Govt Scheme: ಆಯುಷ್ಮಾನ್ ವಯ ವಂದನ ಕಾರ್ಡ್‌ ಪಡೆಯುವುದು ಹೇಗೆ? ಉಚಿತ ಚಿಕಿತ್ಸೆ

IMG 20241106 WA0003

ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್, ಪಡೆಯಿರಿ ಉಚಿತ ಚಿಕಿತ್ಸೆ, ಆಯುಷ್ಮಾನ್ ವಯ ವಂದನ ಕಾರ್ಡ್‌ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ…! ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಆರೋಗ್ಯವೇ ಭಾಗ್ಯ ಎಂಬ ಮಾತಿದೆ, ನಮ್ಮ ಆರೋಗ್ಯ ಸರಿಯಾಗಿದ್ದರೆ  ನಾವು ಯಾವುದೇ ಕೆಲಸ ಕಾರ್ಯಗಳನ್ನು ಮಾಡಲು ನಮ್ಮಲ್ಲಿ ಹುಮ್ಮಸು ಇರುತ್ತದೆ. ಹೊಸ ಚೈತನ್ಯ ನಮ್ಮಲ್ಲಿ ಇರುತ್ತದೆ. ನಮ್ಮ ದೇಶದಲ್ಲಿ ಎಲ್ಲರೂ ಆರೋಗ್ಯದಿಂದಿದ್ದರೆ ಮಾತ್ರ ಜಾಗತಿಕ ಸ್ಪರ್ಧೆಯಲ್ಲಿ ಭಾರತ ದೇಶ ಪಾಲ್ಗೊಳ್ಳಲು ಸಹಾಯವಾಗುತ್ತದೆ. ದೇಶದಲ್ಲಿ ಸರ್ಕಾರವು (Government) ಹಲವಾರು  ಯೋಜನೆಗಳನ್ನು ರೂಪಿಸಿದ್ದು, ಈ ಯೋಜನೆಗಳಿಂದ ಜನರಿಗೆ ಬಹಳ ಉಪಯೋಗವಾಗಿದೆ.

ಆಯುಷ್ಮಾನ್ ಭಾರತ್ ಪ್ರಧಾನ್ ಮಂತ್ರಿ ಜನ ಆರೋಗ್ಯ ಯೋಜನೆ :

ಸರ್ಕಾರದ ಹಲವಾರು ಯೋಜನೆಗಳಲ್ಲಿ ಮುಖ್ಯವಾಗಿ ಆಯುಷ್ಮಾನ್ ಭಾರತ್ ಪ್ರಧಾನ್ ಮಂತ್ರಿ ಜನ ಆರೋಗ್ಯ ಯೋಜನೆ (Ayushman Bharat Pradhan Mantri Jan Arogya Yojana) ಕೂಡ ಒಂದು. ಈ ಯೋಜನೆ ಅಡಿಯಲ್ಲಿ ಎಲ್ಲ ವರ್ಗದ ಜನರು ಇದರ ಉಪಯೋಗವನ್ನು ಪಡೆಯುತ್ತಿದ್ದಾರೆ. ಹಾಗೆಯೇ ಇದರಲ್ಲಿ ಹಿರಿಯ ನಾಗರಿಕರಿಗಾಗಿ (Senior citizens) ಆಯುಷ್ಮಾನ್ ವಯ ವಂದನಾ ಕಾರ್ಡ್ (Ayushman Vaya Vandana Card) ಅನ್ನು ಕೂಡ ಪರಿಚಯಿಸಲಾಗಿದೆ. ಈ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.

ಶೇ. 40ರಷ್ಟು ಮಂದಿಗೆ ಆರೋಗ್ಯ ವಿಮಾ ರಕ್ಷಣೆ ವಿಸ್ತರಿಸುವ ಗುರಿ ಹಾಗೂ 70 ಮೇಲ್ಪಟ್ಟ ವಯಸ್ಸಿನ ವ್ಯಕ್ತಿಗಳಿಗೆ ಆರೋಗ್ಯ ರಕ್ಷಣೆ ಕಾರ್ಯಕ್ರಮ :

ಹೌದು, ಇಂದು ಎಲ್ಲರೂ ತಮ್ಮ ತಮ್ಮ ಅರೋಗ್ಯವನ್ನು ಕಾಪಾಡಿಕೊಂಡು ನೆಮ್ಮದಿಯ ಜೀವನ ನಡೆಸಬೇಕು. ಹಾಗಾಗಿ ಸರ್ಕಾರವು, ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯು ಭಾರತೀಯ ಜನಸಂಖ್ಯೆಯ ಶೇ. 40ರಷ್ಟು ಮಂದಿಗೆ ಆರೋಗ್ಯ ವಿಮಾ ರಕ್ಷಣೆಯನ್ನು ವಿಸ್ತರಿಸುವ ಗುರಿಯನ್ನು ಹೊಂದಿದೆ. ಅಷ್ಟೇ ಅಲ್ಲದೆ, ಆಯುಷ್ಮಾನ್ ಭಾರತ್ ಪ್ರಧಾನ್ ಮಂತ್ರಿ ಜನ ಆರೋಗ್ಯ ಯೋಜನೆಯ ಮೂಲಕ ಕೇಂದ್ರ ಸರ್ಕಾರವು 70 ಮತ್ತು ಅದಕ್ಕಿಂತ ಮೇಲ್ಪಟ್ಟ (Above 70 Years) ವಯಸ್ಸಿನ ವ್ಯಕ್ತಿಗಳಿಗೆ (ayushman bharat for senior citizens) ಅವರ ಆದಾಯವನ್ನು ಲೆಕ್ಕಿಸದೆ ಆರೋಗ್ಯ ರಕ್ಷಣೆ ಕಾರ್ಯಕ್ರಮವನ್ನು ವಿಸ್ತರಿಸಿದೆ. ಈ ಯೋಜನೆಯಡಿಯಲ್ಲಿ ದೇಶಾದ್ಯಂತ 70 ಮತ್ತು ಅದಕ್ಕಿಂತ ಮೇಲ್ಪಟ್ಟ ವಯಸ್ಸಿನ ಹಿರಿಯ ನಾಗರಿಕರು ಅಗತ್ಯ ಆಸ್ಪತ್ರೆ ಚಿಕಿತ್ಸೆಗೆ ಅರ್ಹರಾಗಿರುತ್ತಾರೆ.

ಆಯುಷ್ಮಾನ್ ವಯ ವಂದನ ಕಾರ್ಡ್ ಮೂಲಕ 5 ಲಕ್ಷ ರೂ. ವರೆಗೆ ಉಚಿತ ವೈದ್ಯಕೀಯ ಸೇವೆಗಳನ್ನು ಪಡೆಯಬಹುದು :

ಹೌದು, ಸರ್ಕಾರವು ಆಯುಷ್ಮಾನ್ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್ ನೀಡಿದ್ದು,  ಆಯುಷ್ಮಾನ್ ವಯ ವಂದನ ಕಾರ್ಡ್ 2024 ಅನ್ನು ಹೊಂದಿರುವ ಯಾವುದೇ ವ್ಯಕ್ತಿಯು ಅಕ್ಟೋಬರ್ 29 ರಿಂದ ಅಯುಷ್ಮಾನ್ ಭರತ್ ಪಿಎಂ-ಜೆಎವೈ ಗೆ ಸಂಯೋಜಿತವಾಗಿರುವ ಯಾವುದೇ ಆಸ್ಪತ್ರೆಯಲ್ಲಿ 5 ಲಕ್ಷ ರೂ. ವರೆಗಿನ ಉಚಿತ ವೈದ್ಯಕೀಯ ಸೇವೆಗಳನ್ನು (Free Medical Services) ಪಡೆಯಬಹುದಾಗಿದೆ.

ಆಯುಷ್ಮಾನ್ ವಯ ವಂದನಾ ಕಾರ್ಡ್‌ ಪಡೆಯಲು ಇರಬೇಕಾದ ಅರ್ಹತೆ (Qualifications) ?

ಆಯುಷ್ಮಾನ್ ವಯ ವಂದನಾ ಕಾರ್ಡ್‌ ಪಡೆಯಲು ಅರ್ಜಿದಾರರು ಭಾರತದ ಪ್ರಜೆಯಾಗಿರಬೇಕು.
ಮುಖ್ಯವಾಗಿ 70 ವರ್ಷಕ್ಕಿಂತ ಮೇಲ್ಪಟ್ಟವರಾಗಿರಬೇಕು. ಆದರೆ ಈ ಯೋಜನೆಗೆ ಯಾವುದೇ ಆದಾಯದ ಮಾನದಂಡಗಳು ಇರುವುದಿಲ್ಲ.

ಆಯುಷ್ಮಾನ್ ವಯ ವಂದನಾ ಕಾರ್ಡ್‌ ಪಡೆಯಲು ಬೇಕಾಗುವ ದಾಖಲೆಗಳು (Documents) :

ಆಧಾರ್ ಕಾರ್ಡ್
ಮೊಬೈಲ್ ಸಂಖ್ಯೆ
ಇಮೇಲ್ ಐಡಿ
ವಯಸ್ಸಿನ ಪುರಾವೆ
ಕೆವೈಸಿ ದಾಖಲೆಗಳು

ಆಯುಷ್ಮಾನ್ ವಯ ವಂದನಾ ಕಾರ್ಡ್‌ಗೆ ಆನ್‌ಲೈನ್ (Online) ಅಥವಾ ಆಫ್‌ಲೈನ್‌ (Offline) ಮೂಲಕ ಅರ್ಜಿ ಸಲ್ಲಿಸಬಹುದು :
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ?

ಹಂತ 1: ಮೊದಲು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದ ವೆಬ್ ಸೈಟ್ ಗೆ ಭೇಟಿ ನೀಡಿ.
ಹಂತ 2: ಅಲ್ಲಿರುವ ಆಯುಷ್ಮಾನ್ ವಯ ವಂದನಾ ಕಾರ್ಡ್ ಅಪ್ಲಿಕೇಶನ್ ಅನ್ನು ಭರ್ತಿ ಮಾಡಿ.
ಹಂತ 3: ಇದರ ದೃಢೀಕರಣಕ್ಕಾಗಿ ಒಟಿಪಿ ಪಡೆಯಲು ಮೊಬೈಲ್ ಸಂಖ್ಯೆಯನ್ನು ನಮೂದಿಸಿ.
ಹಂತ 4: ಬಳಿಕ ರಾಜ್ಯ, ಜಿಲ್ಲೆ, ಆಧಾರ್ ಸಂಖ್ಯೆ, ಪಿಎಂಜೆಎವೈ ಕಾರ್ಯಕ್ರಮದ ಹೆಸರು, ಪಿಎಂಜೆಎವೈ ಐಡಿ ಅಥವಾ ಕುಟುಂಬ ಐಡಿಯಂತಹ ನಿರ್ದಿಷ್ಟ ವಿವರಗಳನ್ನು ನಮೂದಿಸಿ.
ಹಂತ 5: ಬಳಿಕ ಕೆವೈಸಿ ಮಾಹಿತಿಗಳನ್ನು ಪೂರೈಸಿ. ಇತ್ತೀಚಿನ ಛಾಯಾಚಿತ್ರವನ್ನು ಅಪ್‌ಲೋಡ್ ಮಾಡಲು ಆಧಾರ್ ಒಟಿಪಿ ಅನ್ನು ಬಳಸಿ.
ಹಂತ 6: ಅನಂತರ ಕೇಳುವ ಗ್ರಾಮ, ಜಿಲ್ಲೆ, ಪಿನ್ ಕೋಡ್, ಮೊಬೈಲ್ ಸಂಖ್ಯೆ ಮತ್ತು ಜನ್ಮ ದಿನಾಂಕದಂತಹ ಹೆಚ್ಚುವರಿ ವಿವರಗಳನ್ನು ಸೇರಿಸಿ.
ಹಂತ 7: ಎಲ್ಲಾ ಮಾಹಿತಿಯನ್ನು ನಮೂದಿಸಿದ ಅನಂತರ ಅರ್ಜಿಯನ್ನು ಅಂತಿಮಗೊಳಿಸಲು “ಸಲ್ಲಿಸು” ಮೇಲೆ ಕ್ಲಿಕ್ ಮಾಡಿ.
ಹಂತ 8: ಬಳಿಕ ಅನುಮೋದಿಸಿದ ಅನಂತರ ಅದನ್ನು ಡೌನ್‌ಲೋಡ್ ಮಾಡಿ ಬಳಸಿಕೊಳ್ಳಬಹುದು.

ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ?

ಆಯುಷ್ಮಾನ್ ವಯ ವಂದನಾ ಕಾರ್ಡ್‌ ಅನ್ನು ಆಫ್‌ಲೈನ್ ಮೂಲಕವೂ ಪಡೆದುಕೊಳ್ಳಬಹುದು. ಇದಕ್ಕಾಗಿ ಹತ್ತಿರದ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ (HWC) ಅಥವಾ ಸಾಮಾನ್ಯ ಸೇವಾ ಕೇಂದ್ರಕ್ಕೆ (CSC) ಭೇಟಿ ನೀಡಿ. ಅಲ್ಲಿ ಗುರುತಿನ ಪರಿಶೀಲನೆಗಾಗಿ ಪಡಿತರ ಚೀಟಿಯಂತಹ ಕುಟುಂಬ ಸಂಬಂಧಿತ ಪುರಾವೆಗಳನ್ನು ಒದಗಿಸಿ. ಆಧಾರ್ ಕಾರ್ಡ್‌ (Adhar Card) ನಂತಹ ಅಗತ್ಯ ದಾಖಲೆಗಳನ್ನು ಸಲ್ಲಿಸಿ. ನೋಂದಣಿ ಸಮಯದಲ್ಲಿ ಗುರುತಿನ ನಿಖರವಾದ ಪರಿಶೀಲನೆಗೆ ಯುಐಡಿ ಕಾರ್ಡ್ ಬಳಸಿ ಬಯೋಮೆಟ್ರಿಕ್ (Biometric) ದೃಢೀಕರಣವನ್ನು ನಡೆಸಲಾಗುತ್ತದೆ. ಇದಾದ ನಂತರ ನೀವು ಆಯುಷ್ಮಾನ್ ವಯ ವಂದನಾ ಕಾರ್ಡ್‌ ಅನ್ನು ಅಲ್ಲಿಯೇ ಪಡೆದುಕೊಳ್ಳಬಹುದು.

ಈ ಮಾಹಿತಿಗಳನ್ನು ಓದಿ

 

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

 

 

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!