ರಾಜಕೀಯ ಎಂದ ಮೇಲೆ ಅದರಲ್ಲಿ ಯಾವಾಗಲೂ ಬಿಸಿ ಸುದ್ದಿ ಇದ್ದೇ ಇರುತ್ತದೆ. ಅಂತಹದ್ದೇ ಒಂದು ಸುದ್ದಿ ಇಂದು ನಡೆದಿದೆ. ಸಿದ್ದರಾಮಯ್ಯನವರ ಸಿಎಂ(CM Siddaramaiah) ಅವಧಿ ಮುಗಿಯುವುದರೊಳಗೆ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುತ್ತಾರೆ ಎಂಬ ಮಾತು ಕೇಳಿ ಬರುತ್ತಿದೆ. ಇದೇ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಅವರು ದೇವಸ್ಥಾನಗಳನ್ನು ಸುತ್ತಾಡುತ್ತಿದ್ದಾರೆ. ಈ ಎಲ್ಲಾ ಚರ್ಚೆಗಳ ನಡುವೆಯೇ ವಿನಯ್ ಗುರೂಜಿಯವರು, ಡಿಕೆ ಶಿವಕುಮಾರ್ ಇದೇ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಸಿಎಂ ಆಗಲಿದ್ದಾರೆ ಎಂಬ ಭವಿಷ್ಯ ನುಡಿದಿದ್ದಾರೆ.
ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಡಿಕೆ ಶಿವಕುಮಾರ್(D K Shivakumar) ಸಿಎಂ ಆಗುವದು ನಿಶ್ಚಿತ. ಕಾಂಗ್ರೆಸ್ ಪಕ್ಷಕ್ಕೆ ಸುಮಾರು ಡಿ ಕೆ ಶಿವಕುಮಾರ್ ಕೆಲಸ ಮಾಡಿದ್ದಾರೆ. ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆದರೆ ಖುಷಿ ಪಡುತ್ತೇವೆ. ಗುರು ನಿಷ್ಠೆ, ಪಕ್ಷನಿಷ್ಠೆ, ಹಿರಿಯರ ಮೇಲಿನ ಭಕ್ತಿ, ನಾಟಕ ಇಲ್ಲದ ರಾಜಕಾರಣಿ ಡಿಕೆ ಶಿವಕುಮಾರ್ ಅವರಿಗೆ ನಾಟಕ ಮಾಡಲು ಬರುವದಿಲ್ಲ. ವೈಕುಂಠ ಏಕಾದಶಿ ದಿನ ಡಿಕೆ ಶಿವಕುಮಾರ್ ಸಿಎಂ ಆಗಲಿ ಎಂದು ಪ್ರಾರ್ಥನೆ ಮಾಡುತ್ತೇನೆ. ಧರ್ಮದ ಮೇಲೆ ಶ್ರದ್ಧೆ ಡಿಕೆ ಶಿವಕುಮಾರ್ ಇದೆ. ಗುರುಗಳ ಅನುಗ್ರಹದಿಂದ ಇದೇ ಸರಕಾರದ ಅವಧಿಯಲ್ಲಿ ಡಿಕೆ ಶಿವಕುಮಾರ್ ಸಿಎಂ ಸೀಟಲ್ಲಿ ಕೂರುತ್ತಾರೆ ಎಂದು ವಿನಯ್ ಗೂರುಜಿ ಅವರು ಭವಿಷ್ಯ ನುಡಿದಿದ್ದಾರೆ(Vinay Guruji prediction).
ಚಿಕ್ಕೋಡಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ವಿನಯ್ ಗುರೂಜಿ, ಸಿದ್ದರಾಮಯ್ಯನವರ ನಂತರ ಡಿಕೆ ಶಿವಕುಮಾರ್ ಅವರು ಸಿಎಂ ಆಗಲಿ ಎಂದು ಹರಸಿದರು.
ಮೊದಲ ಕ್ಯಾಬಿನೆಟ್ ಸಭೆಯ ಬಳಿಕ (Cabinet Meeting) ಸಿಎಂ ಸಿದ್ದರಾಮಯ್ಯ ಆಪ್ತರೊಂದಿಗೆ ಸತೀಶ್ ಜಾರಕಿಹೊಳಿ (Satish Jarkiholi) ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ, ಹೆಚ್‌ಸಿ ಮಹಾದೇವಪ್ಪ, ಕೆಎನ್ ರಾಜಣ್ಣ ಹಾಗೂ ಪರಮೇಶ್ವರ್ ಅವರು ಡಿನ್ನರ್ ಮೀಟಿಂಗ್ ಸೇರಿದ್ದರು. ಇದಾದ ಬಳಿಕ ಪರಮೇಶ್ವರ್ ಅವರು ದಲಿತ ಶಾಸಕರುಗಳಿಗೆ ಭೋಜನ ಕೂಟ ಏರ್ಪಡಿಸಿ ಮುಂದೂಡಿದ್ದಾರೆ. ಸದ್ಯ ಕಾಂಗ್ರೆಸ್‌ನಲ್ಲಿ ಡಿನ್ನರ್ ಪಾಲಿಟಿಕ್ಸ್ ತೀವ್ರ ಸದ್ದು ಮಾಡುತ್ತಿದ್ದು, ಎಚ್ಚೆತ್ತುಕೊಂಡಿರುವ ಸಿಎಂ ಶಾಸಕಾಂಗ ಪಕ್ಷದ ಸಭೆಯನ್ನು ಕೂಡಾ ಕರೆದಿದ್ದರು.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.