ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಉತ್ತಮ ಸುದ್ದಿ ನೀಡಿದೆ! 2024-25ನೇ ಸಾಲಿನಲ್ಲಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ(Scholarship) ಮತ್ತು ಪ್ರೋತ್ಸಾಹ ಧನವನ್ನು ನೀಡಲು ನಿರ್ಧರಿಸಿದೆ. ಇದರ ಸದುಪಯೋಗ ಪಡೆಯಲು ಅರ್ಹ ವಿದ್ಯಾರ್ಥಿಗಳು ಈಗಲೇ ಆನ್ಲೈನ್ ಮೂಲಕ(Online Mode) ಅರ್ಜಿ ಸಲ್ಲಿಸಿ. ಸಂಪೂರ್ಣ ಮಾಹಿತತಿಗಾಗಿ ವರದಿಯನ್ನು ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ರಾಜ್ಯ ಸರ್ಕಾರ 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯ (SC) ಸಮುದಾಯದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ (Pre-matric and Post-matric scholarship) ಮತ್ತು ಪ್ರೋತ್ಸಾಹ ಧನ ಯೋಜನೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಯೋಜನೆಯಡಿ ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಷಕರ ಮಕ್ಕಳು ಸೇರಿದಂತೆ 8ನೇ ತರಗತಿಯಿಂದ ಮೇಲಿನ ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಕಾಶವಿದೆ. ಸರ್ಕಾರದ ಈ ಸೌಲಭ್ಯವು ಆರ್ಥಿಕವಾಗಿ ಹಿಂದುಳಿದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಪ್ರೋತ್ಸಾಹಿಸಲು ಮತ್ತು ಅವರ ಶೈಕ್ಷಣಿಕ ಜೀವನದ ಬೆಂಬಲವಾಗಿ ಆರ್ಥಿಕ ನೆರವನ್ನು ಒದಗಿಸುವ ದಾರಿ ಸಾಗಿದೆ.
ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ
ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ: 8ನೇ ತರಗತಿಯ ವಿದ್ಯಾರ್ಥಿಗಳಿಗೆ ಈ ಯೋಜನೆ ಲಭ್ಯವಿದ್ದು, ವಾರ್ಷಿಕ ಆದಾಯ ಮಿತಿ ರೂ. 6 ಲಕ್ಷ ಇದೆ. 9 ಮತ್ತು 10ನೇ ತರಗತಿಗೆ ಸೇರಿದ ವಿದ್ಯಾರ್ಥಿಗಳಿಗೆ ಈ ಮಿತಿಯನ್ನು ರೂ. 2.5 ಲಕ್ಷಕ್ಕೆ ನಿಗದಿಪಡಿಸಲಾಗಿದೆ.
ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ: 12ನೇ ತರಗತಿ, ಪಿಯುಸಿ, ಪಾಲಿಟೆಕ್ನಿಕ್ ಡಿಪ್ಲೋಮಾ, ITI, ಸ್ನಾತಕ ಪದವಿ ಹಾಗೂ ಸ್ನಾತಕೋತ್ತರ ಪದವಿ ಅಧ್ಯಯನ ಮಾಡುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನಕ್ಕಾಗಿ ಅರ್ಹರಾಗಿದ್ದಾರೆ. ಈ ಯೋಜನೆಯ ಪ್ರಕಾರ ವಿದ್ಯಾರ್ಥಿಗಳು ರೂ. 2.5 ಲಕ್ಷದ ಆದಾಯ ಮಿತಿಯಲ್ಲಿರುವ ಪೋಷಕರ ಮಕ್ಕಳಾಗಿರಬೇಕು.
ಅರ್ಜಿ ಸಲ್ಲಿಸುವ ವೆಬ್‌ಸೈಟ್:
https://ssp.postmatric.karnataka.gov.in/
Bio Metric e-Authentication ಕಡ್ಡಾಯ
ಮೆಟ್ರಿಕ್ ಪೂರ್ವ ಮತ್ತು ನಂತರದ ವಿದ್ಯಾರ್ಥಿವೇತನ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ Bio Metric e-Authentication ಕಡ್ಡಾಯವಾಗಿದ್ದು, ಈ ಪ್ರಕ್ರಿಯೆಯನ್ನು ಗ್ರಾಮ ಒನ್(Gram one), ಬೆಂಗಳೂರು ಒನ್(Bengaluru one), ಕರ್ನಾಟಕ ಒನ್(Karnataka One)ಕೇಂದ್ರಗಳಲ್ಲಿ ಉಚಿತವಾಗಿ ಮಾಡಿಸಬಹುದಾಗಿದೆ. EDCS ನಾಗರಿಕ ಸೇವಾ ಕೇಂದ್ರಗಳಲ್ಲಿ ಈ ಸೇವೆ ಉಚಿತವಾಗಿದ್ದು, ಯಾವುದೇ ಪಾವತಿ ಅಗತ್ಯವಿಲ್ಲ.
ಮೊತ್ತ ನೇರವಾಗಿ ಬ್ಯಾಂಕ್ ಖಾತೆಗೆ ಜಮಾ
ವಿದ್ಯಾರ್ಥಿವೇತನ ಮತ್ತು ಪ್ರೋತ್ಸಾಹ ಧನದಡಿ ಮಂಜೂರಾದ ಮೊತ್ತವನ್ನು ಆಧಾರ್ ಜೋಡಿತ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡುವ ವ್ಯವಸ್ಥೆಯು ಕಲ್ಪಿಸಲಾಗಿದೆ. ಈ ಪ್ರಕ್ರಿಯೆಗೆ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಗೆ ಜೋಡಿಸುವುದು ಕಡ್ಡಾಯವಾಗಿದೆ.
ಪ್ರೋತ್ಸಾಹ ಧನ ಯೋಜನೆ
10ನೇ ತರಗತಿ (SSLC) ಮತ್ತು 12ನೇ ತರಗತಿ/ಪಿಯುಸಿ, ಪಾಲಿಟೆಕ್ನಿಕ್ ಡಿಪ್ಲೋಮಾ, ಐಟಿಐ, ಸ್ನಾತಕ ಮತ್ತು ಸ್ನಾತಕೋತ್ತರ ಕೋರ್ಸ್‌ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನದ ಕೊಡುಗೆಯನ್ನು ನೀಡಲಾಗುತ್ತಿದೆ. ಈ ಪ್ರೋತ್ಸಾಹ ಧನವು ಅವರ ಮುಂದಿನ ಶೈಕ್ಷಣಿಕ ಪ್ರವೇಶಕ್ಕೆ ಆರ್ಥಿಕ ನೆರವಿನ ರೂಪದಲ್ಲಿ ಕಾರ್ಯನಿರ್ವಹಿಸುತ್ತದೆ.
ಪ್ರೋತ್ಸಾಹ ಧನ ಅರ್ಜಿ ಸಲ್ಲಿಸಲು ವೆಬ್‌ಸೈಟ್: https://sw.kar.nic.in/swprizemoney/Home.aspx
ವಿದ್ಯಾರ್ಥಿಯು ಕೈಗೊಳ್ಳಬೇಕಾದ ಕ್ರಮಗಳು
ಆಧಾರ್ ಪರಿಶೀಲನೆ: ಆಧಾರ್ ಸಕ್ರಿಯಗೊಳಿಸುವುದಕ್ಕಾಗಿ ಆಧಾರ್ ಸೇವಾ ಕೇಂದ್ರಕ್ಕೆ ಭೇಟಿ ನೀಡಿ, ಆಧಾರ್ ಹಾಗೂ Biometric ವಿವರಗಳನ್ನು ನವೀಕರಿಸಿಕೊಳ್ಳಬೇಕು.
ಬ್ಯಾಂಕ್ ಖಾತೆ ಪರಿಶೀಲನೆ: ತಮ್ಮ ಬ್ಯಾಂಕ್ ಖಾತೆಯು ಸಕ್ರಿಯವಾಗಿರಬೇಕು ಮತ್ತು ಅದನ್ನು ಆಧಾರ್‌ಗೆ ಜೋಡಿಸಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು.
ಆಧಾರ್ ಜೋಡಣೆ ಸಮಸ್ಯೆ: ಆಧಾರ್-ಬ್ಯಾಂಕ್ ಜೋಡಣೆ ಸಾದ್ಯವಾಗದಿದ್ದರೆ, ವಿದ್ಯಾರ್ಥಿಗಳು ಬ್ಯಾಂಕ್ ಅಧಿಕಾರಿಗಳೊಂದಿಗೆ ಸಂಪರ್ಕಿಸಿ, ಅಥವಾ IPPB ಖಾತೆಯನ್ನು ಅಂಚೆ ಕಚೇರಿಯಲ್ಲಿ ತೆರೆಯಬಹುದು.
DBT Karnataka App ಬಳಕೆ: ಆಧಾರ್ ಜೋಡಣೆಯ ಸ್ಥಿತಿ ಪರಿಶೀಲಿಸಲು DBT Karnataka Mobile App ಉಪಯೋಗಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಅಥವಾ ತಾಲ್ಲೂಕು ಮಟ್ಟದ ಕಚೇರಿಯ ಅಧಿಕಾರಿಗಳನ್ನು ಸಂಪರ್ಕಿಸಬಹುದು.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.