ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೃಹಲಕ್ಷ್ಮಿ ಯೋಜನೆಯ(Gruha Lakshmi Scheme) ಪಿಂಕ್ ಸ್ಮಾರ್ಟ್ ಕಾರ್ಡ್(pink smart card) ಕುರಿತು & ಯಾವ ದಿನಾಂಕದಂದು ಖಾತೆಗೆ ಬರಲಿದೆ ಎಂಬುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ಸರ್ಕಾರವು ಗೃಹಲಕ್ಷ್ಮಿ ಯೋಜನೆಯ ಹಣ ವರ್ಗಾವಣೆಗೆ ಹೊಸ ದಿನಾಂಕವನ್ನು ಗೊತ್ತು ಮಾಡಿದೆ. ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿದ ಮಹಿಳೆಯರಿಗೆ ಹೊಸದಾಗಿ ಪಿಂಕ್ ಸ್ಮಾರ್ಟ್ ಕಾರ್ಡ್ ಅನ್ನು ನೀಡುವುದರ ಬಗ್ಗೆ ಡಿ.ಕೆ.ಶಿವಕುಮಾರ್ ಅವರು ಮಾತನಾಡಿದ್ದಾರೆ. ಈ ಪಿಂಕ್ ಸ್ಮಾರ್ಟ್ ಕಾರ್ಡ್ ಅಂದರೆ ಏನು?, ಇದನ್ನು ಯಾವಾಗ ನೀಡಲಾಗುತ್ತದೆ?, ಎಂಬುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ಲೇಖನವನ್ನು ಪೂರ್ಣವಾಗಿ ಓದಿ. ದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಗೃಹಲಕ್ಷ್ಮಿ ಯೋಜನೆಯ ಪಿಂಕ್ ಸ್ಮಾರ್ಟ್ ಕಾರ್ಡ್ :
ಕಾಂಗ್ರೆಸ್ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಯಲ್ಲಿ (Congress Guarantee Scheme) ಒಂದಾಗಿರುವ “ಗೃಹಲಕ್ಷ್ಮಿ” ಯೋಜನೆಗೆ (Gruha Lakshmi Scheme) ಆಗಸ್ಟ್ 27ರಂದು ಬೆಳಗಾವಿಯಲ್ಲಿ ಚಾಲನೆ ನೀಡಲಾಗುವುದು. ಅದೇ ದಿನ ಪಿಂಕ್ ಸ್ಮಾರ್ಟ್ ಕಾರ್ಡ್ ಮಾದರಿಯನ್ನು ಕೂಡ ಪ್ರದರ್ಶನ ಮಾಡಲಾಗುತ್ತದೆ. ಆಗಸ್ಟ್ 27ರಂದು ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಿದ್ದು, ಸೋನಿಯಾ ಗಾಂಧಿ (Sonia Gandhi, ಪ್ರಿಯಾಂಕಾ ಗಾಂಧಿ (Priyanka Gandhi), ರಾಹುಲ್ ಗಾಂಧಿ (Rahul Gandhi) ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjuna Kharge) ಅವರು ಕೂಡ ಈ ಸಮಾರಂಭದಲ್ಲಿ ಹಾಜರಿರುತ್ತಾರೆ. ರಾಜ್ಯದ 11 ಸಾವಿರ ಕಡೆ ಏಕಕಾಲಕ್ಕೆ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಸಿಗಲಿದೆ ಮತ್ತು ಅದೇ ಸಮಯದಲ್ಲಿ ಈ ಪಿಂಕ್ ಕಾರ್ಡ್ ಮಾದರಿಯನ್ನು ಕೂಡ ಪರಿಚಯಿಸಲಿದ್ದಾರೆ.
ಏನೆಲ್ಲಾ ಇರುತ್ತದೆ ಈ ಪಿಂಕ್ ಸ್ಮಾರ್ಟ್ ಕಾರ್ಡ್ ನಲ್ಲಿ?:
ಬೆಂಗಳೂರಿನ ಆಡಳಿತ ಸೌಧ ವಿಕಾಸಸೌಧದಲ್ಲಿ ಗೃಹಲಕ್ಷ್ಮಿ ಯೋಜನೆ ಜಾರಿ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸುದ್ದಿಗೋಷ್ಠಿಯೊಂದಿಗೆ ಮಾತನಾಡಿ, ಇನ್ನು ಮುಂದೆ ಗೃಹಲಕ್ಷ್ಮಿ ಯೋಜನೆಯ ಪಿಂಕ್ ಸ್ಮಾರ್ಟ್ ಕಾರ್ಡ್ ಅನ್ನು ವಿತರಣೆ ಮಾಡಲಾಗುತ್ತದೆ ಎಂದು ತಿಳಿಸಿದರು. ಈ ಪಿಂಕ್ ಸ್ಮಾರ್ಟ್ ಕಾರ್ಡ್ ನಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು, ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಭಾವಚಿತ್ರವಿರುತ್ತದೆ. ಹಾಗೆಯೇ ಆ ಕಾರ್ಡಿನ ಬಣ್ಣ ಪಿಂಕ್ ಆಗಿರುತ್ತದೆ. ಅದರಲ್ಲಿ ಎರಡು ಸಾವಿರ ರೂ. ಎಂದು ನಮೂದಿಸಲಾಗಿರುತ್ತದೆ. ಈ ಪಿಂಕ್ ಸ್ಮಾರ್ಟ್ ಕಾರ್ಡ್ ನ ಮಾದರಿಯನ್ನು ಆಗಸ್ಟ್ 27ರಂದು ಪ್ರಕಟಣೆಯನ್ನು ಮಾಡಲಾಗುತ್ತದೆ.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಈ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತದೆ :
ಹಲವಾರು ಜನರಿಗೆ ಈಗಾಗಲೇ ಅನ್ನ ಭಾಗ್ಯ ಯೋಜನೆಯ ಹಣವು ಬಂದಿದೆ. ಬಿಪಿಎಲ್ ಕಾರ್ಡ್ ಹೊಂದಿದ ಮನೆಯ ಯಜಮಾನಿಯಾ ಖಾತೆಗೆ ಯೋಜನೆಯ ಹಣ ಬಂದಿರುತ್ತದೆ ಆದ್ದರಿಂದ ಅದೇ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣವು ಕೂಡ ಬರುತ್ತದೆ. ಗೃಹಲಕ್ಷ್ಮಿ ಯೋಜನೆಯ ಅಧಿಕೃತ ಪ್ರಕಟಣೆಯ ಪ್ರಕಾರ ರೇಷನ್ ಕಾರ್ಡಿನಲ್ಲಿ ಇರುವ ಮನೆಯ ಯಜಮಾನಿಯ ಖಾತೆಗೆ ಹಣ ಜಮಾ ಆಗುತ್ತದೆ. ನಿಮ್ಮ ಆಧಾರ್ ಕಾರ್ಡಿಗೆ ಮ್ಯಾಪಿಂಗ್ ಆಗಿರುವ ಬ್ಯಾಂಕ್ ಖಾತೆಗೆ ಹಣ ಜಮಾ ಆಗುತ್ತದೆ. ಒಂದು ವೇಳೆ ನೀವೇನಾದರೂ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸುವಾಗ ಬೇರೆ ಖಾತೆಯ ಅಕೌಂಟ್ ನಂಬರ್ ಅನ್ನು ಕೊಟ್ಟಿದ್ದರೆ ಆ ಬ್ಯಾಂಕ್ ಖಾತೆಗೆ ಹಣ ಜಮಾವಾಗಲಿದೆ.
ಗೃಹ ಲಕ್ಷ್ಮಿ ಅರ್ಜಿ ಸ್ಟೇಟಸ್ ಹೀಗೆ ಚೆಕ್ ಮಾಡಿ!
ಹಂತ 1: ಮೊದಲಿಗೆ ರೇಷನ್ ಕಾರ್ಡ್ ನಲ್ಲಿರುವ ಯಜಮಾನಿಯ ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಮೊಬೈಲ್ ಫೋನ್ ಇಂದ 8147500500 ಈ ನಂಬರಿಗೆ ನಿಮ್ಮ ರೇಷನ್ ಕಾರ್ಡ್ ನಂಬರನ್ನು ನೀವು ಮೆಸೇಜ್ ಮಾಡಬೇಕು.
ನಂತರ ಈಗಾಗಲೇ ನೀವು ಅರ್ಜಿ ಸಲ್ಲಿಸಿದರೆ ಕೆಳಗಿನ ರೀತಿ ನಿಮಗೆ ಮರಳಿ ಸಂದೇಶ ಬರುತ್ತದೆ.
ಒಂದು ವೇಳೆ ನೀವು ಅರ್ಜಿ ಸಲ್ಲಿಸದೆ ಇದ್ದಲ್ಲಿ ಅಥವಾ ಅರ್ಜಿ ಸಲ್ಲಿಕೆ ಆಗದೆ ಇದ್ದಲ್ಲಿ ಕೆಳಗಿನ ರೀತಿ ಮರು ಸಂದೇಶ ಬರುತ್ತದೆ. ಹೀಗೆ ಬಂದಾಗ ನೀವು ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕಾಗುತ್ತದೆ
ಇಂತಹ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮೆಲ್ಲ ಸ್ನೇಹಿತ ಮಿತ್ರರಿಗೂ, ಬಂಧುಗಳಿಗೂ, ಮುಖ್ಯವಾಗಿ ಮಹಿಳೆಯರಿಗೂ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ