ಗುಡ್ ನ್ಯೂಸ್ : ರಾಜ್ಯಾದ್ಯಂತ ಮತ್ತೇ ಪೂರ್ಣ ಪ್ರಮಾಣದಲ್ಲಿ ಆಸ್ತಿ ನೋಂದಣಿ ಪ್ರಾರಂಭ.

IMG 20241025 WA0003

ಸ್ಥಗಿತಗೊಳಿಸಿದ್ದ ಆಸ್ತಿ ನೋಂದಣಿ ಕಾರ್ಯ  ಮತ್ತೆ ಆರಂಭ.

ಈಗಾಗಲೇ ಸರ್ಕಾರವು (government) ರಾಜ್ಯಾದ್ಯಂತ ಸ್ಥಿರಾಸ್ತಿ ದಸ್ತಾವೇಜು ನೋಂದಣಿ ಅಥವಾ ಆಸ್ತಿ ನೋಂದಣಿಗೆ ಸರ್ಕಾರ ಇ-ಖಾತಾ (E – Khata) ಕಡ್ಡಾಯಗೊಳಿಸಲಾಗಿತ್ತು .ಆದರೆ ಸೋಮವಾರ ಬೆಳಗ್ಗೆಯಿಂದಲೇ ರಾಜ್ಯಾದ್ಯಂತ ಉಪನೋಂದಣಾಧಿಕಾರಿ ಕಚೇರಿಗಳಲ್ಲಿ ಆಸ್ತಿ ಸೇರಿದಂತೆ ಎಲ್ಲ ರೀತಿಯ ದಸ್ತಾವೇಜುಗಳ ನೋಂದಣಿ (Registration of documents) ಸ್ಥಗಿತಗೊಳಿಸಲಾಗಿತ್ತು. ಆದರೆ ಇದೀಗ ಸಾರ್ವಜನಿಕರಿಗೆ ಗುಡ್ ನ್ಯೂಸ್ ನೀಡಿದೆ ರಾಜ್ಯ ಸರ್ಕಾರ. ಸ್ಥಗಿತಗೊಂಡಿದಂತಹ ಆಸ್ತಿ ನೋಂದಣಿ ಕಾರ್ಯ ಗುರುವಾರದಿಂದ ಪೂರ್ಣ ಪ್ರಮಾಣದಲ್ಲಿ ಮತ್ತೆ ಶುರುವಾಗಿದೆ. ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಯಾವ ಕಾರಣಕ್ಕೆ ಆಸ್ತಿ ನೋಂದಣಿ ಕಾರ್ಯವನ್ನು ಸ್ಥಗಿತಗೊಳಿಸಲಾಗಿತ್ತು.

ಕರ್ನಾಟಕ(Karnataka) ನೋಂದಣಿ ತಿದ್ದುಪಡಿ ಕಾಯ್ದೆ- 2023ಯ 22-ಬಿ ನಿಯಮದಡಿ ರಾಜ್ಯದಲ್ಲಿ ನಕಲಿ ದಸ್ತಾವೇಜು ನೋಂದಣಿಯಾದರೆ ಸಂಬಂಧಪಟ್ಟ ಉಪ ನೋಂದಣಾಧಿಕಾರಿಗೆ ಜೈಲು ಶಿಕ್ಷೆ ವಿಧಿಸುವುದನ್ನು ವಿರೋಧಿಸಿ ಸೋಮವಾರದಿಂದ ದಸ್ತಾವೇಜು ನೋಂದಣಿ ಸ್ಥಗಿತಗೊಳಿಸಲಾಗಿತ್ತು.

ಎಂದಿನಿಂದ ಆಸ್ತಿ ನೋಂದಣಿ ಕಾರ್ಯ ಆರಂಭ :

ಆಸ್ತಿ ನೋಂದಣಿ ಕಾರ್ಯವನ್ನು ಸ್ಥಗಿತಗೊಳಿಸಿ ಉಪ ನೋಂದಣಾಧಿಕಾರಿಗಳ ಸಂಘವು ಮಾಡುತ್ತಿದ್ದ ಪ್ರತಿಭಟನೆಯನ್ನು  ಹಿಂಪಡೆದಿದ್ದಾರೆ. ಹಾಗೂ ಪೂರ್ಣ ಪ್ರಮಾಣದಲ್ಲಿ ನೋಂದಣಿ ಕಾರ್ಯ ಪ್ರಾರಂಭಿಸುವುದಾಗಿ ತಿಳಿಸಿದ್ದಾರೆ.

ಕಾಯ್ದೆ ಅನುಷ್ಠಾನ ಮಾಡುವುದಿಲ್ಲ ಎಂದು ಕೆ.ಎ. ದಯಾನಂದ(K.A. Dayananda)ಭರವಸೆ:

ಈ ಬಗ್ಗೆ ನೋಂದಣಿ ಪರಿವೀಕ್ಷಕರು ಹಾಗೂ ಮುದ್ರಾಂಕ ಆಯುಕ್ತರಾದ (Inspector of Registration and Commissioner of Stamps)ಕೆ.ಎ. ದಯಾನಂದ ಅವರು ಭರವಸೆ ನೀಡಿದ್ದು, ಕಾಯ್ದೆ ಬಗ್ಗೆ ಉಪ ನೋಂದಣಾಧಿಕಾರಿಗಳಿಗೆ ಉಂಟಾಗಿರುವ ಗೊಂದಲ ಬಗೆಹರಿಸುವವರೆಗೆ ಹಾಗೂ ಈ ಬಗ್ಗೆ ಸ್ಪಷ್ಟ ಮಾರ್ಗಸೂಚಿ ರೂಪಿಸುವವರೆಗೆ ಕಾಯ್ದೆ ಅನುಷ್ಠಾನ ಮಾಡುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ಆದ್ದರಿಂದ ಪ್ರತಿಭಟನೆಯನ್ನು ನಿನ್ನೆ ಅಂದರೆ ಗುರುವಾರದಿಂದಲೇ ಪೂರ್ಣ ಪ್ರಮಾಣದಲ್ಲಿ ನೋಂದಣಿ ಸೇವೆ ನೀಡುವುದಾಗಿ ಹೇಳಿದ್ದಾರೆ.

ಈ ಮಾಹಿತಿಗಳನ್ನು ಓದಿ

 


ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!