ಸರ್ಕಾರದಿಂದ ರೈತರಿಗೆ ಸಿಹಿ ಸುದ್ದಿ, ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರ ಖಾತೆಗೆ ಜಮಾ ಆಗಲಿದೆ 2,000 ರೂ.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ (PM-Kisan Yojana) ಒಂದು ಸರ್ಕಾರಿ ಯೋಜನೆಯಾಗಿದ್ದು, ಇದರ ಮೂಲಕ ಎಲ್ಲಾ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಕನಿಷ್ಠ ಆದಾಯ ಬೆಂಬಲವಾಗಿ ಈ ಯೋಜನೆಯಡಿ ಕೇಂದ್ರವು ಪ್ರತಿ ವರ್ಷ ರೈತರಿಗೆ 3 ಕಂತುಗಳಲ್ಲಿ 6,000 ರೂ. ನೀಡುತ್ತದೆ. ಈ ಯೋಜನೆಯು ಭಾರತದಲ್ಲಿ ಭೂ ಹಿಡುವಳಿಯ ಗಾತ್ರವನ್ನು ಲೆಕ್ಕಿಸದೆ 125 ಮಿಲಿಯನ್ ರೈತರನ್ನು ಒಳಗೊಳ್ಳುವ ಗುರಿಯನ್ನು ಹೊಂದಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಉದ್ದೇಶ :
ಕೃಷಿಯು (agriculture) ಭಾರತದ ಆರ್ಥಿಕತೆಯ ಒಂದು ಭಾಗವಾಗಿದ್ದು, ರೈತರು ದೇಶದ ಬೆನ್ನೆಲುಬು. ಇಂದಿನ ಕಾಲಘಟ್ಟದಲ್ಲಿ ರೈತರು ಬಹಳ ಕಷ್ಟ ಪಾಡುಗಳನ್ನು ಎದುರಿಸುತ್ತಿದ್ದಾರೆ. ದೇಶದಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳ ನಡುವೆ ಪ್ರಚಲಿತದಲ್ಲಿರುವ ಸಾಮಾಜಿಕ-ಆರ್ಥಿಕ ಅಸಮಾನತೆಗಳಿಂದಾಗಿ, ಕೃಷಿ ಸಮುದಾಯಗಳು ಸಾಮಾನ್ಯವಾಗಿ ಆರ್ಥಿಕತೆ, ಮತ್ತು ಇತರೆ ಸೌಲಭ್ಯಗಳಿಂದ ಕಷ್ಟ ಅನುಭವಿಸುವಂತಾಗಿದೆ. ಇಂತಹ ಹಲವಾರು ಸಮಸ್ಯೆಗಳನ್ನು ಪರಿಹರಿಸಿ ರೈತರಿಗೆ ಆರ್ಥಿಕವಾಗಿ ನೆರವನ್ನು ನೀಡುವುದು ಈ ಯೋಜನೆಯ ಉದ್ದೇಶವಾಗಿದೆ.
ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಲ್ಲಿ 18ನೇ ಕಂತಿನ ಹಣ ಬಿಡುಗಡೆ :
ಇದೀಗ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರ ಸರ್ಕಾರವು (Central government) 18ನೇ ಕಂತಿನ ಹಣ ಬಿಡುಗಡೆ ಮಾಡುವ ಸಾಧ್ಯತೆ ಇದೆ. ದೇಶಾದ್ಯಂತ ಸುಮಾರು 9 ಕೋಟಿ ರೈತರ ಖಾತೆಗಳಿಗೆ 2 ಸಾವಿರ ರೂ. ಹಾಕಲಾಗುತ್ತಿದೆ. ಅ.5 ಅಂದರೆ ಇಂದು ಮಹಾರಾಷ್ಟ್ರದ ವಾಶಿಮ್‌ನಿಂದ ಪ್ರಧಾನಿಯವರು ಹಣ ಜಮಾಕ್ಕೆ ಚಾಲನೆ ನೀಡಲಿದ್ದಾರೆ.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 18ನೇ ಕಂತನ್ನು ಪಡೆಯಲು ಇ-ಕೆವೈಸಿ (e-KYC) ಕಡ್ಡಾಯ :
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ (PM Kisan) ಮೂಲಕ ಸರ್ಕಾರವು ದೇಶದ ರೈತರಿಗೆ ಆರ್ಥಿಕವಾಗಿ ಸಹಾಯ ಮಾಡುತ್ತಿದೆ. ಸರ್ಕಾರವು (government) ಒಂದು ವರ್ಷದಲ್ಲಿ ರೈತರಿಗೆ 6000 ರೂಪಾಯಿಗಳನ್ನು ನೀಡುತ್ತಿದೆ. ಮತ್ತು ಈ ಮೊತ್ತವು ಅವರ ಖಾತೆಗೆ ತಲಾ 2000 ರೂಪಾಯಿಯಂತೆ ಮೂರು ಕಂತುಗಳಲ್ಲಿ ತಲುಪುತ್ತದೆ. ಇದುವರೆಗೆ ಸರಕಾರ ಈ ಯೋಜನೆಯ ಮೂಲಕ 17ನೇ ಕಂತು ಬಿಡುಗಡೆ ಮಾಡಿದೆ. ರೈತ ಈಗ 18ನೇ ಕಂತಿನ ನಿರೀಕ್ಷೆಯಲ್ಲಿದ್ದಾರೆ. ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಲ್ಲಿ (Pradhan manthri kisan sammana yojana) ಒಳಗೊಂಡಿರುವ ರೈತರು ಇ-ಕೆವೈಸಿಯನ್ನು ಇನ್ನೂ ಮಾಡದಿದ್ದರೆ, ಈ ಕೆಲಸವನ್ನು ಪೂರ್ಣಗೊಳಿಸಿ, ಇಲ್ಲದಿದ್ದರೆ 18ನೇ ಕಂತಿನ ಹಣವನ್ನು ಪಡೆಯಲು ಸಾಧ್ಯವಾಗುವುದಿಲ್ಲ.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಗಾಗಿ ನೋಂದಾಯಿಸಲು ಸಲ್ಲಿಸಬೇಕಾದ ದಾಖಲೆಗಳು (Documents) :
ಆಧಾರ್ ಕಾರ್ಡ್
ಪೌರತ್ವದ ಪುರಾವೆ
ಭೂಮಿಯ ಮಾಲೀಕತ್ವವನ್ನು ದೃಢೀಕರಿಸುವ ದಾಖಲೆಗಳು
ಬ್ಯಾಂಕ್ ಖಾತೆಯ ವಿವರಗಳು
ವ್ಯಕ್ತಿಗಳು ಆನ್‌ಲೈನ್‌ನಲ್ಲಿ ನೋಂದಾಯಿಸುತ್ತಿದ್ದರೆ ಅಂತಹ ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಒದಗಿಸಬೇಕಾಗುತ್ತದೆ.
ಫಲಾನುಭವಿಗಳ ಪಟ್ಟಿಯಲ್ಲಿ ಹೆಸರು ಪರಿಶೀಲನೆ ಮಾಡುವುದು ಹೇಗೆ?
ಹಂತ 1: ಪಿಎಂ ಕಿಸಾನ್ ಅಧಿಕೃತ ವೆಬ್‌ಸೈಟ್ www.pmkisan.gov.in ಗೆ ಭೇಟಿ ನೀಡಬೇಕು.
ಹಂತ 2: ನಂತರ ಪಲಾನುಭವಿಗಳ ಪಟ್ಟಿ ಟ್ಯಾಬ್ ಮೇಲೆ ಕ್ಲಿಕ್ ಮಾಡಿ.
ಹಂತ 3: ಬಳಿಕ ಡ್ರಾಪ್-ಡೌನ್‌ನಿಂದ ಆಯ್ದ ರಾಜ್ಯ, ಜಿಲ್ಲೆ, ಉಪ-ಜಿಲ್ಲೆ, ಬ್ಲಾಕ್ ಮತ್ತು ಹಳ್ಳಿಯಂತಹ ವಿವರಗಳನ್ನು ಆಯ್ಕೆ ಮಾಡಿ.
ಹಂತ 4: ಗೆಟ್ ರಿಪೋರ್ಟ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿದರೆ ಫಲಾನುಭವಿಗಳ ಪಟ್ಟಿಯ ವಿವರ ಸಿಗುತ್ತದೆ.
ಗಮನಿಸಿ (notice) :
ಈ ಮಾಹಿತಿಗಳನ್ನು ಸಹಾಯವಾಣಿ ಸಂಖ್ಯೆಗಳಿಗೆ ಕರೆ ಮಾಡಿಯೂ ತಿಳಿದುಕೊಳ್ಳಬಹುದು. ಸಹಾಯವಾಣಿ ಸಂಖ್ಯೆ – 155261 2 011-24300606 ಆಗಿದೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ