ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೃಹಲಕ್ಷ್ಮಿ ಯೋಜನೆಯ(Gruha Lakshmi Scheme) ಪಿಂಕ್ ಸ್ಮಾರ್ಟ್ ಕಾರ್ಡ್(pink smart card) ಕುರಿತು ಮಾಹಿತಿಯನ್ನು ನೀಡಲಾಗುತ್ತದೆ. ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿದ ಮಹಿಳೆಯರಿಗೆ ಹೊಸದಾಗಿ ಪಿಂಕ್ ಸ್ಮಾರ್ಟ್ ಕಾರ್ಡ್ ಅನ್ನು ನೀಡುವುದರ ಬಗ್ಗೆ ಡಿ.ಕೆ.ಶಿವಕುಮಾರ್ ಅವರು ಮಾತನಾಡಿದ್ದಾರೆ. ಈ ಪಿಂಕ್ ಸ್ಮಾರ್ಟ್ ಕಾರ್ಡ್ ಅಂದರೆ ಏನು?, ಇದನ್ನು ಯಾವಾಗ ನೀಡಲಾಗುತ್ತದೆ?, ಎಂಬುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ಲೇಖನವನ್ನು ಪೂರ್ಣವಾಗಿ ಓದಿ. ದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಗೃಹಲಕ್ಷ್ಮಿ ಯೋಜನೆಯ ಪಿಂಕ್ ಸ್ಮಾರ್ಟ್ ಕಾರ್ಡ್ :
ಕಾಂಗ್ರೆಸ್ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಯಲ್ಲಿ (Congress Guarantee Scheme) ಒಂದಾಗಿರುವ “ಗೃಹಲಕ್ಷ್ಮಿ” ಯೋಜನೆಗೆ (Gruha Lakshmi Scheme) ಆಗಸ್ಟ್ 27ರಂದು ಬೆಳಗಾವಿಯಲ್ಲಿ ಚಾಲನೆ ನೀಡಲಾಗುವುದು. ಅದೇ ದಿನ ಪಿಂಕ್ ಸ್ಮಾರ್ಟ್ ಕಾರ್ಡ್ ಮಾದರಿಯನ್ನು ಕೂಡ ಪ್ರದರ್ಶನ ಮಾಡಲಾಗುತ್ತದೆ. ಆಗಸ್ಟ್ 27ರಂದು ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಿದ್ದು, ಸೋನಿಯಾ ಗಾಂಧಿ (Sonia Gandhi, ಪ್ರಿಯಾಂಕಾ ಗಾಂಧಿ (Priyanka Gandhi), ರಾಹುಲ್ ಗಾಂಧಿ (Rahul Gandhi) ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjuna Kharge) ಅವರು ಕೂಡ ಈ ಸಮಾರಂಭದಲ್ಲಿ ಹಾಜರಿರುತ್ತಾರೆ. ರಾಜ್ಯದ 11 ಸಾವಿರ ಕಡೆ ಏಕಕಾಲಕ್ಕೆ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಸಿಗಲಿದೆ ಮತ್ತು ಅದೇ ಸಮಯದಲ್ಲಿ ಈ ಪಿಂಕ್ ಕಾರ್ಡ್ ಮಾದರಿಯನ್ನು ಕೂಡ ಪರಿಚಯಿಸಲಿದ್ದಾರೆ.
ಏನೆಲ್ಲಾ ಇರುತ್ತದೆ ಈ ಪಿಂಕ್ ಸ್ಮಾರ್ಟ್ ಕಾರ್ಡ್ ನಲ್ಲಿ?:
ಬೆಂಗಳೂರಿನ ಆಡಳಿತ ಸೌಧ ವಿಕಾಸಸೌಧದಲ್ಲಿ ಗೃಹಲಕ್ಷ್ಮಿ ಯೋಜನೆ ಜಾರಿ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸುದ್ದಿಗೋಷ್ಠಿಯೊಂದಿಗೆ ಮಾತನಾಡಿ, ಇನ್ನು ಮುಂದೆ ಗೃಹಲಕ್ಷ್ಮಿ ಯೋಜನೆಯ ಪಿಂಕ್ ಸ್ಮಾರ್ಟ್ ಕಾರ್ಡ್ ಅನ್ನು ವಿತರಣೆ ಮಾಡಲಾಗುತ್ತದೆ ಎಂದು ತಿಳಿಸಿದರು. ಈ ಪಿಂಕ್ ಸ್ಮಾರ್ಟ್ ಕಾರ್ಡ್ ನಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು, ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಭಾವಚಿತ್ರವಿರುತ್ತದೆ. ಹಾಗೆಯೇ ಆ ಕಾರ್ಡಿನ ಬಣ್ಣ ಪಿಂಕ್ ಆಗಿರುತ್ತದೆ. ಅದರಲ್ಲಿ ಎರಡು ಸಾವಿರ ರೂ. ಎಂದು ನಮೂದಿಸಲಾಗಿರುತ್ತದೆ. ಈ ಪಿಂಕ್ ಸ್ಮಾರ್ಟ್ ಕಾರ್ಡ್ ನ ಮಾದರಿಯನ್ನು ಆಗಸ್ಟ್ 27ರಂದು ಪ್ರಕಟಣೆಯನ್ನು ಮಾಡಲಾಗುತ್ತದೆ.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಗೃಹಲಕ್ಷ್ಮಿ ಯೋಜನೆಯ ಜಾರಿಯ ಬಗ್ಗೆ ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಯೋಜನೆಯ ಜಾರಿಯ ಸಮಾರಂಭವನ್ನು ಮಾಡುವುದು ನನ್ನ ಕನಸಾಗಿತ್ತು ಎಂದು ತಮ್ಮ ಹರ್ಷವನ್ನು ವ್ಯಕ್ತಪಡಿಸಿದ್ದಾರೆ. ಹಾಗೆಯೇ ಈ ಗೃಹಲಕ್ಷ್ಮಿ ಯೋಜನೆಗೆ ಇನ್ನು ಯಾರಾದರೂ ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್ ಇಲ್ಲದೆ ಅರ್ಜಿಯನ್ನು ಸಲ್ಲಿಸದಿದ್ದರೆ, ರೇಷನ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಸಿ ಅದನ್ನು ಪಡೆದುಕೊಂಡ ನಂತರ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕವನ್ನು ನಿಗದಿಪಡಿಸಿಲ್ಲ, ಇದೊಂದು ನಿರಂತರ ಪ್ರಕ್ರಿಯೆ ಎಂದು ತಿಳಿಸಿದರು.
ಗೃಹಲಕ್ಷ್ಮಿಯ ಪಿಂಕ್ ಸ್ಮಾರ್ಟ್ ಕಾರ್ಡ್ ಯಜಮಾನಿಯರ ಪಟ್ಟಿ ಬಿಡುಗಡೆ.
ಗೃಹಲಕ್ಷ್ಮಿ ಹಣ ಪಡೆದುಕೊಳ್ಳಲು ಅಗಸ್ಟ ತಿಂಗಳ ಮನೆ ಯಜಮಾನಿಯರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ನಿಮ್ಮ ಹೆಸರಿಗೆ ಚೆಕ್ ಮಾಡಿಕೊಳ್ಳಿ. ಕೆಳಗೆ ಕೊಟ್ಟಿರುವ ನೇರವಾದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://ahara.kar.nic.in/Home/EServices
ನಿಮ್ಮ ಮೊಬೈಲ್ ಫೋನ ಮುಖಪುಟದ ಎಡಭಾಗದಲ್ಲಿ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ ನಂತರ ಕೆಳಗಡೆ e-Ration card ಸೆಲೆಕ್ಟ್ ಮಾಡಿಕೊಂಡು ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ
ಇಲ್ಲಿ ತೋರಿಸುತ್ತಿರುವ ಬಾಕ್ಸ್ ನಲ್ಲಿ ನಿಮ್ಮ ಜಿಲ್ಲೆ, ತಾಲೂಕು, ಗ್ರಾಮ ಪಂಚಾಯತಿ ಮತ್ತು ಗ್ರಾಮವನ್ನು ಸೆಲೆಕ್ಟ್ ಮಾಡಿ Go ಮೇಲೆ ಕ್ಲಿಕ್ ಮಾಡಿ. ಇಲ್ಲಿ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರ ಯಜಮಾನಿಯರ ಕಂಪ್ಲೀಟ್ ಡೀಟೇಲ್ಸ್ ಕಾಣಿಸುತ್ತದೆ
ಇಂತಹ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮೆಲ್ಲ ಸ್ನೇಹಿತ ಮಿತ್ರರಿಗೂ, ಬಂಧುಗಳಿಗೂ, ಮುಖ್ಯವಾಗಿ ಮಹಿಳೆಯರಿಗೂ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ