ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರುಮಳೆಯ ಪ್ರಭಾವ ಭಾರಿ ಹೆಚ್ಚಾಗಿದ್ದು ಹಲವಾರು ಕಡೆ ಮುಂಗಾರು ಮಳೆಯ ಅಬ್ಬರ ಪ್ರಾರಂಭವಾಗಿದೆ. ಹೌದು ರಾಜ್ಯದಲ್ಲಿ ಜೂನ್ 1ರಿಂದ ಜೂನ್ 15 ರವರೆಗೆ 23 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಕಳೆದ ನಾಲ್ಕು ದಿನಗಳಿಂದ ಬ್ರೇಕ್ ತೆಗೆದುಕೊಂಡಿದ್ದ ಮಳೆರಾಯ ಮುಂದಿನ ಮೂರು ದಿನಗಳ ಕಾಲ ರಾಜ್ಯದ ವಿವಿಧೆಡೆ ಮತ್ತೆ ಅಬ್ಬರ ಶುರು ಮಾಡಲಿದ್ದಾನೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.
ಕರ್ನಾಟಕ ಹವಾಮಾನ ವರದಿ
ರಾಜ್ಯದಲ್ಲಿ ನಿನ್ನೆ ಉತ್ತರ ಕನ್ನಡ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು, ಹಿಂದೂ ಸವಿತಾ ಉತ್ತರ ಕನ್ನಡ ದಕ್ಷಿಣ ಕನ್ನಡ ಉಡುಪಿ ಸೇರಿದಂತೆ ಕರಾವಳಿಯ ಬಹುತೇಕ ಪ್ರದೇಶಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ 3 ದಿನಗಳ ಕಾಲ ಭರ್ಜರಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಎಲ್ಲೆಲ್ಲಿ ಮಳೆ ಆಗಲಿದೆ?
ಕರಾವಳಿ ಜಿಲ್ಲೆಗಳಾದ ಉಡುಪಿ & ದಕ್ಷಿಣ ಕನ್ನಡ ಜಿಲ್ಲೆ, ಉತ್ತರ ಕನ್ನಡ ಜಿಲ್ಲೆಗೆ ಭರ್ಜರಿ ಮಳೆ ಬೀಳಲಿದೆ. ಅದೇ ರೀತಿಯಾಗಿ ದಕ್ಷಿಣ ಒಳನಾಡು ಪ್ರದೇಶ, ಮಲೆನಾಡು ಭಾಗದಲ್ಲಿ ಮಳೆ ಅಬ್ಬರಿಸಲಿದೆ. ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಮಂಡ್ಯ, ಉಡುಪಿ, ಮಂಗಳೂರು, ಉತ್ತರ ಕನ್ನಡ, ತುಮಕೂರು, ಹಾಸನ, ಚಿತ್ರದುರ್ಗ, ಬೆಳಗಾವಿ, ದಾವಣಗೆರೆ, ಬಳ್ಳಾರಿ ಜಿಲ್ಲೆಯಲ್ಲಿ ಮಳೆ ಮುನ್ನೆಚ್ಚರಿಕೆ ನೀಡಿದೆ. ಒಳನಾಡಿನ ಜಿಲ್ಲೆಗಳ ಅನೆೇಕ ಸ್ಥಳಗಳಲ್ಲಿ ಬರುವ ಗಾಳಿಯ ವೆೇಗವು (30-40 kmph) ಇರುವ ಸಾಧ್ಯತೆಯಿದೆ ಹಾಗೂ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆಯಿದೆ. ನಾಳೆ ಕೂಡಾ ಕರಾವಳಿ ಜಿಲ್ಲೆಯ ಹಲವೆಡೆ ಮಳೆ ಆಗಲಿದೆ. ಹವಾಮಾನ ಇಲಾಖೆಯು ಮೀನುಗಾರರಿಗೆ ಯಾವುದೇ ಮುನ್ನೆಚರಿಕೆ ನೀಡಿಲ್ಲ. ಹಾಗೇ ಯಾವ ಜಿಲ್ಲೆಯಲ್ಲೂ ಹವಾಮಾನ ಇಲಾಖೆ ಅಲರ್ಟ್ ನೀಡಿಲ್ಲ.
ಈ ಜಿಲ್ಲೆಗಳಿಗೆ ಭರ್ಜರಿ ಮಳೆ
ರಾಜ್ಯದಲ್ಲಿ ದಕ್ಷಿಣ ಒಳನಾಡು ಭಾಗದಲ್ಲಿ ಮುಂದಿನ ವಾರ ಪೂರ್ತಿ ಮಳೆ ಅಬ್ಬರಿಸಲಿದೆ ಎಂದು, ಹೇಳಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಕೊಡಗು, ಉಡುಪಿ, ಚಾಮರಾಜನಗರ, ಮಂಡ್ಯ, ಮಂಗಳೂರು, ಉತ್ತರ ಕನ್ನಡ, ತುಮಕೂರು, ಹಾಸನ, ಚಿತ್ರದುರ್ಗ, ಬೆಳಗಾವಿ ಜಿಲ್ಲೆ ಸೇರಿದಂತೆ ದಾವಣಗೆರೆಯ ಬಹುತೇಕ ಹಲವು ಪ್ರದೇಶದಲ್ಲಿ ಮಳೆ ಅಬ್ಬರಿಸಲಿದೆ. ಬಳ್ಳಾರಿ ಜಿಲ್ಲೆಗೂ ಭರ್ಜರಿ ಮಳೆ ಮುನ್ನೆಚ್ಚರಿಕೆ ನೀಡಲಾಗಿದೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.