ಸ್ಥಳೀಯ ಸಣ್ಣ ಉದ್ಯಮಗಳು ಮತ್ತು ನುರಿತ ಕುಶಲಕರ್ಮಿಗಳಿಗೆ ಸಹಾಯ ಮಾಡಲು ವಿಶ್ವಕರ್ಮ ಯೋಜನೆಯನ್ನು ಭಾರತ ಸರ್ಕಾರವು ಜಾರಿಗೊಳಿಸಿದೆ. ಈ ಯೋಜನೆಯಡಿ ಕುಶಲಕರ್ಮಿಗಳಿಗೆ ಪಿ.ಎಂ. ವಿಶ್ವಕರ್ಮ ಪ್ರಮಾಣ ಪತ್ರ, ಉಪಕರಣಗಳಿಗೆ ಪ್ರೋತ್ಸಾಹ ಧನ,ಕ್ರೆಡಿಟ್ ಸೌಲಭ್ಯ, ಐ.ಡಿ ಕಾರ್ಡ್, ಕೌಶಲ್ಯಾಭಿವೃದ್ಧಿ, ಡಿಜಿಟಲ್ ವ್ಯವಹಾರಕ್ಕೆ ಪ್ರೋತ್ಸಾಹ ಹಾಗೂ ಮಾರುಕಟ್ಟೆ ಬೆಂಬಲ ಸೌಲಭ್ಯಗಳಂತಹ ಸವಲತ್ತುಗಳನ್ನು ನೀಡಲಾಗುತ್ತದೆ.
ಪಿ.ಎಂ ವಿಶ್ವಕರ್ಮ – PM Vishwakarma Yojana
ದೇಶಾದ್ಯಂತ ಸಾಂಪ್ರದಾಯಿಕ ಕುಶಲಕರ್ಮಿಗಳು ಮತ್ತು ಸ್ಥಳೀಯ ಕುಶಲಕರ್ಮಿಗಳಿಗೆ ಪ್ರೋತ್ಸಾಹಿಸಲು ಪಿಎಂ ವಿಶ್ವಕರ್ಮ ಯೋಜನೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಅವರು ಆಗಸ್ಟ್ 15 2023 ರಂದು ಘೋಷಿಸಿದರು. ಮತ್ತು ಈ ಯೋಜನೆಗೆ ಅಧಿಕೃತವಾಗಿ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 17 2023 ರಂದು ಅನುಮೋದನೆ ನೀಡಲಾಯಿತು. ಯಾವುದೇ ಗ್ಯಾರೆಂಟಿ ಇಲ್ಲದೆ ಕಡಿಮೆ ಬಡ್ಡಿ ದರದಲ್ಲಿ ಹಣಕಾಸಿನ ನೆರವನ್ನು ಫಲಾನುಭವಿಗಳು ಪಡೆಯುತ್ತಾರೆ. ದೇಶಾದ್ಯಂತ 30 ಲಕ್ಷ ಕುಟುಂಬಗಳು ಈ ಕಾರ್ಯಕ್ರಮದ ಲಾಭವನ್ನು ಪಡೆಯುವ ನಿರೀಕ್ಷೆ ಇದೆ. ಈ ಯೋಜನೆಯಲ್ಲಿ 18 ವೃತ್ತಿಗಳಲ್ಲಿ ತೊಡಗಿರುವ ವಿವಿಧ ಸ್ವಯಂ ಉದ್ಯೋಗಿ ಕುಶಲಕರ್ಮಿಗಳು ವಿವಿಧ ಸವಲತ್ತು ಪಡೆಯಬಹುದು. ಹಾಗೆಯೇ ಈ ಯೋಜನೆಯನ್ನು ಗ್ರಾಮ ಪಂಚಾಯತ್ ( Gram Panchayath ) ಅಥವಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಒಳಪಡುವ ಸಾಮಾನ್ಯ ಸೇವಾ ಕೇಂದ್ರದ ಮೂಲಕ ನೋಂದಣಿ ಮಾಡಿಕೊಳ್ಳಬಹುದು.
ಈ ಯೋಜನೆಯಿಂದ ಸಿಗುವ ಪ್ರಯೋಜನಗಳು :
ಮುಖ್ಯವಾಗಿ ಈ ಯೋಜನೆಯಡಿ ನೋಂದಣಿಯಾದ ಕುಶಲಕರ್ಮಿಗಳಿಗೆ ಜಿಲ್ಲಾ ಮಟ್ಟದ ಸಮಿತಿಯಿಂದ ಕುಶಲಕರ್ಮಿ ಎಂದು ದೃಢೀಕರಿಸಿದ ನಂತರ 5 ರಿಂದ 7 ದಿನಗಳ ಕಾಲ ತರಬೇತಿಯನ್ನು ನೀಡುತ್ತಾರೆ. ಹಾಗೆಯೇ ತರಬೇತಿ ಅವಧಿಯಲ್ಲಿ ಸ್ಟೆಫಂಡ್ ( Stay fund ) ಮತ್ತು ಇತರೆ ಭತ್ಯೆ ನೀಡಲಾಗುತ್ತದೆ. ತರಬೇತಿ ನಂತರ ಪ್ರಮಾಣ ಪತ್ರದೊಂದಿಗೆ 15,000 ರೂ. ಬೆಲೆಬಾಳುವ ಉಪಕರಣ ನೀಡಲಾಗುತ್ತದೆ. ಹಾಗೆಯೇ ತರಬೇತಿ ಪಡೆದ ಕುಶಲಕರ್ಮಿಗಳಿಗೆ ಶೇ. 5 ಬಡ್ಡಿ ದರದಲ್ಲಿ 1 ಲಕ್ಷ ರೂ. ಸಾಲ ನೀಡಲಾಗುತ್ತದೆ. ನಂತರ 15 ದಿನಗಳ ವರೆಗೆ ಉನ್ನತ ಮಟ್ಟದ ತರಬೇತಿ ನೀಡಿ ಮೊದಲು ಪಡೆದ 1 ಲಕ್ಷ ರೂ. ಸಾಲ ಮರುಪಾವತಿಯಾದ ನಂತರ ಶೇ. 5ರ ಬಡ್ಡಿ ದರದಲ್ಲಿಯೇ 2 ಲಕ್ಷ ರೂ. ಸಾಲ ನೀಡುವುದರ ಜೊತೆಗೆ ಕುಶಲಕರ್ಮಿಗಳಿಂದ ತಯಾರಾದ ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯವನ್ನು ಕಲ್ಪಿಸಿ ಕೊಡಲಾಗುತ್ತದೆ.
ಈ ಯೋಜನೆ ಅಡಿಯಲ್ಲಿ ಏನೆಲ್ಲ ಸವಲತ್ತುಗಳು ದೊರೆಯುತ್ತವೆ ?
ಈ ಯೋಜನೆಯಡಿ ಕುಶಲಕರ್ಮಿಗಳಿಗೆ ಒಂದು ಉತ್ತಮ ನೆರವು ದೊರೆಯುತ್ತದೆ. ಹಾಗೆಯೇ ಅವರ ಆರ್ಥಿಕ ಪರಿಸ್ಥಿತಿಯು ಕೂಡ ದೂರವಾಗುತ್ತದೆ.
ಈ ಒಂದು ಯೋಜನೆ ಅಡಿಯಲ್ಲಿ ಮುಖ್ಯವಾಗಿ ಅವರಿಗೆ
– ಪಿ.ಎಂ. ವಿಶ್ವಕರ್ಮ ಪ್ರಮಾಣ ಪತ್ರ
– ಐ.ಡಿ ಕಾರ್ಡ್
– ಕೌಶಲ್ಯಾಭಿವೃದ್ಧಿ
– ಉಪಕರಣಗಳಿಗೆ ಪ್ರೋತ್ಸಾಹ
– ಕ್ರೆಡಿಟ್ ಸೌಲಭ್ಯ
– ಡಿಜಿಟಲ್ ವ್ಯವಹಾರಕ್ಕೆ ಪ್ರೋತ್ಸಾಹ
– ಹಾಗೂ ಮಾರುಕಟ್ಟೆ ಬೆಂಬಲ ಸೌಲಭ್ಯಗಳಂತಹ ಸವಲತ್ತುಗಳನ್ನು ನೀಡಲಾಗುತ್ತದೆ.
ಯಾರೆಲ್ಲ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು ?
1. ಬಡಗಿತನ
2. ದೋಣಿ ತಯಾರಿಕೆ
3. ಶಸ್ತ್ರಾಸ್ತ್ರ ತಯಾರಿಕೆ ಅಂದರೆ ಸ್ವಯಂ ಉದ್ಯೋಗಿ ಕುಶಲಕರ್ಮಿಗಳು ಹಸ್ತ ಮತ್ತು ಸಾಂಪ್ರದಾಯಿಕ ಉಪಕರಣಗಳೊಂದಿಗೆ ಕತ್ತಿ, ಗುರಾಣಿ, ಚಾಕುಗಳು ಇತ್ಯಾದಿ ಶಸ್ತ್ರಾಸ್ತ್ರ ತಯಾರಿಕೆ, ದುರಸ್ತಿ ಮತ್ತು ಸೇವೆ ಒದಗಿಸುವ ಅಸಂಘಟಿತ ವಲಯದ ಕುಶಲಕರ್ಮಿಗಳು, 4. ಕಮ್ಮಾರ
5. ಸುತ್ತಿಗೆ ಮತ್ತು ಟೂಲ್ ಕಿಟ್ ತಯಾರಿಕೆ
6. ಬೀಗ ತಯಾರಕರ
7. ಶಿಲ್ಪಕಲೆ/ ಕಲ್ಲುಕೆತ್ತನೆ ಮಾಡುವವರು
8. ಆಭರಣ ತಯಾರಿಕೆ (ಅಕ್ಕಸಾಲಿಗರು)
9. ಕುಂಬಾರಿಕೆ
10. ಪಾದರಕ್ಷೆ/ ಚರ್ಮಗಾರಿಕೆ ತಯಾರಿಕೆ
11. ಗೌಂಡಿ ಕೆಲಸಗಾರರು
12. ಕಸಬರಿಕೆ/ ಬಾಸ್ಕೆಟ್ / ಮ್ಯಾಟ್ ತಯಾರಿಕೆ/ ತೆಂಗಿನ ನಾರಿನ ಉತ್ಪನ್ನ ತಯಾರಕರು
13. ಗೊಂಬೆ ತಯಾರಕರು
14. ಕ್ಷೌರಿಕ
15. ಹೂ ಮಾಲೆ ತಯಾರಕರು
16. ಧೋಬಿ
17. ಟೈಲರ್
18. ಮೀನಿನ ಬಲೆಗಳನ್ನು ತಯಾರಿಸುವಂತಹ ಚಟುವಟಿಕೆಗಳಲ್ಲಿ ತೊಡಗಿರುವ ಕುಶಲಕರ್ಮಿಗಳು ಅರ್ಜಿಯನ್ನು ನೊಂದಾಯಿಸಿಕೊಳ್ಳಬಹುದು.
ಅರ್ಜಿ ಸಲ್ಲಿಸಲು ಅರ್ಹತೆಗಳು
1. 18 ವೃತ್ತಿಗಳಲ್ಲಿ ಯಾವುದಾದರೂ ಒಂದರಲ್ಲಿ ಸ್ವಯಂ ಉದ್ಯೋಗಿಯಾಗಿರಬೇಕು
2. 18 ವರ್ಷ ಮೇಲ್ಪಟ್ಟವರಾಗಿರಬೇಕು
3. ಒಂದು ಕುಟುಂಬದಲ್ಲಿ (ಗಂಡ, ಹೆಂಡತಿ ಮತ್ತು ಮದುವೆಯಾಗದ ಮಕ್ಕಳು) ಒಬ್ಬ ಸದಸ್ಯರು ಮಾತ್ರ ನೊಂದಣಿಗೆ ಅರ್ಹರು.
4. ಕುಟುಂಬದಲ್ಲಿ ಯಾವುದೇ ಸದಸ್ಯರು ಸರ್ಕಾರಿ ಕೆಲಸದಲ್ಲಿರಬಾರದು
5. ಕಳೆದ 5 ವರ್ಷಗಳಲ್ಲಿ ಪಿಎಂ ಇಜಿಪಿ/ಮುದ್ರಾ ಮತ್ತು ಪಿಎಂ-ಸ್ವನಿಧಿ ಸಾಲಗಳನ್ನು ಪಡೆದಿರಬಾರದು.
6. ಮುದ್ರಾ ಮತ್ತು ಪಿಎಂ-ಸ್ವನಿಧಿ ಯೋಜನೆಗಳಲ್ಲಿ ಸಾಲ ಪಡೆದು ಪೂರ್ಣ ಮರುಪಾವತಿ ಮಾಡಿದ ಕುಶಲಕರ್ಮಿಗಳು ಯೋಜನೆಯ ಲಾಭ ಪಡೆಯಲು ಅರ್ಹರಾಗಿರುತ್ತಾರೆ.
ಅರ್ಜಿ ಸಲ್ಲಿಸುವ ವಿಧಾನ :
ಈ ಯೋಜನೆಗೆ ಅರ್ಹ ಫಲಾನುಭವಿಗಳು ಎಲ್ಲಾ ದಾಖಲಾತಿಗಳೊಂದಿಗೆ ಹತ್ತಿರದ ಸಿಎಸ್‌ಸಿ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
ಜಂಜಮ್ಮ. ಬಿಸಾಡಿಹಳ್ಳಿ