಾರಿಸಲು ಅಗತ್ಯವಾದ ಬೆಂಬಲವನ್ನು ನೀಡುವ ಗುರಿಯನ್ನು ಹೊಂದಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಇನ್ನು ಇದೆ ತಿಂಗಳು ಆಗಸ್ಟ್ 16, 2023 ರಂದು ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸಲು ನಿರ್ಧಾರವನ್ನು ಮಾಡಿದ್ದರು ಆದರೆ, ವಿಕಾಸಸೌಧದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಗುರುವಾರ (ಆಗಸ್ಟ್‌ 10) ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ನಿರ್ವಹಣಾಧಿಕಾರಿಗಳೊಂದಿಗಿನ ವಿಡಿಯೊ ಸಂವಾದ ನಡೆದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯನ್ನು ಎಐಸಿಸಿ ನಾಯಕಿ ಸೋನಿಯಾ ಗಾಂಧಿ ಅವರನ್ನು ರಾಜ್ಯಕ್ಕೆ ಕರೆಯಿಸಿ ಚಾಲನೆ ನೀಡಲು ಸರ್ಕಾರ ಮುಂದಾಗಿದೆ. ಆದ್ದರಿಂದ ಯೋಜನೆಯ ಜಾರಿ ಒಂದು ವಾರ ಮುಂದಕ್ಕೆ ಹೋಗುವ ಸಾಧ್ಯತೆ ಇದೆ. ಆ.27 ಚಾಲನೆ ನೀಡಿದ ನಂತರ ಡಿ ಬಿ ಟಿ ಮುಖಾಂತರ ಮನೆಯ ಯಜಮಾನಿ ಗೆ ಹಣ ಹಾಕುತ್ತೇವೆ ಎಂದು ತಿಳಿಸಿದ್ದಾರೆ.

ಗೃಹಲಕ್ಷ್ಮಿ ಯೋಜನೆಯ ಪಿಂಕ್ ಸ್ಮಾರ್ಟ್ ಕಾರ್ಡ್ :

ಬೆಂಗಳೂರಿನ ಆಡಳಿತ ಸೌಧ ವಿಕಾಸಸೌಧದಲ್ಲಿ ಗೃಹಲಕ್ಷ್ಮಿ ಯೋಜನೆ ಜಾರಿ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸುದ್ದಿಗೋಷ್ಠಿಯೊಂದಿಗೆ ಮಾತನಾಡಿ, ಇನ್ನು ಮುಂದೆ ಗೃಹಲಕ್ಷ್ಮಿ ಯೋಜನೆಯ ಪಿಂಕ್ ಸ್ಮಾರ್ಟ್ ಕಾರ್ಡ್ ಅನ್ನು ವಿತರಣೆ ಮಾಡಲಾಗುತ್ತದೆ ಎಂದು ತಿಳಿಸಿದರು. ಈ ಪಿಂಕ್ ಸ್ಮಾರ್ಟ್ ಕಾರ್ಡ್ ನಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು, ಉಪಮುಖ್ಯಮಂತ್ರಿಗಳಾದ  ಡಿ.ಕೆ. ಶಿವಕುಮಾರ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಭಾವಚಿತ್ರವಿರುತ್ತದೆ. ಹಾಗೆಯೇ ಆ ಕಾರ್ಡಿನ ಬಣ್ಣ ಪಿಂಕ್ ಆಗಿರುತ್ತದೆ. ಅದರಲ್ಲಿ ಎರಡು ಸಾವಿರ ರೂ. ಎಂದು ನಮೂದಿಸಲಾಗಿರುತ್ತದೆ. ಈ ಪಿಂಕ್ ಸ್ಮಾರ್ಟ್ ಕಾರ್ಡ್ ನ ಮಾದರಿಯನ್ನು ಆಗಸ್ಟ್ 27ರಂದು ಪ್ರಕಟಣೆಯನ್ನು ಮಾಡಲಾಗುತ್ತದೆ.

whatss

ಈ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತದೆ :

ಹಲವಾರು ಜನರಿಗೆ ಈಗಾಗಲೇ ಅನ್ನ ಭಾಗ್ಯ ಯೋಜನೆಯ ಹಣವು ಬಂದಿದೆ. ಬಿಪಿಎಲ್ ಕಾರ್ಡ್ ಹೊಂದಿದ ಮನೆಯ ಯಜಮಾನಿಯಾ ಖಾತೆಗೆ ಯೋಜನೆಯ ಹಣ ಬಂದಿರುತ್ತದೆ ಆದ್ದರಿಂದ ಅದೇ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣವು ಕೂಡ ಬರುತ್ತದೆ. ಗೃಹಲಕ್ಷ್ಮಿ ಯೋಜನೆಯ ಅಧಿಕೃತ ಪ್ರಕಟಣೆಯ ಪ್ರಕಾರ ರೇಷನ್ ಕಾರ್ಡಿನಲ್ಲಿ ಇರುವ ಮನೆಯ ಯಜಮಾನಿಯ ಖಾತೆಗೆ ಹಣ ಜಮಾ ಆಗುತ್ತದೆ. ನಿಮ್ಮ ಆಧಾರ್ ಕಾರ್ಡಿಗೆ ಮ್ಯಾಪಿಂಗ್ ಆಗಿರುವ ಬ್ಯಾಂಕ್ ಖಾತೆಗೆ ಹಣ ಜಮಾ ಆಗುತ್ತದೆ. ಒಂದು ವೇಳೆ ನೀವೇನಾದರೂ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸುವಾಗ ಬೇರೆ ಖಾತೆಯ ಅಕೌಂಟ್ ನಂಬರ್ ಅನ್ನು ಕೊಟ್ಟಿದ್ದರೆ ಆ ಬ್ಯಾಂಕ್ ಖಾತೆಗೆ ಹಣ ಜಮಾವಾಗಲಿದೆ.

ಗೃಹಲಕ್ಷ್ಮಿಯ ಯಜಮಾನಿಯರ ಪಟ್ಟಿ ಬಿಡುಗಡೆ.

ಗೃಹಲಕ್ಷ್ಮಿ ಹಣ ಪಡೆದುಕೊಳ್ಳಲು ಅಗಸ್ಟ ತಿಂಗಳ ಮನೆ ಯಜಮಾನಿಯರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ನಿಮ್ಮ ಹೆಸರಿಗೆ ಚೆಕ್ ಮಾಡಿಕೊಳ್ಳಿ. ಕೆಳಗೆ ಕೊಟ್ಟಿರುವ ನೇರವಾದ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://ahara.kar.nic.in/Home/EServices

ನಿಮ್ಮ ಮೊಬೈಲ್ ಫೋನ ಮುಖಪುಟದ ಎಡಭಾಗದಲ್ಲಿ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ ನಂತರ ಕೆಳಗಡೆ e-Ration card ಸೆಲೆಕ್ಟ್ ಮಾಡಿಕೊಂಡು ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

tel share transformed

rat

ಇಲ್ಲಿ ತೋರಿಸುತ್ತಿರುವ ಬಾಕ್ಸ್ ನಲ್ಲಿ ನಿಮ್ಮ ಜಿಲ್ಲೆ, ತಾಲೂಕು, ಗ್ರಾಮ ಪಂಚಾಯತಿ ಮತ್ತು ಗ್ರಾಮವನ್ನು ಸೆಲೆಕ್ಟ್ ಮಾಡಿ Go ಮೇಲೆ ಕ್ಲಿಕ್ ಮಾಡಿ. ಇಲ್ಲಿ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರ ಯಜಮಾನಿಯರ ಕಂಪ್ಲೀಟ್ ಡೀಟೇಲ್ಸ್ ಕಾಣಿಸುತ್ತದೆ

rat1

ರಾಜ್ಯದ ಎಲ್ಲಾ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿ ಹಣ ಎಂದೂ ಬರುತ್ತದೆ ಎಂದು ಕಾಯುತ್ತಿರುವವರಿಗೆ, ಮಾಹಿತಿಯನ್ನು ನೀಡಿದ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

Picsart 23 07 16 14 24 41 584 transformed 1

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!