ಸಾರ್ವಜನಿಕರಿಗೆ ಮತ್ತೊಂದು ಬಿಗ್ ಶಾಕ್, ರಾಜ್ಯ ಸರ್ಕಾರವು ಆಸ್ತಿ ಸೇರಿದಂತೆ ಎಲ್ಲ ನೋಂದಣಿ ಸ್ಥಗಿತಗೊಳಿಸಿದೆ..!
ಈಗಾಗಲೇ ಸರ್ಕಾರವು (government) ರಾಜ್ಯಾದ್ಯಂತ ಸ್ಥಿರಾಸ್ತಿ ದಸ್ತಾವೇಜು ನೋಂದಣಿ ಅಥವಾ ಆಸ್ತಿ ನೋಂದಣಿಗೆ ಸರ್ಕಾರ ಇ-ಖಾತಾ (E – Khata) ಕಡ್ಡಾಯಗೊಳಿಸಲಾಗಿದೆ. ಇದರಿಂದ ಹಲವಾರು ಸಮಸ್ಯೆಗಳು ಎದುರಾಗಿದ್ದು, ಸರ್ವರ್ ಸಮಸ್ಯೆ(server issue), ಕರಡು ಖಾತಾಗಳಲ್ಲಿನ ದೋಷ, ಅಗತ್ಯ ದಾಖಲೆಗಳ ಕೊರತೆ ಮತ್ತಿತ್ತರ ಕಾರಣದಿಂದ ಇ-ಖಾತಾ ದೊರೆಯದೆ ಆಸ್ತಿ ಮಾಲೀಕರು ಪರದಾಡುವಂತಾಗಿದೆ. ಅಷ್ಟೇ ಅಲ್ಲದೆ ಇ-ಖಾತಾ ಇಲ್ಲದೆ ಆಸ್ತಿ ನೋಂದಣಿ (Property Registration) ಸಾಧ್ಯವಿಲ್ಲದಿರುವುದರಿಂದ ಸಾರ್ವಜನಿಕರು ಆಸ್ತಿ ನೋಂದಣಿ, ಅಡಮಾನ ಸಾಲ(loan) ಪಡೆಯುವುದು ಸೇರಿ ಯಾವುದೇ ವಹಿವಾಟು ಮಾಡಲಾಗದೆ ಕಂಗಾಲಾಗಿದ್ದಾರೆ. ಅದರ ನಡುವೆ ಇದೀಗ ಸರ್ಕಾರ ಮತ್ತೊಂದು ಬಿಗ್ ಶಾಕ್ (Big shock) ನೀಡಿದ್ದು, ಆಸ್ತಿ ಸೇರಿದಂತೆ ಎಲ್ಲ ನೋಂದಣಿ ಸ್ಥಗಿತಗೊಳಿಸಿದೆ. ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಆಸ್ತಿ ಸೇರಿದಂತೆ ಎಲ್ಲ ರೀತಿಯ ದಸ್ತಾವೇಜುಗಳ ನೋಂದಣಿ ಸ್ಥಗಿತ :
ಸೋಮವಾರ ಬೆಳಗ್ಗೆಯಿಂದಲೇ ರಾಜ್ಯಾದ್ಯಂತ ಉಪನೋಂದಣಾಧಿಕಾರಿ ಕಚೇರಿಗಳಲ್ಲಿ ಆಸ್ತಿ ಸೇರಿದಂತೆ ಎಲ್ಲ ರೀತಿಯ ದಸ್ತಾವೇಜುಗಳ ನೋಂದಣಿ (Registration of documents) ಸ್ಥಗಿತಗೊಳಿಸಲಾಗಿದೆ. ರಾಜ್ಯದಲ್ಲಿ ಕೇಂದ್ರದ ನೋಂದಣಿ ಕಾಯಿದೆ-1908ಗೆ ತಿದ್ದುಪಡಿ ತರುವ ಕರ್ನಾಟಕ ನೋಂದಣಿ ತಿದ್ದುಪಡಿ ಕಾಯಿದೆ -2023ಕ್ಕೆ ರಾಷ್ಟ್ರಪತಿಗಳು ಅ.8 ರಂದು ಅಂಕಿತ ಹಾಕಿ, ರಾಜ್ಯ ಸರ್ಕಾರ ಅ.19 ರಂದು ಅಧಿಕೃತ ರಾಜ್ಯ ಪತ್ರದಲ್ಲಿ ಪ್ರಕಟಿಸಿದೆ.
ಸರ್ಕಾರ ಹೊರಡಿಸಿದ ಈ ತಿದ್ದುಪಡಿಯಿಂದ ನಕಲಿ ನೋಂದಣಿಗಳ ತಡೆಗಟ್ಟಿ, ಶಿಕ್ಷೆ ವಿಧಿಸಬವುದು :
ಹೌದು, ಸರ್ಕಾರದ ಈ ಆದೇಶ ಅಥವಾ ತಿದ್ದುಪಡಿಯಿಂದ ದಸ್ತಾವೇಜು ನೋಂದಣಿ ವಿಷಯದಲ್ಲಿ ಆಗುತ್ತಿದ್ದ ಅಪರಾಧವನ್ನು ತಡೆಗಟ್ಟಬಹುದಾಗಿದೆ. ಜಿಲ್ಲಾ ಮತ್ತು ಉಪ ನೋಂದಣಾಧಿಕಾರಿಗಳಿಗೆ ಇದರ ಸಂಪೂರ್ಣ ಹಕ್ಕು ಇದೆ. ಅವುಗಳೆಂದರೆ :
ನಕಲಿ ದಾಖಲೆ ಆಧರಿಸಿ ಆಸ್ತಿ ದಸ್ತಾವೇಜು ನೋಂದಣಿ ಅಥವಾ ನಕಲಿ (Duplicate) ದಸ್ತಾವೇಜು ಸೃಷ್ಟಿ ಮಾಡಿದರೆ ಜಿಲ್ಲಾ ನೋಂದಣಾಧಿಕಾರಿಗಳಿಗೆ ರದ್ದುಪಡಿಸಲು ಅಧಿಕಾರ ನೀಡಲಾಗಿದೆ.
ನಕಲಿ ದಾಖಲೆ ಆಧರಿಸಿ ನೋಂದಣಿ ಮಾಡಿದ ಉಪ ನೋಂದಣಾಧಿಕಾರಿಗಳಿಗೆ 3 ವರ್ಷದವರೆಗೆ ಜೈಲು ಶಿಕ್ಷೆಗೆ ಗುರಿಪಡಿಸಬಹುದಾಗಿದೆ.
ಈ ಕಾಯ್ದೆಗೆ ಸೇರಿಸಿರುವ 22 ಬಿ, 22 ಸಿ ಹಾಗೂ 22ಡಿ ಎಂದರೇನು?
ಕಾಯ್ದೆಗೆ ಸೇರ್ಪಡೆ ಮಾಡಿರುವ 22-ಬಿ ಪ್ರಕಾರ ಉಪ ನೋಂದಣಾಧಿಕಾರಿಗಳು ಯಾವುದೇ ಸುಳ್ಳು ಅಥವಾ ನಕಲಿ ದಸ್ತಾವೇಜು, ಕೇಂದ್ರ ಅಥವಾ ರಾಜ್ಯ ಅಧಿನಿಯಮದ ಮೂಲಕ ನಿಷೇಧಿಸಲಾಗಿರುವ ವ್ಯವಹಾರಕ್ಕೆ ಸಂಬಂಧಿಸಿದ ದಸ್ತಾವೇಜು, ಸಕ್ಷಮ ಪ್ರಾಧಿಕಾರ ಅಥವಾ ಯಾವುದೇ ಕೋರ್, ನ್ಯಾಯಾಧೀಕರಣ ಜಪ್ತಿ ಮಾಡಿರುವ ಯಾವುದೇ ಸ್ವತ್ತು ಮಾರಾಟ, ದೇಣಿಗೆ, ಗೇಣಿ ಅಥವಾ ಇತರ ರೂಪದ ವರ್ಗಾವಣೆಗೆ ಸಂಬಂಧಿಸಿರುವ ದಸ್ತಾವೇಜು, ರಾಜ್ಯ ಸರ್ಕಾರ ಅಧಿಸೂಚನೆಯ ಮೂಲಕ ನಿರ್ದಿಷ್ಟಪಡಿಸಬಹುದಾದಂತಹ ಯಾವುದೇ ಇತರೆ ದಸ್ತಾವೇಜುಗಳನ್ನು ನೋಂದಣಿ ಮಾಡಬಾರದು ಎಂದು ಸ್ಪಷ್ಟಪಡಿಸಲಾಗಿದೆ.
22-ಸಿ ಪ್ರಕಾರ ಜಿಲ್ಲಾ ನೋಂದಣಾಧಿಕಾರಿಗೆ ಸ್ವಯಂ ಪ್ರೇರಣೆಯಿಂದಾಗಲಿ ಅಥವಾ ವ್ಯಕ್ತಿಯಿಂದ ಪಡೆದ ದೂರಿನ ಮೇಲಾಗಲಿ 22-ಬಿ ಪ್ರಕರಣ ವನ್ನು ಉಲ್ಲಂಘಿಸಿ ದಸ್ತಾ ವೇಜು ನೋಂದಣಿ ಮಾಡಲಾಗಿದೆ ಎಂದು ಗೊತ್ತಾದರೆ ನೋಟಿಸ್ ನೀಡಿ ಸ್ಪಷ್ಟ ಉತ್ತರ ಬಾರದಿದ್ದರೆ ನೋಂದಣಿ ರದ್ದುಪಡಿಸುವ ಅಧಿಕಾರ ನೀಡಲಾಗಿದೆ.
ಸರ್ಕಾದ ಜಾರಿ ಮಾಡಿರುವ ಕಾಯ್ದೆ ಬಗ್ಗೆ ಉಪ ನೋಂದಣಾಧಿಕಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ :
ಸರ್ಕಾರ ಏಕಾಏಕಿ ನಮ್ಮನ್ನು ಹೊಣೆ ಮಾಡುವ ಕಾಯ್ದೆ ಜಾರಿಗೊಳಿಸಿದೆ. ಕಾಯ್ದೆ ಜಾರಿ ಮಾಡುವ ಮೊದಲೇ ಯಾವ್ಯಾವ ದಾಖಲೆ ಪರಿಶೀಲನೆಗೆ ಯಾವ್ಯಾವ ನಿಯಮಾವಳಿ (Rules) ಪಾಲಿಸಬೇಕು ಎಂಬ ಬಗ್ಗೆ ಸರ್ಕಾರ ಸ್ಪಷ್ಟತೆ ನೀಡಬೇಕಿತ್ತು ಆದರೆ ನೀಡಿಲ್ಲ. ಈಗ ನಮ್ಮನ್ನು ಹೊಣೆ ಮಾಡುವ ಕಾಯ್ದೆ ಜಾರಿಗೊಳಿಸಿದರೆ ಹೇಗೆ? ಹಾಗೂ ತಮಿಳುನಾಡು ಕಾಯಿದೆಯನ್ನು ಯಥಾವತ್ತಾಗಿ ಅಳವಡಿಸಿಕೊಳ್ಳಲಾಗಿದೆ ಎಂದು ಉಪ ನೋಂದಣಾಧಿಕಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.